ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಪುತ್ತೂರು: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಆರೋಪ: ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಪೊಲೀಸ್ ದೂರು

Posted by Vidyamaana on 2023-04-22 16:25:13 |

Share: | | | | |


ಪುತ್ತೂರು: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಆರೋಪ: ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ಪೊಲೀಸ್ ದೂರು

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ದೂರು ನೀಡಿರುವ ಘಟನೆ ಎ.22ರಂದು ಸಂಜೆ ವೇಳೆ ನಡೆದಿದೆ.ಪಡೀಲ್ ನಲ್ಲಿರುವ ಕೋಳಿ ಅಂಗಡಿಯಲ್ಲಿ ದನದಮಾಂಸವನ್ನು ಮಾರಾಟ ಮಾಡುತ್ತಿರುವಆರೋಪದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ನಗರ ಠಾಣಾ ಪೊಲೀಸರು 1 ಕೆಜಿ ಗೋ ಮಾಂಸವನ್ನು ಪತ್ತೆ ಹಚ್ಚಿದ್ದಾರೆಂದು ತಿಳಿದು ಬಂದಿದೆ.

ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಸಂಘಟನೆ ಕಾರ್ಯಕರ್ತರ ಜೊತೆ ಪೊಲೀಸ್ ಠಾಣೆಗೆ ತೆರಳಿ ಜೊತೆ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ.

ಬೆಳ್ತಂಗಡಿ : ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಹಲ್ಲೆ ಪ್ರಕರಣ

Posted by Vidyamaana on 2023-06-19 01:55:50 |

Share: | | | | |


ಬೆಳ್ತಂಗಡಿ : ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ನಿಲ್ಲಿಸಿ ಹಲ್ಲೆ ಪ್ರಕರಣ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 18 ರಂದು ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.


ಮಂಗಳೂರಿನಿಂದ ಮೂಡಿಗೆರೆಗೆ ಸಂಚಾರಿಸುವ ಸರ್ಕಾರಿ ಬಸ್ಸಿಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತಿದ್ದು ಈ ವೇಳೆ ನಿರ್ವಾಹಕ ಬಸ್ ಒಳಗೆ ಮುಂದೆ ಹೋಗಲು ಕೈ ಹಿಡಿದು ಮುಂದೆ ಕಳುಹಿಸುವ ಸಂದರ್ಭ ಬಸ್ ಕಂಡಕ್ಟರ್ ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ಮಾತಿನ ನಡೆದಿದೆ.ಅದಲ್ಲದೇ ಈ ವಿಚಾರವನ್ನು ವಿದ್ಯಾರ್ಥಿಗಳು ಚಾರ್ಮಾಡಿಯ ಯುವಕರಿಗೆ ತಿಳಿಸಿ ಬಸ್ ಅಡ್ಡ ಹಾಕುವಂತೆ ಸೂಚಿಸಿದ್ದಾರೆ.ಈ ವಿಚಾರವನ್ನು ಬಸ್ಸಿನಲ್ಲಿದ್ದವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಧರ್ಮಸ್ಥಳ ಠಾಣಾ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಡಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಬಸ್ ನಿಲ್ಲಿಸುವಂತೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.ಅದರೆ ಚೆಕ್ ಪೋಸ್ಟ್ ನಲ್ಲಿ ಬಸ್ ತಡೆದು ಹೆಚ್ಚಿನ ಗಲಾಟೆ ಅಗದಂತೆ ನೋಡಿಕೊಂಡಿದ್ದರು.ಈ ವೇಳೆ ಅಲ್ಲಿಗೆ ಆಗಮಿಸಿದ ಯುವಕರ ತಂಡ ಕಂಡೆಕ್ಟರ್ ನಲ್ಲಿ ಗಲಾಟೆ ಮಾಡಿದೆ. ಈ ವೇಳೆ ಕಂಡೆಕ್ಟರ್ ಪರವಾಗಿ ಮಾತನಾಡಿದ ಬಸ್ ಪ್ರಯಾಣಿಕರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದು. ಅದಲ್ಲದೇ ವಿಡಿಯೋ ಮಾಡುತಿದ್ದ ವ್ಯಕ್ತಿಯೊಬ್ಬರಿಗೆ ಹಲ್ಲೆಗೈದಿದ್ದರು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಚಿಕ್ಕಮಗಳೂರು ವಿಭಾಗದ ಮೂಡಿಗೆರೆ ಘಟಕದ ಡಿಪೋ ಗೆ ಸೇರಿದ ಸರಕಾರಿ ಬಸ್ ಕಂಡಕ್ಟರ್ ಶಿವಕುಮಾರ್.ಕೆ.ಎಮ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದುರ್ವತ್ರನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಸಂಬಂಧ ಪ್ರಕರಣ ದಾಖಲಾಯಿಸಿದ್ದು.ಅದರಂತೆ ಅಪರಿಚಿತರ ಮೇಲೆ ಧರ್ಮಸ್ಥಳ ಠಾಣೆಯಲ್ಲಿ 143.147.353.341.504.506 149 i ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಪ್ರಕರಣದಲ್ಲಿ ಭಾಗಿಯಾದ ಮೂರು ಜನ ಆರೋಪಿಗಳಾದ  ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಶಬೀರ್(21) ,ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ಅಬೂಬಕ್ಕರ್ ಅವರ ಮಗ ಮಹಮ್ಮದ್ ಮಹಾರೂಫ್(22), ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ನಿವಾಸಿ ಮೊಹಮ್ಮದ್ ಅವರ ಮಗ ಮಹಮ್ಮದ್ ಮುಬಶೀರ್ (23) ಎಂಬವರನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಜೂನ್ 18 ರಂದು ರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಪ್ರಕರಣದಲ್ಲಿ ಉಳಿದ ಆರೋಪಿಗಳಿಗಾಗಿ ಧರ್ಮಸ್ಥಳ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

Posted by Vidyamaana on 2024-07-02 10:10:36 |

Share: | | | | |


ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ

ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್‌ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.

2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್‌ಟೇಬಲ್‌ ಶಿವರಾಜ್‌ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್‌ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್‌ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

ಮಂಗಳೂರು ಕೆಡಿಪಿ ಸಭೆ

Posted by Vidyamaana on 2023-08-02 06:36:27 |

Share: | | | | |


ಮಂಗಳೂರು ಕೆಡಿಪಿ ಸಭೆ

ಪುತ್ತೂರು: ಅಡಿಕೆ,ತೆಂಗು,ಮರ ಮತ್ತು ಇನ್ನಿತರ ಕಾರಣಗಳಿಂದ ಮೂಲೆ ಮುರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ,ಮನೆಯಲ್ಲಿ ಮಲಗಿದ್ದಲ್ಲೇ ಇರುವವರಿಗೆ ಸರಕಾರ ಮಾಸಾಶನ ನೀಡಬೇಕು, ಅವರು ಅತ್ತ ಸಾವೂ ಇಲ್ಲ ಇತ್ತ ಬದುಕೂ ಇಲ್ಲ  ಎಂಬಂತೆ ಅವರ ಜೀವನ ಇದೆ ಅವರಿಗೆ ನೆರವಾಗಲು ಮಾಸಾಶನ ಕೊಡಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಸೀಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡರು.

ಮಂಗಳೂರಿನ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಮಾನವೀಯತೆ ನೆಲೆಯಲ್ಲಿ ಅವರಿಗೆ ಬದುಕಲು ಸಹಾಯ ಮಾಡಬೇಕು, ಇಂಥವರು ಬಹುತೇಕ ಬಡವರೇ ಆಗಿದ್ದಾರೆ, ಅವರಿಗೆ ಸಹಾಯ ಮಾಡಿದರೆ ನಮಗೆ ,ನಮ್ಮ ಸರಕಾರಕ್ಕೆ ಪುಣ್ಯ ಬರುತ್ತದೆ ಎಂದು ಸೀಎಂ ಬಳಿ ಕೇಳಿಕೊಂಡರು. ಶಾಸಕರು ಈ ವಿಚಾರವನ್ನು ಹೇಳುವಾಗ ಸಿದ್ದರಾಮಯ್ಯ ಅವರೂ ಒಂದು ಕ್ಷಣ ಮೌನವಾದರು, ಶಾಸಕರು ಹೇಳಿದ ವಿಚಾರ ಸೀಎಂ ಮನಸ್ಸಿನಲ್ಲಿ ಬೇಸರವಾದಂತೆ ಕಂಡು ಬಂತು, ತಕ್ಷಣವೇ ಈ ವಿಚಾರದ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು. ಇದೇ ವಿಚಾರವನ್ನಹ ವಿಧಾನಸಭಾ ಅಧಿವೇಶನದಲ್ಲಿ ಶಾಸಕರು ಸೀಎಂ ಗಮನಕ್ಕೆ ತಂದಿದ್ದರು.

ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Posted by Vidyamaana on 2023-12-05 09:00:22 |

Share: | | | | |


ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ

30ರ ತನಕ ಜಾರಿಯಲ್ಲಿರಲಿದೆ.



ಡಿ.8 ಅಧಿಸೂಚನೆ ಪ್ರಕಟ


ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ


ಡಿ.16 ನಾಮಪತ್ರ ಪರಿಶೀಲನೆ


ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ


ಡಿ.27 ಮತದಾನ

 ಡಿ.30 ಮತ ಎಣಿಕೆ

BREAKING NEWS: ರಾಹುಲ್ ಗಾಂಧಿ ಬಿಟ್ಟುಕೊಟ್ಟ ಲೋಕಸಭಾ ಕ್ಷೇತ್ರ ಯಾವುದು ಗೊತ್ತಾ!!

Posted by Vidyamaana on 2024-06-17 20:02:28 |

Share: | | | | |


BREAKING NEWS: ರಾಹುಲ್ ಗಾಂಧಿ ಬಿಟ್ಟುಕೊಟ್ಟ ಲೋಕಸಭಾ ಕ್ಷೇತ್ರ ಯಾವುದು ಗೊತ್ತಾ!!

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು  ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟುಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿ ಕೊಳ್ಳಲಿದ್ದಾರೆ  ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ.



Leave a Comment: