ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಸುದ್ದಿಗಳು News

Posted by vidyamaana on 2024-07-23 21:30:52 |

Share: | | | | |


ಹತ್ತೂರ ಒಡೆಯನ ನೆಲಕ್ಕೆ ಕಾಲಿಟ್ಟ MRPL ತೆಂಕಿಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಶುಭಾರಂಭ

ಪುತ್ತೂರು: ಪೆಟ್ರೋಲಿಯಂ ಉತ್ಪನ್ನಗಳ ತಯಾರಿಕಾ ಸಂಸ್ಥೆ ಒ.ಎನ್.ಜಿ.ಸಿ.ಯ ಅಂಗ ಸಂಸ್ಥೆಯಾಗಿರುವ ಎಂ.ಆರ್.ಪಿ.ಎಲ್.ನ ಹೈಕ್ಯೂ ರಿಟೇಲ್ ಔಟ್ ಲೆಟ್ ಮಹೇಶ್ವರ ಪೆಟ್ರೋಲಿಯಂ ಜು.21ರಂದು ಮಾಣಿ-ಮೈಸೂರು ರಾಷ್ಟಿಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲದಲ್ಲಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶುಭಾರಂಭ ಗೊಂಡಿತ್ತು . ಸಭಾ ಕಾರ್ಯಕ್ರಮಕ್ಕೂ ಮೊದಲು ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸಂಸ್ಥೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಸವಣೂರು ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ಸವಣೂರು ಸೀತಾರಾಮ ರೈ, ಸ್ಥಳೀಯ ನಗರ ಸಭಾ ಸದಸ್ಯೆ ಯಶೋಧಾ ಪೂಜಾರಿ ಮತ್ತು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಪೆಟ್ರೋಲ್ ಹಾಕುವ ಯಂತ್ರಗಳ ರಿಬ್ಬನ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ತೈಲ ತುಂಬುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು. ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾಗಿರುವ ವಾಮನ್ ಪೈ ಅವರು ಉಚಿತ ನೈಟ್ರೋಜನ್ ಪೂರೈಕ್ ವ್ಯವಸ್ಥೆಯನ್ನು ಉದ್ಘಾಟಿಸಿದರು.

ಬಳಿಕ, ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ ಅವರ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಪ್ರಾರಂಭ ಗೊಂಡಿತ್ತು . ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಕಿನಾರ ಅವರು ಅತಿಥಿ ಗಣ್ಯರನ್ನು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು. ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ವೇದಿಕೆಯಲ್ಲಿದ್ದ ಅತಿಥಿ ಗಣ್ಯರು ದೀಪ ಪ್ರಜ್ವಲಿಸುವ ಮೂಲಕ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆಯ ಕಾರ್ಯಾಚರಣೆಗೆ ಅಧಿಕೃತ ಚಾಲನೆಯನ್ನು ನೀಡಿದರು.

ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆನುವಂಶಿಕ ಅರ್ಚಕರಾಗಿರುವ ಗಣೇಶ್ ಭಟ್ ಅವರು ಮಾತನಾಡಿ, ತಲಪಾಡಿಯ ದುರ್ಗಾಪರಮೇಶ್ವರಿ ದೇವರು ಈ ಸಂಸ್ಥೆಯ ಮಾಲಕರಾಗಿರುವ ಶಿವಪ್ರಸಾದ್ ಶೆಟ್ಟಿ ಅವರಿಗೆ ಕುಲದೇವರಾಗಿರುವ ಕಾರಣ ತಲಪಾಡಿ ಕ್ಷೇತ್ರöಕ್ಕೂ ಪುತ್ತೂರಿಗೂ ವಿಶೇಷ ನಂಟಿದೆ ಎಂದು ಹೇಳಿದರು. ಶಿವಪ್ರಸಾದ್ ಶೆಟ್ಟಿ ಅವರು ದೈವಭಕ್ತರಾಗಿದ್ದು ಅವರ ಸತ್ಕರ್ಮ ಮತ್ತು ದೇವರ ಮೇಲೆ ಅವರಿಟ್ಟ ಭಕ್ತಿ ಹಾಗೂ ಗುರು-ಹಿರಿಯರ ಮೇಲಿನ ಗೌರವ ಅವರನ್ನು ಇಂದು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ದೈವ-ದೇವರ ಅನುಗ್ರಹದೊಂದಿಗೆ ಈ ನೂತನ ಸಂಸ್ಥೆಯು ಉತ್ತಮ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿ ಇನ್ನಷ್ಟು ಹೆಸರುವಾಸಿಯಾಗಲಿ ಎಂದು ಅವರು ಶುಭಾಶೀರ್ವಾದ ನೀಡಿದರು.

Additional Image

ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಭಗವಂತನನ್ನು ತೋರಿಸುವವ ಗುರು, ಜ್ಞಾನವನ್ನು ಕೊಡುವವ ಗುರು ಎಂಬ ಮಾತನ್ನು ನಮ್ಮ ಹಿರಿಯತು ಹೇಳಿದ್ದಾರೆ. ಅಂತಹ ಗುರುವಿನ ಪ್ರೇರಣೆ ಇರತಕ್ಕಂತಹ ವೇದವ್ಯಾಸ ಮಹರ್ಷಿಗಳ ಜನ್ಮದಿನದ ಪುಣ್ಯಸಂದರ್ಭವಾಗಿರುವ ಈ ಗುರುಪೂರ್ಣಮಿಯ ದಿನದಂದು ಈ ಪುತ್ತೂರಿನ ಪುಣ್ಯ ನೆಲದಲ್ಲಿ ಮಹೇಶ್ವರ ಪೆಟ್ರೋಲಿಯಂ ಸಂಸ್ಥೆ ಉದ್ಘಾಟನೆಗೊಂಡಿರುವುದು ಈ ಸಂಸ್ಥೆಗೆ ಗುರುಹಿರಿಯರ ಆಶೀರ್ವಾದ ಇದೆ ಎಂಬುದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದರು. ಈ ಸಂಸ್ಥೆಯು ಎಂ.ಆರ್.ಪಿ.ಎಲ್.ನ ಒಂದಹ ಅತ್ಯುನ್ನತ ಸಂಸ್ಥೆಯಾಗಿ ಬೆಳೆಯುತ್ತದೆ, ಮಾತ್ರವಲ್ಲದೇ ಶಿವಪ್ರಸಾದ್ ಶೆಟ್ಟಿ ಅವರು ಓರ್ವ ಯಸಸ್ವಿ ಪೆಟ್ರೋಲಿಯಂ ಉದ್ಯಮಿಯಾಗಿ ಬೆಳೆಯುತ್ತಾರೆ ಎಂಬ ವಿಶ್ವಾಸವನ್ನು ಕಟೀಲ್ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಶಿವಪ್ರಸಾದ್ ಅವರು ಭೂವ್ಯವಹಾರದಲ್ಲಿ ಓರ್ವ ಯಶಸ್ವಿ ಉದ್ಯಮಿಯಾಗಿ ಪುತ್ತೂರಿನ ಮಟ್ಟಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಶ್ರೀಮಂತಿಕೆ ಬಂದಾಗ ಕೆಲವರಿಗೆ ಎಲ್ಲವೂ ಮರೀತದೆ, ಆದರೆ ಶಿವಪ್ರಸಾದ್ ಅವರು ತಮ್ಮಲ್ಲಿರುವ ಹೃದಯ ಶ್ರೀಮಂತಿಕೆಯಿAದ ತಮ್ಮ ವ್ಯವಹಾರದ ಜೊತೆಗೆ ಸಾಮಾಜಿಕ ಕಾರ್ಯದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇನ್ನು ಶಿವಪ್ರಸಾದ್ ಅವರು ಓರ್ವ ಧಾರ್ಮಿಕ ಮನೋಭಾವದ ವ್ಯಕ್ತಿ ಎಂಬುದಕ್ಕೆ ಉದಾಹರಣೆಯಾಗಿ, ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಸಂದರ್ಭದಲ್ಲಿ ಒಂದು ಗುಡಿ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ತನ್ನದು ಎಂದು ಮಾತುಕೊಟ್ಟು ಅದರಂತೆ ನಡೆದುಕೊಂಡ ವಿಚಾರವನ್ನು ಕಟೀಲ್ ಅವರು ಸಭೆಯ ಮುಂದೆ ಬಿಚ್ಚಿಟ್ಟರು. ತೈಲೋದ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ದೇಶಾದ್ಯಂತ ಕ್ರಾಂತಿಕಾರಿ ಬದಲಾವಣೆಗಳಾಗಿದ್ದು ಎಂ.ಆರ್.ಪಿ.ಎಲ್, ಭಾರತ್ ಪೆಟ್ರೋಲಿಯಂ ಸಹಿತ ಎಲ್ಲಾ ಸಂಸ್ಥೆಗಳೂ ಸ್ಪರ್ಧಾತ್ಮಕ ವ್ಯವಹಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಇದು ಈ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಪುತ್ತೂರು ಪರಿಸರದಲ್ಲಿ ಎಂ.ಆರ್.ಪಿ.ಎಲ್.ನ ಪ್ರಥಮ ಔಟ್ ಲೆಟ್ ಪ್ರಾರಂಭಿಸುವ ಅವಕಾಶ ಶಿವಪ್ರಸಾದ್ ಅವರಿಗೆ ಸಿಕ್ಕಿರುವುದಕ್ಕೆ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುವುದಾಗಿ ಮತ್ತು ಈ ಉದ್ಯಮದಲ್ಲಿ ಶಿವಪ್ರಸಾದ್ ಅವರಿಗೆ ಯಶಸ್ಸು ಲಭಿಸಲಿ ಎಂಬ ಸದಾಶಯದ ನುಡಿಗಳನ್ನು ನಳಿನ್ ಕುಮಾರ್ ಕಟೀಲ್ ನೀಡಿದರು. 

Additional Image


Additional Image

ವ್ಯಕ್ತಿಯೊಬ್ಬರು ಉದ್ಯಮದಲ್ಲಿ ಬೆಳೆದರೂ ಕೂಡ ಹೇಗೆ ತನ್ನ ಪಾಡಿಗೆ ತನ್ನ ವ್ಯವಹಾರವನ್ನು ನಡೆಸಿಕೊಂಡು ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ತನ್ನನ್ನು ತೊಡಗಿಸಕೊಳ್ಳುತ್ತಾರೆ ಎಂಬುದಕ್ಕೆ ಶಿವಪ್ರಸಾದ್ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಅಶೋಕ್ ಕುಮಾರ್ ರೈ ಹೇಳಿದರು. ಕಳೆದ ಸಲ ಮಹಾಲಿಂಗೇಶ್ವರ ದೇವರಿಗೆ ಒಂದಷ್ಟು ಜನರ ಸಹಕಾರದೊಂದಿಗೆ ಬಂಗಾರದ ಮಾಲೆಯನ್ನು ಒಪ್ಪಿಸುವಲ್ಲಿ ಮುಂದಾಳತ್ವವನ್ನು ಶಿವಪ್ರಸಾದ್ ಅವರು ವಹಿಸಿಕೊಂಡಿರುವುದು ಅವರಲ್ಲಿರುವ ಧಾರ್ಮಿಲ ಪ್ರಜ್ಞೆಗೆ ಸಾಕ್ಷಿ ಎಂಬ ವಿಚಾರವನ್ನು ಶಾಸಕರು ಈ ಸಂದರ್ಬದಲ್ಲಿ ವಿಶೇಷವಾಗಿ ಶ್ಲಾಘಿಸಿದರು.

 Share: | | | | |


ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

Posted by Vidyamaana on 2024-01-04 09:56:17 |

Share: | | | | |


ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ.ಪ್ರತಿವರ್ಷದಂತೆ ಈ ವರ್ಷವೂ ಅಯ್ಯಪ್ಪ ಮಾಲಾಧಾರಿಗಳು ಕೆಂಡಸೇವೆ ಮಾಡುತ್ತಿದ್ದರು.ಅಯ್ಯಪ್ಪ ಮಾಲಾಧಾರಿಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಕೆಂಡದ ಮೇಲೆ ಕುಪ್ಪಳಿಸುತ್ತಾ ಸಾಗಿದ್ದರು. ಈ ವೇಳೆ ಓರ್ವ ಮಾಲಾಧಾರಿ ಆಯತಪ್ಪಿ ನಿಗಿ ನಿಗಿ ಕೆಂಡದ ಮೇಲೆ ಬಿದ್ದಿದ್ದಾನೆ.


ನೆರೆದಿದ್ದ ಜನರು ತಕ್ಷಣ ಆತನ ರಕ್ಷಣೆಗೆ ಧಾವಿಸಿದ್ದಾರೆ. ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಸಚಿವ ವಿನಯಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ

Posted by Vidyamaana on 2023-07-08 03:18:28 |

Share: | | | | |


ಮಾಜಿ ಸಚಿವ ವಿನಯಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ

ಪುತ್ತೂರು: ಸರ್ವೆ ಗ್ರಾಮದ ಸೊರಕೆ ದಿ.ಅಚ್ಚುತ್ತ ಪೂಜಾರಿ ಸೊರಕೆಯವರ ಪತ್ನಿ ಸುನೀತಿ(92.ವ)ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.8ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಪುತ್ರರಾದ ಅಶೋಕ್ ಕುಮಾರ್ ಸೊರಕೆ, ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ,ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪುತ್ರಿಯರನ್ನು ಅಗಲಿದ್ದಾರೆ.

ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

Posted by Vidyamaana on 2023-05-13 01:53:50 |

Share: | | | | |


ಮೇ 13 ಮತ ಏಣಿಕೆ | ಸುರತ್ಕಲ್ ಎನ್ಐಟಿಕೆಯಲ್ಲಿ ಬಿಗಿ ಭದ್ರತೆ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13ರಂದು ಆರಂಭವಾಗಲಿದ್ದು, ಸುರತ್ಕಲ್ ಎನ್ ಐಟಿಕೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.ಈ ಬಗ್ಗೆ ಎನ್ಐಟಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 10 ರಂದು ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 77.39% ಮತದಾನವಾಗಿದೆ. ಅಂಚೆ ಮತಗಳ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ನಂತರ ಇವಿಎಂಗಳ ಎಣಿಕೆ ಬೆಳಿಗ್ಗೆ 8:30 ಕ್ಕೆ ನಡೆಯಲಿದೆ.ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ರಿಟರ್ನಿಂಗ್ ಅಧಿಕಾರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ಸಾಕಷ್ಟು ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಪ್ರತಿ ಟೇಬಲ್ ನ ಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಗಳು ಮೇಲ್ವಿಚಾರಣೆ ನಡೆಸಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತ ಎಣಿಕೆ ಕೇಂದ್ರದಲ್ಲಿ 300 ಹೆಡ್ ಕಾನ್ಸ್ಟೇಬಲ್ ಗಳು, 14 ಇನ್ಸ್ಪೆಕ್ಟರ್ ಗಳು , 2 ಡಿಸಿಪಿಗಳು, 400 ಸಿವಿಲ್ ಪೊಲೀಸ್ ಸಿಬ್ಬಂದಿ, 39 ಸಹಾಯಕ ಸಬ್ಇನ್ಸ್ಪೆಕ್ಟರ್ ಗಳು, 200 ಗೃಹರಕ್ಷಕರು, 4 ತುಕಡಿಗಳು, ಕೆಎಸ್ ಆರ್ ಪಿ ತುಕಡಿಗಳು ಮತ್ತು ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2024-04-24 04:03:48 |

Share: | | | | |


ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ:ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ  ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು

USA vs Pak: ರೋಚಕ ಸೂಪರ್ ಓವರ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಯುಎಸ್‌ಎ

Posted by Vidyamaana on 2024-06-07 05:15:47 |

Share: | | | | |


USA vs Pak: ರೋಚಕ ಸೂಪರ್ ಓವರ್​ನಲ್ಲಿ ಪಾಕಿಸ್ತಾನವನ್ನು ಮಣಿಸಿದ ಯುಎಸ್‌ಎ

ಡಲ್ಲಾಸ್: ಡಲ್ಲಾಸ್ ನಲ್ಲಿ ನಡೆದ ಅಮೇರಿಕಾ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯ ಆರಂಭದಲ್ಲಿ ಸಮಬಲ ಕಂಡು ಸೂಪರ್ ಓವರ್ ನಲ್ಲಿ ಕೊನೆಗೊಂಡಿತು.


ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಅಮೇರಿಕಾ ತಂಡ, ಪಾಕಿಸ್ತಾನ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಗೆ ಕಟ್ಟಿಹಾಕಿತು.

ಅಮೇರಿಕಾ ಪರ ನೋಸ್ತೂಶ್ ಕೆಂಜಿಗೆ 30 ರನ್ ನೀಡಿ 3 ವಿಕೆಟ್ ಪಡೆದರೆ, ಸೌರಭ್ ನೇತ್ರವಲ್ಕರ್ 18 ರನ್ ನೀಡಿ 2 ವಿಕೆಟ್ ಪಡೆದರು, ಅಲಿಖಾನ್ 30 ರನ್, ಜಸ್ದೀಪ್ ಸಿಂಗ್ 37 ರನ್ ನೀಡಿ ತಲಾ 1 ವಿಕೆಟ್ ಪಡೆದರು.

ಬಡಗನ್ನೂರು : ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿತ

Posted by Vidyamaana on 2023-11-09 11:26:22 |

Share: | | | | |


ಬಡಗನ್ನೂರು : ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿತ

ಪುತ್ತೂರು : ನಿನ್ನೆ ಸುರಿದ ಭಾರೀ ಗಾಳಿ-ಮಳೆಗೆ ಶಾಲಾ ಕಾಂಪೌಂಡ್ ಕುಸಿದ ಘಟನೆ ಬಡಗನ್ನೂರಿನಲ್ಲಿ ನಡೆದಿದೆ.

ಬಡಗನ್ನೂರಿನ ಶಾಲಾ ಕಾಂಪೌಂಡ್ ನಿನ್ನೆ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಕುಸಿದು ಬಿದ್ದಿದೆ.

ಘಟನೆಯಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

Recent News


Leave a Comment: