ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

Posted by Vidyamaana on 2023-10-17 07:28:41 |

Share: | | | | |


ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.ವೈದ್ಯರ ಸಲಹೆ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

ಇಂದು ಚೇತನಾ ಆಸ್ಪತ್ರೆಯಲ್ಲಿ ಆಸ್ತಮಾ ರೋಗಿಗಳಿಗೆ ಸೈರೋಮೆಟ್ರಿ, ಮಧುಮೇಹ ಉಚಿತ ತಪಾಸಣಾ ಶಿಬಿರ

Posted by Vidyamaana on 2023-10-10 07:34:46 |

Share: | | | | |


ಇಂದು ಚೇತನಾ ಆಸ್ಪತ್ರೆಯಲ್ಲಿ ಆಸ್ತಮಾ ರೋಗಿಗಳಿಗೆ ಸೈರೋಮೆಟ್ರಿ, ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು:ಕೋರ್ಟ್ ರಸ್ತೆ, ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಆಸ್ತಮಾ ರೋಗಿಗಳಿಗೆ ಉಚಿತ ಸ್ಟೆರೋಮೆಟ್ರಿ ಶಿಬಿರ ಹಾಗೂ ಉಚಿತ ಮಧುಮೇಹ ತಪಾಸಣಾ ಶಿಬಿರವು ಅ.10 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಜರಗಲಿದೆ. ಹೆಚ್ಚಿನ ಮಾಹಿತಿಗೆ 9379442485, 8123276901 ನಂಬರಿಗೆ ಸಂಪರ್ಕಿಸಬಹುದು ಎಂದು ಚೇತನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ

ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2024-02-27 18:09:20 |

Share: | | | | |


ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಿತು.ಇನ್ನೂ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನಿಂದ ಜಿಸಿ ಚಂದ್ರಶೇಖರ್‌, ನಾಸೀರ್‌ ಹುಸೇನ್‌, ಅಜಯ್‌ ಮಾಕೇನ್‌ ಸ್ಪರ್ಧಿಸಿ ಗೆಲುವು ಕಂಡರೇ ಬಿಜೆಪಿಯಿಂದ ಸ್ಪರ್ಧಿಸಿದ್ದ ನಾರಾಯಣಸಾ ಭಾಂಡಗೆ ಅವರು ಗೆಲವು ಕಂಡಿದ್ದಾರೆ.ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರು, ಆದರೆ ಅವರು ಸೋಲನ್ನು ಕಂಡಿದ್ದಾರೆ.


ಅಜಯ್ ಮಾಕನ್ -47, ನಾಸೀರ್ ಹುಸೇನ್ - 46, ಜಿ.ಸಿ. ಚಂದ್ರಶೇಖರ - 45, ನಾರಾಯಣಸಾ ಭಾಂಡಗೆ - 48, ಕುಪೇಂದ್ರ ರೆಡ್ಡಿ - 35 ಮತಗಳನ್ನು ಗಳಿಸಿದ್ದಾರೆ.


ಉತ್ತರ ಪ್ರದೇಶದ 10, ಮಹಾರಾಷ್ಟ್ರ 6, ಬಿಹಾರ 6, ಪಶ್ಚಿಮ ಬಂಗಾಳ 5, ಮಧ್ಯ ಪ್ರದೇಶ 5, ಗುಜರಾತ್ 4, ಆಂಧ್ರ ಪ್ರದೇಶ 3, ತೆಲಂಗಾಣ 3, ರಾಜಸ್ಥಾನ 3, ಕರ್ನಾಟಕ 4, ಉತ್ತರಾಖಂಡ 1, ಛತ್ತೀಸ್‌ಗಢ 1, ಒಡಿಶಾ 3, ಹರ್ಯಾಣ 1 ಹಾಗೂ ಹಿಮಾಚಲ ಪ್ರದೇಶದಲ್ಲಿ 1 ಸ್ಥಾನಕ್ಕೆ ಚುನಾವಣೆ ನಡೆದಿದೆ.


ಈ ನಡುವೆ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಜಿ.ಪಾಟೀಲ್, ಈ ಬಗ್ಗೆ ಪಕ್ಷ ತನಿಖೆ ನಡೆಸಲಿದೆ ಎಂದು ಹೇಳಿದ್ದಾರೆ. ದೊಡ್ಡನಗೌಡ ಜಿ.ಪಾಟೀಲ್ ಮಾತನಾಡಿ, ಬಿಜೆಪಿ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿದೆ. ಏನು ಮಾಡಬಹುದು ಮತ್ತು ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಾವು ಚರ್ಚಿಸುತ್ತಿದ್ದೇವೆ" ಎಂದು ಅವರು ಹೇಳಿದರು. ಮತ ಚಲಾಯಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, "ನನ್ನ ಕ್ಷೇತ್ರದ ನೀರು ಮತ್ತು ಇತರ ನಿರ್ವಹಣೆಗೆ ಅವರು ಹಣ ನೀಡುತ್ತಾರೆ ಎಂಬ ಭರವಸೆ ನೀಡುವವರ ಪರವಾಗಿ ನಾನು ಮತ ಚಲಾಯಿಸುತ್ತೇನೆ" ಎಂದು ಹೇಳಿದರು

ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

Posted by Vidyamaana on 2023-12-01 15:59:59 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಟೆಂಪೊ ಪಲ್ಟಿ; ಚಾಲಕ ಸೇರಿದಂತೆ ಮತ್ತೋರ್ವ ಅಪಾಯದಿಂದ ಪಾರು

ವಿಟ್ಲ: ಪಡೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ನಡೆದಿದೆ.


ಸಾಲೆತ್ತೂರು ಕಡೆಗೆ ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಕೋಳಿ ಸಾಗಾಟ ಮಾಡುತ್ತಿದ್ದ ಟೆಂಪೊ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಇನ್ನು ವಾಹನದಲ್ಲಿದ್ದ ಚಾಲಕ ಸಹಿತ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

ಬಪ್ಪಳಿಗೆ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Posted by Vidyamaana on 2023-09-13 11:05:38 |

Share: | | | | |


ಬಪ್ಪಳಿಗೆ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಬಪ್ಪಳಿಗೆಯ ಉತ್ಸಾಹಿ ತರುಣರ ಸಂಘಟನೆಯಾದ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಯ 2023-25ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಯವರು ಪುನರಾಯ್ಕೆ ಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಹಿಕ್, ಕೋಶಾಧಿಕಾರಿಯಾಗಿ ಅಲ್ತಾಫ್ ಯು. ಕೆ ಆಯ್ಕೆಯಾದರು.

 ಸ್ಥಳೀಯ ಮದ್ರಸ  ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆಯು ನಡೆದಿದೆ. ಮಸ್ಜಿದುನ್ನೂರು ಮಸೀದಿ ಹಾಗೂ ಮದ್ರಸ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಹಮೀದ್ ಹಾಜಿ ಲವ್ಲಿಯವರ ಅಧ್ಯಕ್ಷತೆಯಲ್ಲಿ, ಸ್ಥಳೀಯ ಖತೀಬರೂ ಸಮಿತಿಯ ಗೌರವಾಧ್ಯಕ್ಷರೂ ಆದ ಸಿರಾಜುದ್ದೀನ್ ಫೈಝಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ,ಸಾಂಘಿಕ ಕ್ಷೇತ್ರದಲ್ಲಿ ಯುವಕರ ಜವಾಬ್ದಾರಿಯನ್ನು ವಿವರಿಸಿದರು.ಮಸೀದಿಯ ಪ್ರಧಾನ ಕಾರ್ಯದರ್ಶಿಗಳಾದ ಇಕ್ಬಾಲ್ ಯು.ಕೆ.ಯವರು ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ಗಳನ್ನು ನಿರ್ವಹಿಸಿದರು.

  ಕಳೆದ ನಲುವತ್ತಕ್ಕಿಂತಲೂ ಅಧಿಕ ವರ್ಷಗಳಿಂದ  ಮೊಹಲ್ಲಾ ಬಾಂಧವರ  ಸಾಮಾಜಿಕ, ಸಾಮುದಾಯಿಕ, ಶೈಕ್ಷಣಿಕ ಹಾಗೂ ಇನ್ನಿತರ ಕಾರ್ಯಗಳಿಗೆ ತನ್ನದೇ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಸಮಿತಿಯು ಜನಪರ ಸೇವೆಗಳಿಂದ ಜನಪ್ರಿಯತೆ ಗಳಿಸಿದೆ.

ಯೌವ್ವನ ಒಳಿತಿಗಾಗಿ ಎಂಬ ಘೋಷ ವಾಕ್ಯದಡಿ ಸದಸ್ಯತ್ವ ನವೀಕರಣ ಹಾಗೂ ಹೊಸ ಸದಸ್ಯರ ಸೇರ್ಪಡೆಗಾಗಿ ಒಂದು ತಿಂಗಳ ಕಾಲ ನಡೆಸಿದ  ಸದಸ್ಯತ್ವ ಅಭಿಯಾನದ ಮೂಲಕ ಸಮಿತಿಗೆ ಸೇರ್ಪಡೆಗೊಂಡ ಸದಸ್ಯರಲ್ಲಿ ಇಪ್ಪತ್ತೊಂದು ಮಂದಿಯ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಉಪಾಧ್ಯಕ್ಷರುಗಳಾಗಿ ಸವಾದ್ ಲಬಾಂಬ,

ಹಾಜಿ ಸಾದಿಕ್ ಕೆ.ವೈ.ಪಿ.,

ಜೊತೆಕಾರ್ಯದರ್ಶಿಗಳಾಗಿ ನೂರುದ್ದೀನ್ ಬಿ.ಹೆಚ್,

ಆಸೀಫ್ ಪಿ.ಬಿ ,ಸಂಘಟನಾ ಕಾರ್ಯದರ್ಶಿಗಳಾಗಿ ಬಶೀರ್ ಬಂಗಾರಿ,ಉಮರ್ ಕರ್ಕುಂಜ,

ತುರ್ತು ಸೇವೆಗಳ ಉಸ್ತುವಾರಿಗಳಾಗಿ ಶರೀಫ್,ಇಸಾಕ್ ಕರ್ಕುಂಜ, ರಮೀಝ್, ಮಸೂದ್, ಸವಾದ್ ಪಿ.ಬಿ, ಉಮರ್, ಆಶಿಕ್ ಜನತಾ ಸ್ಕೇಲ್.ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಜಲಾಲ್ ಪಿ.ಬಿ, ಶಾಕಿರ್, ಸಜಾಬ್ ಯಸ್. ಕೆ,  ಹುರೈಸ್ ಜನತಾ ಸ್ಕೇಲ್,   ಫಾರೂಕ್,ಕಲೀಲ್, ಸಫ್ವಾನ್,, ಶಿಹಾಬ್ ಪಿ.ಬಿ  ಯವರನ್ನು ಸದಸ್ಯರುಗಳನ್ನಾಗಿ ಆಯ್ಕೆ ಮಾಡಲಾಯಿತು .

ಬಿ.ಹೆಚ್.ಅಬ್ದುಲ್ ರಝಾಕ್ ಸ್ವಾಗತಿಸಿ, ವಂದಿಸಿದರು.

ಬಾಂಧವ್ಯ ಟ್ರೋಫಿ ಗೆ ಸಪ್ತ ವರ್ಷದ ಸಂಭ್ರಮ - ಜ.21ರಂದು ನಡೆಯಲಿದೆ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Posted by Vidyamaana on 2024-01-15 21:37:05 |

Share: | | | | |


ಬಾಂಧವ್ಯ ಟ್ರೋಫಿ ಗೆ ಸಪ್ತ ವರ್ಷದ ಸಂಭ್ರಮ - ಜ.21ರಂದು ನಡೆಯಲಿದೆ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ಕ್ರಿಕೆಟ್ ಪಂದ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿರುವ ಬಾಂಧವ್ಯ ಟ್ರೋಫಿ, ಈ ಬಾರಿ ಜ. 21ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 7ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಇದಾಗಿರಲಿದೆ.

ಪುತ್ತೂರಿನ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿ ಎಂಬಂತೆ ಮಹಿಳೆಯರನ್ನು ಮೈದಾನಕ್ಕಿಳಿಸಿ, ಕ್ರಿಕೆಟ್ ಆಡಿಸಿದ ಹೆಗ್ಗಳಿಕೆ ಬಾಂಧವ್ಯ ಟ್ರೋಫಿಯದ್ದು. ಅಲ್ಲದೇ, ಆಟಗಾರರಿಂದ ಪ್ರವೇಶ ಶುಲ್ಕ ಪಡೆಯದೇ ಆಟವಾಡಿಸುವುದು ಇಲ್ಲಿನ ವಿಶೇಷತೆ.

ಹೆಸರಿನಂತೆಯೇ ಸಮಾಜದಲ್ಲಿ ಬಾಂಧವ್ಯ ಮೂಡಿಸಬೇಕು ಎಂಬ ಸದುದ್ದೇಶದಿಂದ ಬಾಂಧವ್ಯ ಟ್ರೋಫಿ ಪ್ರತಿ ವರ್ಷ ಆಯೋಜಿಸಲಾಗುತ್ತಿದೆ. ಪುತ್ತೂರು ಬಾಂಧವ್ಯ ಫ್ರೆಂಡ್ಸ್ ನೇತೃತ್ವದಲ್ಲಿ ಪುತ್ತೂರಿನ ಎಲ್ಲಾ ಇಲಾಖೆಗಳ ಸಹಯೋಗ ಪಡೆದುಕೊಂಡು ಸಮಾಜದಲ್ಲಿ ಸೌಹಾರ್ದತೆಯ ವಾತಾವರಣಕ್ಕೆ ತಳಹದಿ ಹಾಕುವ ನಿಟ್ಟಿನಲ್ಲಿ ಬಾಂಧವ್ಯ ಟ್ರೋಫಿಯ ಹೆಜ್ಜೆ ಮಹತ್ತರವಾದುದು.

ಅಮರ್, ಅಕ್ಬರ್, ಅಂತೋನಿ ಖ್ಯಾತಿಯ ಸ್ಕರಿಯ ಎಂ.ಎ., ಫಾರೂಕ್ ಶೇಖ್ ಮುಕ್ವೆ ಹಾಗೂ ಪ್ರಶಾಂತ್ ರೈ ಇವರೇ ಮೂರು ಮಂದಿ ಸೇರಿಕೊಂಡು ಪುತ್ತೂರು ಬಾಂಧವ್ಯ ಫ್ರೆಂಡ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಪಂದ್ಯ ನಡೆಯುವ ಇಡೀಯ ದಿನ ಪ್ರಾಯೋಜಕರ ಸಹಕಾರ ಪಡೆದುಕೊಂಡು, ಉಪಾಹಾರ,ಊಟ  ಪಾನೀಯದ ವ್ಯವಸ್ಥೆಯನ್ನು ಉಚಿತವಾಗಿ ಮಾಡಲಾಗುತ್ತಿದೆ ಎನ್ನುವುದು ಬಾಂಧವ್ಯ ಟ್ರೋಫಿಯ ಇನ್ನೊಂದು ವಿಶೇಷತೆ.



ಜ. 21ರಂದು ಬೆಳಿಗ್ಗೆ 9ಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಪಂದ್ಯವನ್ನು ಉದ್ಘಾಟಿಸಲಿದ್ದಾರೆ. ಡಿವೈಎಸ್ಪಿ ಅರುಣ್ ನಾಗೇಗೌಡ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನಗರಸಭೆ ಸದಸ್ಯ ಜೀವಂಧರ್ ಜೈನ್, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್, ವೃತ್ತ ನಿರೀಕ್ಷಕ ರವಿ ಬಿ.ಎಸ್., ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್, ಪೊಲೀಸ್ ಉಪನಿರೀಕ್ಷಕರಾದ ಸೇಸಮ್ಮ, ಭವಾನಿ, ಸುದ್ದಿ ಸಮೂಹ ಸಂಸ್ಥೆಗಳ ಸಿಇಓ ಸೃಜನ್ ಊರುಬೈಲ್, ಮೆಸ್ಕಾಂ ಇಂಜಿನಿಯರ್ ರಾಮಚಂದ್ರ, ಉದ್ಯಮಿಗಳಾದ ಸಹಜ್ ರೈ ಬಳಜ್ಜ, ಶಿವರಾಮ ಆಳ್ವ ಮುಖ್ಯ ಅತಿಥಿಗಳಾಗಿರುವರು.


ಬೆಳಿಗ್ಗೆ 8ರಿಂದ ಪೊಲೀಸ್ ಇಲೆವನ್ ಮತ್ತು ವಿವೇಕಾನಂದ ಕಾಲೇಜು ಇಲೆವನ್ ಮಹಿಳಾ ತಂಡಗಳ ನಡುವೆ ಪ್ರದರ್ಶನ ಪಂದ್ಯಾಟ ಏರ್ಪಡಿಸಲಾಗಿದೆ. ಇದರ ಪ್ರಥಮ ಬಹುಮಾನವಾಗಿ 3024 ರೂ. ಹಾಗೂ ಬಾಂಧವ್ಯ ಟ್ರೋಫಿ, ದ್ವಿತೀಯ 2024 ಮತ್ತು ಬಾಂಧವ್ಯ ಟ್ರೋಫಿ ನೀಡಿ ಗೌರವಿಸಲಾಗುವುದು.

ಬಾಂಧವ್ಯ ಟ್ರೋಫಿಯ ಪ್ರಥಮ ಬಹುಮಾನವಾಗಿ 15024 ರೂ. ಹಾಗೂ ಬಾಂಧವ್ಯ ಟ್ರೋಫಿ, ದ್ವಿತೀಯ ಬಹುಮಾನವಾಗಿ 10024 ರೂ. ಹಾಗೂ ಬಾಂಧವ್ಯ ಟ್ರೋಫಿ, ತೃತೀಯ ಬಹುಮಾನವಾಗಿ 8024 ರೂ. ಹಾಗೂ ಬಾಂಧವ್ಯ ಟ್ರೋಫಿ, ಚತುರ್ಥ ಬಹುಮಾನವಾಗಿ 6024 ರೂ. ಹಾಗೂ ಬಾಂಧವ್ಯ ಟ್ರೋಪಿ ನೀಡಲಾಗುವುದು. ಇದರೊಂದಿಗೆ ಪಂದ್ಯದ ಪಂದ್ಯಶ್ರೇಷ್ಠ, ಅತೀ ಹೆಚ್ಚು ರನ್, ಅತೀ ಹೆಚ್ಚು ವಿಕೆಟ್, ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಬಹುಮಾನ ನೀಡಲಾಗುವುದು.

ಸಂಜೆ 5ಕ್ಕೆ ಸಮಾರೋಪ ನಡೆಯಲಿದ್ದು, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಪೊಲೀಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ, ಜಂಬೂರಾಜ್ ಮಹಾಜನ್, ರಾಜೇಶ್, ಉದಯ ರವಿ, ಕುಟ್ಟಿ ಎಂ.ಕೆ., ಸುದಾನ ವಸತಿಯುತ ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್, ಪುತ್ತೂರು ಪದ್ಮಾ ಸೋಲಾರ್ ಮಾಲಕ ಸೀತಾರಾಮ ರೈ, ಪ್ರೇಮ ಬೇಕರಿ ಮಾಲಕ ವಿನೋದ್, ಬಿಕೆ ಬಿಲ್ಡ್ ಮಾರ್ಟ್ ಮಾಲಕ ಮೊಯ್ದೀನ್, ಉದ್ಯಮಿ ಸುರೇಶ್ ನಾಡಾಜೆ, ಪಾಪ್ಯುಲರ್ ಸ್ವೀಟ್ ಮಾಲಕ ನರೇಂದ್ರ ಕಾಮತ್, ಮಾನಕ ಜ್ಯುವೆಲ್ಲರ್ಸ್ ಮಾಲಕ ಸಿದ್ದನಾಥ, ಕೃಷಿಕ ಶರತ್ ಚಂದ್ರ ಬೈಪಡಿತ್ತಾಯ ನರಿಮೊಗರು, ಪಿಡಬ್ಲ್ಯೂಡಿ ಕಾಂಟ್ರಾಕ್ಟರ್ ಯೋಗೀಶ್, ಮಂಗಳೂರು ಕಟೀಲ್ ಲಾಜಿಸ್ಟಿಕಿನ ಜನಾರ್ದನ ಪೂಜಾರಿ ಅತಿಥಿಯಾಗಿರುವರು. 

ಇದೇ ಸಂದರ್ಭ ಕ್ರೀಡಾ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, 400 ಮೀಟರ್ ಹರ್ಡಲ್ಸ್ ನ ರಾಷ್ಟ್ರೀಯ ಕ್ರೀಡಾಪಟು ಅನಘ ಕೆ.ಎ., ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಜುವೆನ್ನಾ ಡ್ಯಾಝಲ್ ಕುಟಿನ್ಹಾ, ರಾಷ್ಟ್ರಮಟ್ಟದ ತ್ರೋಬಾಲ್ ಆಟಗಾರ ಮಹಮ್ಮದ್ ಶಾನ್ ಅವರನ್ನು ಸನ್ಮಾನಿಸಿ, ಗೌರವಿಸಲಾಗುವುದು.

ಪಂದ್ಯದಲ್ಲಿ ಭಾಗವಹಿಸುವ ತಂಡಗಳು:

ಪೊಲೀಸ್ ಇಲೆವೆನ್ 1, ಪೊಲೀಸ್ ಇಲೆವೆನ್ 2, ಸುದ್ದಿ ಇಲೆವೆನ್, ಹೋಂ ಗಾರ್ಡ್ ಇಲೆವೆನ್, ಮೆಸ್ಕಾಂ ಇಲೆವೆನ್, ನಗರಸಭೆ ಇಲೆವೆನ್, ದೈಹಿ ಶಿಕ್ಷಕ ಶಿಕ್ಷಣ ಇಲಾಖೆ, ಡಾಕ್ಟರ್ಸ್ ಇಲೆವೆನ್, ಲಾಯರ್ಸ್ ಇಲೆವೆನ್,ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು , ಕೆ.ಎಸ್.ಆರ್.ಟಿ.ಸಿ. ಇಲೆವೆನ್, ವಿವೇಕಾನಂದ ವಿದ್ಯಾವರ್ಧಕ ಸಂಘ, ವರ್ತಕರ ಸಂಘ, ಕ್ಯಾಂಪ್ಕೋ ಇಲೆವೆನ್, ಸೊಸೈಟಿ ಟೀಮ್, ಪುತ್ತೂರು ಪ್ರೆಸ್ ಕ್ಲಬ್ ಇಲೆವೆನ್ ತಂಡಗಳು ಪಂದ್ಯದಲ್ಲಿ ಭಾಗವಹಿಸಲಿವೆ.

ಆಟಗಾರರಿಗೆ ಸೂಚನೆ:

ಎಲ್ಲಾ ತಂಡದ ಆಟಗಾರರು ಬೆಳಿಗ್ಗೆ 8ಕ್ಕೆ ಸರಿಯಾಗಿ ಮೈದಾನದಲ್ಲಿ ಹಾಜರಿರಬೇಕು. ಕೋವಿಡ್ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ನಿಯಮಗಳನ್ನು ಅನುಸರಿಸಿ ಪಂದ್ಯಾಟ ಜರಗಲಿದೆ. ಆದ್ದರಿಂದ ಮಾಸ್ಕ್ ಕಡ್ಡಾಯ. ಆಟಗಾರರು ಐಡಿ ಕಾರ್ಡ್ ಅಥವಾ ಮೇಲಾಧಿಕಾರಿಗಳ ಸಹಿಯುಳ್ಳ ಪತ್ರವನ್ನು ಕಡ್ಡಾಯವಾಗಿ ತರಬೇಕು. ಎಲ್ಲಾ ಆಟಗಾರರು ಕಡ್ಡಾಯವಾಗಿ ಸಮವಸ್ತ್ರ (ಜೆರ್ಸಿ) ಮತ್ತು ಶೂ ಧರಿಸಬೇಕು. ಜೀನ್ಸ್ ಪ್ಯಾಂಟ್ ಧರಿಸಿ ಆಡುವಂತಿಲ್ಲ. ಸಂಘಟಕರ, ತೀರ್ಪುಗಾರರ ತೀರ್ಮಾನವೇ ಅಂತಿಮ ಎಂದು ಪ್ರಕಟಣೆ ತಿಳಿಸಿದೆ.



Leave a Comment: