ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

Posted by Vidyamaana on 2023-06-16 08:23:17 |

Share: | | | | |


ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕ ಹಮೀದ್ ಬಂಧನ

ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.

ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು

ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುತ್ತೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ್ಯು

Posted by Vidyamaana on 2024-03-05 07:22:31 |

Share: | | | | |


ಪುತ್ತೂರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ್ಯು

ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.


ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ ಯುವತಿ.ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ., ಅಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.

ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.ಮೃತ ವಿದ್ಯಾರ್ಥಿನಿ ತಂದೆ, ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.

ಬಿಜೆಪಿಯೊಂದಿಗೆ ವಿಲೀನವಾದ ಪುತ್ತಿಲ ಪರಿವಾರ: ಡಾ.ಸುರೇಶ್ ಪುತ್ತೂರಾಯ ಏನಂದ್ರು

Posted by Vidyamaana on 2024-03-14 22:44:41 |

Share: | | | | |


ಬಿಜೆಪಿಯೊಂದಿಗೆ ವಿಲೀನವಾದ ಪುತ್ತಿಲ ಪರಿವಾರ: ಡಾ.ಸುರೇಶ್ ಪುತ್ತೂರಾಯ ಏನಂದ್ರು

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಸೇರ್ಪಡೆಗೊಂಡಿರುವ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.


ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಡಾ. ಸುರೇಶ್ ಪುತ್ತೂರಾಯ ಅವರು ಕೂಡ ಸಾಕಷ್ಟು ಕೆಲಸ ಮಾಡಿದ್ದರು. ಇದೀಗ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ಡಾ. ಪುತ್ತೂರಾಯ ಅವರು ಮನದುಂಬಿ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಅರುಣ್‌ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರ್ಪಡೆಗೊಂಡಿರುವುದು ಸಂತೋಷವಾಗಿದೆ. ಇದಕ್ಕೆ ಮೊದಲೇ ಈ ಕೆಲಸ ಆಗಬೇಕಿತ್ತು. ತಡವಾಗಿಯಾದರೂ ಬಿಜೆಪಿ ಸೇರ್ಪಡೆ ಉತ್ತಮ ಬೆಳವಣಿಗೆ ಎಂದಿದ್ದಾರೆ.

ಮುಂದೆ ನಾಯಕರು, ಕಾರ್ಯಕರ್ತರು ಒಂದೇ ಮನಸ್ಸಿನಿಂದ ಕೆಲಸ ಮಾಡಿ, ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಹಿಂದಿನ ಘಟನೆಗಳನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳದೇ, ಒಂದೇ ಮನಸ್ಸಿನಿಂದ ಕಾರ್ಯತತ್ಪರರಾಗಬೇಕು. ಇನ್ನು ಮುಂದೆ ಒಂದೇ ಪರಿವಾರ. ಅದು ಮೋದಿ ಪರಿವಾರ ಎಂದರು.

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನು

Posted by Vidyamaana on 2024-03-17 07:48:18 |

Share: | | | | |


ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಪ್ರಮುಖ 3 ಆರೋಪಿಗಳಿಗೆ ಜಾಮೀನು

ಮಂಗಳೂರು: 2022 ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಝಿಲ್ ಹತ್ಯೆ ನಡೆಸಿದ ಪ್ರಮುಖ 3 ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ.


ಸುರತ್ಕಲ್ ಮಂಗಳಪೇಟೆಯ ಮೊಹಮ್ಮದ್ ಫಾಝಿಲ್ ಹತ್ಯೆಯ A1 ಆರೋಪಿ ಸುಹಾಸ್ ಶೆಟ್ಟಿ, A2 ಆರೋಪಿ ಅಭಿಷೇಕ್, A3 ಆರೋಪಿ ನೇಪಾಳಿ ಗಣೇಶ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.


ಫಾಝಿಲ್ ಹತ್ಯೆಯಲ್ಲಿ ಒಟ್ಟು 8 ಪ್ರಮುಖ ಆರೋಪಿಗಳ ಬಂಧನವಾಗಿತ್ತು. ಐವರು ಆರೋಪಿಗಳು ಈಗಾಗಲೇ ಜಾಮೀನಿನಲ್ಲಿ ಹೊರ ಬಂದಿದ್ದಾರೆ. ಇದೀಗ ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು ಆಗಿದೆ. ಈ ಮೂಲಕ‌ ಫಾಝಿಲ್ ಹತ್ಯೆಯ ಎಲ್ಲ ಆರೋಪಿಗಳೂ ಬಂಧಮುಕ್ತರಾದಂತಾಗಿದೆ.


2022 ಜುಲೈ 28ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮೊಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ದಾಳಿ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಝಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಯಲ್ಲಿ ಫಾಝಿಲ್ ಕೊನೆಯುಸಿರೆಳೆದಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Posted by Vidyamaana on 2024-06-18 14:45:56 |

Share: | | | | |


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ

ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ಬನ್ನೂರು : ಧರೆ ಕುಸಿದು ಮಜೀದ್ ರವರ ಮನೆಗೆ ಹಾನಿ ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು - ಅಪಾಯದಿಂದ ಪಾರು

Posted by Vidyamaana on 2024-06-27 07:26:59 |

Share: | | | | |


ಬನ್ನೂರು :  ಧರೆ ಕುಸಿದು ಮಜೀದ್ ರವರ ಮನೆಗೆ ಹಾನಿ ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳು - ಅಪಾಯದಿಂದ ಪಾರು

ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ



Leave a Comment: