ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

Posted by Vidyamaana on 2024-03-18 09:42:56 |

Share: | | | | |


ಪೊಲೀಸರನ್ನು ಸತಾಯಿಸಿದ ಯಲ್ಲಪ್ಪ ಬಂಧನ

ಬೈಂದೂರು: ತಲೆ ಇಲ್ಲದ ಶವ ಇದೆ ಎಂದು ಸುಳ್ಳು ಮಾಹಿತಿ ನೀಡಿ ಪೊಲೀಸರನ್ನು ದಿನವಿಡೀ ಅಲೆದಾಡಿಸಿದ ಭೂಪ ಬೈಂದೂರು ಪೊಲೀಸರ ಅತಿಥಿಯಾಗಿದ್ದಾನೆ.

ಬೈಂದೂರು ಠಾಣೆಯ ಪೊಲೀಸ್‌ ಉಪನಿರೀಕ್ಷಕ ತಿಮ್ಮೇಶ ಬಿ.ಎನ್‌. ಠಾಣೆಯಲ್ಲಿರುವಾಗ ಬಾಗಲ ಕೋಟೆಯ ಪಕೀರಪ್ಪ ಯಲ್ಲಪ್ಪ (30) ಬಂದು ಯಡ್ತರೆ ಗ್ರಾಮದ ಮಧ್ದೋಡಿ ಗೇರು ಹಾಡಿಯಲ್ಲಿ ತಲೆ ಇಲ್ಲದ ಮನುಷ್ಯನ ದೇಹ ಬಿದ್ದಿದೆ ಎಂದನು. ಪೊಲೀಸರು ಆತನ ಜತೆಯಲ್ಲಿ ಹೋಗಿ ಸಾರ್ವಜನಿಕರ ಸಹಕಾರದೊಂದಿಗೆ ಗೇರು  ಹಾಡಿಯಲ್ಲಿ ದಿನವಿಡೀ ಹುಡುಕಿದರೂ ಎಲ್ಲಿಯೂ ಮೃತದೇಹ ಕಂಡು ಬರಲಿಲ್ಲ.

ಆತನು ಬೇರೆ ಬೇರೆ ಕಡೆಯಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇದೆ, ಇಲ್ಲಿ ಇದೆ ಎಂದು ಹೇಳಿದ್ದು ಎಲ್ಲಿ ಹುಡುಕಿದರೂ ಮೃತ ದೇಹ ಕಾಣಿಸಲಿಲ್ಲ. ಮರು ದಿನವೂ ಹುಡುಕಿದ ಪೊಲೀಸರು ಸುಸ್ತಾದರು. ಸುಳ್ಳು ಮಾಹಿತಿ ನೀಡಿದ ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ ರದ್ದು

Posted by Vidyamaana on 2024-01-08 21:57:45 |

Share: | | | | |


ಬಿಲ್ಕಿಸ್ ಬಾನೋ ಪ್ರಕರಣದಲ್ಲಿ‌ ಅಪರಾಧಿಗಳ ಬಿಡುಗಡೆ, ಗುಜರಾತ್‌ ಸರ್ಕಾರದ ಆದೇಶ  ರದ್ದು

ನವದೆಹಲಿ ಜ.8: ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆಗೊಳಿಸಿದ್ದ ಗುಜರಾತ್‌ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದೆ. ಚುನಾವಣೆ ಹೊತ್ತಲ್ಲಿ ಕೋರ್ಟ್ ನೀಡಿರುವ ಆದೇಶ ಗುಜರಾತ್‌ ಸರ್ಕಾರಕ್ಕೆ ಹಿನ್ನಡೆ ಆದಂತಾಗಿದೆ. 


ಗುಜರಾತ್‌ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಂತ್ರಸ್ತ ಮಹಿಳೆ ಬಿಲ್ಕಿಸ್‌ ಬಾನು ಸುಪ್ರೀಂಕೋರ್ಟ್‌ ಗೆ ಸಲ್ಲಿಸಿದ್ದ ಮನವಿಯನ್ನು ಜಸ್ಟೀಸ್‌ ಬಿ.ವಿ.ನಾಗರತ್ನ ಮತ್ತು ಜಸ್ಟೀಸ್‌ ಉಜ್ಜಾಲ್‌ ಭುವನ್‌ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. 2002ರಲ್ಲಿ ಗುಜರಾತ್‌ ನ ಗೋಧ್ರಾದಲ್ಲಿ ಬಿಲ್ಕಿಸ್‌ ಬಾನು ಮೇಲೆ ಅತ್ಯಾಚಾರ ಎಸಗಿ, ಆಕೆಯ 7 ಮಂದಿ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ 11 ಮಂದಿ ದೋಷಿಗಳಾಗಿದ್ದು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದರು.‌ ಆದರೆ ಗುಜರಾತ್‌ ಸರ್ಕಾರ 2022ರಲ್ಲಿ 11 ಅಪರಾಧಿಗಳನ್ನು ಅವಧಿ ಪೂರ್ವ ಬಿಡುಗಡೆಗೊಳಿಸಲು ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ರದ್ದು ಮಾಡಿದೆ. 




ಆ ರೀತಿಯ ಆದೇಶವನ್ನು ಜಾರಿಗೊಳಿಸುವ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಇದೊಂದು ವಂಚನೆ ಕೃತ್ಯ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಅಲ್ಲದೆ, 11 ಅಪರಾಧಿಗಳು ಎರಡು ವಾರದೊಳಗೆ ಶರಣಾಗಿ, ಜೈಲಿಗೆ ಮರಳಬೇಕು ಎಂದು ತೀರ್ಪಿನಲ್ಲಿ ಸೂಚಿಸಿದೆ. ಅಪರಾಧಿಗಳ ಶೀಘ್ರ ಬಿಡುಗಡೆಯ ಅಧಿಕಾರ ಗುಜರಾತ್‌ ಸರ್ಕಾರಕ್ಕಿಲ್ಲ. ಬದಲಿಗೆ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಸರ್ಕಾರ ಪರಿಶೀಲನೆ ನಡೆಸಬಹುದು, ಯಾಕೆಂದರೆ ಆರೋಪಿಗಳ ವಿಚಾರಣೆ ನಡೆದಿರುವುದು ಮಹಾರಾಷ್ಟ್ರದಲ್ಲಿ.  ಗುಜರಾತ್‌ ನಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದೆ. 


ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ ಎಲ್ಲ 11 ಅಪರಾಧಿಗಳನ್ನು ಜೀವಾವಧಿ ಶಿಕ್ಷೆಯ 14 ವರ್ಷ ಪೂರ್ತಿಗೊಳಿಸಿದ್ದಾರೆಂದು ಹೇಳಿ ಗುಜರಾತ್ ಸರ್ಕಾರ, 2022ರ ಆಗಸ್ಟ್ 15ರಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.

ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಯುಎಇ ಘಟಕ ಸದಸ್ಯರಿಂದ ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ

Posted by Vidyamaana on 2023-09-18 12:18:06 |

Share: | | | | |


ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಯುಎಇ ಘಟಕ ಸದಸ್ಯರಿಂದ ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ

ದುಬೈ ಪ್ರವಾಸದಲ್ಲಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಇಲ್ಲಿನ ಜುಮೇರಾ ಲೇಕ್ ಟವರ್ ತಾಜ್ ಹೊಟೇಲಿನಲ್ಲಿ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಯುಎಇ ಘಟಕದ ಸದಸ್ಯರಾದ ಪರ್ವೇಝ್ ಜಿ.ಕೆ, ಇಕ್ಬಾಲ್ ಕಣ್ಣೂರು, ಅನ್ವರ್ ಮಾಣಿಲ, ಮೂಸಾ ಪೆರುವಾಯಿ ಭೇಟಿಯಾಗಿ ಸ್ವಾಗತಿಸಿ ಸೌಹಾರ್ದ ಮಾತುಕತೆ ನಡೆಸಿದರು. ಅನಿವಾಸಿ ಭಾರತೀಯರ ಅತ್ಮೀಯತೆ ಮತ್ತು ಚುನಾವಣೆ ಸಂದರ್ಭದಲ್ಲಿ ತಮ್ಮ ಗೆಲುವಿಗೆ ಪರೋಕ್ಷವಾಗಿ ಸಹಕರಿಸಿದ ಈ ತಂಡಕ್ಕೆ ಶಾಸಕ ಅಶೋಕ್ ರೈ ಇದೇ ಸಂದರ್ಭದಲ್ಲಿ ಶುಭ ಹಾರೈಸಿ ಶ್ಲಾಘಿಸಿದರು.

ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

Posted by Vidyamaana on 2023-09-17 04:30:01 |

Share: | | | | |


ವಿಟ್ಲ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಗಾಂಜಾ ಸಹಿತ ಆರೋಪಿ  ಸುಳ್ಯ ಮೂಲದ ಕಲಂದರ್ ಶಾ ಪೊಲೀಸ್ ವಶಕ್ಕೆ

ಬಂಟ್ವಾಳ: ತಾಲೂಕಿನ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಶನಿವಾರ ಅಟೋ ರಿಕ್ಷಾದಲ್ಲಿ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಬೇಧಿಸಿದ ವಿಟ್ಲ ಪೊಲೀಸರು ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಹಿತ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. 


ಬಂಧಿತ ಆರೋಪಿಯನ್ನು ಸುಳ್ಯ ಕಸಬಾ ಗ್ರಾಮದ ನಿವಾಸಿ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ಎಂದು ಹೆಸರಿಸಲಾಗಿದೆ. ಕಲಂದರ್ ಶಾ ಶನಿವಾರ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ತನ್ನ ಕೆಎ21 ಬಿ7248 ನೋಂದಣಿ ಸಂಖ್ಯೆಯ ಅಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ವರ್ತಮಾನದ ಮೇರೆಗೆ ವಿಟ್ಲ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. 


ಕಾರ್ಯಾಚರಣೆ ವೇಳೆ ಅಟೋ ರಿಕ್ಷಾ ಸಹಿತ ರಿಕ್ಷಾದಲ್ಲಿದ್ದ 1.35 ಲಕ್ಷ ರೂಪಾಯಿ ಮೌಲ್ಯದ 6.110 ಕೆ ಜಿ ತೂಕದ ಗಾಂಜಾ, ಮೊಬೈಲ್ ಫೋನ್, 900 ರೂಪಾಯಿ ನಗದು ಹಾಗೂ ರಿಕ್ಷಾ ಚಾಲಕನ ಚಾಲನಾ ಪರವಾನಗಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,96,900/- ಎಂದು ಅಂದಾಜಿಸಲಾಗಿದೆ. ಆರೋಪಿ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 162/2023 ಕಲಂ 8(ಸಿ),20(ಬಿ) (3) (ಬಿ) ಎನ್ ಡಿ ಪಿ ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಜನವರಿ 21ರ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ರದ್ದು ; ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ಮುಂದೂಡಿಕೆ

Posted by Vidyamaana on 2024-01-16 04:29:25 |

Share: | | | | |


ಜನವರಿ 21ರ ಕಾಂಗ್ರೆಸ್ ರಾಜ್ಯ ಮಟ್ಟದ ಸಮಾವೇಶ ರದ್ದು ; ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ಮುಂದೂಡಿಕೆ

ಮಂಗಳೂರು, ಜ.16: ಜನವರಿ 21ರಂದು ಕಾಂಗ್ರೆಸ್ ಮಂಗಳೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ದಿಢೀರ್ ಮುಂದೂಡಲಾಗಿದೆ. 


ಲೋಕಸಭೆ ಚುನಾವಣೆಗೆ ಸಿದ್ಧತೆ ಸಲುವಾಗಿ ಮಂಗಳೂರಿನಲ್ಲಿ ಈ ಬಾರಿಯ ಮೊದಲ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ‌ಕಾರ್ಯಕ್ರಮ ಆಯೋಜಿಸಿ ಎಲ್ಲ ಸಿದ್ಧತೆ ನಡೆಸುತ್ತಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಿಕೆ ಮಾಡಿದ್ದಾರೆ. ಸಮಾವೇಶ ನಡೆಯುವ ಮು‌ಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವರು ಸೇರಿದಂತೆ ಪ್ರಮುಖ ನಾಯಕರು ಬಂದಿದ್ದರು. ಮಂಗಳೂರಿನ ಡಿಸಿಸಿ ಕಚೇರಿಯಲ್ಲಿ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ್ದರು

ಸ್ಕೂಟರಿನಲ್ಲಿ ಡ್ರಗ್ಸ್ ಮಾರಾಟ ; ಮಂಗಳೂರು ಮೂಲದ ಇಬ್ಬರ ಬಂಧನ

Posted by Vidyamaana on 2024-01-03 10:19:19 |

Share: | | | | |


ಸ್ಕೂಟರಿನಲ್ಲಿ ಡ್ರಗ್ಸ್ ಮಾರಾಟ ; ಮಂಗಳೂರು ಮೂಲದ ಇಬ್ಬರ ಬಂಧನ

ಮಂಗಳೂರು: ಸರಿಪಳ್ಳ ಬಳಿ ಸ್ಕೂಟರಿನಲ್ಲಿ ಎಂಡಿಎಂಎ ಡ್ರಗ್ಸ್ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 


ಕಾಟಿಪಳ್ಳ ನಿವಾಸಿ ಉಮರ್ ಫಾರೂಕ್ (26), ಫೈಸಲ್ ನಗರ ನಿವಾಸಿ ಜುಟ್ಟು ಅಶ್ಫಕ್ (27) ಬಂಧಿತರು. ಇವರಿಂದ 19 ಗ್ರಾಂ ಎಂಡಿಎಂಎ ಡ್ರಗ್ಸ್ ಮತ್ತು ಕಪ್ಪು ಬಣ್ಣದ ಹೊಂಡಾ ಏಕ್ಟಿವಾ ಸ್ಕೂಟರ್ ಅನ್ನು ವಶಕ್ಕೆ ಪಡೆಯಲಾಗಿದೆ. 


ಉಮರ್ ಫಾರೂಕ್ ವಿರುದ್ಧ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಶಿರ್ವ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕೊಲೆಯತ್ನ, ಸುಲಿಗೆ, ವಾಹನ ಕಳವು, ದೊಂಬಿ ಸೇರಿದಂತೆ 25 ಪ್ರಕರಣ ದಾಖಲಾಗಿದೆ. ಅಶ್ಫಕ್ ವಿರುದ್ಧ ಮಂಗಳೂರು ಗ್ರಾಮಾಂತರ, ಸುರತ್ಕಲ್, ಬಂದರು ಠಾಣೆಗಳಲ್ಲಿ 11 ಕೇಸುಗಳಿವೆ, ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ. ಎರಡು ಅರೆಸ್ಟ್ ವಾರೆಂಟ್ ಎದುರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.



Leave a Comment: