ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಚಿಕ್ಕಮಗಳೂರು ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

Posted by Vidyamaana on 2023-11-11 14:10:00 |

Share: | | | | |


ಚಿಕ್ಕಮಗಳೂರು  ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ಚಿಕ್ಕಮಗಳೂರು: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕಡೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.



ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶೂಶ್ರುಕಿ ಚಂದನ, ವಿನಯ್ ಬಂಧಿತ ಆರೋಪಿಗಳು. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.

ಈ ಆರೋಪಿಗಳು ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ ಆ 23

Posted by Vidyamaana on 2023-08-23 01:24:41 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 23

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 23 ರಂದು

ಬೆಳಿಗ್ಗೆ 10 ಗಂಟೆಗೆ ಕೋಡಿಂಬಾಡಿ ಗ್ರಾಪಂ ನೂತನ ಆಡಳಿತ ಪದಗ್ರಹಣ ಸಮಾರಂಭ

11 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖಾ ಅಧಿಕಾರಿಗಳ ಸಭೆ

ಸಂಜೆ 4 ಗಂಟೆಗೆ ಮಂಗಳೂರಿನಲ್ಲಿ ಸಭೆ

ಶಿವಮೊಗ್ಗ : 1 ಗಂಟೆಯಾದರು ಬಾರದ ಈಶ್ವರಪ್ಪ : ಕಾದು ಸುಸ್ತಾಗಿ ತೆರಳಿದ ಕೇಂದ್ರ ನಾಯಕರು

Posted by Vidyamaana on 2024-03-17 20:42:07 |

Share: | | | | |


ಶಿವಮೊಗ್ಗ : 1 ಗಂಟೆಯಾದರು ಬಾರದ ಈಶ್ವರಪ್ಪ : ಕಾದು ಸುಸ್ತಾಗಿ ತೆರಳಿದ ಕೇಂದ್ರ ನಾಯಕರು

ಶಿವಮೊಗ್ಗ, ಮಾ.17: ಬಂಡಾಯ ಎದ್ದಿರುವ ಕೆ.ಎಸ್. ಈಶ್ವರಪ್ಪ ಸಿಟ್ಟು ಶಮನಕ್ಕೆ ಬಿಜೆಪಿ ಹೈಕಮಾಂಡ್​ ನಾಯಕರು ಮುಂದಾಗಿದ್ದು ಆದರೆ ಮಾತುಕತೆ ವಿಫಲವಾಗಿದೆ. ಮಾರ್ಚ್​ 18ರಂದು ಶಿವಮೊಗ್ಗದಲ್ಲಿ ನಡೆಯುವ ಪ್ರಧಾನಿ ಮೋದಿ ಸಮಾವೇಶಕ್ಕೆ ಕೆಎಸ್​ ಈಶ್ವರಪ್ಪ ಅವರನ್ನು ಆಹ್ವಾನಿಸಿ, ಸಿಟ್ಟು ಶಮನಗೊಳಿಸಲು ಕೇಂದ್ರ ನಾಯಕರು ಆಗಮಿಸಿದ್ದರು. ಆದರೆ ಈಶ್ವರಪ್ಪ ಕೇಂದ್ರ ನಾಯಕರನ್ನು ಮನೆಯಲ್ಲೇ ಬಿಟ್ಟು ಹೊರನಡೆದಿದ್ದಾರೆ. 


ಬಂಡಾಯ ಶಮನ ಮತ್ತು ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಹೇಳಲು ಇಂದು ಬೆಳಗ್ಗೆ ಕೆ.ಎಸ್​ ಈಶ್ವರಪ್ಪ ಮನೆಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್​ ಅಗರ್ವಾಲ್​, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್, ವಿಧಾನ ಪರಿಷತ್​ ಸದಸ್ಯ ಡಿ.ಎಸ್.ಅರುಣ್​ ಆಗಮಿಸಿದ್ದರು. 


ಆದರೆ ಕೆಎಸ್​ ಈಶ್ವರಪ್ಪ ಮಾತುಕತೆ ನಡುವೆಯೇ ಎದ್ದು ಹೊರ ನಡೆದಿದ್ದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ನಗರದ ಗೋಪಾಳದಲ್ಲಿ ಆಯೋಜಿಸಿದ್ದ ದೇವಸ್ಥಾನ ಮತ್ತು ಹೋಮದಲ್ಲಿ ಭಾಗಿಯಾಗಿದ್ದ ಕೆಎಸ್​ ಈಶ್ವರಪ್ಪ ಒಂದು ಗಂಟೆ ಕಳೆದರೂ, ಮನೆಗೆ ಬರಲಿಲ್ಲ. ಹೀಗಾಗಿ ಕೇಂದ್ರ ನಾಯಕರು ಕೆ.ಎಸ್​.ಈಶ್ವರಪ್ಪ ಅವರನ್ನು ಕಾದು ಮನೆಯಿಂದ ತೆರಳಿದರು. 


ಇದಕ್ಕೂ ಮುನ್ನ ಹೈಕಮಾಂಡ್ ಸೂಚನೆ ಮೇರೆಗೆ ಈಶ್ವರಪ್ಪ ನಿವಾಸಕ್ಕೆ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್ ಮತ್ತು ರವಿಕುಮಾರ್ ಭೇಟಿ ನೀಡಿದ್ದರು. ಈಶ್ವರಪ್ಪ ಜೊತೆ ಒಂದು ಗಂಟೆ ಮಾತುಕತೆ ನಡೆಸಿ ಸಂಧಾನಕ್ಕೆ ಯತ್ನಿಸಿದ್ದರು. ಜಿಲ್ಲೆಗೆ ಮೋದಿ ಆಗಮಿಸುತ್ತಿದ್ದು, ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನವನ್ನೂ ನೀಡಿದ್ದರು. ಆದರೆ, ಸಂಧಾನಕಾರರ ಮನವಿಗೆ ಈಶ್ವರಪ್ಪ ಸ್ಪಂದಿಸಿಲ್ಲ. ಹೀಗಾಗಿ ಬಿಜೆಪಿ ನಾಯಕರು ಈಶ್ವರಪ್ಪ ನಿವಾಸದಿಂದ ವಾಪಸ್ ತೆರಳಿದ್ದರು.

ಹಾರೂನ್ ಹಾಜಿ ಪುರುಷರಕಟ್ಟೆ ನಿಧನ

Posted by Vidyamaana on 2024-02-29 18:58:56 |

Share: | | | | |


ಹಾರೂನ್ ಹಾಜಿ ಪುರುಷರಕಟ್ಟೆ ನಿಧನ

ಪುತ್ತೂರು :ಇಲ್ಲಿನ ಪುರುಷರಕಟ್ಟೆ ನಿವಾಸಿ ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಲಾಂ ಮದ್ರಸದ ಸ್ಥಾಪಕಾಧ್ಯಕ್ಷ  ಮರೀಲ್ ದಿ.ಮೂಸಾ ಹಾಜಿಯವರ ಮಗ ಹಾರೂನ್ ಪುರುಷರಕಟ್ಟೆ (65ವರ್ಷ )ಅಲ್ಪ ಕಾಲದ ಸೌಖ್ಯದಿಂದ  ಫೆ 29 ರಂದು ಸ್ವಗೃಹದಲ್ಲಿ ನಿಧಾನರಾದರು.


ಮೃತರು ಪುರುಷರಕಟ್ಟೆ ಹಿಮಾಯತ್ತುಲ್ ಇಸ್ಲಾಂ ಮದ್ರಸದಲ್ಲಿ ಸುದೀರ್ಘ 20 ವರ್ಷಕ್ಕಿಂತ ಅಧಿಕ ವರ್ಷ ಅಧ್ಯಕ್ಷರಾಗಿ, ಮುಕ್ವೆ ರೆಹ್ಮನಿಯ ಜುಮಾ ಮಸೀದಿಯ ಕಾರ್ಯದರ್ಶಿ ಮತ್ತು ಮುಕ್ವೆ ದರ್ಗಾ ಶರೀಪ್ ಇದರ ಊರೂಸ್ ಕಮಿಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪತ್ನಿ, ಮಗಳು, ಅಳಿಯ ಹಾರಾಡಿಯ ಇಂಜಿನಿಯರ್ ಆತೀಶ್,ಸಹೋದರರಾದ  ಅದಂಕುಂಞ, ಶೇಕಾಲಿ,ಮತ್ತು ಇಸ್ಮಾಯಿಲ್  ರವರನ್ನು ಅಗಲಿದ್ದಾರೆ.

ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ

Posted by Vidyamaana on 2023-11-10 14:47:29 |

Share: | | | | |


ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ತಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಕೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ

ಮಂಗಳೂರು: ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ವ್ಯವಸ್ಥೆ

Posted by Vidyamaana on 2023-04-09 04:24:34 |

Share: | | | | |


ಮಂಗಳೂರು: ಚುನಾವಣಾ ಪ್ರಚಾರಕ್ಕೆ ಅನುಮತಿ ಪಡೆಯಲು ಸುವಿಧಾ ತಂತ್ರಾಂಶ ವ್ಯವಸ್ಥೆ

ಮಂಗಳೂರು :  ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.

ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್‍ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.

ಇನ್ನು ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Leave a Comment: