ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಶಿವಪ್ರಸಾದ್ ಗೆ ಜಾಮೀನು

Posted by Vidyamaana on 2023-08-11 16:38:18 |

Share: | | | | |


ಮಸೂದ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಶಿವಪ್ರಸಾದ್ ಗೆ ಜಾಮೀನು

ಸುಳ್ಯ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.


ಹೈಕೋರ್ಟ್ ಆದೇಶದ ಮೇಲೆ ಬಿಡುಗಡೆ ಮಾಡಲಾಗಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠವು ಆದೇಶವನ್ನು ಹೊರಡಿಸಿದೆ. ಇತ್ತೀಚೆಗೆ ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದು ಆ.೪ ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿತ್ತು.2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು

ಮಂಗಳೂರು ರಸ್ತೆಯಲ್ಲಿ ನಮಾಜ್:ಪ್ರಕರಣ ದಾಖಲಿಸಿದ್ದ ಪಿಐಗೆ ಕಡ್ಡಾಯ ರಜೆ

Posted by Vidyamaana on 2024-05-31 06:33:40 |

Share: | | | | |


ಮಂಗಳೂರು  ರಸ್ತೆಯಲ್ಲಿ ನಮಾಜ್:ಪ್ರಕರಣ ದಾಖಲಿಸಿದ್ದ ಪಿಐಗೆ ಕಡ್ಡಾಯ ರಜೆ

ಮಂಗಳೂರು : ಇಲ್ಲಿನ ಕಂಕನಾಡಿಯ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲಿ ಮೇ 24ರಂದು ನಮಾಜ್ ಮಾಡಿದ್ದರ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕೊಂಡಿದ್ದ ಕದ್ರಿಯ ನಗರ ಪೂರ್ವ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರವರಿಗೆ ಕಡ್ಡಾಯ ರಜೆ ನೀಡಲಾಗಿದೆ.

ಸಂಚಾರಕ್ಕೆ ಅಡೆತಡೆ ಮಾಡುವ ಉದ್ದೇಶ ಇಲ್ಲದೆ ನಮಾಜ್ ಮಾಡಿರುವುದರಿಂದ ಈ ಪ್ರಕರಣ ದಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ರಸ್ತೆಯಲ್ಲಿ ನಮಾಜ್‌ ಮಾಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (ಐಪಿಸಿ ಸೆಕ್ಷನ್ 341,283,143,149) ದಾಖಲಿಸಿಕೊಂಡಿದ್ದರು. ಇದಕ್ಕೆ ಮುಸ್ಲಿಂ ಸಂಘಟನೆಗಳವರು, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದವರು ಆಕ್ರೋಶ ವ್ಯಕ್ತಪಡಿಸಿ, ಪ್ರಕರಣ ವಾಪಸ್‌ಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಮುಸ್ಲಿಂ ಸಂಘಟನೆಯ ಒತ್ತಡಕ್ಕೆ ಮಣಿದು, ಬಿ ವರದಿ ಸಲ್ಲಿಸಿದ್ದು ಸರಿಯಲ್ಲ ಎಂದು ವಿಎಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ. ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡುವುದಾಗಿ ಹೇಳಿದ್ದಾರೆ.

ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

Posted by Vidyamaana on 2024-04-03 06:51:43 |

Share: | | | | |


ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು.

ಪವಿತ್ರಾ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದೇನೆ: ನಟಿ Pavithra Jayaram ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆಗೆ ಶರಣು

Posted by Vidyamaana on 2024-05-18 04:57:44 |

Share: | | | | |


ಪವಿತ್ರಾ ಹುಟ್ಟುಹಬ್ಬಕ್ಕೆ ಹೋಗುತ್ತಿದ್ದೇನೆ: ನಟಿ Pavithra Jayaram ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆಗೆ ಶರಣು

ಹೈದರಾಬಾದ್: ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದ ನಟಿ ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಅವರ ಗೆಳೆಯ ಚಂದು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂದು ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಇಂದು ಹೈದರಾಬಾದ್ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ (Chandu Suicide) ಮಾಡಿದ್ದಾರೆ.ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದು, ಕೆಲ ಧಾರಾವಾಹಿಗಳಲ್ಲಿ ಚಂದು ಕೂಡ ಪವಿತ್ರಾರೊಂದಿಗೆ ನಟಿಸಿದ್ದರು. ಪವಿತ್ರಾ ಸಾವಿನ ಬಳಿಕ ಹೈದರಾಬಾದ್​​​ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. 2015ರಲ್ಲಿ ಶಿಲ್ಪಾಳನ್ನು ಪ್ರೀತಿಸಿ ಚಂದು ಮದುವೆ ಆಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ನಟಿ ಪವಿತ್ರಾ ಜಯರಾಮ್​ ಅವರ ಸಾವಿನಿಂದ ಮನನೊಂದು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೈದರಾಬಾದ್​ನ ನಾರಸಿಂಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

ಹೃದಯಾಘಾತದಿಂದ ನಿಲಿಕಾ ನಿಧನ

Posted by Vidyamaana on 2024-06-27 16:50:11 |

Share: | | | | |


ಹೃದಯಾಘಾತದಿಂದ ನಿಲಿಕಾ ನಿಧನ

ಮಡಿಕೇರಿ: ಎಂದಿನಂತೆ ಇನ್ನೇನು ತನ್ನ ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ.

ಸುಳ್ಯ; ಅಜ್ಜಾವರದಲ್ಲಿ ತಾಯಾನೆಯಿಂದ ಬೇರ್ಪಟ್ಟ ಮರಿಯಾನೆ ದುಬಾರೆಯಲ್ಲಿ ಸಾವು

Posted by Vidyamaana on 2023-05-10 06:48:15 |

Share: | | | | |


ಸುಳ್ಯ; ಅಜ್ಜಾವರದಲ್ಲಿ ತಾಯಾನೆಯಿಂದ ಬೇರ್ಪಟ್ಟ ಮರಿಯಾನೆ ದುಬಾರೆಯಲ್ಲಿ ಸಾವು

ಸುಳ್ಯದ ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಕೆರೆಗೆ ಬಿದ್ದು ಮೇಲೆ ಬಂದ ತಾಯಾನೆಯಿಂದ ಬೇರ್ಪಟ್ಟಿದ್ದ ಮರಿಯಾನೆಯನ್ನು ದುಬಾರೆಯ ಆನೆ ಶಿಬಿರಕ್ಕೆ ಕಳುಹಿಸಲಾಗಿತ್ತು. ಇದೀಗ ಮರಿಯಾನೆ ದುಬಾರೆಯ ಆನೆ ಶಿಬಿರದಲ್ಲಿ ಸಾವನ್ನಪ್ಪಿದೆ.

ಏಪ್ರಿಲ್ 13 ರಂದು ನಾಲ್ಕು ಆನೆಗಳು ಅಜ್ಜಾವರ ತುದಿಯಡ್ಕದ ಸಂಪತ್ ರೈ ಯವರ ತೋಟದ ಕೆರೆಗೆ ಬಿದ್ದಿದ್ದವು. ಬಳಿಕ ಮೂರು ಆನೆಗಳನ್ನು ಮೇಲಕ್ಕೆ ಎತ್ತಲಾಗಿತ್ತು. ಆದ್ರೆ ಒಂದು ಮರಿಯಾನೆ ಮಾತ್ರ ಮೇಲೆ ಬರಲಾಗದೆ ಜಾರಿ ಬಿದ್ದುದರಿಂದ ಸ್ಥಳೀಯರು ಮತ್ತು ಅರಣ್ಯ ಇಲಾಖೆಯವರು ಅದನ್ನು ದೂಡಿ ಮೇಲಕ್ಕೆ ಹತ್ತಿಸಿದ್ದರು. ಆ ವೇಳೆಗೆ ಆನೆಗಳ ಹಿಂಡು ಮುಂದಕ್ಕೆ ಹೋಗಿದ್ದುದರಿಂದ ಈ ಮರಿಯಾನೆಗೆ ಗುಂಪು ಸೇರಲಾಗಿರಲಿಲ್ಲ.ಮರುದಿನ ಗುಂಪಿಗೆ ಸೇರಿಸಲು ಯತ್ನಿಸಿದರೂ ಮರಿಯಾನೆ ವಾಪಸ್ ಬಂದಿತ್ತು . ಬಳಿಕ ಆನೆ ತಜ್ಞರ ಅಭಿಪ್ರಾಯದ ಮೇರೆಗೆ ದುಬಾರೆ ಆನೆ ಶಿಬಿರದಿಂದ ತಜ್ಞರು ಬಂದು ಎ.16 ರಂದು ದುಬಾರೆ ಆನೆ ಶಿಬಿರಕ್ಕೆ ಅದನ್ನು ಕೊಂಡುಯೊಯ್ಯಲಾಗಿತ್ತು. ಶಿಬಿರದಲ್ಲಿ ಈ ಮರಿಯಾನೆಯು ಚುರುಕಾಗಿದ್ದು ಹಾಲು ಸೇವಿಸುತ್ತಿತ್ತು. ಇತರ ಆನೆ ಮರಿಗಳೊಂದಿಗೆ ಬೆರೆಯುತ್ತಿತ್ತು. ಆದರೆ ವಾರದ ಹಿಂದೆ ದಿಢೀರನೆ ಆನೆ ಮರಿ ಸಾವನ್ನಪ್ಪಿದೆ. ಸಾವಿಗೆ ಕಾರಣವೇನೆಂದು ತಿಳಿದುಬಂದಿಲ್ಲ.

Recent News


Leave a Comment: