ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

Posted by Vidyamaana on 2023-07-31 08:10:48 |

Share: | | | | |


ಶಾರ್ಜಾಕ್ಕೆ 154 ಪ್ರಯಾಣಿಕರನ್ನು ಹೊತ್ತ ವಿಮಾನ ತಿರುವನಂತಪುರದಲ್ಲಿ ತುರ್ತು ಭೂಸ್ಪರ್ಶ

ತಿರುವನಂತಪುರಂ: 154 ಪ್ರಯಾಣಿಕರನ್ನು ಹೊತ್ತು ತಿರುಚ್ಚಿಯಿಂದ – ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.


ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 613 ತಮಿಳುನಾಡಿನ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಬೆಳಿಗ್ಗೆ 10:45 ಕ್ಕೆ ಹೊರಟಿತು. ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು 12.03ಕ್ಕೆ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.


ತುರ್ತು ಭೂಸ್ಪರ್ಶದಿಂದ ವಿಮಾನ ನಿಲ್ದಾಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಸದ್ಯ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನಯಾನ ಪ್ರಾಧಿಕಾರ ಹೇಳಿಕೆ ನೀಡಿದೆ.

ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

Posted by Vidyamaana on 2024-06-25 21:01:31 |

Share: | | | | |


ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

ಕೊಣಾಜೆ: ಬೋಳಿಯಾರಿನಲ್ಲಿ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ ಎಸ್ ಡಿಪಿಐ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

Posted by Vidyamaana on 2024-03-02 12:19:17 |

Share: | | | | |


ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ ಸಂಸದ ಗೌತಮ್ ಗಂಭೀರ್

ನವದೆಹಲಿ:ಅಚ್ಚರಿಯ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.ಪೂರ್ವ ದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರೊಂದಿಗೆ ಸುದ್ದಿಯನ್ನು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ.


ಅವರು ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಉತ್ಸಾಹದಿಂದ ಆಡಿದ ಕ್ರೀಡೆಯತ್ತ ತಮ್ಮ ಗಮನವನ್ನು ಮರುನಿರ್ದೇಶಿಸುವ ಅಗತ್ಯವನ್ನು ಉಲ್ಲೇಖಿಸಿ ಅವರು ತಮ್ಮ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುವ ಬಯಕೆಯನ್ನು ವ್ಯಕ್ತಪಡಿಸಿದರು.



"ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ. ಹಿಂದ್,"ಎಂದು ಗಂಭೀರ್ ಬರೆದಿದ್ದಾರೆ.


ಗಂಭೀರ್, ಮಾರ್ಚ್ 2019 ರಲ್ಲಿ ಬಿಜೆಪಿಗೆ ಸೇರಿದ್ದರು ಮತ್ತು ಅಂದಿನಿಂದ ದೆಹಲಿಯಲ್ಲಿ ಪಕ್ಷದ ಪ್ರಮುಖರಾಗಿದ್ದಾರೆ. ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿ ಸ್ಥಾನಕ್ಕೆ ಸ್ಪರ್ಧಿಸಿ 6,95,109 ಮತಗಳ ಗಣನೀಯ ಅಂತರದಿಂದ ಗೆದ್ದರು.


ಮುಂಬರುವ 2024 ರ ಚುನಾವಣೆಗೆ ಗಂಭೀರ್‌ಗೆ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳ ನಡುವೆ ರಾಜಕೀಯ ತ್ಯಜಿಸುವ ನಿರ್ಧಾರ ಬಂದಿದೆ.

ಕಮಲ ಪಾಳಯಕ್ಕೆ ಶಾಕ್ ನೀಡಿದ ಸರ್ವೆ! - ಈ ಸರ್ತಿ ಬಿಜೆಪಿಗ್ ರಾಜ್ಯೊಡ್ ಎನ್ಮ ಸೀಟ್ ಮಾತ್ರಗೆ..!!

Posted by Vidyamaana on 2024-04-16 14:44:07 |

Share: | | | | |


ಕಮಲ ಪಾಳಯಕ್ಕೆ ಶಾಕ್ ನೀಡಿದ ಸರ್ವೆ! - ಈ ಸರ್ತಿ ಬಿಜೆಪಿಗ್ ರಾಜ್ಯೊಡ್ ಎನ್ಮ ಸೀಟ್ ಮಾತ್ರಗೆ..!!

ಬೆಂಗಳೂರು; ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಕೂಟ 28 ಕ್ಕೆ 28 ಸೀಟೂ ಗೆಲ್ಲಬೇಕೆಂಬ ಪಣ ತೊಟ್ಟಿದೆ.. ಇತ್ತ ಕಾಂಗ್ರೆಸ್‌ ನಾವು ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದೆ.. ಆದ್ರೆ ಚುನಾವಣಾ ಪೂರ್ವ ಸಮೀಕ್ಷೆಗಳು ಮಾತ್ರ ದಿನಕ್ಕೊಂದು ಭವಿಷ್ಯ ಹೇಳುತ್ತಿವೆ..

ಒಂದು ಸಮೀಕ್ಷೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತ ಹೇಳಿದ್ರೆ, ಇನ್ನೊಂದು ಸಮೀಕ್ಷೆ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುತ್ತೆ ಎಂದು ಹೇಳುತ್ತಿವೆ.

ಹಿಂದೆಂದೂ ಇಲ್ಲದ ರೀತಿ ಸಮೀಕ್ಷೆ;

ಯಾವುದೇ ಸಮೀಕ್ಷೆ ಆದರೂ ಒಂದೆರಡು ಸೀಟು ವ್ಯತ್ಯಾಸ ಇರುತ್ತದೆ.. ಫಲಿತಾಂಶವೇ ಉಲ್ಟಾ ಆಗುವ ರೀತಿಯಲ್ಲಿ ಯಾರೂ ಸಮೀಕ್ಷೆ ಮಾಡೋದಿಲ್ಲ.. ಆದ್ರೆ ಕರ್ನಾಟಕದಲ್ಲಿ ಈ ಬಾರಿ ಅಂತಹ ಸಮೀಕ್ಷಾ ವರದಿಗಳು ಹೊರಬರುತ್ತಿವೆ.. ಕೆಲ ಸಮೀಕ್ಷೆಗಳು ಬಿಜೆಪಿ ಹಾಗೂ ಜೆಡಿಎಸ್‌ 20-24 ಸ್ಥಾನಗಳವರೆಗೆ ಗೆಲ್ಲುತ್ತೆ ಎಂದು ಹೇಳುತ್ತಿವೆ.. ಆದ್ರೆ ಕೆಲವು ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಅತಿಹೆಚ್ಚು ಸ್ಥಾನ ಗಳಿಸುತ್ತೆ ಎಂದು ಹೇಳುತ್ತಿವೆ.. ಹೀಗಾಗಿ, ಜನಕ್ಕೆ ಹಾಗೂ ರಾಜಕೀಯ ಪಕ್ಷಗಳಿಗೆ ಇದು ಸಾಕಷ್ಟು ಕನ್ಪ್ಯೂಸ್‌ ಮಾಡುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಕೇಂದ್ರದ ಅನುಮೋದನೆ

Posted by Vidyamaana on 2023-12-29 12:46:12 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಕೇಂದ್ರದ ಅನುಮೋದನೆ

ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

Posted by Vidyamaana on 2023-10-27 10:46:59 |

Share: | | | | |


ಮೆಲ್ಕಾರ್ ನಲ್ಲಿ ಚೂರಿ ಇರಿತ: ಮೂವರಿಗೆ ಗಾಯ

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ ತಂಡಗಳ ನಡುವೆ ವೈಯಕ್ತಿಕ ಕಲಹದ ಮುಂದುವರಿದ ಭಾಗವಾಗಿ ಮೂವರ ಮೇಲೆ ಮತ್ತೊಂದು ತಂಡದ ಸದಸ್ಯರು ಇರಿದಿದ್ದಾಗಿ ಹೇಳಲಾಗಿದ್ದು, ಘಟನೆಯಿಂದ ಮೂವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೋಳಂಗಡಿ ನಿವಾಸಿಗಳಾದ ದೇವದಾಸ್, ಸಂದೀಪ್ ,ಶಂಕರ್ ಚೂರಿ ಇರಿತಕ್ಕೊಳಗಾದವರು.

ಬೋಳಂಗಡಿ ನಿವಾಸಿ ಶೋಧನ್, ಕಲ್ಲಡ್ಕ ನಿವಾಸಿ ಯತೀಶ್,ಮೆಲ್ಕಾರ್ ನಿವಾಸಿಗಳಾದ ಚೇತನ್,ಪ್ರಸನ್ನ,ಪ್ರದೀಪ್ ಮತ್ತು ಪ್ರಕಾಶ್ ಅವರ ತಂಡ ಸೇರಿಕೊಂಡು ಹಲ್ಲೆ ಮಾಡಿದ್ದಲ್ಲದೆ ಚೂರಿಯಿಂದ ಇರಿದಿದ್ದಾರೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

*ಘಟನೆಗೆ ಕಾರಣವೇನು?*


ಬುಧವಾರ ರಾತ್ರಿ ಪಾಣೆಮಂಗಳೂರು ಶಾರದೋತ್ಸವ ಮೆರವಣಿಗೆ ವೇಳೆ ಎರಡು ತಂಡಗಳ ನಡುವೆ ನಡೆದ ಗಲಾಟೆ ಮುಂದುವರಿದ ಭಾಗವಾಗಿ ಗುರುವಾರ ರಾತ್ರಿ ಚೂರಿ ಇರಿತದವರೆಗೆ ಮುಂದುವರಿದಿದೆ.

ಕೆಲವರ್ಷಗಳ ಹಿಂದೆ ಜೊತೆಯಾಗಿ ಹುಲಿ ವೇಷ ಹಾಕಿ ಶಾರದ ವಿಸರ್ಜನೆ ಮೆರವಣಿಗೆಯಲ್ಲಿ ಹೆಜ್ಜೆಯಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು,ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕಲಾಗುತ್ತದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾರದ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಈ ಎರಡು ತಂಡಗಳ ನಡುವೆ ಗಲಾಟೆ ನಡೆದಿದ್ದು, ಮುಂದುವರಿದ ಭಾಗವಾಗಿ ನಿನ್ನೆ ಮೆಲ್ಕಾರ್ ಜಂಕ್ಷನ್ ಕಲ್ಲಿ ಒಂದು ತಂಡದ ಸದಸ್ಯರು ಬ್ಯಾನರ್ ತೆರವು ಮಾಡುತ್ತಿದ್ದ ವೇಳೆ ಇನ್ನೊಂದು ತಂಡ ಸ್ಥಳಕ್ಕೆ ಬಂದು ಹಲ್ಲೆ ನಡೆಸಿ,ಚೂರಿಯಿಂದ ಇರಿದು ಪರಾರಿಯಾಗಿದೆ.

ಘಟನೆಯಿಂದ ಗಾಯಗೊಂಡ ಮೂವರನ್ನು ಆರಂಭದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಓರ್ವನಿಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೂವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Leave a Comment: