ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

Posted by Vidyamaana on 2023-08-23 07:16:06 |

Share: | | | | |


ನೀರಾವರಿ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರು ಭಾಗವಹಿಸಿದ್ದರು.


ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಪಾಲ್ಗೊಂಡಿದ್ದರು.


ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ದೇವೇಗೌಡ ಮತ್ತು ಎಸ್.ಎಂ. ಕೃಷ್ಣ ಸಭೆಗೆ ಗೈರಾಗಿದ್ದರೆ, ರಾಜ್ಯವನ್ನು ಪ್ರತಿನಿಧಿಸುವ ಆರು ಕೇಂದ್ರ ಸಚಿವರು ಕೂಡಾ ಸಭೆಯಿಂದ ದೂರ ಉಳಿದಿದ್ದರು

ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎಬಿವಿಪಿ ಪ್ರತಿಭಟನೆ ; ವಿದ್ಯಾರ್ಥಿ ಹಾಗೂ ಪೊಲೀಸರ ನಡುವೆ ಘರ್ಷಣೆ

Posted by Vidyamaana on 2023-09-09 13:25:34 |

Share: | | | | |


ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ  ವಿರೋಧಿಸಿ ಎಬಿವಿಪಿ ಪ್ರತಿಭಟನೆ ; ವಿದ್ಯಾರ್ಥಿ ಹಾಗೂ ಪೊಲೀಸರ ನಡುವೆ ಘರ್ಷಣೆ

ಮಂಗಳೂರು: ದೆಹಲಿ ವಿವಿ ನಿವೃತ್ತ ಪ್ರೊಫೆಸರ್ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ಉಪನ್ಯಾಸ ವಿರೋಧಿಸಿ ಮಂಗಳೂರು ವಿವಿ  ಕಾಲೇಜಿಗೆ ಎಬಿವಿಪಿ ಮುತ್ತಿಗೆ ಹಾಕಲು ಯತ್ನಿಸಿದೆ. ಹಂಪನಕಟ್ಟೆ ಬಳಿಯ ಮಂಗಳೂರು ವಿವಿಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಗೇಟ್ ಬಳಿ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.


ಪ್ರತಿಷ್ಠಾನ ದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 - ಜಂಟಿ ಬಲದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟಿಸುತ್ತಿದ್ದಾರೆ.


ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ ಶಂಸುಲ್‌ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ ಎಂದಿದ್ದಕ್ಕೆ ಎಬಿವಿಪಿ‌‌ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿರೋಧದ ನಡುವೆಯೂ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕಾರ್ಯಕ್ರಮ‌‌ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ಮಾಡಿದೆ. ಆ ಕಾರಣದಿಂದಲೇ ಪ್ರತಿಭಟನೆ ಆರಂಭವಾಗಿದೆ. ಹಲವು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ಅವರು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂಬುದು ಆಕ್ರೋಷಕ್ಕೆ ಕಾರಣವಾಗಿದೆ. ಸಂಘ ಪರಿವಾರದ ತೀವ್ರ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಉಪನ್ಯಾಸಕ್ಕೆ ಕರೆಸಲಾಗಿದೆ. ಪ್ರಧಾನಿ ಮೋದಿ ವಿರೋಧಿಯಾಗಿರುವ ಡಾ ಶಂಸುಲ್ ಇಸ್ಮಾಂ ಅವರು ಉಪನ್ಯಾಸ ಮಾಡಬಾರದು ಎಂಬುದು ವಿದ್ಯಾರ್ಥಿಗಳ ವಾದವಾಗಿದೆ.


ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ  ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವುದನ್ನು ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆಯಾಗಿದೆ

ಯು.ಎ.ಇ.ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಗೆ ಪಾತ್ರರಾದ ಹನೀಫ್ ಪುತ್ತೂರು

Posted by Vidyamaana on 2024-02-12 22:51:20 |

Share: | | | | |


ಯು.ಎ.ಇ.ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಗೆ ಪಾತ್ರರಾದ ಹನೀಫ್ ಪುತ್ತೂರು

ದುಬೈ: ಹನೀಫ್ ಪುತ್ತೂರು ಇವರಿಗೆ ಯು.ಎ.ಇ.ಯ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿ 2024 ಲಭಿಸಿದೆ. ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಎಂಟನೇ ಪ್ರಶಸ್ತಿ ಪ್ರದಾನ ಸಮಾರಂಭವು ಹಟ್ಟಾ ಹನಿ ಬೀ ಗಾರ್ಡನ್, ಹಟ್ಟಾ, ದುಬೈನಲ್ಲಿ ನಡೆಯಿತು. ಈ ವರ್ಷ ಯು.ಎ.ಇ ಯ ಐವತ್ತು ಜನರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಇದರಲ್ಲಿ 47 ಮಂದಿ ಯು.ಎ.ಇ. ನಾಗರಿಕರಾದರೆ ಮೂವರು ಹೊರ ದೇಶದವರನ್ನು ಗುರುತಿಸಲಾಗಿತ್ತು,. ಇದರಲ್ಲಿ ಪುತ್ತೂರಿನ ಮಹಮ್ಮದ್ ಹನೀಫ್ ಒಬ್ಬರು ಮಾತ್ರ ಭಾರತೀಯರು.


ರಾಸ್ ಅಲ್ ಖೈಮಾದ ನಾಗರಿಕ ವಿಮಾನಯಾನ ವಿಭಾಗದ ಅಧ್ಯಕ್ಷರು ಹಾಗೂ ಅಲ್ ಖೈರ್ ಸ್ವಯಂ ಸೇವಕ ಪ್ರಶಸ್ತಿಯ ಅಧ್ಯಕ್ಷ, ಇಂಜಿನಿಯರ್ ಶೇಖ್ ಸಲೇಂ ಬಿನ್ ಸುಲ್ತಾನ್ ಅಲ್ ಖಾಸಿಮಿ ಅವರು ಈ ವರ್ಷ ಆಯ್ಕೆಗೊಂಡ ಸ್ವಯಂಸೇವಕರಿಗೆ ಮಾನ್ಯತೆ ಮತ್ತು ಮೆಚ್ಚುಗೆಯ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಿದರು.


ಹಟ್ಟಾ ಹನಿ ಬೀ ಗಾರ್ಡನ್ ನಲ್ಲಿ ನಡೆದ ಸರಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಲ್ ಖೈರ್ ಸ್ವಯಂಸೇವಕ ಪ್ರಶಸ್ತಿಯ ಡೆಪ್ಯೂಟಿ ಚೇರ್ಮನ್ ಫಿರಾಸ್ ಅಜೀಜ್ ಬಿನ್ ದರ್ವಿಶ್ ಹಾಗೂ ಸಂಸ್ಥೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


ಸಾಮಾಜಿಕ ಸ್ವಯಂಸೇವಕತ್ವದ ಪ್ರಾಮುಖ್ಯತೆ ಮತ್ತು ಪ್ರಯೋಜನಗಳನ್ನು ಒತ್ತಿಹೇಳುತ್ತಾ, ಇಂಜಿನಿಯರ್ ಶೇಖ್ ಸಲೇಮ್ ಬಿನ್ ಸುಲ್ತಾನ್ ಅಲ್ ಖಾಸಿಮಿ ಸಮಾಜ ಸೇವೆಯು ಸಮಾಜದ ಐಕ್ಯತೆಯನ್ನು ಭದ್ರಪಡಿಸುತ್ತದೆ ಎಂದು ಹೇಳಿದರು.


ಫಿರಾಸ್ ಅಜೀಜ್ ಬಿನ್ ದರ್ವಿಶ್, ಸ್ವಯಂಸೇವಕತ್ವದ ಅಪಾರ ಪ್ರಾಮುಖ್ಯತೆಯನ್ನು ಪ್ರತಿಪಾದಿಸಿದರಲ್ಲದೆ ಇದು ಉದಾತ್ತ ಮಾನವೀಯ ಮೌಲ್ಯ ಮತ್ತು ಸಮಾಜದ ಪ್ರಗತಿ ಮತ್ತು ಅಭಿವೃದ್ಧಿಗೆ ಅಗತ್ಯವಾದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ ಎಂದು ಶ್ಲಾಘಿಸಿದರು ಹಾಗೂ ಇದಕ್ಕಾಗಿ ಶ್ರಮಿಸುತ್ತಿರುವ ಸಾಮಾಜಿಕ ಕಾರ್ಯಕರ್ತರನ್ನು ಅಭಿನಂದಿಸಿದರು.


ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಅಬ್ಬಾಸ್ ಹಾಜೀ ಯವರ ಪುತ್ರನಾಗಿರುವ ಹನೀಫ್ ಪುತ್ತೂರು, ಪುತ್ತೂರು ಆಸುಪಾಸಿನಲ್ಲಿ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಸಹಯೋಗದೊಂದಿಗೆ ಗ್ರಾಮೀಣ ಮಕ್ಕಳಿಗಾಗಿ ಕಾರ್ಯಾಚರಿಸುತ್ತಿರುವ ಉಚಿತ ಕಂಪ್ಯೂಟರ್ ಬಸ್ – ಕ್ಲಾಸ್ ಆನ್ ವೀಲ್ಸ್ ಇದರ ಸಂಸ್ಥಾಪಕರು. ಮಂಗಳೂರಿನ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಇದರ ಎನ್.ಆರ್.ಐ ಟ್ರಸ್ಟೀ ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ತಾಂತ್ರಿಕ ನಿರ್ದೇಶರ್ಕರಾಗಿಯು ಸೇವೆ ಸಲ್ಲಿಸುತಿದ್ದಾರೆ.


ಸದ್ಯ ಯು.ಎ.ಇ ಯ ಯೂನಿವರ್ಸಿಟಿ ಆಫ್ ದುಬಾಯಿ ಇದರ ಐಟಿ ಮ್ಯಾನೇಜರ್ ಹಾಗೂ ಮಹಮ್ಮದ್ ಬಿನ್ ರಾಶೀದ್ ಬಾಹ್ಯಾಕಾಶ ಸಂಸ್ಥೆಯಲ್ಲಿ ಕ್ಲೌಡ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜರ್ ಹಾಗಿ ಉದ್ಯೋಗದಲ್ಲಿರುವ ಇವರು ಯು.ಎ.ಇ ಗೋಲ್ಡನ್ ವೀಸಾ ಹೊಂದಿರುತ್ತಾರೆ.

ಪುತ್ತೂರು : ನಗರಸಭೆ ವ್ಯಾಪ್ತಿಯಲ್ಲಿ ಹೊಸ ಸೂಚನೆ

Posted by Vidyamaana on 2023-06-15 06:43:44 |

Share: | | | | |


ಪುತ್ತೂರು : ನಗರಸಭೆ ವ್ಯಾಪ್ತಿಯಲ್ಲಿ ಹೊಸ ಸೂಚನೆ

ಪುತ್ತೂರು : ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಟೆಲಿಫೋನ್, ಕುಡಿಯುವ ನೀರು, ವಿದ್ಯುತ್ ಕೇಬಲ್ ಇನ್ನಿತರ ಕಾಮಗಾರಿಗಳಿಗೆ ರಸ್ತೆ ಅಗೆತ ಮಾಡುವುದನ್ನು ಜೂ.15 ರಿಂದ ನಿಷೇಧಿಸಲಾಗಿದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಸೂಚನೆ ನೀಡಿದ್ದಾರೆ.

ಮಳೆಗಾಲದಲ್ಲಿ ರಸ್ತೆ ಬದಿಯಲ್ಲಿ ಬೇರೆ ಬೇರೆ ಕಾರಣಗಳಿಗಾಗಿ ಅಗೆಯುವುದು ಸಾಮಾನ್ಯವಾಗಿದ್ದು, ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿ ಅಪಘಾತವೂ ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿನಿಷೇಧಿಸಲಾಗಿದೆ.

ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ತಿಳಿಸಿದ್ದಾರೆ.

ಹೊಸ ಕಾರು ಖರೀದಿಸಿದ ಪ್ರಿಯಾಮಣಿ, ಬೆಲೆ ಎಷ್ಟು ಗೊತ್ತೆ

Posted by Vidyamaana on 2024-02-25 08:33:25 |

Share: | | | | |


ಹೊಸ ಕಾರು ಖರೀದಿಸಿದ ಪ್ರಿಯಾಮಣಿ, ಬೆಲೆ ಎಷ್ಟು ಗೊತ್ತೆ


ಕರ್ನಾಟಕ ಮೂಲದ ನಟಿ ಪ್ರಿಯಾಮಣಿ ಇತ್ತೀಚೆಗಷ್ಟೆ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ

ಕನ್ನಡತಿ ನಟಿ ಪ್ರಿಯಾಮಣಿ, ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರತಿಭಾವಂತ ನಟಿ ಈಗಲೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.ಬರೋಬ್ಬರಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಮಣಿ, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.ಇತ್ತೀಚೆಗಷ್ಟೆ ಪ್ರಿಯಾಮಣಿ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರನ್ನು ಪ್ರಿಯಾಮಣಿ ಖರೀದಿ ಮಾಡಿದ್ದಾರೆ.

ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ ಪ್ರಿಯಾಮಣಿಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದಾರೆ ಪ್ರಿಯಾಮಣಿ.

ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.ಅಂದಹಾಗೆ ಪ್ರಿಯಾಮಣಿ ಖರೀದಿ ಮಾಡಿರುವ ಐಶಾರಾಮಿ ಮರ್ಸಿಡೀಜ್ ಬೆಂಜ್ ಜಿಎಲ್​ಸಿ ಕಾರಿನ ಬೆಲೆ ಬೆಂಗಳೂರಿನಲ್ಲಿ 90.15 ಲಕ್ಷದಿಂದ ಒಂದು ಕೋಟಿ ಆಗುತ್ತದೆ.

ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

Posted by Vidyamaana on 2023-04-18 15:37:50 |

Share: | | | | |


ಏ 19:ಪುತ್ತೂರು ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕ ನಾಮಪತ್ರ ಸಲ್ಲಿಕೆ

: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಏ.19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 8 ಗಂಟೆಗೆ  ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ  ಜೆ ಡಿ ಎಸ್ ಕಾರ್ಯಕರ್ತರು , ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಬೆಳಗ್ಗೆ 10 ಗಂಟೆಗೆ ದರ್ಬೆ ಸರ್ಕಲ್ ನಿಂದ ಬೃಹತ್ ರ‍್ಯಾಲಿಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‍ ಪಕ್ಷಕ್ಕೆ ಸೇರಿದ್ದರು.



Leave a Comment: