ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಸುದ್ದಿಗಳು News

Posted by vidyamaana on 2024-06-30 19:31:43 |

Share: | | | | |


ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ

ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ

 Share: | | | | |


ಇಂದು (ಮೇ.06)ಪುತ್ತೂರಿನ ನೆಲದಲ್ಲಿ ಯೋಗಿ ಹೆಜ್ಜೆ

Posted by Vidyamaana on 2023-05-06 02:44:11 |

Share: | | | | |


ಇಂದು (ಮೇ.06)ಪುತ್ತೂರಿನ ನೆಲದಲ್ಲಿ ಯೋಗಿ ಹೆಜ್ಜೆ

ಪುತ್ತೂರು: ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ಬೆಳಗ್ಗೆ 11 ಗಂಟೆಗೆ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ನಗರದ ಹೊರವಲಯದ ಮೊಟ್ಟೆತ್ತಡ್ಕ ಎಂಬಲ್ಲಿರುವ ಹೆಲಿಪ್ಯಾಡ್‌ನಲ್ಲಿ ಇಳಿಯಲಿದ್ದಾರೆ. ಬಳಿಕ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ದೇವಳದ ಬಳಿಯಲ್ಲಿರುವ ಮುಖ್ಯ ಅಂಚೆ ಕಚೇರಿ ಬಳಿಯಿಂದ ಕಿಲ್ಲೆ ಮೈದಾನದ ತನಕ ರೋಡ್ ಶೋ ನಡೆಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಹೊರಟು ಕೋರ್ಟ್ ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ ತನಕ ಜಾಥಾ ನಡೆಯಲಿದೆ.ಇನ್ನು ಆದಿತ್ಯನಾಥ್ ಆಗಮನದ ಹಿನ್ನಲೆಯಲ್ಲಿ ಸಾರ್ವಜನಿಕ ಸುಗಮ ಸಂಚಾರ ವ್ಯವಸ್ಥೆಯ ದೃಷ್ಠಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ವಾಹನ ಪಾರ್ಕಿಂಗ್ ಹಾಗೂ ವಾಹನಗಳು ಬದಲಿ ರಸ್ತೆ ಮಾರ್ಗದ ಮೂಲಕ ಸಂಚರಿಸುವಂತೆ ದ.ಕ. ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದಿತ್ಯನಾಥ್ ಆಗಮಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಿನೆಟ್ ಜಂಕ್ಷನ್‌ನಿಂದ ಮುಕ್ರಂಪಾಡಿ ತನಕ ಹಾಗೂ ಮುಕ್ರಂಪಾಡಿಯಿಂದ ಮೊಟ್ಟೆತ್ತಡ್ಕದ ತನಕ ರಸ್ತೆಯಲ್ಲಿ ತುರ್ತು ಮತ್ತು ವೈದ್ಯಕೀಯ ವಾಹನ ಹೊರತು ಪಡಿಸಿ ಇತರ ವಾಹನ ಸಂಚಾರ ನಿಷೇಧಿಸಲಾಗಿದೆ.

ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 2 ಗಂಟೆಯ ತನಕ ಬೊಳುವಾರು ಜಂಕ್ಷನ್‌ನಿಂದ ಗಾಂಧಿಕಟ್ಟೆಯ ತನಕ ಮತ್ತು ಕಿಲ್ಲೆ ಮೈದಾನದ ಸುತ್ತ ಮುತ್ತಲಿನ ರಸ್ತೆಗಳಲ್ಲಿ ಹಾಗೂ ಕೋರ್ಟ್ ರಸ್ತೆಯಲ್ಲಿ ತುರ್ತು ಮತ್ತು ವೈದ್ಯಕೀಯ ವಾಹನ ಹೊರತುಪಡಿಸಿ ಇತರ ವಾಹನ ಸಂಚಾರ ನಿಷೇಧಿಸಲಾಗಿದೆ.

ಬೆಳಗ್ಗೆಯಿಂದ ಕಾರ್ಯಕ್ರಮ ಮುಗಿಯುವ ತನಕ ನಗರದ ಶ್ರೀಧರ ಭಟ್ ಜಂಕ್ಷನ್‌ನಿಂದ ಗಾಂಧಿಕಟ್ಟೆಯ ತನಕ ಹಾಗು ಗಾಂಧಿ ಕಟ್ಟೆಯಿಂದ ಕೋರ್ಟು ರಸ್ತೆಯ ಮೂಲಕ ಕಿಲ್ಲೆ ಮೈದಾನದ ತನಕ ಸುತ್ತ ಮುತ್ತಲಿನ ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.ಮಂಗಳೂರು ಮತ್ತು ಕಡಬ ಕಡೆಯಿಂದ ಸಂಚರಿಸುವ ಲಘು ವಾಹನಗಳು ಹಾಗೂ ಸುಳ್ಯ ಮತ್ತು ಸಂಪ್ಯ ಕಡೆಗೆ ಸಂಚರಿಸಲು ಲಿನೆಟ್ ಜಂಕ್ಷನ್-ಬೊಳುವಾರು-ಕೊಟೇಚಾ ಹಾಲ್-ಸಾಲ್ಮರ-ಪುರುಷರಕಟ್ಟೆ, ಪಂಜಳ, ಪರ್ಪುಂಜ ಮಾರ್ಗವನ್ನು ಬಳಸುವುದು.

ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಪಪುಂಜ ಕ್ರಾಸ್-ಪಂಜಳ, ಪುರುಷರಕಟ್ಟೆ- ದರ್ಬೆ-ಅರುಣಾ ಥಿಯೇಟರ್-ಸಾಲ್ಮರ-ಪಡೀಲ್- ಬೊಳುವಾರು-ಲಿನೆಟ್ ಜಂಕ್ಷನ್ ಮಾರ್ಗವಾಗಿ ಸಂಚರಿಸಲು ತಿಳಿಸಲಾಗಿದೆ.

ಆದಿತ್ಯನಾಥ್ ಅವರ ಕಾರ್ಯಕ್ರಮಕ್ಕೆ ಆಗಮಿಸುವವರು ಒಂದು ಗಂಟೆಗೆ ಮುಂಚಿತವಾಗಿ ವಾಹನಗಳನ್ನು ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಬಂಟರ ಭವದ ಮುಂಬಾಗ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆಗೊಳಿಸಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.ಜಾಥಾ ಸಾಗುವ ದಾರಿಯಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಸೂಕ್ತ ಬಂದೋಬಸ್ತ್ ಹಿನ್ನೆಲೆಯಲ್ಲಿ ನಗರದಲ್ಲಿ 600ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

Posted by Vidyamaana on 2024-04-15 21:29:18 |

Share: | | | | |


ಸೌಜನ್ಯ ಹೋರಾಟ ಸಮಿತಿಯಿಂದ ಲೋಕಸಭಾ ಚುನಾವಣೆಯಲ್ಲಿ ನೋಟಾ ಅಭಿಯಾನಕ್ಕೆ ಕರೆ

ಪುತ್ತೂರು:  ಸುಮಾರು ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ಉಜಿರೆಯಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಪಕ್ಷದಿಂದ ನ್ಯಾಯ ಸಿಗಲಿಲ್ಲ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಬೇಕೆಂದು ಅಭಿಯಾನ ಮಾಡಲಿದ್ದೇವೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ತಿಮರೋಡಿ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ನೋಟ ಮತ ಪತ್ರ ಬಿಡುಗಡೆಗೊಳಿಸಲಾಯಿತು.

ನಾವು ಯಾವುದೇ ಪಕ್ಷವನ್ನು ದೂಷಣೆ ಮಾಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಸೋಲಿಸಲು ಮತ್ತು ಯಾರನ್ನೋ ತೇಜೋವಧೆ ಮಾಡು ನೋಟ ಅಭಿಯಾನ ಮಾಡುತ್ತಿಲ್ಲ. ಧರ್ಮದ ಸತ್ಯದ ಚುನಾವಣೆಯಾಗಿ ನೋಟಾ ಅಭಿಯಾನ ಮಾಡಲಿದ್ದೇವೆ. ನಮಗೆ ಮೇಲಿನವರು ಯಾರು ಅರ್ಹರಲ್ಲ ಎಂಬ ಉದ್ದೇಶದಿಂದ ನೋಟಾ ಅಭಿಯಾನ ಮಾಡುತ್ತಿದ್ದೇವೆ. ೧೨ ವರ್ಷದಿಂದ ಹೋರಾಟ ಮಾಡುತ್ತಾ ಬಂದಿದ್ದೇವೆ. ನಮ್ಮ ಮೇಲೆ ಸುಳ್ಳು ಆರೋಪ ಮಾಡಿ ಹಲವು ಕೇಸು ಹಾಕಿದ್ದಾರೆ. ಇಲ್ಲಿ ಶಾಶಾಂಗ ಸತ್ತಿದೆ. ಹಾಗಾಗಿ ನಾವು ನೋಟಾ ಕ್ಕೆ ಮತ ಚಲಾಯಿಸಲಿದ್ದೇವೆ. ನಮಗೆ ಸುಮಾರು ಒಂದೂವರೆಯಿಂದ ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆಯಿದೆ ಎಂದರು. 

ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

Posted by Vidyamaana on 2024-03-16 17:11:08 |

Share: | | | | |


ಲೋಕಸಮರ: ಮಾದರಿ ನೀತಿ ಸಂಹಿತೆ ಜಾರಿ : ಚುನಾವಣೆ ಘೋಷಣೆ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಗೊತ್ತಾ?

ನವದೆಹಲಿ(ಮಾ.16): 2024ರ ಲೋಕಸಭಾ ಚುನಾವಣೆಗೆ(Lok Sabha Election 2024) ಇಂದು ದಿನಾಂಕ ನಿಗದಿಯಾಗಿದೆ. ಭಾರತದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ(Seven Phase) ಚುನಾವಣೆ ನಡೆಯಲಿದೆ. ಏಪ್ರಿಲ್ 19ರಿಂದ ಮತದಾನ(Voting) ಆರಂಭವಾಗಲಿದ್ದು, ಜೂನ್ 1ಕ್ಕೆ ಮುಕ್ತಾಯಗೊಳ್ಳಲಿದೆ.ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ.


ಇಂದು ಬಹು ನಿರೀಕ್ಷಿತ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಜೊತೆಗೆ ಇಂದಿನಿಂದಲೇ ದೇಶಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಇದಕ್ಕೂ ಮುನ್ನ ನಾವೆಲ್ಲರೂ ತಿಳಿದುಕೊಳ್ಳಬೇಕಾದ ಬಹುಮುಖ್ಯ ವಿಷಯವೊಂದಿದೆ. ಅದೇನೆಂದರೆ, ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಯಾವುದಕ್ಕೆಲ್ಲಾ ನಿರ್ಬಂಧ ಹೇರಲಾಗುತ್ತದೆ ಎಂಬುದು

ಮಾದರಿ ನೀತಿ ಸಂಹಿತೆ ಎಂದರೇನು?

ಮಾದರಿ ನೀತಿ ಸಂಹಿತೆಯು ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಪ್ರಚಾರದಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮಾರ್ಗಸೂಚಿಗಳ ಗುಂಪನ್ನು ಉಲ್ಲೇಖಿಸುತ್ತದೆ. ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಪಕ್ಷ ಅಥವಾ ಅಭ್ಯರ್ಥಿಯನ್ನು ಕಂಡುಹಿಡಿದರೆ, ನೈತಿಕ ಮಾನದಂಡಗಳು ಮತ್ತು ಸೂಕ್ತ ನಡವಳಿಕೆಯನ್ನು ಕಾಪಾಡಿಕೊಳ್ಳಲು ಸಂಬಂಧಿಸಿದ ಪಕ್ಷ ಅಥವಾ ಅಭ್ಯರ್ಥಿಯ ವಿರುದ್ಧ ಎಫ್‌ಐಆರ್‌ಗೆ ಆದೇಶ ನೀಡುವ ಎಚ್ಚರಿಕೆಯನ್ನು ನೀಡುವ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಬಹುದು. ಚುನಾವಣಾ ಆಯೋಗದ ಪ್ರಕಾರ, "ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷವು ತನ್ನ ಅಧಿಕೃತ ಸ್ಥಾನವನ್ನು ಪ್ರಚಾರಕ್ಕಾಗಿ ಬಳಸದಂತೆ ನೋಡಿಕೊಳ್ಳಬೇಕು ಎಂದು MCC ಹೇಳುತ್ತದೆ"

1)ಚುನಾವಣೆ ಘೋಷಣೆಯಾದ ನಂತರ, ಸಚಿವರು ಮತ್ತು ಇತರ ಅಧಿಕಾರಿಗಳು ಯಾವುದೇ ಹಣಕಾಸಿನ ಅನುದಾನವನ್ನು ಘೋಷಿಸುವುದನ್ನು ಅಥವಾ ಅದರ ಭರವಸೆಗಳನ್ನು ನೀಡುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.

2. ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ, ನಾಗರಿಕರನ್ನು ಹೊರತುಪಡಿಸಿ, ಸಚಿವರು ಅಥವಾ ಇತರೆ ಅಧಿಕಾರಿಗಳು ಯಾವುದೇ ರೀತಿಯ ಯೋಜನೆಗಳು ಅಥವಾ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವುದು ಅಥವಾ ಪ್ರಾರಂಭಿಸುವುದನ್ನು ನಿರ್ಬಂಧಿಸಲಾಗಿದೆ.


3. ಅಧಿಕಾರದಲ್ಲಿರುವ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಯೋಜನೆಯನ್ನು ಘೋಷಿಸುವಂತಿಲ್ಲ. ಪ್ರಚಾರದ ಉದ್ದೇಶಗಳಿಗಾಗಿ ಮಂತ್ರಿಗಳು ಅಧಿಕೃತ ಯಂತ್ರೋಪಕರಣಗಳನ್ನು ಬಳಸುವಂತಿಲ್ಲ.

4.ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಅಧಿಕೃತ ಭೇಟಿಗಳನ್ನು ಯಾವುದೇ ಚುನಾವಣಾ ಚಟುವಟಿಕೆಗಳೊಂದಿಗೆ ಸಂಯೋಜಿಸಲಾಗುವುದಿಲ್ಲ. ಇದಲ್ಲದೆ, ಚುನಾವಣಾ ಉದ್ದೇಶಗಳಿಗಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸಿಕೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

5 ಚುನಾವಣೆ ಘೋಷಣೆಯಾದ ನಂತರ ಸಚಿವರು ಮತ್ತು ಇತರ ಅಧಿಕಾರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

6 ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಇಸಿಐ(ECI) ಮಾರ್ಗಸೂಚಿಗಳು ಹೇಳುತ್ತವೆ.

7)ಸರ್ಕಾರಿ ವಸತಿಗಳನ್ನು ಚುನಾವಣಾ ಪ್ರಚಾರ ಕಚೇರಿಗಳಾಗಿ ಬಳಸಿಕೊಳ್ಳುವಂತಿಲ್ಲ. ಯಾವುದೇ ಪಕ್ಷದಿಂದ ಚುನಾವಣಾ ಪ್ರಚಾರಕ್ಕಾಗಿ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳುತ್ತದೆ.

8.ಭಾರತೀಯ ಚುನಾವಣಾ ಆಯೋಗ (ಇಸಿಐ) ಚುನಾವಣಾ ಅವಧಿಯಲ್ಲಿ ಪತ್ರಿಕೆಗಳು ಮತ್ತು ಇತರ ಮಾಧ್ಯಮಗಳಲ್ಲಿ ಸಾರ್ವಜನಿಕ ಖಜಾನೆಯ ವೆಚ್ಚದಲ್ಲಿ ಜಾಹೀರಾತುಗಳನ್ನು ನೀಡುವುದನ್ನು ನಿಷೇಧಿಸುತ್ತದೆ.

9. ರಾಜಕೀಯ ಸುದ್ದಿಗಳ ಪಕ್ಷಪಾತದ ಪ್ರಸಾರಕ್ಕಾಗಿ, ಅಧಿಕೃತ ಸಮೂಹ ಮಾಧ್ಯಮಗಳ ದುರುಪಯೋಗ ಮತ್ತು ಆಡಳಿತ ಪಕ್ಷದ ಪರವಾಗಿ ಸಾಧನೆಗಳ ಬಗ್ಗೆ ಪ್ರಚಾರವನ್ನು ಕಟ್ಟುನಿಟ್ಟಾಗಿ ತಪ್ಪಿಸಬೇಕು ಎಂದು ಚುನಾವಣಾ ಸಮಿತಿಯ ಮಾರ್ಗಸೂಚಿಗಳು ಹೇಳುತ್ತವೆ.

ಪ್ರಜ್ವಲ್ ವೀಡಿಯೋ ಪ್ರಕರಣ:ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

Posted by Vidyamaana on 2024-04-29 07:18:07 |

Share: | | | | |


ಪ್ರಜ್ವಲ್ ವೀಡಿಯೋ ಪ್ರಕರಣ:ಬಿಜಯಕುಮಾರ್ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ

ಬೆಂಗಳೂರು ,ಏ.28: ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ.ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವನ್ನು ರಚಿಸಲಾಗಿದೆ.

ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಅಂಬಿಕಾ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವೀಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ.

ಕುಂದಾಪುರ: ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

Posted by Vidyamaana on 2023-04-03 16:08:29 |

Share: | | | | |


ಕುಂದಾಪುರ: ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಕುಂದಾಪುರ:ಏ 3 ರಂದು ಸಂಜೆ ಹಠಾತ್ ಬೆಳವಣಿಗೆಯೊಂದರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಬಾರಿ ಗೆದ್ದು ಅಜೇಯರಾಗುಳಿದಿರುವ ಬಿಜೆಪಿಯ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಸ್ವಇಚ್ಛೆಯಿಂದ ನಿರ್ಧರಿಸಿರುವುದಾಗಿ ಪತ್ರಿಕಾ ಹೇಳಿಕೆಯೊಂದರ ಮೂಲಕ ಘೋಷಿಸಿದ್ದಾರೆ.

ಹಾಲಾಡಿ ಅವರ ಈ ನಿರ್ಧಾರ ಅವರ ಲಕ್ಷಾಂತರ ಮಂದಿ ಅಭಿಮಾನಿ ಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ. ನಿನ್ನೆ ಸಂಜೆಯವರೆಗೂ ಕುಂದಾಪುರದಲ್ಲಿ ಸತತ ಆರನೇ ಬಾರಿಗೆ ಸ್ಪರ್ಧಿಸಲು ಎಲ್ಲಾ ಸಿದ್ಧತೆ ನಡೆಸಿದ್ದ ಹಾಲಾಡಿ ಅವರು  ಇಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಈ ಬಾರಿ ಸ್ಪರ್ಧಿಸದಿರುವ ತಮ್ಮ ನಿರ್ಧಾರವನ್ನು ಸಂಜೆ 7 ಗಂಟೆ ಸುಮಾರಿಗೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸುವ ಮೂಲಕ ಬಹಿರಂಗಪಡಿಸಿದರು

ಪಣೋಲಿಬೈಲು ಕ್ಷೇತ್ರದಲ್ಲಿ ಹರಕೆ ಕೋಲ ; ಖಾದರ್ ಗೆಲುವಿಗಾಗಿ ಹೇಳಿಕೊಂಡಿದ್ದ ಹರಕೆ ತೀರಿಸಿದ ಮುಡಿಪು ಕಾಂಗ್ರೆಸ್

Posted by Vidyamaana on 2024-02-06 14:26:13 |

Share: | | | | |


ಪಣೋಲಿಬೈಲು ಕ್ಷೇತ್ರದಲ್ಲಿ ಹರಕೆ ಕೋಲ ; ಖಾದರ್ ಗೆಲುವಿಗಾಗಿ ಹೇಳಿಕೊಂಡಿದ್ದ ಹರಕೆ ತೀರಿಸಿದ ಮುಡಿಪು ಕಾಂಗ್ರೆಸ್

ಮಂಗಳೂರು, : ಚುನಾವಣೆ ಸಂದರ್ಭದಲ್ಲಿ ಯುಟಿ ಖಾದರ್ ಗೆಲುವಿಗಾಗಿ ಹೇಳಿಕೊಂಡ ಹರಕೆ ಕೋಲವನ್ನು ಪಣೋಲಿಬೈಲು ಕ್ಷೇತ್ರದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಸಮ್ಮುಖದಲ್ಲಿ ನೆರವೇರಿಸಲಾಗಿದೆ.‌


ಬಂಟ್ವಾಳ ತಾಲೂಕಿನ ಕಾರಣಿಕದ ಸ್ಥಳ ಪಣೋಲಿಬೈಲು ಕಲ್ಲುರ್ಟಿ, ಕಲ್ಕುಡ ಕ್ಷೇತ್ರದಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾನುವಾರ ರಾತ್ರಿ ಹರಕೆ ಕೋಲ ನೆರವೇರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಖಾದರ್ ಗೆಲುವಿಗಾಗಿ ಮುಡಿಪು ಕಾಂಗ್ರೆಸ್ ನಾಯಕರು ಹರಕೆ ಹೇಳಿಕೊಂಡಿದ್ದರು.  


ಭಾನುವಾರ ರಾತ್ರಿ ಕಲ್ಲುರ್ಟಿ, ಕಲ್ಕುಡ ದೈವಗಳಿಗೆ ಹರಕೆ ಕೋಲ ನೆರವೇರಿಸಿದ್ದು ಯು.ಟಿ ಖಾದರ್ ದೈವಗಳ ಕೊರಳಿಗೆ ಹೂಮಾಲೆ ಹಾಕಿ ನಮಿಸಿದ್ದಾರೆ. ಆಮೂಲಕ ಖಾದರ್ ಕಲ್ಲುರ್ಟಿ, ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ. ಸ್ಪೀಕರ್ ಯು.ಟಿ ಖಾದರ್ ಜೊತೆಗೆ  ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮತ್ತಿತರರು ಭಾಗಿಯಾಗಿದ್ದರು.


ಹರಕೆ ಕೋಲ ನೆರವೇರಿಸಿದ ಯುಟಿ ಖಾದರ್ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡನ ಆಕ್ರೋಶ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್


ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪಣೋಲಿಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅವರು ಭಾಗವಹಿಸಿ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ದೈವಗಳ ಹರಕೆ ಕೋಲ ನೆರವೇರಿಸಿದ ಯು.ಟಿ ಖಾದರ್ ವಿರುದ್ಧ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ.


ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.


‘ಕೊರಗಜ್ಜನ ಭಕ್ತ ಯು.ಟಿ ಖಾದರ್ ನನ್ನು ಮುಸ್ಲಿಮರು ಬರೀ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ, ಪಂಜುರ್ಲಿಗೂ ಆರಾಧಿಸಲಿ‌. ಪ್ರಸಾದ ಪಡೆದು ತಲೆಗೆ ಮತ್ತಿಕೊಂಡು ನರಕಕ್ಕೆ ಹೋಗಲಿ‌. ಅದು ಆತನ ವೈಯಕ್ತಿಕ ಸ್ವತಂತ್ರ‌. ಅದು ಭಾರತದಲ್ಲಿ ಎಲ್ಲರಿಗೂ ಇರುವ ಸಂವಿಧಾನಿಕ ಸ್ವಾತಂತ್ರ. ಅದನ್ನು ತಡೆಯುವ ಹಕ್ಕು ನನಗಿಲ್ಲ. ಆದರೆ ಧಾರ್ಮಿಕ ನಾಯಕನಾಗಿ ನಾವು ಅಂಗೀಕರಿಸುವುದು, ಆತನ ಭೂತಾರಾಧನೆಯನ್ನು ನಾವು ಒಪ್ಪಿಕೊಂಡಂತಾಗುತ್ತದೆ. ಉಲಮಾಗಳು ಅವನಿಗೆ ಗೌರವ ಕೊಡುವುದು ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಸಂದೇಶವಾಗಿ ಪರಿಣಮಿಸುತ್ತದೆ’ ಎಂದು ಯು.ಟಿ.ಖಾದರ್ ನಡವಳಿಕೆ ಆಕ್ಷೇಪಿಸಿ ಸಾಲೆತ್ತೂರು ಫೈಝಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.


ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು: ಯು ಟಿ ಖಾದರ್


ಹರಕೆ ‌ಕೋಲದಲ್ಲಿ ಭಾಗಿಯಾದ ಸ್ಪೀಕರ್ ಯುಟಿ ಖಾದರ್​ ವಿರುದ್ಧ ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರ ವಿರುದ್ಧ ಬರೆದು ಹಾಕಿದ್ದರು. ಆದರೀಗ ಈ ವಿಚಾರವಾಗಿ ವಿಧಾನಸಭಾ ಅಧ್ಯಕ್ಷ ಸ್ಪಷ್ಟನೆ ಕೊಟ್ಟಿದ್ದಾರೆ.


ಯು.ಟಿ ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೀಚುವವರನ್ನು ಇತಿಹಾಸ ನೆನಪಿಟ್ಟುಕೊಳ್ಳಲ್ಲ. ಪ್ರಶ್ನೆ ಕೇಳುವವರನ್ನ ಇತಿಹಾಸ ನೆನಪಿಗೆ ಇಟ್ಟುಕೊಳ್ಳಲ್ಲ. ಯಾರು ಕೆಲ್ಸ ಮಾಡ್ತಾರೆ, ಯಾರು ಉತ್ತರ ಕೊಡ್ತಾರೆ ಅವರನ್ನು ಇತಿಹಾಸ ನೆನಪಿಟ್ಟುಕೊಳ್ಳುತ್ತೆ. ನಮ್ಮ ಪ್ರಾಚೀನ ಆಚರಣೆ ಅನುಗುಣವಾಗಿ ಅವರು ಹರಕೆ ಇಟ್ಟುಕೊಂಡಿದ್ರು. ಅದಕ್ಕೆ ಹೋಗುವುದು, ಗೌರವ ಕೊಡುವುದು ನಮ್ಮ ಸಂಸ್ಕೃತಿ. ಹೀಗಾಗಿ ನಾನು ಹೋಗಿದ್ದೆ. ಯಾರೋ ಒಬ್ಬ ಗೀಚಿದ್ರೆ , ನೂರು ಜನ ಒಪ್ಪಿಕೊಳ್ಳಲ್ಲ. ಅದಕ್ಕೆಲ್ಲ ನಾವು ಇಂಪಾರ್ಟೆಂಟ್ ಕೊಡಬಾರದು ಎಂದು ಹೇಳಿದ್ದಾರೆ.



Leave a Comment: