ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಕೊಂಬೆಟ್ಟು ಕ್ರೀಡಾಂಗಣದಲ್ಲಿ ಗರಿಗೆದರಿದ ಸೇವಾ ಸೌರಭ – ಮೇರೆ ಮೀರಿದ ಸಂಭ್ರಮ

Posted by Vidyamaana on 2023-11-14 22:26:51 |

Share: | | | | |


ಕೊಂಬೆಟ್ಟು ಕ್ರೀಡಾಂಗಣದಲ್ಲಿ ಗರಿಗೆದರಿದ ಸೇವಾ ಸೌರಭ – ಮೇರೆ ಮೀರಿದ ಸಂಭ್ರಮ

ಪುತ್ತೂರು: ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಅವರು ಕೊಂಬೆಟ್ಟು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜ್ಯುಕೇಶಬಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ನಡೆದ ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ ‘ಸೇವಾ ಸೌರಭ’ವನ್ನು ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿದರು.


ಇದೊಂದು ಸೇವಾ ಸಂಭ್ರಮವಾಗಿದ್ದು, ಅತಿಥಿ ದೇವೋಭವ ಎಂಬ ಅರ್ಥ ಇಲ್ಲಿ ಸಂಪನ್ನಗೊಂಡಿದೆ. ಈ ನಿಟ್ಟಿನಲ್ಲಿ ಲೋಕದ ಜನರನ್ನು ಪ್ರೀತಿಯಿಂದ ಸೆಳೆದು ಅವರಲ್ಲಿ ಪ್ರೀತಿಯನ್ನು ತುಂಬಿಸುವ ಕೆಲಸ ಆಗಬೇಕಾಗಿ. ಆ ಕೆಲಸವನ್ನು ಟ್ರಸ್ಟ್ ರೂವಾರಿ ಅಶೋಕ್ ರೈ ಅವರಿಂದ ಆಗಿದೆ ಎಂದು ನುಡಿದರು.


ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಪುತ್ತೂರಿನ ಸಂಸ್ಕೃತಿಯ ಸಾರವನ್ನು ಎತ್ತಿಹಿಡಿದಿದೆ. ಸಾಂಸ್ಕೃತಿಯ ಸಾರ ಹೊಂದಿರುವ ಸ್ಥಾನವನ್ನು ದ.ಕ.ಜಿಲ್ಲೆ ಹೊಂದಿದ್ದು, ಅದನ್ನು ಪುತ್ತೂರಿನಲ್ಲಿ ಕಾಣುವಂತಾಗಿದೆ. ಜತೆಗೆ ಸ್ವಾಭಿಮಾನದ ಬದುಕು ಕಟ್ಟಿಕೊಂಡಿರುವ ಬಡ 20 ಮಂದಿಯನ್ನು ಸನ್ಮಾನಿಸಲಾಗಿದೆ ಎಂದ ಅವರು, ಕಂಬಳ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ಆಯೋಜಿಸಿ ಮತ್ತೊಮ್ಮೆ ಪುತ್ತೂರಿನ ಜನತೆಗೆ ಗೌರವ ತಂದು ಕೊಡುವ ಕೆಲಸ ಅಶೋಕ್ ರೈ ಅವರಿಂದ ಆಗಲಿದೆ. ಮುಂದೆ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಎಂದು ವಿನಂತಿಸಿದರು.


ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದೇವರು ಮೆಚ್ಚುವ ಕೆಲಸವನ್ನು ಅಶೋಕ್ ರೈಗಳು ಮಾಡುತ್ತಿದ್ದಾರೆ. ಶಾಸಕರಾಗಲು ದೇವರು ಅವರ ಜತೆ ನಿಂತಿದ್ದಾರೆ ಎಂದರು.


ರೈ ಏಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ತಂದೆ-ತಾಯಿ ಮಾಡಿಕೊಂಡ ಬಂದಿರುವ ವಸ್ತ್ರ ವಿತರಣೆಯನ್ನು ಸಂಪ್ರದಾಯವಾಗಿ ಮಾಡಿಕೊಂಡಿ ಬರುತ್ತಿದ್ದೇನೆ. ಮುಂದಿನ ದಿನಗಳಲ್ಲಿ 94ಸಿ, 94ಸಿಸಿ ಕಾನೂನು ರೀತಿಯಲ್ಲಿ ಭ್ರಷ್ಟಾಚಾರಮುಕ್ತವಾಗಿ ಪ್ರತಿಯೊಬ್ಬ ಫಲಾನುಭವಿಯ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಈಗಾಗಲೇ 600 ಮಂದಿ ಮಹಿಳೆಯರು ಮನೆಯಿಲ್ಲದೆ ನಿರ್ಗತಿಕರಾಗಿ ಬದುಕುತ್ತಿದ್ದಾರೆ. ಅವರಿಗೆ ಮೂರು ಸೆಂಟ್ಸ್ ಜಾಗ ನೀಡುವ ಕೆಲಸ ಮುಂದಿನ ದಿನಗಳಲ್ಲಿ ಆಗಲಿದೆ ಎಂದರು.


ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಟ್ರಸ್ಟ್ ಮುಖ್ಯಸ್ಥೆ ಸುಮಾ ಅಶೋಕ್ ರೈ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ , ಕೆಪಿಸಿಸಿ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಮಾಯಿದೇ ದೇವುಸ್‍ಚರ್ಚ್ ಧರ್ಮಗುರು ವಿ.ರೆ.ಫಾ.ಲಾರೆನ್ಸ್ ಮಸ್ಕರೇನಸ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಜ.ಹುಸೈನ್ ದಾರಿಮಿ ರೆಂಜಿಲಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೈ ಎಂ.ಬಿ., ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಟ್ರಸ್ಟ್ ನ ನಿಹಾಲ್ ರೈ, ಸುಬ್ರಹ್ಮಣ್ಯ ರೈ ದಂಪತಿ, ಡಾ.ರಘು ಬೆಳ್ಳಿಪ್ಪಾಡಿ, ಬೇಬಿ ಕುಂದರ್, ಪ್ರಗತಿಪರ ಕೃಷಿಕ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಜಿಪಂ ಮಾಜಿ ಸದಸ್ಯ ಎಂ.ಎಸ್‍.ಮಹಮ್ಮದ್, ಟ್ರಸ್ಟ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಕೃಷ್ಣ ಪ್ರಸಾದ್ ಬೊಲ್ಲಾವು ಉಪಸ್ಥಿತರಿದ್ದರು.

ಛತ್ತೀಸ್‌ಗಡದ ಡಾಕ್ಟರ್‌ಗೆ ಸಿಕ್ಕು 30 ವರ್ಷ ಹಳೆಯ 500 ರೂ ಎಸ್‌ಬಿಐ ಷೇರು; ಈಗದರ ಮೌಲ್ಯ ಎಷ್ಟು, ಎಕ್ಸ್ ಬಳಕೆದಾರರ ಕುತೂಹಲ

Posted by Vidyamaana on 2024-04-02 19:27:40 |

Share: | | | | |


ಛತ್ತೀಸ್‌ಗಡದ ಡಾಕ್ಟರ್‌ಗೆ ಸಿಕ್ಕು 30 ವರ್ಷ ಹಳೆಯ 500 ರೂ ಎಸ್‌ಬಿಐ ಷೇರು; ಈಗದರ ಮೌಲ್ಯ ಎಷ್ಟು, ಎಕ್ಸ್ ಬಳಕೆದಾರರ ಕುತೂಹಲ

ನವದೆಹಲಿ: ಮೂವತ್ತು ವರ್ಷಗಳ ಹಿಂದೆ 500 ರೂಪಾಯಿ ಮೌಲ್ಯದ ಎಸ್‌ಬಿಐ ಷೇರು ಖರೀದಿಸಿದ್ದರು ಆ ದಂಪತಿ. ಬಳಿಕ ಅದನ್ನು ಮರೆತುಬಿಟ್ಟಿದ್ದರು. ಅದು ಈಗ ಅವರ ಮೊಮ್ಮಗನ ಕೈ ಸೇರಿದೆ. ಅದನ್ನು ಡಿಮ್ಯಾಟ್‌ ಖಾತೆಗೆ ಪರಿವರ್ತಿಸಬೇಕಾಗಿದೆ ಎಂಬ ಸುದ್ದಿ ಎಕ್ಸ್‌ನಲ್ಲಿ ಗಮನಸೆಳೆದಿದೆ.ಇದು ಗಮನಸೆಳೆಯುತ್ತಿದ್ದಂತೆ, ಮೂವತ್ತು ವರ್ಷಗಳ ಹಿಂದೆ 500 ರೂಪಾಯಿ ಮೌಲ್ಯದ ಎಸ್‌ಬಿಐ ಷೇರು ಖರೀದಿಸಿದ್ದರೆ ಅದರ ಮೌಲ್ಯ ಇಂದು ಎಷ್ಟಾಗಿರುತ್ತಿತ್ತು? - ಹೀಗೊಂದು ಪ್ರಶ್ನೆ ಈಗ ಮೈಕ್ರೋಬ್ಲಾಗಿಂಗ್ ಸೈಟ್‌ ಎಕ್ಸ್‌ನಲ್ಲಿ ಗುಯಿಂಗುಡುತ್ತಿದೆ. ಇದಕ್ಕೆ ಕಾರಣವಾಗಿದ್ದು ಡಾಕ್ಟರ್ ಒಬ್ಬರು ಹಂಚಿಕೊಂಡ ಎಸ್‌ಬಿಐ ಷೇರು ಪ್ರತಿಯ ಫೋಟೋ ಮತ್ತು ಅವರು ನೀಡಿದ ವಿವರಣೆ!


ಪ್ರೋಸ್ಕೂಲ್ ಹೆಲ್ತ್‌ನ ಸಹಸಂಸ್ಥಾಪಕರಾಗಿರುವ ಪೀಡಿಯಾಟ್ರಿಕ್ ಸರ್ಜನ್‌ ಡಾ. ತನ್ಮಯ್‌ ಮೋತಿವಾಲಾ ಅವರೇ ಈ ರೀತಿ ಟ್ವೀಟ್ ಮಾಡಿರುವುದು. ಮಾರ್ಚ್‌ 28 ರಂದು ಅವರ ಮಾಡಿದ ಈ ಟ್ವೀಟ್‌ಗೆ ಬಹಳ ಸ್ಪಂದನೆ ಸಿಕ್ಕಿದ್ದು, 9 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. 156 ಸಲ ರೀಟ್ವೀಟ್ ಆಗಿದೆ. 2200ಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ. 330ಕ್ಕೂ ಹೆಚ್ಚು ಕಾಮೆಂಟ್‌ಗಳನ್ನು ಹೊಂದಿದೆ.

BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

Posted by Vidyamaana on 2024-06-06 16:46:38 |

Share: | | | | |


BREAKING: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ

ಬೆಂಗಳೂರು : ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿ ದೀಪಿಕಾ ನಾಪತ್ತೆ

Posted by Vidyamaana on 2024-05-08 23:09:00 |

Share: | | | | |


ವಿದ್ಯಾರ್ಥಿನಿ ದೀಪಿಕಾ ನಾಪತ್ತೆ

ಮಂಗಳೂರು, ಮೇ.8: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ನಡೆಯುತ್ತಿರುವಾಗಲೇ ನಾಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ನಾಪತ್ತೆಯಾದವಳು. 

ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆ್ಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೇ ವರ್ಷದಲ್ಲಿ ಕಲಿಯುತ್ತಿದ್ದ ದೀಪಿಕಾ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದಳು.

ಸ್ವಚ್ಛ ನರಹರಿಯತ್ತ ಸೇವಾಪಥದ ಚಿತ್ತ

Posted by Vidyamaana on 2023-06-26 12:23:12 |

Share: | | | | |


ಸ್ವಚ್ಛ ನರಹರಿಯತ್ತ ಸೇವಾಪಥದ ಚಿತ್ತ

ಬಂಟ್ವಾಳ: ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ನರಹರಿ ಶ್ರೀ ಸದಾಶಿವ ಪರ್ವತ ದೇವಸ್ಥಾನದಲ್ಲಿ ಎರಡನೇ ವರ್ಷದ ಶ್ರಮದಾನ ಹಾಗೂ ಸ್ವಚ್ಚತಾ ಅಭಿಯಾನ ಭಾನುವಾರ ನಡೆಯಿತು.

ಸ್ವಚ್ಛ ನರಹರಿಯತ್ತ ಸೇವಾಪಥದ ಚಿತ್ತ ಎಂಬ ಶೀರ್ಷಿಕೆಯಡಿಯಲ್ಲಿ ರವಿವಾರ ಬೆಳಗ್ಗೆ 7ರಿಂದ ಮದ್ಯಾಹ್ನ 1ರವರೆಗೆ ಸ್ವಚ್ಚತಾ ಕಾರ್ಯಕ್ರಮ ಜರಗಿದ್ದು, ಸುಮಾರು 80ಕ್ಕೂ ಅಧಿಕ ಸ್ವಯಂಸೇವಕರು ಭಾಗವಹಿಸಿದ್ದರು.

ಓಂ ಶ್ರೀ ಸಾಯಿಗಣೇಶ್ ಸೇವಾ ಟ್ರಸ್ಟ್ ಕಲ್ಲಡ್ಕ, ಯುವಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು, ಶ್ರೀ ಮಂತ್ರದೇವತಾ ಟ್ರಸ್ಟ್ ಅಮ್ಮೂರು, ಕೋಡಿ ಫ್ರೆಂಡ್ಸ್ ಸರ್ಕಲ್ ಕರಿಂಗಾಣ, ಕೆ.ಎಫ್.ಎಂ. ಮುಡಿಪು, ಹಿಂದೂ ಜನಸೇವಾ ಸಮಿತಿ ಬೊಂಡಾಲ ಕಲ್ಲಡ್ಕ, ಶಿವ ಛತ್ರಪತಿ ಫ್ರೆಂಡ್ಸ್ ಬಡೆಕೊಟ್ಟು, ಯುವಶಕ್ತಿ ಕಡೇಶಿವಾಲಯ ತಂಡಗಳು ಭಾಗವಹಿಸಿದ್ದವು.

ಲೋಕಸಭೆ ಚುನಾವಣೆ : ರಾಜ್ಯದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿ ಪ್ರಕಟ

Posted by Vidyamaana on 2024-04-21 19:57:57 |

Share: | | | | |


ಲೋಕಸಭೆ ಚುನಾವಣೆ : ರಾಜ್ಯದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆ-2024 ರ ಚುನಾವಣಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಪಟ್ಟಂತೆ ಚುನಾವಣಾ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಕಿರು ಹೊತ್ತಿಗೆಯ ಪ್ರತಿಯನ್ನು ವಿತರಿಸಿ ಸೂಕ್ತ ತಿಳುವಳಿಕೆಯನ್ನು ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಈ ಮೂಲಕ ಸೂಚಿಸಿದೆ.



Leave a Comment: