ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

Posted by Vidyamaana on 2023-12-14 17:39:51 |

Share: | | | | |


ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.


ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಸಕರಿಗೆ ಮೊಬೈಲ್ ಕರೆ ಮಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪೃವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

ಮಳೆಗಾಲದಲ್ಲಿ ರಸ್ತೆ ಬದಿ, ಕೆಲವು ಕಡೆಗಳಲ್ಲಿ ರಸ್ತೆ ಮಧ್ಯೆತನಕವೂ ಹುಲ್ಲು, ಪೊದೆಗಳು ಬೆಳೆಯುತ್ತದೆ, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ರಸ್ತೆ ಬದಿಯಲ್ಲಿರುವ ಪೊದೆಗಳನ್ನು ತೆರವು ಮಾಡುವಂತೆ ನಗರಸಭೆಗೆ ಸೂಚನೆ ನೀಡಿದ್ದೇನೆ, ನಗರಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲೂ ತೆರವು ಕಾರ್ಯಾಚರಣೆ ನಡೆಯಲಿದೆ.

ಅಶೋಕ್‌ರೈ ಶಾಸಕರು ಪುತ್ತೂರು

ಸುಳ್ಯ | ವಿದ್ಯುತ್ ಲೈನ್‌ ದುರಸ್ತಿ ವೇಳೆ ಲೈನ್ ಆನ್ ಮಾಡಲು ಪ್ರಯತ್ನಿಸಿದ ಆರೋಪ: ಯುವಕ ಸೆರೆ

Posted by Vidyamaana on 2024-05-31 05:18:10 |

Share: | | | | |


ಸುಳ್ಯ | ವಿದ್ಯುತ್ ಲೈನ್‌ ದುರಸ್ತಿ ವೇಳೆ ಲೈನ್ ಆನ್ ಮಾಡಲು ಪ್ರಯತ್ನಿಸಿದ ಆರೋಪ: ಯುವಕ ಸೆರೆ

ಸುಳ್ಯ : ವಿದ್ಯುತ್ ಲೈನ್ ದುರಸ್ತಿ ನಡೆಸುತ್ತಿದ್ದ ವೇಳೆ ಯುವಕನೊಬ್ಬ ಲೈನ್ ಆನ್ ಮಾಡಲು ಯತ್ನಿಸಿದ ಘಟನೆ ಪಂಜದ ಕರಿಕ್ಕಳದಲ್ಲಿ ನಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪಂಜದ ಮೆಸ್ಕಾಂ ಇಲಾಖೆಯ ಸಿಬ್ಬಂದಿ ಕರಿಕ್ಕಳ ಸಮೀಪ ವಿದ್ಯುತ್ ಲೈನ್‍ಗೆ ತಾಗುತ್ತಿದ್ದ ಮರದ ಗೆಲ್ಲನ್ನು ತೆಗೆಯಲೆಂದು ಜೆ.ಒ.ಸಿ ಆನ್ ಮಾಡಿ ಯಾರು ಆಫ್ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಕೆಲವು ಸಿಬ್ಬಂದಿ ಕೆಲಸ ಮಾಡುತ್ತಿದ್ದರು.

ಉದಯನಿಧಿ ಸ್ಟಾಲಿನ್​ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತರಾಟೆ

Posted by Vidyamaana on 2023-09-07 20:51:31 |

Share: | | | | |


ಉದಯನಿಧಿ ಸ್ಟಾಲಿನ್​ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತರಾಟೆ

ಮೈಸೂರು: ಧರ್ಮದ ಬಗ್ಗೆ ತಿಳಿದುಕೊಂಡವರು ಮಾತನಾಡುವುದಿಲ್ಲ. ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆ, ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಉದಯನಿಧಿ ಸ್ಟಾಲಿನ್​ಗೆ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡರು.ನಾಡಾಳುವ ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಮಾತನಾಡಿದ ಸ್ವಾಮೀಜಿಯವರು, ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ…! ಮಹಾಭಾರತದ ಸಂದೇಶ ಉಲ್ಲೇಖಿಸಿ ಟಾಂಗ್ ಕೊಟ್ಟರು.


ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿ ಮಾತನಾಡಬೇಕು. ಬಳಸುವ ಪದಗಳ ಬಗ್ಗೆ ನಿಗಾ ಇರಬೇಕು ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.ಹಿಂದೂ ಧರ್ಮದ ಪರ ಹೋರಾಟದ ಸುಳಿವು ನೀಡಿದ ಸ್ವಾಮೀಜಿಯವರು, ಇದೇ ವಿಚಾರಕ್ಕೆ ಪ್ರತ್ಯೇಕವಾಗಿ ಸಭೆ ಕರೆಯುವ ಅನಿವಾರ್ಯತೆ ಬರಬಹುದು. ಬಂದಾಗ ಅದನ್ನು ಮುಖ್ಯವಾಗಿ ಚರ್ಚಿಸೋಣ ಎಂದರು. ಆದರೆ ಮುಂತಾದಾಳತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವಹಿಸಿದರು.


ಭಾರತ ಮರುನಾಮಕರಣ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಇಂಗ್ಲಿಷ್​ನಲ್ಲಿ ಇಂಡಿಯಾ, ಹಿಂದಿಯಲ್ಲಿ ಭಾರತ ಅಂತ ಬಳಸುತ್ತಿದ್ದೇವೆ. ಈ ಚರ್ಚೆ ಯಾವಾಗ, ಹೇಗೆ ಶುರುವಾಯ್ತು ಗೊತ್ತಿಲ್ಲ. ಹಿಂದಿ, ಕನ್ನಡದಲ್ಲಿ ಬರೆಯುವಾಗ ಭಾರತ ಸರ್ಕಾರ ಎಂದೇ ಬರೆಯುತ್ತೇವೆ. ಕೆಲವೊಮ್ಮೆ ಇಂಡಿಯನ್​ ಗವರ್ನಮೆಂಟ್ ಎಂದು ಬಳಸುತ್ತೇವೆ. ಕೇಂದ್ರ ಸರ್ಕಾರವೇ ಮರುನಾಮಕರಣ ಚರ್ಚೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಚರ್ಚೆ ಅನಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಮೈಸೂರಿನಲ್ಲಿ ಚುಂಚಶ್ರೀ ಹೇಳಿಕೆ ನೀಡಿದರು.

ಸುರತ್ಕಲ್: ವಾಹನ ಕಳ್ಳರ ಬಂಧನ ವಾಹನಗಳ ಜಪ್ತಿ ಪ್ರಕರಣ

Posted by Vidyamaana on 2023-07-25 09:59:16 |

Share: | | | | |


ಸುರತ್ಕಲ್: ವಾಹನ ಕಳ್ಳರ ಬಂಧನ ವಾಹನಗಳ ಜಪ್ತಿ ಪ್ರಕರಣ

ಮಂಗಳೂರು: ಮಂಗಳೂರು ಹಾಗೂ ಆಸುಪಾಸು ವಾಹನ ಕದಿಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ತಂಡ ಯಶಸ್ವಿಯಾಗಿದೆ.

ಆರೋಪಿಯನ್ನು ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕಳವುಗೈದ ವಾಹನಗಳ ಮೊತ್ತು ಸುಮಾರು 15.50 ಲಕ್ಷ ರೂ. ಮೌಲ್ಯ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಘಟನೆಯ ವಿವರ:

2023ರ ಜುಲೈ 12ರಂದು ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ `ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕಛೇರಿಯ ಗ್ಲಾಸ್ ನ ಡೋರನ್ನು ಸುತ್ತಿಗೆಯಿಂದ ಜಖಂಗೊಳಿಸಿ ಸಂಪೂರ್ಣ ಪುಡಿ ಮಾಡಿ ಒಳಪ್ರವೇಶಿಸಿ ಕಛೇರಿಯೊಳಗೆ ಟೇಬಲ್ ಮೇಲೆ ಇದ್ದ ಒನ್ ಪ್ಲಾಸ್ ಮೊಬೈಲ್ ಫೋನ್ HP ಕಂಪೆನಿಯ ಲ್ಯಾಪ್ ಟಾಪ್ ಹಾಗೂ HP ಕಂಪಿನಿಯ ಪ್ರಿಂಟರ್ ಹಾಗೂ ಶೋರೂಂನ ಪಾರ್ಕ ನಲ್ಲಿ ನಿಲ್ಲಿಸಿದ ಕ್ರೆಟಾ ಹಾಗೂ ಸ್ವಿಫ್ಟ್ ಕಾರನ್ನು ಕಳವು ಮಾಡಿದ್ದರು. ಈ ಬಗ್ಗೆ ಕಾರ್ ಮಾರ್ಟ್ ಮಾಲಕರಾದ ಅಬೀದ್ ಅಹಮ್ಮದ್ ಸೂರಲ್ಪಾಡಿ ಅವರು ದೂರು ನೀಡಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಬಂಧನ, ಸೊತ್ತು ವಶ:

ಜುಲೈ 22ರಂದು ಅಪ್ರಾಪ್ತ ಬಾಲಕನಿಂದ ಕಳವಾದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಆತ ನೀಡಿದ ಮಾಹಿತಿಯಂತೆ ಮಂಗಳೂರು ತಾಲೂಕಿನ ಕಿನ್ನಿಪದವು ನಿವಾಸಿ ಸುಮಾರು 21 ವರ್ಷದ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂಬಾತನು ದ್ವಿ ಚಕ್ರದಲ್ಲಿ ಬರುವಾಗ ಮರಕಡ ಬಸ್ ನಿಲ್ದಾಣದ ಬಳಿ ಬಂಧಿಸಿ, ಆತನು ತೋರಿಸಿಕೊಟ್ಟಂತ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿಯಲ್ಲಿ ಕ್ರೆಟಾ ಕಾರನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸುತ್ತಿಗೆ, ಕೃತ್ಯದ ಸಮಯ ತಲೆಗೆ ದರಿಸಿ, ಹೆಲೈಟ್ ಮೈ ಮೇಲೆ ಧರಿಸಿದ ರೈನ್ ಕೋಟ್, ಕೈಗೆ ಧರಿಸಿದ ಗೌಸ್, ಮುಖಕ್ಕೆ ಹಾಕಿದ ಮಾಸ್ಕ್ ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಒಂದು ವರ್ಷದ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯ ಹೆಸರುಗದ್ದೆ ಎಂಬಲ್ಲಿ ಮನೆಯಿಂದ ಕಳತನ ಮಾಡಿದ ದ್ವಿ ಚಕ್ರ ವಾಹನವನ್ನು ಇದೇ ಸಂದರ್ಭ ಆತನಿಂದ ವಶಪಡಿಸಿಕೊಳ್ಳಲಾಯಿತು ಎಂದು ಹೇಳಲಾಗಿದೆ.

ಪೊಲೀಸ್ ತಂಡ:

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್ ಮತ್ತು ಬಿ.ಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಪಿಎಸ್ಐಗಳಾದ ರಘು ನಾಯಕ್, ಅರುಣ್ ಕುಮಾರ್, ಎಎಸ್ಐ, ತಾರನಾಥ ಹೆಡ್ ಕಾನ್ಸಟೇಬಲ್ ಗಳಾದ ಅಣ್ಣಪ್ಪ, ಉಮೇಶ್, ಕಾನ್ಸಟೇಬಲ್ ಗಳಾದ ಕಾರ್ತೀಕ್, ಸುನೀಲ್, ಮಂಜುನಾಥ, ನಾಗರಾಜ ಇದ್ದರು.

ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

Posted by Vidyamaana on 2023-06-13 03:37:13 |

Share: | | | | |


ನಕಲಿ ಪೇಪರ್ ಕಟ್ಟಿಂಗ್: ಸ್ಪೀಕರ್ ಖಾದರ್ ಸ್ಪಷ್ಟನೆ

ಮಂಗಳೂರು: ಸ್ಪೀಕರ್ ಯು.ಟಿ. ಖಾದರ್ ಅವರದ್ದು ಎನ್ನಲಾದ ಹೇಳಿಕೆಯ ಪೇಪರ್ ಕಟ್ಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

. ನಕಲಿ ಸೃಷ್ಟಿಸಿ ಅಪಪ್ರಚಾರ ಮಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು‌ ರವಾನಿಸಿದ್ದಾರೆ‌

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೋಮು ಸಂಘರ್ಷಕ್ಕೆ ಪ್ರಚೋದನೆ ಎಂದು ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

ನೀವಿರುವ ವಾಟ್ಸಾಪ್ ನಲ್ಲಿ ಈ ಪೇಪರ್ ಕಟ್ಟಿಂಗ್ ಬಂದರೆ ಅವರ ಫೋನ್ ನಂಬರ್ ಕಾಣುವಂತೆ screen shot ತೆಗೆದು 9343346439 ನ ವಾಟ್ಸಾಪ್ ಗೆ ಕಳುಹಿಸುವಂತೆ ಕಾಂಗ್ರೇಸ್ ನ ಕಾನೂನು ಘಟಕ ಮನವಿ ಮಾಡಿದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

ಏನಿದೆ ಪೇಪರ್ ಕಟ್ಟಿಂಗ್ ನಲ್ಲಿ..?

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಅನುದಾನ ತಸ್ತೀಕ್ ರೂಪದಲ್ಲಿ ಮಸೀದಿಗಳಿಗೆ ಹೋಗುವುದನ್ನು ತಡೆದ ಬಿಜೆಪಿ ಸರ್ಕಾರದ ಕ್ರಮಕ್ಕೆ ಶಾಸಕ ಮತ್ತು ಮಾಜಿ ಮಂತ್ರಿ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಲ್ಲಿ ಶುಕ್ರ ವಾರ ಮಾತನಾಡಿದ ಅವರು, ಜನರನ್ನು ಧರ್ಮದ ಹೆಸರಿನ ಮೇಲೆ ವಿಭಜಿಸುವ ಸರ್ಕಾರದ ಹುನ್ನಾರ ಇದಾಗಿದೆ. ಮುಜರಾಯಿ ಇಲಾಖೆ ಅನುದಾನ ಮಸೀದಿಗಳಿಗೆ ಹೋಗುವುದನ್ನು ತಡೆದಿರುವ ಕುರಿತಾದ ಗೊಂದಲ ನಿವಾರಿಸುವಂತೆ ಒತ್ತಾಯಿಸಿದರು. ಮುಜರಾಯಿ ಇಲಾಖೆ ಸ್ವಾಮ್ಯಕ್ಕೆ ಒಳಪಟ್ಟ ಮಂದಿರದ ಹುಂಡಿಯಲ್ಲಿನ ಹಣವನ್ನು ಆಯಾ ಮಂದಿರಕ್ಕಾಗಿ ಬಳಸಿಕೊಳ್ಳತಕ್ಕದ್ದು ಎಂದು ನಿಯಮವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಕ್ರಮ ಅಸಮಂಜಸದಿಂದ ಕೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಶಾಸಕ ರಹೀಮ್ ಖಾನ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.


ಎಂಬ ಪೇಪರ್ ಕಟ್ಟಿಂಗ್ ಹರಿದಾಡುತ್ತಿದೆ. ಇಂತಹ ಹೇಳಿಕೆಯೂ ನೀಡಿಲ್ಲ ಎಂದು ಯುಟಿ ಖಾದರ್ ಸ್ಪಷ್ಟ ಪಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

Posted by Vidyamaana on 2024-06-26 19:19:30 |

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.



Leave a Comment: