ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

Posted by Vidyamaana on 2023-07-04 21:16:49 |

Share: | | | | |


ಕರಾವಳಿಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5ರ ವರೆಗೆ ರೆಡ್ ಅಲಟ್೯ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.5ರಂದು ರಜೆ ಘೋಷಿಸಲಾಗಿದೆ.


ಇದಲ್ಲದೆ, ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸೆ.29 : ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ ಕ್ಯಾಮರಾ ಸೆಂಟರ್

Posted by Vidyamaana on 2023-09-27 10:02:13 |

Share: | | | | |


ಸೆ.29 : ಪುತ್ತೂರಿನಲ್ಲಿ ಶುಭಾರಂಭಗೊಳ್ಳುತ್ತಿದೆ ಕ್ಯಾಮರಾ ಸೆಂಟರ್

ಪುತ್ತೂರು :  ಇಲ್ಲಿನ  ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ಸ್ಟ್ಯಾಂಡ್‌ನ ವಾಣಿಜ್ಯ ಸಂಕೀರ್ಣ ದ ಮೊದಲ ಮಹಡಿಯಲ್ಲಿ ಕ್ಯಾಮರ ಸೆಂಟರ್ ಸಂಸ್ಥೆಯು ಸೆ 29 ಶುಕ್ರವಾರ ದಂದು ಶುಭಾರಂಭಗೊಳ್ಳಲಿದೆ.

    ಕ್ಯಾಮೆರಾಗೆ ಸಂಬಧಿಸಿದ ಎಲ್ಲಾ ವಿಚಾರಗಳು ಒಂದೇ ಸೂರಿನಡಿಯಲ್ಲಿ ನೀಡಬೇಕೆಂಬ ಕನಸಿನೊಂದಿಗೆ, ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ಕ್ಯಾಮರ ಸೆಂಟರ್ ಸಂಸ್ಥೆ ಶುಭಾರಂಭಕ್ಕೆ ಸಿದ್ದವಾಗಿದೆ. ಕ್ಯಾಮರ ಸೆಂಟರ್‌ನಲ್ಲಿ ಗ್ರಾಹಕರಿಗೆ ಬೇಕಾದ ರೀತಿಯಲ್ಲಿ ಕ್ಯಾಮೆರಾ ಸೇಲ್ಸ್ ಮತ್ತು ಸವೀಸ್ ಮಾಡಿಕೊಡಲಾಗುತ್ತದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಕಾಂಪೌಂಡ್ ಗೋಡೆ ಕುಸಿತ, ಕೂದಲೆಳೆ ಅಂತರದಲ್ಲಿ ಪಾರಾದ ಮದರಸಾ ವಿದ್ಯಾರ್ಥಿನಿ - ವಿಡಿಯೋ ವೈರಲ್

Posted by Vidyamaana on 2024-07-18 15:09:09 |

Share: | | | | |


ಕಾಂಪೌಂಡ್ ಗೋಡೆ ಕುಸಿತ, ಕೂದಲೆಳೆ ಅಂತರದಲ್ಲಿ ಪಾರಾದ ಮದರಸಾ ವಿದ್ಯಾರ್ಥಿನಿ - ವಿಡಿಯೋ ವೈರಲ್

ಕಣ್ಣೂರು: ಕಾಂಪೌಂಡ್ ಗೋಡೆ ರಸ್ತೆಗೆ ಕುಸಿದ ಪರಿಣಾಮ ಪಾದಚಾರಿ ವಿದ್ಯಾರ್ಥಿನಿಯೊಬ್ಬಳು ಅಪಾಯದಿಂದ ಪಾರಾಗಿರುವ ಘಟನೆ ಕೇರಳ ಕಣ್ಣೂರಿನ ಅಂಜರಕಂಡಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರಕಾರಿ ಬಸ್ ಮತ್ತು ಲಾರಿ ಮುಖಾಮುಖಿ: ಇಬ್ಬರ ದುರ್ಮರಣ

Posted by Vidyamaana on 2024-01-24 18:53:59 |

Share: | | | | |


ಸರಕಾರಿ ಬಸ್ ಮತ್ತು ಲಾರಿ ಮುಖಾಮುಖಿ: ಇಬ್ಬರ ದುರ್ಮರಣ

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊಪ್ಪಳ ರಸ್ತೆಯ ಹಳ್ಳಿಕೇರಿ- ಬನ್ನಿಕೊಪ್ಪ ನಡುವೆ ಜರುಗಿದೆ.


ಕೊಪ್ಪಳದಿಂದ ಗದಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ಗದಗದಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಲಾರಿ ಚಾಲಕ ವಿನೋದಕುಮಾರ್‌ ಹಾಗೂ ಕೊಪ್ಪಳ ಜಿಲ್ಲೆಯ ಭಾಗ್ಯನಗರ ನಿವಾಸಿ ಗೀತಾ ಎನ್ನಲಾಗಿದೆ. ಮೃತ ಮಹಿಳೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡಕ್ಕೆ ಹೊರಟಿದ್ದರು ಎನ್ನಲಾಗಿದೆ.ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪ್ರಭುಗೌಡ, ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

Posted by Vidyamaana on 2023-09-09 19:36:57 |

Share: | | | | |


ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ತರಗತಿ ಉದ್ಘಾಟನೆ

ಪುತ್ತೂರು: ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ವಿದ್ಯಾ ಜ್ಯೋತಿ ಎಲ್ ಕೆಜಿ ಮತ್ತು ಯುಕೆಜಿ ಮತ್ತು ಅಂಗನವಾಡಿ ಪುನಶ್ವೇತನ ರೋಟರಿ ಜಿಲ್ಲಾ ಯೋಜನೆಯನ್ನು ಶಾಸಕ ಅಶೋಕ್ ರೈ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ಮಾಡಬೇಕಾದ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿರುವುದು ಶ್ಲಾಘನೀಯ, ರೋಟರಿ ಕ್ಲಬ್ ನಿಂದ ಸಮಾಜ ಸೇವೆ ನಿರಂತರವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು ಮುಂದಿನ ಒಂದು ವರ್ಷದೊಳಗೆ ಎಲ್ಲಾ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಎಲ್ ಕೆ .ಜಿ ತರಗತಿ ಆರಂಭಿಸಲಾಗುವುದು ಮಾತ್ರವಲ್ಲ ಶಿಕ್ಷಕರ ನೇಮಕಾತಿಯೂ ಪೂರ್ಣಗೊಳ್ಳಲಿದೆ. ಇಂಗ್ಲೀಷ್ ಮಾದ್ಯಮದಲ್ಲಿ ಶಿಕ್ಷಣ ಅತೀ ಮುಖ್ಯವಾಗಿದ್ದು, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ, ರೋಟರಿ ಕ್ಲಬ್ ಪುತ್ತೂರು ಸಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುರೇಂದ್ರ ಕಿಣಿ, ರೋನ್ 4 ರ ಅಸಿಸ್ಟಂಟ್ ಗವರ್ನರ್ ಲಾರೆನ್ಸ್ ಗೋನ್ಸಾಲ್ವಿಸ್, ನಗರ ಸಬಾ ಸದಸ್ಯ ಶಕ್ತಿ ಸಿನ್ಹಾ ನೆಲ್ಲಿಕಟ್ಟೆ ಸರಕಾರಿ ಹಿ.ಪ್ರಾ. ಶಾಲೆ ಮುಖ್ಯ ಶಿಕ್ಷಕಿ ಯಶೋಧ, ಎಸ್ ಡಿ ಎಂಸಿ ಅಧ್ಯಕ್ಷೆ ವಸುಧಾ, ರೊ. ಶ್ಯಾಮಲಾ ಎಂ ಶೆಟ್ಟಿ, ರೊ.ಗ್ರೇಸಿ ಗೊನ್ಸಾಲ್ವಿಸ್, ರೊ.ಸುಧಾಕರ್ ಶೆಟ್ಟಿ ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಶಶಿಧರ್ ಕಜೆ ಕಾರ್ಯಕ್ರಮ ನಿರೂಪಿಸಿದರು.

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

Posted by Vidyamaana on 2022-11-17 12:35:37 |

Share: | | | | |


ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷೆ ದೀಕ್ಷಾ ಪೈ ಮತ್ತು ಸದಸ್ಯ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ವರದಿ ವಾಚಿಸಿದರು. ಭೂಮಿಕ ಪ್ರಾರ್ಥಿಸಿದರು. ಉಪನ್ಯಾಸಕಿ ಚಿತ್ರಲೇಖಾ ಕೆ. ಸ್ವಾಗತಿಸಿದರು. ಅಶೋಕ ಪಿ. ವಂದಿಸಿದರು ಶೋಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ಕೆ, ಗ್ರೀಷ್ಮಾ, ಧನ್ಯಶ್ರೀ ಪಿ. ಮತ್ತು ದಾಮೋದರ ವಿಜೇತರ ಪಟ್ಟಿ ವಾಚಿಸಿದರು. ಭೋಜರಾಜ ಆಚಾರಿ ಕೆ.ರವರು ದತ್ತಿ ನಿಧಿ ನಗದು ಬಹುಮಾನ ಪಡೆದ ವಿದ್ಯಾರ್ಥಿನಿಯರ ಪಟ್ಟಿ ವಾಚಿಸಿದರು.

Recent News


Leave a Comment: