ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

Posted by Vidyamaana on 2023-07-25 10:44:56 |

Share: | | | | |


ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

ಬೆಂಗಳೂರು, ಜುಲೈ 25: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಳಂಬ ಮಧ್ಯೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.


ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಿಕ್ಕಮಗಳೂರಿನ ಸಿ.ಟಿ.ರವಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಆಗಲಿದ್ದಾರೆ. ಈ ಬಗ್ಗೆ ಒಂದು ಹಂತದ ಚರ್ಚೆ ಆಗಿದೆ. ಅದೆಲ್ಲ ಅವರ ಪಕ್ಷದ ಆಂತರಿಕ ವಿಚಾರ, ಆ ಬಗ್ಗೆ ನಾನು ಗಮನ ಹೆರಿಸಲ್ಲ" ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ"


ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಇದರಲ್ಲಿ ಯಾವ ಅನುಮಾನ ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.


"ನಾವು ಯಾವ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಷ್ಟು ಸ್ಥಾನಗಳಲ್ಲಾದರೂ ನಾವು ಗೆಲ್ಲಲಿ, ಅದರ ಬಗ್ಗೆ ಚಿಂತಿಸುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ" ಎಂದು ತಿಳಿಸಿದರು

ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

Posted by Vidyamaana on 2024-03-18 15:32:01 |

Share: | | | | |


ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ: ಬಾವ

ಮಂಗಳೂರು: ನಾನು ಜೆಡಿಎಸ್ ನಲ್ಲೇ ಇದ್ದೇನೆ, ಬಿಜೆಪಿಯನ್ನೂ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳ ಬಗ್ಗೆ ನನಗೆ ಸಹಮತವಿಲ್ಲ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿಯನ್ನು ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲಾ ಸಿದ್ಧಾಂತಗಳಿಗೆ ಸಹಮತ ಇಲ್ಲ. ಸಿಎಎ, ಹಿಜಾಬ್, ಆಝಾನ್ ಗೆ ವಿರೋಧದ ಬಿಜೆಪಿಯ ಸಿದ್ಧಾಂತಗಳನ್ನು ನಾನು ವಿರೋಧಿಸುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧೆಗಿಳಿಯುವ ನಿಟ್ಟಿನಲ್ಲಿ ನನ್ನ ಬೆಂಬಲಿಗರು ಇಚ್ಛೆ ವ್ಯಕ್ತಪಡಿಸಿದ್ದಾರೆ. ನಾನು ಯಾವುದೇ ನಿರ್ಧಾರ ಇನ್ನೂ ಮಾಡಿಲ್ಲ. ಮಾ.28ರಂದು ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಬಾವ ಹೇಳಿದರು.

ಬಿಜೆಪಿಗೆ ಪುತ್ತಿಲ ಪರಿವಾರದ ಬಲ - ಸಕ್ಸಸ್ ಆಯ್ತು ಸಂಧಾನ ಸೂತ್ರ

Posted by Vidyamaana on 2024-02-08 20:03:34 |

Share: | | | | |


ಬಿಜೆಪಿಗೆ ಪುತ್ತಿಲ ಪರಿವಾರದ ಬಲ - ಸಕ್ಸಸ್ ಆಯ್ತು ಸಂಧಾನ ಸೂತ್ರ

ಪುತ್ತೂರು : ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪುತ್ತೂರಿನಲ್ಲಿ ಕಗ್ಗಂಟಾಗಿ ಪರಿಣಮಿಸಿದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ವಿಚಾರ ಬಹುತೇಕ ಸುಖ್ಯಾಂತಗೊಳ್ಳುವತ್ತ ಸಾಗಿದೆ . ರಾಜ್ಯ ಹೈಕಮಾಂಡ್ ಅರುಣ್ ಪುತ್ತಿಲರಿಗೆ ಗೌರವಯುತ ಹುದ್ದೆ ನೀಡಲು ನಿರ್ಧರಿಸಿದೆ ಹಾಗೂ ಈ ಕುರಿತ ಮಾಹಿತಿಯನ್ನು ಅರುಣ್ ಪುತ್ತಿಲರವರಿಗೆ ರವಾನಿಸಿದೆ ಎಂಬ ಸ್ಪೋಟಕ ಮಾಹಿತಿ ಲಭಿಸಿದೆ.


ರಾಜ್ಯ ಬಿಜೆಪಿಯ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ , ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಈ ಕುರಿತು ಅರುಣ್ ಪುತ್ತಿಲ ಜತೆ ಮಾತನಾಡಿದ್ದು ಪಕ್ಷದಲ್ಲಿ ಗೌರವಯುತ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ. ಪಕ್ಷದ ಹಿರಿಯರ ಮಾತಿಗೆ ಅರುಣ್ ಪುತ್ತಿಲ ಸಮ್ಮತಿ ಸೂಚಿಸಿರುವುದಾಗಿ ಪುತ್ತಿಲ ಪರಿವಾರದ ಉನ್ನತ ಮೂಲಗಳು ಖಚಿತ ಪಡಿಸಿವೆ.


ಈ ಕುರಿತು ದೂರವಾಣಿ ಮೂಲಕ ವರದಿಗಾರರ ಜತೆ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತರವರು “ ಪುತ್ತಿಲ ಪರಿವಾರ ಹಾಗೂ ಬಿಜೆಪಿಗೆ ಸೇರಿದ ಎಲ್ಲರಿಗೂ ಇಂದಿನ ಬೆಳವಣಿಗೆ ಖುಷಿ ಸಂದಿದೆ. ನಾವು ಹಿಂದೆಯೂ ಬಿಜೆಪಿಯೇ ಆಗಿ ಇದ್ದೇವು . ಮುಂದಿನ ಕೆಲ ದಿನಗಳಲ್ಲಿ ನಾವು ಇನ್ನಷ್ಟು ಸಕ್ರಿಯವಾಗಿ ಬಿಜೆಪಿ ಜತೆ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವ ವಾತವಾರಣ ನಿರ್ಮಾಣವಾಗಲಿದೆ. . ಸದ್ಯದಲ್ಲೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಅರುಣ್ ಪುತ್ತಿಲ ಬೇಟಿಯಾಗಲಿದ್ದಾರೆ.


ಪಕ್ಷ ಸೇರ್ಪಡೆ ಯಾವಗ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು “ ನಾವು ಬಿಜೆಪಿಯೇ … ಹಾಗಾಗಿ ನಾವು ಮತ್ತೆ ಸೇರ್ಪಡೆಯಾಗುವ ಅಗತ್ಯವಿಲ್ಲ . ಪುತ್ತಿಲ ಪರಿವಾರವನ್ನು ವಿಲೀನಗೊಳಿಸುವುದಷ್ಟೆ ಬಾಕಿ ಇರುವುದು” ಎಂದರು. ಮುಂದುವರಿದು “ ಇಂತಹದೊಂದು ಸುಸಂದರ್ಭ ಕೂಡಿ ಬರಲು ಕಾರಣರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ , ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆವಿ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ


ಈ ಕುರಿತ ಮಾಹಿತಿಯನ್ನು ಜಿಲ್ಲಾಧ್ಯಕ್ಷರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

Posted by Vidyamaana on 2023-05-30 09:10:06 |

Share: | | | | |


ಕಾಂಗ್ರೆಸ್ ಸಮಾಲೋಚನಾ ಸಭೆಯಲ್ಲಿ ಸೋಲು – ಗೆಲುವಿನ ಲೆಕ್ಕಾಚಾರ

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲು – ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂಗಳೂರು ಜಿಲ್ಲಾ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು.

ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಯಿತು.

ಪುತ್ತೂರು ಶಾಸಕ ಅಶೋಕ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಸಹಿತ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಮಾಧಕ ವ್ಯಸನಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಿ

Posted by Vidyamaana on 2023-12-13 21:05:17 |

Share: | | | | |


ಮಾಧಕ ವ್ಯಸನಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಿ

ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯವು ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.


ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪೭ ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, ೫೨೮ ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ ೨೬ ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾಧಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.

ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ

ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಮಾಧಕ ವ್ಯಸನಿಗಳ ವಿರುದ್ದ ಯುದ್ದ ಸಾರಿದ್ದೇವೆ: ಗೃಹ ಸಚಿವರು


ಮಾಧಕ ವ್ಯಸನಿಗಳಿಂದ ಸಮಾಜಕ್ಕೆ ಕಂಠಕ ಉಂಟಾಗುತ್ತಿದೆ. ಇಂಥವರ ವಿರುದ್ದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಸನಿಗಳ ಭೇಟೆಯಾಡುತ್ತಿದ್ದೇವೆ. ಈಗಾಗಲೇ ರಾಜ್ಯಾದ್ಯಂತ ಕಾರ್ಯಾಚರಣೆ ಪ್ರಾರಂಭವಾಗಿದೆ. ನೂರಾರು ಕೋಟಿ ರೂ ಬೆಲೆ ಬಾಳುವ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಸುಮಾರು ೨೧ ಕೋಟಿ ರೂ ಮೌಲ್ಯದ ಮಾಧಕ ವಸ್ತುಗಳನ್ನು ಒಂದೇ ದಿನದಲ್ಲಿ ವಶಕ್ಕೆ ಪಡೆಯಲಾಗಿದೆ. ದ ಕ ಜಿಲ್ಲೆಯನ್ನು ಒಂದು ವರ್ಷದೊಳಗೆ ವ್ಯಸನ ಮುಕ್ತ ಅಥವಾ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಪೊಲೀಸರು ಒಪ್ಪಿಕೊಂಡಿದ್ದು ಅದನ್ನು ಚಾಲೆಂಜಗಿ ಸ್ವೀಕರಿಸಿದ್ದಾರೆ. ಮಾಧಕ ವ್ಯಸನಿಗಳ ಮತ್ತು ಅದನ್ನು ಮರಾಟ ಮಾಡುವ ದುಷ್ಕರ್ಮಿಗಳ ವಿರುದ್ದ ನಾವು ಈಗಾಗಲೇ ಯುದ್ದವನ್ನೇ ಸಾರಿದ್ದು , ಈಗಾಗಲೇ ರಾಜ್ಯದಲ್ಲಿ ೪೬ ಕಡೆಗಳಲ್ಲಿ ವಿಶೇಷ ಠಾಣೆಗಳನ್ನು ತೆರೆಯಲಾಗಿದೆ,ಇದರಲ್ಲಿ ಯವುದೇ ರಾಜಿಯಿಲ್ಲ ಎಂದು ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಪಷ್ಟಪಡಿಸಿದರು.

ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಕಾರ್ಯಕರ್ತರ ಸಭೆ*

Posted by Vidyamaana on 2023-04-09 10:24:06 |

Share: | | | | |


ಎಸ್.ಡಿ.ಪಿ.ಐ ಉಪ್ಪಿನಂಗಡಿ ಬ್ಲಾಕ್ ಕಾರ್ಯಕರ್ತರ ಸಭೆ*

ಉಪ್ಪಿನಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಪ್ಪಿನಂಗಡಿ ಬ್ಲಾಕ್ ಸಮಿತಿ ವತಿಯಿಂದ ಎಚ್.ಎಂ ಹಾಲ್ ನಲ್ಲಿ ಏ 09 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಪಿ‌.ಐ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮುಸ್ತಫಾ ಲತೀಫಿ ವಹಿಸಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅದ್ಯಕ್ಷರಾದ ಇಬ್ರಾಹಿಮ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಚುನಾವಣ ಉಸ್ತುವಾರಿಯಾದ ಸಿದ್ದೀಕ್ ಕೆ‌ಎ ಚುನಾವಣ ರಣತಂತ್ರಗಳ ಬಗ್ಗೆ ವಿವರಿಸಿದರು. ಝಕರಿಯಾ ಕೊಡಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.



Leave a Comment: