ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

Posted by Vidyamaana on 2024-02-19 14:19:11 |

Share: | | | | |


ಕೆಲಸ ಸಿಗದ ಚಿಂತೆಯಲ್ಲಿ ನೇತ್ರಾವತಿಗೆ ಹಾರಿದ ಪುತ್ತೂರಿನ ಯುವಕ

ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ನಡೆದಿದೆ.


ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (38) ಎಂಬಾತನೇ ಪಾಣೆಮಂಗಳೂರಿನಲ್ಲಿ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. 


ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ  ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ,  ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ಅಕ್ರಮ ವೈನ್ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ

Posted by Vidyamaana on 2024-03-22 20:02:07 |

Share: | | | | |


ಬೆಳ್ತಂಗಡಿ : ಅಕ್ರಮ ವೈನ್ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ

ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ಭರ್ಜರಿ ಭೇಟಿಯಾಡಿದ್ದಾರೆ.


ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಜಿತೇಂದ್ರ ಜೈನ್ ಎಂಬವರ ಮಾಲೀಕತ್ವದ ವರ್ಧಮಾನ್ ಸ್ಟೋರ್ ನಲ್ಲಿ ನಿಷೇಧಿತ ಹೋಮ್ ಮೇಡ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ನಿಷೇಧಿತ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.‌ಆರೋಪಿ ನಿಡ್ಲೆ ಗ್ರಾಮದ ರವಿರಾಜ್ ಜೈನ್ ಮಗ ಜಿತೇಂದ್ರ ಜೈನ್ (46) ಎಂಬಾತನನ್ನು ಬಂಧಿಸಿ ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.

ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-05-24 15:27:22 |

Share: | | | | |


ವಿವಾದಾತ್ಮಕ ಹೇಳಿಕೆ ವಿಚಾರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರ ವಿರುದ್ಧ ಪ್ರಕರಣ ದಾಖಲಾಗಿದೆ.ಪೂಂಜಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಇಂದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದರು.ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶ್ರೀಮತಿ ನಮಿತ ಕೆ ಪೂಜಾರಿ ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಐಪಿಸಿ ಸೆಕ್ಷನ್ 153, 153ಎ, 505 ರಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ-ತಾಯಿ

Posted by Vidyamaana on 2024-05-16 16:58:06 |

Share: | | | | |


ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ-ತಾಯಿ

ಬೆಂಗಳೂರು (ಮೇ 16): ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುತ್ತಿಗೆ ಸೀಳಿದ ರೀತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದ ಯುವತಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾಳೆ. ಅದು ಕೂಡ ಕುತ್ತಿಗೆ ಹಾಗೂ ಕೈಗಳನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾಳೆ. ಇದು ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದ್ದು, ಯುವತಿಯ ತಾಯಿ ಮಾತ್ರ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಯಾರೋ ಕಿಡಿಗೇಡಿಗಳು ಕೊಲೆ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

Posted by Vidyamaana on 2023-05-09 15:03:41 |

Share: | | | | |


ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

ಪುತ್ತೂರು: ಚುನಾವಣೆಯ ಹೊಸ್ತಿಲಲ್ಲಿ ನಿಂತು, ಸ್ವಾತಂತ್ರ್ಯ ಪೂರ್ವದ ಭಾರತವನ್ನೊಮ್ಮೆ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಆಗಿನ ಚಿತ್ರಣ ಮೂಡಿದ್ದೇ ಆದರೆ, ಚುನಾವಣೆಯಲ್ಲಿ ಮತ ಚಲಾಯಿಸದಿರಲು ಸಾಧ್ಯವೇ ಇಲ್ಲ.

ಹೌದು, ಚುನಾವಣೆಯ ಮಹತ್ವವೇ ಅಂತದ್ದು. ಪ್ರತಿಯೋರ್ವನ ಅಭಿಪ್ರಾಯವನ್ನು ಸಂಗ್ರಹಿಸಿ, ನಮ್ಮ ನಾಯಕನ ಆಯ್ಕೆ ನಡೆಯುತ್ತದೆ. ಮುಂದಿನ 5 ವರ್ಷ ಆತನೇ ನಮ್ಮ ನೇತಾರ. ಹಾಗಿರುವಾಗ, ನಮ್ಮ ನಾಯಕನ ಬಗ್ಗೆ ನಮಗಿರುವ ಅಭಿಪ್ರಾಯವನ್ನು ನಾವು ಚಲಾಯಿಸಲೇ ಬೇಕು ತಾನೇ? 

     ಹೌದಾದರೆ, ಮರೆಯದಿರಿ ಮೇ 10ರಂದು ಬೆಳಿಗ್ಗೆಯಿಂದ ಸಂಜೆವರೆಗೆ ಮತಗಟ್ಟೆ ನಿಮಗಾಗಿ ಕಾಯುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಮತದಾರ ಪ್ರಭುವಿನ ಆಗಮನಕ್ಕಾಗಿಯೇ ತವಕಿಸುತ್ತಿರುತ್ತಾರೆ. ಮತದಾರ ಪ್ರಭು ತಾನು ರಾಜ ಎನ್ನುವುದನ್ನು ಸಾಬೀತು ಪಡಿಸಬೇಕು. ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗದೇ ತನ್ನ ಅಭಿಪ್ರಾಯವನ್ನು ನಿರ್ಭೀತಿಯಿಂದ ಚಲಾಯಿಸಬೇಕು. ಇದು ಸಂವಿಧಾನ ನಮಗೆ ನೀಡಿರುವ ಹಕ್ಕು ಎನ್ನುವುದನ್ನು ಮರೆಯದಿರಿ.

ಮತ ಚಲಾಯಿಸಲು ಮರೆತಿರೋ, ಸಂವಿಧಾನಕ್ಕೆ ಎಸಗಿದ ಅಪಚಾರ ಎನ್ನುವುದನ್ನು ಭಾರತದ ನಾಗರಿಕರು ತಿಳಿದುಕೊಳ್ಳಬೇಕು.

ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

Posted by Vidyamaana on 2024-04-10 22:03:09 |

Share: | | | | |


ಸಿಎಂ ವಿರುದ್ಧ ಸುಳ್ಳು ಸುದ್ದಿ: 7 ಮಂದಿ ವಿರುದ್ಧ FIR

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಗಳ ಮತ ಬೇಡ, ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಹೇಳಿದ್ದಾರೆಂದು ಸುದ್ದಿಪತ್ರಿಕೆಯ ವರದಿ ರೀತಿಯಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ಸುಳ್ಳು ಸುದ್ದಿಯನ್ನು ಬಗ್ಗೆ ಹರೀಶ್‌ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು.


ಅವರ ದೂರಿನ ಆಧಾರದ ಮೇಲೆ ಬೆಂಗಳೂರು ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66, 66ಸಿ ಮತ್ತು 66ಡಿ ಹಾಗೂ ಐಪಿಸಿ ಸೆಕ್ಷನ್‌ 153ಎ, 120ಬಿ, 419, 469, 471, 505(2) ಮತ್ತು 468ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Recent News


Leave a Comment: