ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಸುದ್ದಿಗಳು News

Posted by vidyamaana on 2024-07-23 06:33:29 | Last Updated by Vidyamaana on 2024-07-23 06:33:29

Share: | | | | |


ಜುಂಬಾ ಡ್ಯಾನ್ಸ್‌ ಮಾಡುತ್ತಲೇ ಹೃದಯಾಘಾತಕ್ಕೆ ಖ್ಯಾತ ಉದ್ಯಮಿ ಬಲಿ,ಸಾವಿನ ಕೊನೆ ಕ್ಷಣ ಸೆರೆ!

ಮುಂಬೈ :ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ.

ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.


ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.

ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.

 Share: | | | | |


ಸುಳ್ಯದಲ್ಲಿ ಎರಡು ಖಾಸಗಿ ಬಸ್ ಸೀಝ್

Posted by Vidyamaana on 2023-07-06 02:15:00 |

Share: | | | | |


ಸುಳ್ಯದಲ್ಲಿ ಎರಡು ಖಾಸಗಿ ಬಸ್  ಸೀಝ್

ಸುಳ್ಯ; ಅತೀ ಹಳೆಯ ಪರ್ಮಿಟ್ ಹೊಂದಿದ್ದ ಎರಡು ಖಾಸಗಿ ಬಸ್ ಗಳನ್ನು ಆರ್ ಟಿ ಓ ಅಧಿಕಾರಿಗಳು ಸೀಝ್ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ - ಮಂಡೆಕೋಲು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್ ಗಳನ್ನು ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಪುತ್ತೂರು ಆರ್ ಟಿ ಓ ಅಧಿಕಾರಿಗಳ ತಂಡ ಸೀಝ್ ಮಾಡಿದೆ.


ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು - ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329 ಎಂಬ ಸಂಖ್ಯೆಯ ಇನ್ನೊಂದು ಬಸ್ ಸುಮಾರು ಮೂವತ್ತೊಂಬತ್ತು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಇವುಗಳಲ್ಲಿ ಒಂದು ಡಿಸೆಂಬರ್ ತಿಂಗಳಿನಲ್ಲಿ ಹಾಗೂ ಇನ್ನೊಂದು ಜನವರಿ ತಿಂಗಳಿನಲ್ಲಿ ಅವಧಿ ಮುಗಿದಿದ್ದರೂ ನವೀಕರಣ ಮಾಡದೇ ಬಸ್ ಗಗಳನ್ನು ಓಡಿಸುತ್ತಿರುವ ಕುರಿತು ಆರ್ ಟಿ ಓ ಅಧಿಕಾರಿಗಳಿಗೆ ದೂರು ಕೇಳಿಬಂದಿತ್ತು ಈ ಹಿನ್ನೆಲೆ ಬಸ್ ಗಳನ್ನು ಸೀಝ್ ಮಾಡಿದ್ದಾರೆ.ಸೀಝ್ ಆಗಿರುವ ಬಸ್ಸುಗಳು ಚೆನ್ನಕೇಶವ ದೇವಾಲಯದ ಬಳಿಯಲ್ಲಿ ಪೋಲೀಸ್ ಸುಪರ್ದಿಗೆ ನೀಡಲಾಗಿದೆ. ಈ ಕುರಿತಂತೆ ಕಾನೂನು ರೀತಿಯಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಹಾಗೂ ಪರವಾನಿಗೆ ಹೊಂದಿದ ಮಾಲಕರು ನೋಟಿಸ್ ಗೆ ಉತ್ತರ ಸಲ್ಲಿಸಿದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನಲಾಗಿದೆ.

ಮಂಗಳೂರು: ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಗೆ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ

Posted by Vidyamaana on 2023-08-25 06:38:10 |

Share: | | | | |


ಮಂಗಳೂರು: ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಗೆ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ

ಮಂಗಳೂರು: ಲೋನ್ ಆಪ್ ಮೂಲಕ ಸಾಲ ಪಡೆದ ಯುವತಿಗೆ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ ಹಾಕಿದ ಹಿನ್ನೆಲೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ದೂರುದಾರ ಯುವತಿ ಎ.15ರಂದು ಗೂಗಲ್ ಪ್ಲೇ ಸ್ಟೋರ್‌ನಿಂದ ಕ್ವಿಕ್ ಮನಿ ಎಂಬ ಲೋನ್ ಆಯಪ್ ಡೌನ್‌ಲೋಡ್ ಮಾಡಿದ್ದಳು.ಅದರಲ್ಲಿ 10,000 ರೂ. ಸಾಲಕ್ಕೆ ಅಪ್ಪೆ, ಮಾಡಿದ್ದಳು. ಆಕೆಯ ಖಾತೆಗೆ ಕೂಡಲೇ 7,500 ರೂ. ಜಮೆ ಆಗಿತ್ತು. ಕೆಲವು ದಿನಗಳ ಬಳಿಕ ಅದನ್ನು ಮರುಪಾವತಿ ಮಾಡಿದ್ದಳು. ಆ ಬಳಿಕ ಹಲವು ವಾಟ್ಸಾಪ್ ಸಂಖ್ಯೆಗಳಿಂದ ಕರೆ ಮಾಡಿದ ಅಪರಿಚಿತರು ಕಡ್ಡಾಯವಾಗಿ ಪುನಃ ಸಾಲ ಪಡೆಯಬೇಕು ಎಂದು ಒತ್ತಾಯಿಸಿದರು.


ಆಕೆಯ ಖಾತೆಗೆ 14,000 ರೂ. ಜಮೆ ಮಾಡಿದರು. ಅದನ್ನು ಕೂಡ ಯುವತಿ ಮರುಪಾವತಿಸಿದ್ದಳು. ಆದರೂ ಆಕೆಗೆ ಕರೆ ಮಾಡಿದ ಅಪರಿಚಿತರು ಹೆಚ್ಚಿನ ಹಣ ಪಾವತಿಸುವಂತೆ ಒತ್ತಾಯಿಸಿದರು. ಆಕೆಯ ಖಾತೆಯಿಂದ 51,000 ರೂ.ಗಳನ್ನು ವರ್ಗಾಯಿಸಿಕೊಂಡರು. ಆ ಬಳಿಕವೂ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದರು. ಒಂದು ವೇಳೆ ಹಣ ನೀಡದಿದ್ದರೆ ಆಕೆಯ ಫೋಟೋವನ್ನು ಹುಡುಗನೊಂದಿಗೆ ನಗ್ನವಾಗಿ ಇರುವಂತೆ ಎಡಿಟ್ ಮಾಡಿ ಸ್ನೇಹಿತರು ಹಾಗೂಸಂಬಂಧಿಕರಿಗೆ ಕಳುಹಿಸಲಾಗುವುದು ಮತ್ತು ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ

ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

Posted by Vidyamaana on 2024-04-21 08:44:30 |

Share: | | | | |


ಎ.24 : ಕಲ್ಲಾರೆ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ಶಿವಕೃಪಾ ಸಭಾಭವನ ಲೋಕಾರ್ಪಣೆ

ಪುತ್ತೂರು: ಕಲ್ಲಾರೆ ಶಿವಬ್ರಾಹ್ಮಣ್ಯ (ಸ್ಥಾನಿಕ) ಸಮಾಜ ಸೇವಾ ಸಂಘ ೧೯೩೬ರಲ್ಲಿ ಸ್ಥಾಪನೆಗೊಂಡು, ಕಳೆದ೮೮ ವರ್ಷಗಳಿಂದ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನೂತನವಾಗಿ ಸುಮಾರು ೧.೫೦ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಿವ ಕೃಪಾ ಸಭಾಭವನದ ಲೋಕಾರ್ಪಣೆ ಏ.೨೪ರಂದು ಸಾಯಂಕಾಲ ೬.೩೦ಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್. ಕೆ. ಜಗನ್ನಿವಾಸ ರಾವ್ ಹೇಳಿದರು.

ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

Posted by Vidyamaana on 2024-04-26 18:34:04 |

Share: | | | | |


ನನ್ನ ಮತ ನನ್ನ ಹಕ್ಕು - ಅಬುದಾಬಿ To ಕುಂತೂರು

ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡುವಂತೆ ಚುನಾವಣಾ ಆಯೋಗ ಎಷ್ಟೇ ಜಾಗೃತಿ ಮೂಡಿಸಿದ್ರೂ ಜನರು ಮಾತ್ರ ಅದೆಷ್ಟು ನಿರ್ಲಕ್ಷ್ಯವಹಿಸಿದ್ದಾರೆಂದರೆ ಅವರು ತಮ್ಮೂರಲ್ಲೇ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುತ್ತಿಲ್ಲ. ಕೆಲವರು ಬಿಸಿಲು ಝಳಕ್ಕೆ ಹೆದರಿ ಮನೆಯಲ್ಲಿ ಉಳಿದರೆ ಇನ್ನು ಕೆಲವರು ಮತದಾನದ ದಿನದಂದು ರಜೆ ಸಿಕ್ಕಿದ್ದಕ್ಕೆ ಟ್ರಿಪ್ ಹೋಗುತ್ತಿರೋ ಜನರ ನಡುವೆ ಕುಂತೂರು ಎಮಿರೇಟ್ಸ್ ಕ್ಲಬ್ ಇದರ ಗೌರವಾಧ್ಯಕ್ಷ ಸತ್ತಾರ್ ಯು ಕೆ ಮತದಾನ ಮಾಡುವ ಸಲುವಾಗಿಯೇ 

ಬಂಟ್ವಾಳ: ಲಾರಿ ಚಾಲಕನಿಗೆ ಮೂರ್ಛೆ ರೋಗ, ರಸ್ತೆ ಬದಿ ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ಗೆ ನುಗ್ಗಿದ ಲಾರಿ

Posted by Vidyamaana on 2023-03-08 15:59:02 |

Share: | | | | |


ಬಂಟ್ವಾಳ: ಲಾರಿ ಚಾಲಕನಿಗೆ ಮೂರ್ಛೆ ರೋಗ, ರಸ್ತೆ ಬದಿ ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ಗೆ ನುಗ್ಗಿದ ಲಾರಿ

ಬಂಟ್ವಾಳ: ಲಾರಿ ಚಾಲನೆ ಮಾಡುತ್ತಿರುವಾಗಲೇ ಡ್ರೈವರ್ ಗೆ ಮೂರ್ಛ ರೋಗ ಕಾಣಿಸಿಕೊಂಡು ಲಾರಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಪೆಟ್ರೋಲ್ ಬಂಕ್ ಗೆ ನುಗ್ಗಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಹಾಸನಕ್ಕೆ ಖಾಲಿ ಲಾರಿ ಹೋಗುತ್ತಿದ್ದ ವೇಳೆ ಬಿಸಿರೋಡಿನ ಪೆಟ್ರೋಲ್ ಪಂಪ್ ಬಳಿ ಚಾಲಕ ಲಕ್ಷ್ಮಣ್ ಅವರಿಗೆ ಮೂರ್ಚೆ ರೋಗ ಕಾಣಿಸಿದೆ. ಪರಿಣಾಮ ಲಾರಿ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕುತ್ತಿದ್ದ ರಿಟ್ಸ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಪೆಟ್ರೋಲ್ ಪಂಪ್ ನಲ್ಲಿ ನಿಲ್ಲಿಸಲಾಗಿದ್ದ ನ್ಯಾನೋ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ

Posted by Vidyamaana on 2023-09-26 15:32:07 |

Share: | | | | |


ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಯುವಕನ ದಾಂಧಲೆ

ಮಂಗಳೂರು ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.


ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.


ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.

Recent News


Leave a Comment: