ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಸುದ್ದಿಗಳು News

Posted by vidyamaana on 2024-06-30 16:40:20 |

Share: | | | | |


ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81 ವ) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ

ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ

 Share: | | | | |


ಮುಸ್ತಫಾ ಕೆಂಪಿ ನಿಧನ

Posted by Vidyamaana on 2023-06-26 12:41:44 |

Share: | | | | |


ಮುಸ್ತಫಾ ಕೆಂಪಿ ನಿಧನ

ಪುತ್ತೂರು: ಉಪ್ಪಿನಂಗಡಿ ಮಾಲೀಕ್ ದೀನರ್ ಜುಮ್ಮಾ ಮಸೀದಿ ಅಧ್ಯಕ್ಷ, ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ (49) ಸೋಮವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಸಾಮಾಜಿಕ, ಧಾರ್ಮಿಕ, ಸಂಘಟನೆ ಸೇರಿದಂತೆ ಹಲವು ರಂಗಗಳಲ್ಲಿ ಸಕ್ರೀಯರಾಗಿದ್ದರು.

ಉಪ್ಪಿನಂಗಡಿ ಗ್ರಾ.ಪಂ. ಮಾಜಿ ಸದಸ್ಯರಾಗಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ, ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಉಪಾಧ್ಯಕ್ಷರಾಗಿ, ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಉಪಾಧ್ಯಕ್ಷರಾಗಿ, ಕಮ್ಮಾಡಿ ಇಸ್ಲಾಮಿಕ್ ಸೆಂಟರ್‌ನ ಉಪಾಧ್ಯಕ್ಷರಾಗಿ, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಕೇಂದ್ರ ಸಮಿತಿಯ ಸದಸ್ಯರಾಗಿ, ಇಂಡಿಯನ್ ಸ್ಕೂಲ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸೇರಿದಂತೆ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

Posted by Vidyamaana on 2023-05-31 03:52:36 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸೇರಿದಂತೆ 16 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ

ಮಂಗಳೂರು : ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

Posted by Vidyamaana on 2024-04-01 19:50:03 |

Share: | | | | |


ಪಕ್ಷ ಬದಿಗಿಟ್ಟು ಪದ್ಮರಾಜ್, ಕೋಟ, ಗೀತಾರನ್ನು ಗೆಲ್ಲಿಸುವ: ಸತ್ಯಜಿತ್ ಸುರತ್ಕಲ್

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ನಾರಾಯಣಗುರು ವಿಚಾರ ವೇದಿಕೆ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ.

ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ - 7ಮಂದಿಗೆ ಗಾಯ

Posted by Vidyamaana on 2024-04-15 13:37:24 |

Share: | | | | |


ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ - 7ಮಂದಿಗೆ ಗಾಯ

ವಿಟ್ಲ: ಪುಣಚ ಗ್ರಾಮದ ಬರೆಂಜ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತು ಕುಸಿತವಾಗಿ 7ಮಂದಿಗೆ ಗಾಯವಾಗಿದೆ.

ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಗ್ರಿಂಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಗ್ರೀಟ್ ವ್ಯವಸ್ಥೆ ಕುಸಿತವಾಗಿದೆ.

ಇನ್ನು ಸಹಿಸಲು ಸಾಧ್ಯವಿಲ್ಲ”: ಸುಚನಾ ಸೇಠ್ ಐಲೈನರ್‌ನಿಂದ ಬರೆದಿರುವ ಕೈಬರಹ ಪತ್ತೆ

Posted by Vidyamaana on 2024-01-12 21:53:19 |

Share: | | | | |


ಇನ್ನು ಸಹಿಸಲು ಸಾಧ್ಯವಿಲ್ಲ”: ಸುಚನಾ ಸೇಠ್ ಐಲೈನರ್‌ನಿಂದ ಬರೆದಿರುವ ಕೈಬರಹ ಪತ್ತೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದು ಬ್ಯಾಗಲ್ಲಿ ಹಾಕಿ ಪ್ರಯಾಣಿಸುವಾಗ ಬಂಧಿಸಲ್ಪಟ್ಟ ಸ್ಟಾರ್ಟ್‌ಅಪ್ ಸಂಸ್ಥಾಪಕಿ ಸುಚನಾ ಸೇಠ್ ಬರೆದಿದ್ದ ಬರಹವೊಂದು ಪತ್ತೆಯಾಗಿದೆ.ತನ್ನ ಮಗುವಿನ ಶವ ಹಾಕಿದ್ದ ಬ್ಯಾಗೊಳಗೆ “ಇನ್ನು ಸಹಿಸಲು ಸಾಧ್ಯವಿಲ್ಲ…” ಎಂದು ಐಲೈನರ್‌ನಿಂದ ಬರೆದಿರುವ ಆರು ಸಾಲಿನ ಕೈಬರಹ ಪೊಲೀಸರಿಗೆ ಸಿಕ್ಕಿದೆ. ಇದು ಆಕೆಯ ಮನಸ್ಥಿತಿ ಮತ್ತು ಮಗುವಿನ ಹತ್ಯೆಯ ಉದ್ದೇಶವನ್ನು ತಿಳಿಸುವಂತಿದೆ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.


ಆಕೆಯ ಮಾಜಿ ಪತಿಗೆ ಮಗುವಿನೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಲು ನ್ಯಾಯಾಲಯ ಆದೇಶಿಸಿದ್ದನ್ನೇ ಸುಚನಾ ಸೇಠ್, ” ಇನ್ನು ಸಹಿಸಲು ಸಾಧ್ಯವಿಲ್ಲ‌..” ಎಂದು ಬರೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸರು ಕೈಬರಹವನ್ನು ವಿಧಿವಿಜ್ಞಾನ ಪರಿಶೀಲನೆಗೆ ಕಳುಹಿಸಿದ್ದಾರೆ.ಅವಳು ತನ್ನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಳು. ಮಗುವನ್ನು ಕೊಲ್ಲುವ ಮೊದಲಿನ‌ ಆಕೆಯ ಕರೆ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಅದೇ ರೀತಿ ಮಗುವಿನ ಸಾವಿನ ನಂತರ ಅವಳು ಯಾರಿಗೆ ಕರೆ ಮಾಡಿದಳು ಎಂನ ಮಾಹಿತಿಯನ್ನೂ ಕಲೆಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಹೋಟೆಲ್ ಸೋಲ್ ಬನಿಯನ್ ಗ್ರಾಂಡೆಯ 404 ಕೊಠಡಿಯಲ್ಲಿ ಸುಚನಾ ಸೇಠ್ ತನ್ನ ಮಗನನ್ನು ಕೊಚ್ಚಿ ಕೊಲೆ ಮಾಡಿದ್ದಾಳೆ. ಅಲ್ಲದೆ, ಕೋಣೆಯಲ್ಲಿ ಕೆಮ್ಮಿನ ಸಿರಪ್‌ನ ಎರಡು ಖಾಲಿ ಬಾಟಲಿಗಳು ಪತ್ತೆಯಾಗಿದ್ದು, ಆಕೆ ತನ್ನ ಮಗನನ್ನು ಕೊಲ್ಲೋ‌ ಮೊದಲು ಅಮಲೇರಿಸಲು ಯತ್ನಿಸಿದ್ದಾಳೆಂದು ಪೊಲೀಸ್‌ ಅಧಿಕಾರಿಗಳು ಶಂಕಿಸಿದ್ದಾರೆ.

ಪಾಕ್ ಪರ ಘೋಷಣೆ ಪ್ರಕರಣ ; ದೆಹಲಿ ಮೂಲದ ಇಲ್ತಾಜ್ ಸಹಿತ ಮೂವರ ಅರೆಸ್ಟ್ !

Posted by Vidyamaana on 2024-03-04 19:49:37 |

Share: | | | | |


ಪಾಕ್ ಪರ ಘೋಷಣೆ ಪ್ರಕರಣ ;  ದೆಹಲಿ ಮೂಲದ ಇಲ್ತಾಜ್ ಸಹಿತ ಮೂವರ ಅರೆಸ್ಟ್ !

ಬೆಂಗಳೂರು, ಮಾ.4: ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಯ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುನಾವರ್, ಇಲ್ತಾಜ್ ಮತ್ತು ಮೊಹಮ್ಮದ್ ಶಫಿ ನಾಶಿಪುಡಿ ಬಂಧಿತರು. 


ಆರ್​ಟಿ ನಗರದ ಮುನಾವರ್, ಇಲ್ತಾಜ್ ದೆಹಲಿ ಮೂಲದವನು ಎಂದು ತಿಳಿದುಬಂದಿದೆ. ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿದವ ಎಂದು ಹೇಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಓರ್ವ ಪಾಕಿಸ್ತಾನ ಅಂತಾ ಕೂಗಿದರೆ ಉಳಿದ ಇಬ್ಬರು ಜಿಂದಾಬಾದ್‌, ಜಿಂದಾಬಾದ್‌ ಅಂತಾ ಕೂಗಿದ್ದರು. ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.



Leave a Comment: