ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತಾ ಮೃತ್ಯು

Posted by Vidyamaana on 2023-06-19 15:41:03 |

Share: | | | | |


ಕಾರ್ಕಳ: ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸಹಸವಾರೆ ನಿರ್ಮಿತಾ ಮೃತ್ಯು

ಕಾರ್ಕಳ: ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಬೆನ್ನಲ್ಲೇ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರೆ ಮೃತಪಟ್ಟಿದ್ದಾರೆ.

ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ ಬಾರ್ಕೂರು ನಿವಾಸಿ ಶಶಾಂಕ್ (21) ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಸಹಸವಾರ ನಿರ್ಮಿತಾ(19) ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ .ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದರು. ಖಾಸಗಿ ಬಸ್ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿತ್ತು.

ಇನ್ನು ಶಶಾಂಕ್ ಸಹಿತ ಒಂದೇ ಕುಟುಂಬದ 6 ಮಂದಿ ಮೂರು ಬೈಕ್‌ನಲ್ಲಿ ಭಾನುವಾರ ಬೆಳಗ್ಗೆ ಶಶಾಂಕ್ ಅವರ ಜತೆ ಹಿಂಬದಿ ಸವಾರರಾಗಿ ಅಕ್ಕನ ಮಗಳು ನಿರ್ಮಿತಾ ಕುಳಿತಿದ್ದರು. ಅವರು ದ್ವಿತೀಯ ಪಿಯುಸಿ ಮುಗಿಸಿ ಪದವಿ ಕಾಲೇಜಿಗೆ ಸೇರಿದ್ದರು ಎಂದು ತಿಳಿದು ಬಂದಿದೆ.

8ನೇ ಸುತ್ತಿನ ಫಲಿತಾಂಶ ಮುನ್ನಡೆಯಲ್ಲಿ ಪುತ್ತಿಲ ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

Posted by Vidyamaana on 2023-05-13 05:59:37 |

Share: | | | | |


8ನೇ ಸುತ್ತಿನ ಫಲಿತಾಂಶ  ಮುನ್ನಡೆಯಲ್ಲಿ ಪುತ್ತಿಲ  ರೈಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪುತ್ತಿಲ

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ – 31670, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ – 32,226 ಮತ ಪಡೆದಿದ್ದಾರೆ.


ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಪಡೆದಿದ್ದಾರೆ.


ಅಶೋಕ್ ರೈ – 31670 ಮತಗಳು


ಆಶಾ ತಿಮ್ಮಪ್ಪ ಗೌಡ – 20,126 ಮತಗಳು


ಅರುಣ್ ಕುಮಾರ್ ಪುತ್ತಿಲ – 32,226 ಮತಗಳು

ಮುಂಗಾರಿನ ಸಂಭ್ರಮಕ್ಕೆ ಮುಳಿಯ ಬಂಗಾರ ದ ಶೃಂಗಾರ

Posted by Vidyamaana on 2023-07-25 11:42:05 |

Share: | | | | |


ಮುಂಗಾರಿನ ಸಂಭ್ರಮಕ್ಕೆ ಮುಳಿಯ ಬಂಗಾರ ದ ಶೃಂಗಾರ

ಪುತ್ತೂರು: ಪಾರಂಪರಿಕ ಹಾಗೂ ಆಧುನಿಕ ಶೈಲಿಯ ಚಿನ್ನಾಭರಣಗಳಿಗೆ ಹೆಸರುವಾಸಿಯಾಗಿರುವ ಜಿಲ್ಲೆಯ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್, ಪ್ರತಿ ಬಾರಿಯೂ ವಿಶೇಷ ಆಫರ್ ಗಳೊಂದಿಗೆ ಗ್ರಾಹಕರ ಮುಂದೆ ಬರುತ್ತಿದೆ.

ಈ ಬಾರಿಯ ಮುಂಗಾರಿಗೆ ಸಿಂಚನ ನೀಡುವಂತೆ ಮುಳಿಯ ಮಾನ್ಸೂನ್ ಧಮಾಕವನ್ನು ಗ್ರಾಹಕರ ಮುಂದಿರಿಸಿದೆ. ಸೋಮವಾರದಿಂದ ಅಂದರೆ ಜುಲೈ 24ರಿಂದ ಮುಳಿಯ ಮಾನ್ಸೂನ್ ಧಮಾಕ ಆರಂಭಗೊಂಡಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ದೊರಕಿದೆ.

ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದಲೇ ಗ್ರಾಹಕರಿಗೆ ಹೊಸತನದ ಟಚ್ ನೀಡಲು ಮುಳಿಯ ವಿಶೇಷ ಆಫರ್ ಗಳನ್ನು ಗ್ರಾಹಕರ ಮುಂದಿರಿಸಿದೆ. ಮುಳಿಯದ ಪುತ್ತೂರು ಹಾಗೂ ಬೆಳ್ತಂಗಡಿಯ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಗ್ರಾಹಕರು, ತಮ್ಮ ಹಳೆಯ ಚಿನ್ನಾಭರಣವನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ. ಅಧಿಕ ಲಾಭ ಪಡೆಯಬಹುದು.

ವಿಎ ಚಾರ್ಜಸ್ ಮೇಲೆ ಶೇ. 50ರಷ್ಟು ಹಾಗೂ ವಜ್ರದ ಮೌಲ್ಯದ ಮೇಲೆ ಶೇ. 10ರವರೆಗೆ ಕಡಿತ ಕಡಿತ ನೀಡಲಾಗಿದೆ. ಬೆಳ್ಳಿ ಆಭರಣಗಳ ಮೇಲೆಯೂ ಶೇ. 5ರವರೆಗೆ ರಿಯಾಯಿತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ ಮುಳಿಯ ಜ್ಯುವೆಲ್ಸಿನ ಕೋರ್ಟ್ ರೋಡಿನಲ್ಲಿರುವ ಪುತ್ತೂರು ಶಾಖೆ : 9379202916, ಬೆಳ್ತಂಗಡಿ ಮುಖ್ಯರಸ್ತೆಯ ಮಳಿಗೆ: 9343004916ನ್ನು ಸಂಪರ್ಕಿಸಬಹುದು.

ಗ್ಯಾಸ್ ಸಂಪರ್ಕಕ್ಕೆ ಕೆವೈಸಿ: ಇಲಾಖೆಯಿಂದ ಸ್ಪಷ್ಟೀಕರಣ

Posted by Vidyamaana on 2023-12-21 16:36:14 |

Share: | | | | |


ಗ್ಯಾಸ್ ಸಂಪರ್ಕಕ್ಕೆ ಕೆವೈಸಿ: ಇಲಾಖೆಯಿಂದ ಸ್ಪಷ್ಟೀಕರಣ

ಉಡುಪಿ: ಮನೆಯ ಅನಿಲ ಸಂಪರ್ಕಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಂತೆ ಡಿ.31ರೊಳಗೆ ಅನಿಲ ಸಂಪರ್ಕ ಇದ್ದವರು ಆಧಾರ ಸಂಖ್ಯೆಯೊಂದಿಗೆ ಕೆವೈಸಿ ಮಾಡಿಸಬೇಕು. ಇದರಿಂದ ಜ.1ರಿಂದ ಸಬ್ಸಿಡಿ (903ರಿಂದ 500ಕ್ಕೆ) ಸಿಗುತ್ತದೆ.ಇಲ್ಲದಿದ್ದರೆ ಸಬ್ಸಿಡಿ ರಹಿತವಾಗಿ ಸಂಪರ್ಕ ಕಮರ್ಷಿಯಲ್ ಆಗಿ ಮಾರ್ಪಟ್ಟು ಸಿಲಿಂಡರ್‌ಗೆ 1400ರೂ. ನೀಡ ಬೇಕಾಗುತ್ತದೆ ಎಂಬುದೇ ಈ ಸಂದೇಶವಾಗಿತ್ತು.


ಈ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವಂತೆ ಜನರು ಗ್ಯಾಸ್ ಪಡೆದ ಎಜೆನ್ಸಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ತೆರಳಿ ಕೈವೈಸಿ ಮಾಡಿಸಲು ಧಾವಿಸಿದ್ದು, ಅಂಗಡಿ ಮುಂದೆ ನೂಕುನುಗ್ಗಲು ಉಂಟಾಗುತ್ತಿದೆ. ಜನರು ಉದ್ದನೆ ಕ್ಯೂನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. 


ಈ ಬಗ್ಗೆ ಉಜ್ವಲ ಯೋಜನೆಯ ನೋಡಲ್ ಅಧಿಕಾರಿ ರಾಹುಲ್ ಅವರನ್ನು ಸಂಪರ್ಕಿಸಿ ವೈರಲ್ ಆಗಿರುವ ಸಂದೇಶದ ಕುರಿತು ಪ್ರಶ್ನಿಸಿದಾಗ, ಅದೊಂದು ಫೇಕ್ ಸುದ್ದಿ ಎಂದು ತಳ್ಳಿ ಹಾಕಿದರು. ಕೆವೈಸಿ ಮಾಡಿರುವವರಿಗೆ ಸಬ್ಸಿಡಿ ಮತ್ತೆ ನೀಡುವ ಹಾಗೂ ಮಾಡಿಸದಿದ್ದವರಿಗೆ ಸಿಲಿಂಡರ್ ಒಂದರ ದರ ಹೆಚ್ಚಾಗುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದರು.


ಕೇಂದ್ರದ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ದಿಂದ ಬಂದಿರುವ ನೋಟಿಫಿಕೇಷನ್‌ನಲ್ಲಿ ಕೇಂದ್ರ ಸರಕಾರದ ಉಜ್ವಲ (ಪಿಎಂಯುವೈ) ಹಾಗೂ ಪಹಲ್ (ಪಿಎಎಚ್‌ಎಎಲ್) ಯೋಜನೆಯ ಫಲಾನುಭವಿಗಳ ಗ್ಯಾಸ್ ಸಂಪರ್ಕವನ್ನು ಆಧಾರ್ ದೃಢೀಕರಣದೊಂದಿಗೆ ಆದ್ಯತೆಯ ನೆಲೆಯಲ್ಲಿ ಕೆವೈಸಿ ಮಾಡುವ ಸೂಚನೆ ಮಾತ್ರ ಇದ್ದು ಬೇರೆ ಯಾವುದೇ ಪ್ರಸ್ತಾಪವೂ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 


ಗ್ಯಾಸ್ ಸಂಪರ್ಕ ಹೊಂದಿರುವವರೆಲ್ಲರೂ ಕೈವೈಸಿ ಮಾಡಿಸಬೇಕು. ಆದರೆ ಅವರಿಗೆ ಯಾವುದೇ ಸಮಯವನ್ನು ನಿಗದಿ ಪಡಿಸಿಲ್ಲ. ಕೊನೆಯ ದಿನವನ್ನೂ ತಿಳಿಸಿಲ್ಲ. ಸಬ್ಸಿಡಿ ಮತ್ತೆ ನೀಡುವ ಪ್ರಸ್ತಾಪವಂತೂ ಇಲ್ಲವೇ ಇಲ್ಲ. ಈಗ ಉಜ್ವಲ ಫಲಾನು ಭವಿಗಳನ್ನು ಹೊರತು ಪಡಿಸಿ ಬೇರೆ ಯಾರಿಗೂ ಅನಿಲದ ಸಿಲಿಂಡರ್‌ನಲ್ಲಿ ಸಬ್ಸಿಡಿ ಸಿಗುತ್ತಿಲ್ಲ. ಹೀಗಾಗಿ ಬಳಕೆದಾರರು ಗೊಂದಲಕ್ಕೊಳ ಗಾಗಬಾರದು ಎಂದು ಅವರು ತಿಳಿಸಿದರು.

ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್… ವಾಹನ ಸವಾರರ ಪರದಾಟ

Posted by Vidyamaana on 2024-04-04 11:36:21 |

Share: | | | | |


ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್… ವಾಹನ ಸವಾರರ ಪರದಾಟ

ಚಿಕ್ಕಮಗಳೂರು :ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಇಂದು ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪದ್ಮರಾಜ್ ರಾಮಯ್ಯಗೆ ಕಾಂಗ್ರೆಸ್ ಟಿಕೆಟ್

Posted by Vidyamaana on 2024-03-21 21:55:06 |

Share: | | | | |


ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪದ್ಮರಾಜ್ ರಾಮಯ್ಯಗೆ ಕಾಂಗ್ರೆಸ್ ಟಿಕೆಟ್

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಅವರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಆಯ್ಕೆ ಮಾಡಿದೆ.

ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಕ್ರೀಯರಾಗಿರುವ ಪದ್ಮರಾಜ್, ಪಕ್ಷ ಸಂಘಟನೆಯ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜೊತೆ ಕೆಲಸ ಮಾಡುತ್ತಾ ಬಹುಸಂಖ್ಯಾತ ಬಿಲ್ಲದ ಸಮುದಾಯದ ಮತಗಳನ್ನು ಕ್ರೋಢಿಕರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಹುಸಂಖ್ಯಾತ ಬಿಲ್ಲವರು ಮತ್ತು ಆರ್ಥಿಕವಾಗಿ ಹಿಂದುಳಿದವರ ಮತಗಳನ್ನು ಸೆಳೆಯುವ ಶಕ್ತಿ ಪದ್ಮರಾಜ್ ಅವರಲ್ಲಿದೆ ಎಂಬ ಕಾರಣಕ್ಕೆ ಅವರಿಗೆ ಅವಕಾಶ ಒದಗಿ ಬಂದಿದೆ ಎನ್ನಲಾಗುತ್ತಿದೆ. 2024ರ ಲೋಕಸಭಾ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ವರ್ಷದ ಹಿಂದೆ ಪದ್ಮರಾಜ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

Recent News


Leave a Comment: