ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

Posted by Vidyamaana on 2023-03-24 16:34:11 |

Share: | | | | |


ಎಸ್ ಡಿ ಪಿ ಐ ಕುರಿಯ ಬೂತ್ ಸಮೀತಿ ವತಿಯಿಂದ ರಂಝಾನ್ ಕಿಟ್ ವಿತರಣೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುರಿಯ ಬೂತ್ ಸಮೀತಿ ವತಿಯಿಂದ ವರ್ಷಂಪ್ರತಿ ರಂಝಾನ್ ತಿಂಗಳಲ್ಲಿ ದಾನಿಗಳ‌ ನೆರವಿನಿಂದ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ಗಳನ್ನು ನೀಡುತ್ತಿದ್ದು ಅದೇ ರೀತಿ ಈ ಬಾರಿ ಕೂಡ ಮಾ 24 ರಂದು ಶುಕ್ರವಾರ ಸುಮಾರು 120 ರಷ್ಟು ಆಹಾರ ಕಿಟ್ ಗಳನ್ನು ನೀಡಲಾಯಿತು..

 ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ SDPI ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಹಾಗೂ SDPI ಹಿರಿಯ ನಾಯಕರಾದ PBK ಮಹಮ್ಮದ್ ಹಾಗೂ ಆರ್ಯಾಪು ಚುನಾವಣಾ ಉಸ್ತುವಾರಿಯಾದ ಅಶ್ರಫ್ ಸಂಟ್ಯಾರ್ ರವರು ಆಗಮಿಸಿ, ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...

ಹಾಜಿ ಇಬ್ರಾಹಿಂ ಸಾಗರ್ ಮಾತನಾಡಿ ಕುರಿಯ SDPI ಯ ಯುವಕರ ಈ ಉತ್ತಮ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಇಂತಹ ಮಾದರಿ ಕಾರ್ಯಗಳು ಹಾಗೂ ಸಾಮಾಜಿಕ ಸೇವೆಗಳು ತಾಲೂಕಿನ ‌ಪ್ರತಿಯೊಂದು ಕಡೆಗಳಲ್ಲಿ ಕೂಡ ನಡೆಯಬೇಕಿದೆ ಕುರಿಯದ ಎಸ್ಡಿಪಿಐ ಸದಸ್ಯರಿಗೆ ಹಾಗೂ ಕಿಟ್ ನೀಡಲು ಸಹಕಾರ ನೀಡಿದ ದಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು...

ಈ ಸಂದರ್ಭದಲ್ಲಿ ಸ್ಥಳೀಯ ಎಸ್ಡಿಪಿಐ ಕಾರ್ಯಕರ್ತರಾದ ಅಶ್ರಫ್,ಝೈದ್, ಜಬ್ಬಾರ್ ಕುರಿಯ, ಜಬ್ಬಾರ್ ಅಜ್ಜಿಕಟ್ಟೆ, ಸಾದಿಕ್ ಕುರಿಯ , ಶಾಕಿರ್ ಮುಂಡೂರು,ನಿಝಾಂ ಪಂಜಳ, ಫಾರೂಕ್ ಎಸ್,,ರವುಫ್ ಕುರಿಯ,ಪವಾಝ್ ಕುರಿಯ  ಹಾಗೂ ಪಕ್ಷದ ಅಭಿಮಾನಿಗಳು ಹಾಗೂ, ಹಿತೈಷಿಗಳು ಉಪಸ್ಥಿತರಿದ್ದರು...

ಪೆರುವಾಯಿ ವಲಯ ಕಾಂಗ್ರೆಸ್ ಕಚೇರಿ ಉದ್ಘಾಟನೆ

Posted by Vidyamaana on 2023-11-09 21:12:45 |

Share: | | | | |


ಪೆರುವಾಯಿ ವಲಯ ಕಾಂಗ್ರೆಸ್ ಕಚೇರಿ ಉದ್ಘಾಟನೆ

ವಿಟ್ಲ: ಪೆರುವಾಯಿ ವಲಯ ಕಾಂಗ್ರೆಸ್ ನ ನೂತನ ಕಚೇರಿಯನ್ನು ಶಾಸಕರಾದ ಅಶೋಕ್ ರೈ ಯವರು ಉದ್ಘಾಟಿಸಿದರು.

 ಕಾನಾ ಕಾಂಪ್ಲೆಕ್ಸ್ ನಲ್ಲಿರುವ ಪೆರುವಾಯಿ ವಲಯ ಕಾಂಗ್ರೆಸ್ ಸಮಿತಿಯ ನೂತನ ಕಚೇರಿಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರ ಅಶೋಕ್ ಕುಮಾರ್ ರೈ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಪೆರುವಾಯಿ ವಲಯ ಕಾಂಗ್ರೆಸ್ ಕಾರ್ಯಕರ್ತರು ಎಲ್ಲರಿಗೂ ಮಾದರಿಯಾಗಿದ್ದಾರೆ. ಗ್ರಾಮದಲ್ಲಿ ಪಕ್ಷದ ಕಚೇರಿಯನ್ನು ಆರಂಬಿಸುವ ಮೂಲಕ ಕಾರ್ಯಕರ್ತರ ಹುರಿದುಂಬಿಸುವ ಕೆಲಸವನ್ನು ಮಾಡಿದ್ದು ಶ್ಲಾಘನೀಯ. ಪ್ರತೀ ವಲಯ ಮಟ್ಟದಲ್ಲೂ ಪಕ್ಷದ ಕಚೇರಿಯನ್ನು ಆರಂಭಿಸುವ ಮೂಲಕ ಪಕ್ಷದ ಯೋಜನೆಗಳು, ಸರಕಾರದ ಯೋಜನೆಗಳು ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ತಲುಪಿಸಲು ಸಾಧ್ಯವಾಗಲಿದೆ. ಸಮಸ್ಯೆಗಳು ಬಂದಾಗ ಕಚೇರಿಗೆ ಬಂದು ಪಕ್ಷದ ನಾಯಕರುಗಳ ಜೊತೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪೆರುವಾಯಿ ಗ್ರಾಮದ ಅನೇಕ ಮಂದಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಶಾಸಕರು ಪಕ್ಷದ ದ್ವಜವನ್ನು ನೀಡಿ ಬರಮಾಡಿಕೊಂಡರು.

ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ರವರು ಮಾತನಾಡಿ ಪೆರುವಾಯಿ ಗ್ರಾಮ ಕಾಂಗ್ರೆಸ್ ಭದ್ರಕೋಟೆಯಾಗಿದೆ.ಮುಂದಿನ‌ ದಿನಗಳಲ್ಲಿ ಪಕ್ಷವನ್ನು ಬಲಪಡಿಸಲು ಕಚೇರಿ ಸಹಾಯವಾಗಲಿದೆ ಎಂದು ಹೇಳಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ಗ್ರಾಮೀಣ ಭಾಗದಲ್ಲಿ‌ಪಕ್ಷವನ್ನು ಬಲಪಡಿಸಬೇಕಾಗಿರುವುದು ಇಂದಿನ ಅಗತ್ಯವಾಗಿದೆ.‌ಸರಕಾರದ ಗ್ಯಾರಂಟಿ ಯೋಜನೆಯನ್ನು ಮನೆ ಮನೆಗೆ ತಲುಪಿಸುವಲ್ಲಿ ಗ್ರಾಮದ ಕಾಂಗ್ರೆಸ್ ಕಚೇರಿ ಸಹಕಾರಿಯಾಗಲಿದೆ ಎಂದು ಹೇಳಿದರು.


   ರಶ್ನಿ ಇವರಿಂದ ಪ್ರಾರ್ಥನೆ ನೆರವೇರಿತು.  ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂದಬೆಟ್ಟು, ವಿಟ್ಟ ಪಂಚಾಯತ್ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದಲ್ ಕೆರೀಂ ಕುದ್ದುಪದವು, ಮಾಣಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಧರ ಬಾಳೆಕಲ್ಲು, ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ನೆಬಿಸ, ಪೆರುವಾಯಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ  ಪಂಚಪಾಲ ಶೆಟ್ಟಿ, ಯುವ ಕಾಂಗ್ರೆಸ್ ಅದ್ಯಕ್ಷರಾದ ಸಮೀರ್ ಬದಿಯಾರು, ಗ್ರಾಮ ಪಂಚಾಯತ್ ಸದಸ್ಯರಾದ  ರಾಜೇಂದ್ರನಾಥ ರೈ ಗುತ್ತು,  ಮಾಲತಿ, ಕುಮಾರಿ ರಶ್ಮಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪುಷ್ಪಲತಾ ಎಂ ಶೆಟ್ಟಿ, ದ. ಕ. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಸಂಯೋಜಕರು  ಅಶೋಕ್ ಡಿಸೋಜ ಮುಳ್ಳೆಚ್ಚಿ, ದ. ಕ. ಕ ಜಿಲ್ಲಾ ಕಾಂಗ್ರಸ್ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ  ರಂಜಿತ್ ಮಾರ್ಲ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾರ್ಯದರ್ಶಿ ಸಿದ್ಧಿಕ್ ಪೆರುವಾಯಿ, ಬೂತ್ ಅಧ್ಯಕ್ಷರು ಆದ ಗೋಪಾಲ ನಾಯ್ಕ,  ಮಹಮ್ಮದ್ ಕೆ ಮಾಜಿ ಸದಸ್ಯರಾದ  ಅಬ್ದುಲ್ ಖಾನ,  ಜೋನ್ಸನ್ ಮೊಂತೇರೊ, ಹನೀಫ್ ಮುಚ್ಚಿರಪದವು, ಮಾಣೀಲದ ಹಿರಿಯ ಕಾರ್ಯಕರ್ತ ಜಯರಾಮ್ ಬಳ್ಳಾಲ್ ಹಾಗೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಂಗ್ರಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಲೋಕೇಶ್ ಕೊಲ್ಲತ್ತಡ್ಕ, ನಾರಾಯಣ ಅಶ್ವಥನಗರ, ಸರಸ್ವತಿ ಆನಂದ ನಾಯ್ಕ, ಗೋಪಾಲನಾಯ್ಕ, ಚಂದ್ರಾವತಿ ಸಹಿತ ಕೆಲವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ ದಿ. ತಿಮ್ಮಪ್ಪ ಪಾಟಾಳಿಯವರಿಗೆ ಪಕ್ಷದ ವತಿಯಿಂದ ಸಂಗ್ರಹಿಸಲಾದ ಸಹಾಯ ನಿಧಿಯನ್ನು ಶಾಸಕರು ಅವರ  ಪತ್ನಿ  ಉಮಾವತಿಯವರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಗ್ರಾ. ಪಂ. ಸದಸ್ಯರಾದ  ರಾಜೇಂದ್ರನಾಥ ರೈ ಗುತ್ತು ಇವರು ಸ್ವಾಗತಿಸಿದರು.  ರಹಿಮಾನ್ ಖಾನ್ ಕಾರ್ಯಕ್ರಮ ನಿರೂಪಿಸಿದರು.

ಚಂದ್ರಯಾನ-3 ಉಡಾವಣೆ ಕೌಂಟ್‌ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ನಿಧನ

Posted by Vidyamaana on 2023-09-04 03:54:48 |

Share: | | | | |


ಚಂದ್ರಯಾನ-3 ಉಡಾವಣೆ ಕೌಂಟ್‌ಡೌನ್ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ನಿಧನ

ಆಂಧ್ರಪ್ರದೇಶ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆ ಕ್ಷಣಗಣನೆ ಸಂದರ್ಭ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾದರು. ಅವರಿಗೆ ಐವತ್ತು ವರ್ಷ ವಯಸ್ಸಾಗಿತ್ತು.



ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಅನ್ನು ಉಡಾವಣೆ ಮಾಡಲಾಯಿತು. ಈ ವೇಳೆ ವಿಜ್ಞಾನಿ ವಲಮರ್ತಿ ಅವರು ಚಂದ್ರಯಾನ-3 ಉಡಾವಣೆಯ ಸಂದರ್ಭದಲ್ಲಿ ಧ್ವನಿ ನೀಡಿದ್ದರು.


ಇಸ್ರೋದಲ್ಲಿ, ರಾಕೆಟ್ ಉಡಾವಣೆ ಸಮಯದಲ್ಲಿ ಕೌಂಟ್‌ಡೌನ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕೌಂಟ್ ಡೌನ್ ಕರ್ತವ್ಯವನ್ನು ತಮ್ಮ ಗಂಭೀರ ಧ್ವನಿಯಿಂದ ನಿರ್ವಹಿಸಿದ ಉದ್ಯೋಗಿ ವಲರ್ಮತಿ ಅವರು ಶನಿವಾರ ರಾತ್ರಿ ಚೆನ್ನೈನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.


ವಲರ್ಮತಿ ಅವರು ಚಂದ್ರಯಾನ-3 ಸೇರಿದಂತೆ ಇಸ್ರೋ ಕೈಗೊಂಡ ಅನೇಕ ಪ್ರಯೋಗಗಳ ಉಸ್ತುವಾರಿ ವಹಿಸಿದ್ದರು. ಆದಾಗ್ಯೂ, ಜುಲೈ 14 ರಂದು ಅತ್ಯಂತ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯು ಅವರ ಕೊನೆಯ ಧ್ವನಿಯಾಗಿತ್ತು.ವಲರ್ಮತಿ ಅವರ ನಿಧಾನಕ್ಕೆ ಇಸ್ರೋ ವಿಜ್ಞಾನಿಗಳು ಕಂಬನಿ ಮಿಡಿದಿದ್ದಾರೆ.



ತಮಿಳುನಾಡಿನ ಅರಿಯಲೂರಿನಲ್ಲಿ 1959 ರಲ್ಲಿ ಜನಿಸಿದ ವಲರ್ಮತಿ ,1984 ರಿಂದ ಇಸ್ರೋ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.


ಇಸ್ರೋದಲ್ಲಿ ಉಡಾವಣೆಯಾದ ರಾಕೆಟ್ ಪ್ರಯೋಗಗಳ ಉಡಾವಣೆ ಕ್ಷಣಗಣನೆಯನ್ನು ಅವರು ಹೇಳುತ್ತಿದ್ದರು. ಹೀಗಾಗಿ ಆಕೆಯ ವಿಶಿಷ್ಟ ಧ್ವನಿ ದೇಶದ ಜನತೆಗೆ ಪರಿಚಿತವಾಯಿತು. ಅವರು 2015 ರಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಪಡೆದರು. ಇಸ್ರೋದಿಂದ ನಿವೃತ್ತರಾದ ಅವರು ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

Posted by Vidyamaana on 2023-11-20 07:40:32 |

Share: | | | | |


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು: ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣದಲ್ಲಿ ಈಗಾಗಲೇ ಐವರು ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಯನ್ನು ಪೊಲೀಸರು ಬಂದಿಸಿದ್ದಾರೆ. ಇನ್ನು ಪ್ರಕರಣದಲ್ಲಿ ನಿರ್ಲಕ್ಷ್ಯದ ಆರೋಪದಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳನ್ನು ಇಂಧನ ಇಲಾಖೆ ಅಮಾನತು ಮಾಡಿದ್ದು, ಮೃತರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.ಈ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಪ್ರತಿಕ್ರಿಯಿಸಿ, ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಹೋಪ್ ಫಾರ್ಮ್ ಬಳಿ ವಿದ್ಯುತ್ ಶಾಕ್‌ಗೆ ಒಬ್ಬ ಮಹಿಳೆ ಮತ್ತು ಒಂದು ಮಗು ಸಾವನ್ನಪ್ಪಿರುವ ದುರ್ದೈವದ ಘಟನೆ ನಡೆದಿದೆ. ಈ ದುರದೃಷ್ಟಕರ ಸಾವುಗಳಿಗೆ ಕಾರಣವಾದ ಘಟನೆಯ ಕುರಿತು ನಾವು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದೇವೆ. ಇದರ ವರದಿಯನ್ನು ಎದುರು ನೋಡುತ್ತಿದ್ದೇವೆ. ಈ ಅಪಘಾತಕ್ಕೆ ಕಾರಣರಾದ AE ಮತ್ತು AEE ಯನ್ನು ಅಮಾನತುಗೊಳಿಸಲಾಗಿದೆ ಮತ್ತು ಇದಕ್ಕೆ ಕಾರಣಾದವರು ಮತ್ತಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಐವರ ಬಂಧನ

ವಿದ್ಯುತ್‌ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಕಾಡುಗುಡಿ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯದ ಆರೋಪದಡಿ ಬೆಸ್ಕಾಂ ವೈಟ್‌ಫೀಲ್ಡ್‌ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀರಾಮ್‌,ಅಸಿಸ್ಟೆಂಟ್‌ ಎಂಜಿನಿಯರ್‌ ಚೇತನ್‌, ಎಇಇ ಸುಬ್ರಮಣ್ಯ, ಜೂನಿಯರ್‌ ಎಂಜಿನಿಯರ್‌ ರಾಜಣ್ಣ ಹಾಗೂ ಸ್ಟೇಷನ್‌ ಆಪರೇಟರ್ ಮಂಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.


ಇಬ್ಬರ ಸಾವಿಗೆ ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ?


ವಿದ್ಯುತ್‌ ತಗುಲಿ ತಾಯಿ-ಮಗು ಮೃತಪಡಲು ಬಿಎಂಟಿಸಿ ಬಸ್ ಡ್ರೈವರ್ ಕೂಡ ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಗ್ನಲ್ ಬಿದ್ದಿದೆ ಎಂದು ಘಟನೆ ನಡೆದಿದ್ದ ಸ್ಥಳದಲ್ಲಿ ಬಸ್ ಚಾಲಕ ಡೋರ್ ಓಪನ್ ಮಾಡಿದ್ದ. ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಬಸ್ ನಿಲ್ದಾಣವಿತ್ತು. ಆದರೂ ಮೊದಲೇ ನಿಲ್ಲಿಸಿದ್ದರಿಂದ ತಾಯಿ-ಮಗು ಇಳಿದು ನಡೆದುಕೊಂಡು ಹೋಗಿದ್ದರಿಂದ ವಿದ್ಯುತ್‌ ತಂತಿ ತುಳಿದು ದರಂತಕ್ಕೆ ಕಾರಣವಾಗಿದೆ. ಹೀಗಾಗಿ ಬಸ್‌ ಚಾಲಕನ ವಿರುದ್ಧವೂ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.


ನ್ಯಾಯಕ್ಕಾಗಿ ಆಗ್ರಹಿಸಿ ಸಂಬಂಧಿಕರ ಪ್ರತಿಭಟನೆ


ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿಗೀಡಾದ್ದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮೃತರ ಕುಟುಂಬಸ್ಥರು, ಸ್ಥಳೀಯರು ಕಾಡುಗುಡಿಯಲ್ಲಿ ಪ್ರತಿಭಟನೆ ನಡೆಸಿದರು. ಬೆಸ್ಕಾಂಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ನ್ಯಾಯಕ್ಕಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದರು. ಇದರಿಂದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು.ರಸ್ತೆಯಲ್ಲಿ ಬಿದ್ದ ವಿದ್ಯುತ್‌ ತಂತಿ ಮೆಟ್ಟಿ ತಾಯಿ-ಮಗು ಸುಟ್ಟು ಕರಕಲು


ಬೆಂಗಳೂರು: ಬೆಳ್ಳಂಬೆಳಗ್ಗೆಯೇ ರಾಜಧಾನಿಯಲ್ಲಿ ಅತ್ಯಂತ ಆತಂಕಕಾರಿ ಮತ್ತು ಹೃದಯ ಹಿಂಡುವ ಘಟನೆ ನಡೆದಿದೆ. ತನ್ನ ಪುಟ್ಟ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ವಿದ್ಯುತ್‌ ಆಘಾತಕ್ಕೆ (Electricuted) ಒಳಗಾಗಿ ಮಗುವಿನೊಂದಿಗೆ ಸುಟ್ಟು ಕರಕಲಾಗಿದ್ದಾರೆ (Mother and Child de

non

). ಬೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ (BESCOM Negligence) ಕ್ಕೆ ತಾಯಿ-ಮಗು ಬಲಿಯಾಗಿದ್ದಾರೆ.


ತಾಯಿ ಸೌಂದರ್ಯ ಮತ್ತು ಪುಟ್ಟ ಮಗಳು ಲಿಯಾ ಮೃತಪಟ್ಟ ದುರ್ದೈವಿಗಳು. ವೈಟ್‌ ಫೀಲ್ಡ್‌ ಸಮೀಪದ ಹೋಪ್ ಫಾರ್ಮ್ ಸರ್ಕಲ್‌ ಬಳಿ ದುರ್ಘಟನೆ ನಡೆದಿದೆ.


ಬೆಂಗಳೂರಿನಲ್ಲಿ ವಾಸವಾಗಿದ್ದ ಸೌಂದರ್ಯ ಅವರು ತಮ್ಮ ಪತಿ ಸಂತೋಷ್ ಮತ್ತು ಮಗುವಿನೊಂದಿಗೆ ತಮಿಳುನಾಡಿನ ತಾಯಿ ಮನೆಗೆ ಹೋಗಿದ್ದರು. ಶನಿವಾರ ರಾತ್ರಿ ಅವರು ಅಲ್ಲಿಂದ ಹೊರಟು ಬೆಳಗ್ಗೆ ಬೆಂಗಳೂರಿನ ವೈಟ್‌ ಫೀಲ್ಡ್‌ ಬಳಿ ಬಸ್ಸಿನಿಂದ ಇಳಿದಿದ್ದರು. ಬೆಳಗ್ಗೆ ಐದು ಗಂಟೆಯ ಹೊತ್ತಿಗೆ ಬಸ್ಸಿನಿಂದ ಇಳಿದು‌ ಸಂತೋಷ್‌, ಸೌಂದರ್ಯ ಪುಟ್ಟ ಮಗುವನ್ನು ಕಂಕುಳಲ್ಲಿಇಟ್ಟುಕೊಂಡು ಅವರು ವೈಟ್ ಫೀಲ್ಡ್ ಸಮೀಪದ ಓಫಾರ್ಮ್ ಸರ್ಕಲ್ ಬಳಿ ಮನೆ ಕಡೆಗೆ ಸಾಗುತ್ತಿದ್ದರು. ಅವರು ಎ.ಕೆ ಗೋಪಾಲ್ ಕಾಲೋನಿಯಲ್ಲಿ ವಾಸಿಸುತ್ತಿದ್ದರು.ಈ ವೇಳೆ ರಸ್ತೆ ಬದಿ ತುಂಡಾಡಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಅವರಿಗೆ ಕಾಣಿಸಲಿಲ್ಲ . ಕತ್ತಲಲ್ಲಿ ಅವರು ವಿದ್ಯುತ್‌ ತಂತಿಯನ್ನು ತುಳಿದಿದ್ದರು. ಮತ್ತು ಒಮ್ಮೆಗೇ ವಿದ್ಯುತ್‌ ಅವರ ದೇಹದಲ್ಲಿ ಪ್ರವಹಿಸಿ ತಾಯಿ ಮತ್ತು ಮಗು ಸ್ಥಳದಲ್ಲೇ ಸುಟ್ಟು ಕರಕಲಾಗಿ ಹೋಗಿದ್ದಾರೆ.

ಶ್ರೀನಿವಾಸ ಕಲ್ಯಾಣೋತ್ಸವ : ಡಿ.22 ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

Posted by Vidyamaana on 2023-12-22 10:19:49 |

Share: | | | | |


ಶ್ರೀನಿವಾಸ ಕಲ್ಯಾಣೋತ್ಸವ : ಡಿ.22 ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ  ಡಿ.24 ಮತ್ತು 25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22ರಂದು ಪುತ್ತೂರು ಪೇಟೆಯಲ್ಲಿ ಜರಗಲಿದೆ. 


ಡಿ.22 ಶುಕ್ರವಾರದಂದು ಸಂಜೆ 4.30 ಕ್ಕೆ ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ ಜರುಗಲಿದೆ. 


ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಂಧುಗಳು ಆಮಂತ್ರಣ ಪತ್ರ ವಿತರಣೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

Posted by Vidyamaana on 2023-04-27 11:52:58 |

Share: | | | | |


ಮೇನಾಲ : ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ..

ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರು ತೊಡಗಿಸಿಕೊಂಡಿದ್ದು ಎಲ್ಲಾ ನಾಯಕರು ವಿವಿಧ ಭಾಗಗಳಲ್ಲಿ ಅದ್ದೂರಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ನಮ್ಮ ಒಗ್ಗಟ್ಟನ್ನು ಕಂಡು ಬಿಜೆಪಿ ಕೊತಕೊತ ಕುದಿಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ಹೇಳಿದರು.

ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ೧೪ ಮಂದಿ ಟಕೆಟ್ ಆಕಾಂಕ್ಷಿಗಳು ಇದ್ದರೂ ಹೈಕಮಾಂಡ್ ಆಯ್ಕೆ ಮಾಡಿರುವ ಅಶೋಕ್ ರೈಯವ ರನ್ನು ಎಲ್ಲರೂ ಬೆಂಬಲಿಸಿ ಅವರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಈ ಬಾರಿಯ ಚುನಾವಣೆಯಲ್ಲಿ ಅಶೋಕ್ ರೈ ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ಮುಂದಿನ ಐದು ವರ್ಷದಲ್ಲಿ ಪುತ್ತೂರು ಅಭಿವೃದ್ದಿ ಕಾಣಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಶ್ರೀರಾಂ ಪಕ್ಕಳ , ಅಭ್ಯರ್ಥಿ ಅಶೋಕ್ ರೈ , ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು ಉಪಸ್ತಿತರಿದ್ದರು.



Leave a Comment: