ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

Posted by Vidyamaana on 2023-06-02 00:38:28 |

Share: | | | | |


ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ  ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜೂ 10

Posted by Vidyamaana on 2023-06-10 01:58:17 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜೂ 10

ಪುತ್ತೂರು: ನೂತನ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಅವರಿಗೆ ಪುತ್ತೂರು ಸುದಾನ ಶಾಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಬೆಳಿಗ್ಗೆ 10 ಗಂಟೆಗೆ ವಿಟ್ಲ ವಿಠಲ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಉಪ್ಪಿನಂಗಡಿ ಎಚ್.ಎಂ. ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ  ಮೂರು ಗಂಟೆಗೆ ಪುತ್ತೂರು ಸುದಾನ ಶಾಲೆಯಲ್ಲಿ ಶಾಸಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸಂಜೆ 4 ಗಂಟೆಗೆ ಅಕ್ಷಯ ಕಾಲೇಜಿನ‌ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ಅಂತರಾಜ್ಯ ಕಳ್ಳರ ಬಂಧನ

Posted by Vidyamaana on 2024-03-26 16:53:19 |

Share: | | | | |


ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು : ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರಾಜ್ಯ ಕಳ್ಳರ ಗ್ಯಾಂಗ್ ನನ್ನು ಇದೀಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿಗೆ ಪ್ರಜ್ಞೆ ತಪ್ಪುವ ವಸ್ತು ನೀಡಿ ಇವರು ಕಳ್ಳತನ ಮಾಡುತ್ತಿದ್ದರು. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದರು ಎನ್ನಲಾಗುತ್ತಿದೆ.ಇದೀಗ ರೈಲ್ವೆ ಪೊಲೀಸ್ರಿಂದ ಮೂರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನ ಮಹಮ್ಮದ್ ಶೌಕತ್ ಅಲಿ, ಮಹಮ್ಮದ್ ಸತ್ತರ್, ಮೊಹಮ್ಮದ್ ಆಸಾಫ್ ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.


ದರೋಡೆ ಹೇಗೆ?


ಆರೋಪಿಗಳು ಸಂಪೂರ್ಣ ನಕಲಿ ದಾಖಲೆ ನೀಡಿ ಟಿಕೆಟ್ ಬುಕ್ ಮಾಡುತ್ತಿದ್ದರು ಎನ್ನಲಾಗುತ್ತಿದೆ. ನಂತರ ಪ್ರಯಾಣಿಕರ ಜೊತೆ ಪರಿಚಯ ದವರಂತೆ ಮಾತಿಗೆಳೆಯುತ್ತಾರೆ.ಎರಡು ದಿನಗಳ ಕಾಲ ಪ್ರಯಾಣ ಮಾಡುವಾಗ ಪರಿಚಯ ಮಾಡಿಕೊಳ್ಳುತ್ತಾರೆ. ಬೇರೆ ಪ್ರಯಾಣಿಕರ ಜೊತೆ ಊಟ ತಿಂಡಿ ಕೂಡ ಮಾಡುತ್ತಿದ್ದರು.ಅಲ್ಲದೆ ತುಂಬಾ ಕ್ಲೋಸ್ ಆಗುತ್ತಿದ್ದರು. ಸರಿಯಾದ ಸಮಯ ನೋಡಿ ಕೋಲ್ಡ್ರಿಂಗ್ಸ್ ನಲ್ಲಿ ಮತ್ತು ಬರುವ ಔಷಧಿ ಹಾಕಿ ಅವರಿಗೆ ಕೊಡುತ್ತಿದ್ದರು. ಬಾದಾಮಿ ಹಾಲಿನಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿ ಕೊಡುತ್ತಿದ್ದರು ಪ್ರಜ್ಞೆ ತಪ್ಪಿದ ಬಳಿಕ ಹಣ ಆಗಲಿ ಚಿನ್ನಾಭರನವನ್ನು ದೋಚಿ ಪರಾರಿಯಾಗುತ್ತಿದ್ದರು.ಕೇರಳ ತಮಿಳುನಾಡು ಅಸಾಂ ಕಲ್ಕತ್ತಾದಲ್ಲೂ ಇವರು ಕೃತ್ಯ ನಡೆಸಿದ್ದಾರೆ ಎಂದು ರೈಲ್ವೆ ಎಸ್‍ಪಿ ಆಗಿರುವ ಸೌಮ್ಯಲತಾ ಅವರು ಈ ಕುರಿತಂತೆ ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

Posted by Vidyamaana on 2024-01-30 10:03:18 |

Share: | | | | |


ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

ಪುತ್ತೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್‌ ಇನ್ಸ್‌‌ಪೆಕ್ಟರ್‌ (ಸಿವಿಲ್)‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


ಪುತ್ತೂರು ನಗರ ಠಾಣಾ ಇನ್ಸೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಸುನಿಲ್ ಕುಮಾರ್ ಎಂ ಎಸ್ ಅವರನ್ನು ವರ್ಗಾವಣೆ ಮಾಡಿ  ಪುತ್ತೂರು ಮಹಿಳಾ ಠಾಣಾ ಇನ್ಸೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಲಾಗಿದೆ.



ಪೊಲೀಸ್‌ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್‌ ಇನ್ಸ್‌ ಪೆಕ್ಟರ್‌‌ಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ

ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತ

Posted by Vidyamaana on 2024-03-13 07:28:48 |

Share: | | | | |


ಅರಮನೆಯ ಎಸಿ ಕೋಣೆಯಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕಲು ಯದುವೀರ್ ಬಂದರೆ ಸ್ವಾಗತ

ಮೈಸೂರು, ಮಾ 13: ಯದುವೀರ್  ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.


ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ:


ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.


ಮುಖಂಡರಿಗೆ ಸಿಂಹ ಧನ್ಯವಾದ:


ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು.


ನನಗೆ ಈ ಕ್ಷಣಕ್ಕೂ ವಿಶ್ವಾಸವಿದೆ. ಸಂಘಟನೆ, ಸಿದ್ದಾಂತಕ್ಕೆ ಗಟ್ಟಿಯಾಗಿ ನಿಂತಿರುವ ನನಗೆ ಟಿಕೆಟ್ ಸಿಗುತ್ತದೆ. 25 ಸಂಸದರಲ್ಲಿ ನನ್ನಷ್ಟು ಹಿಂದೂತ್ವದ ಕಮಿಟ್ ಮೆಂಟ್ ಇರುವ ಮತ್ಯಾರು ಇದ್ದಾರೆ? ಹಿಂದೂತ್ವದ ವಿಚಾರದಲ್ಲಿ ನನ್ನನ್ನು ಯಾರಿಗೂ ಮ್ಯಾಚ್ ಮಾಡಲು ಯಾರು ಆಗಲ್ಲ ಎಂದರು.


ಬ್ಯಾನರ್, ಬಂಟಿಂಗ್ ಕಟ್ಟಲೂ ಸಿದ್ಧ:


ಮೋದಿ ಅವರ ಬಗ್ಗೆ ಸಿದ್ದರಾಮಯ್ಯ ಬಾಯಿಗೆ ಬಂದ ರೀತಿ ಟೀಕಿಸಿದ್ದಾಗ ಸಿದ್ದರಾಮಯ್ಯ ಮಾತನ್ನು ದೊಡ್ಡ ಮಟ್ಟದಲ್ಲಿ ಖಂಡಿಸುವ ವ್ಯಕ್ತಿ ಈ ಪ್ರತಾಪ್ ಸಿಂಹ. ಇದು ನನ್ನ ದೌರ್ಬಲ್ಯವಾ?. ಮೈಸೂರು – ಕೊಡಗು ಅಭಿವೃದ್ಧಿ ಗೆ ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದು ನನ್ನ ದೌರ್ಬಲ್ಯವಾ?. ನನಗೆ ಪಕ್ಷ ನಿಷ್ಠೆ ನನಗೆ ಇದೆ. ಬ್ಯಾನರ್, ಬಂಟಿಂಗ್ ಕಟ್ಟಲು ನಾನು ಸಿದ್ದ. ನನಗಾಗಿ ಪಕ್ಷ, ಕಾರ್ಯಕರ್ತರು ದುಡಿದಿದ್ದಾರೆ. ನಾನು ಮುಂದೆ ಅವರಂತೆಯೆ ದುಡಿಯುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

Posted by Vidyamaana on 2024-03-19 16:11:46 |

Share: | | | | |


ಮದುವೆ ಒಲ್ಲೆ ಎಂದ ಪ್ರಿಯಕರ - ಬಿಲ್ಡಿಂಗ್ ಏರಿದ ಪ್ರಿಯತಮೆ

ಮೈಸೂರು : ಇನ್‌ಸ್ಟಾಗ್ರಾಂನಲ್ಲಿ(Instagram love) ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ(Suicide attempt) ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31 ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್ ರೆಹಮಾನ್‌ ನಡುವೆ ಸಾಮಾಜಿಕ ಜಾಲತಾಣದಲ್ಲಿ ಲವ್‌ ಆಗಿದ್ದು , ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮಹಿಳೆ ರೆಹಮಾನ್‌ನನ್ನು ಭೇಟಿಯಾಗಲಲು ಸೀದಾ ಮೈಸೂರಿಗೆ ಬಂದಿದ್ದಾಳೆ. ಮಹಿಳೆಯನ್ನು ನೋಡುತ್ತಲೇ ಆಸಿಬೂರ್‌ ರೆಹಮಾನ್‌ ವಯಸ್ಸಿನ ಅಂತರ ಹೆಚ್ಚು ಎಂಬ ಕಾರಣ ನೀಡಿ ಮದುವೆಗೆ ಒಲ್ಲೆ ಎಂದಿದ್ದಾನೆ.


ಇದರಿಂದ ಸಿಟ್ಟಾದ ನಾಸೀಂ ಬೇಗಂ ಖಾಸಗಿ ಹೊಟೇಲ್‌ ಬಿಲ್ಡಿಂಗ್ ಏರಿ ಮದುವೆ ಮಾಡಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಸದ್ಯ ಆಕೆಯನ್ನು ಕೆಳಗೆ ಇಳಿಸಿ ನಂಜನಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Leave a Comment: