ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಸುದ್ದಿಗಳು News

Posted by vidyamaana on 2024-07-03 16:20:08 |

Share: | | | | |


ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು

ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.

ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್   ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.

 Share: | | | | |


ಬಳ್ಳಾರಿ: ಸರಣಿ ಕಳ್ಳತನ, ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-01-13 21:19:22 |

Share: | | | | |


ಬಳ್ಳಾರಿ: ಸರಣಿ ಕಳ್ಳತನ, ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

ಬಳ್ಳಾರಿ: ನಗರದ ಕಪ್ಪಗಲ್ಲು ರಸ್ತೆಯಲ್ಲಿ ವಾಣಿಜ್ಯ  ಮಳಿಗೆಗಳಲ್ಲಿ ಇಂದು ಬೆಳಗಿನ‌ಜಾವ ಕಳ್ಳರು ಸರಣಿಗಳ್ಳತ ನಡೆಸಿ ಸಾವಿರಾರು ರೂ ನಗದನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಮೆಡ್ ಪ್ಲಸ್ ನಲ್ಲಿ 24880 ರೂ, ಸಾಯಿ ಇಂದಿರಾ ಮೆಡಿಕಲ್ ಸ್ಟೋರ್ ನಲ್ಲಿ 8000 ರೂ, ಕನಕ ದುರ್ಗಮ್ಮ ಪ್ರಾವಿಷನ್ ಸ್ಟೋರ್ ನಲ್ಲಿ ಒಂದು ಸಾವಿರ ರೂ ಮತ್ತು ವಿಜಯ ರಾಮ ಸೂಪರ್ ಮಾರ್ಕೇಟ್ ನಲ್ಲಿ 17 ಸಾವಿರ ರೂ ನಗದು ದೋಚಿದ್ದಾರೆ.ಈ ಬಗ್ಗೆ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರು ಮುಖಕ್ಕೆ ವಾಸ್ಕ್ ಧರಿಸಿಕೊಂಡು, ಬ್ಯಾಟರಿ ಹಿಡಿದುಕೊಂಡು, ಮಳಿಗೆಯ ಷಟರ್ ನಿಂದ ಒಳಗೆ ನುಗ್ಗಿ, ಕ್ಯಾಸ್ ಕೌಂಟರ್ ತೆಗೆದು ಹಣ ಲಪಟಾಯಿಸಿದ್ದಾರೆ.


ಮಳಿಗೆಗಳ ಷಟರ್ ಗಳನ್ನು ಹಾರೆಗಳಿಂದ ಮೀಟಿ ತೆಗೆಯಲಾಗಿದೆ ಇದೆಲ್ಲ ಸಿಸಿ ಕೆಮೆರಾಗಳಲ್ಲಿ ರೆಕಾರ್ಡ್ ಆಗಿದೆ. ಸ್ಥಳಕ್ಕೆ ಪೊಲೀಸರು ಬಂದು ಹೋಗಿದ್ದಾರೆ‌. ಕಳ್ಳರನ್ನು ಪತ್ತೆ ಹಚ್ಚಬೇಕಿದೆ.

ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

Posted by Vidyamaana on 2024-06-30 16:40:20 |

Share: | | | | |


ಮಧುರಾ ಬೀಡಿ ಉದ್ಯಮಿ ಮರೀಲ್ ಅಬ್ದುಲ್ ಖಾದ‌ರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81 ವ) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ

ಡಿಜಿ - ಐಜಿಪಿ ಅಲೋಕ್ ಮೋಹನ್‌ ಭೇಟಿ ಮಾಡಿದ ಬಿಜೆಪಿ ನಿಯೋಗ

Posted by Vidyamaana on 2023-09-06 21:03:33 |

Share: | | | | |


ಡಿಜಿ - ಐಜಿಪಿ ಅಲೋಕ್ ಮೋಹನ್‌ ಭೇಟಿ ಮಾಡಿದ ಬಿಜೆಪಿ ನಿಯೋಗ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸ್ ವಿಚಾರಣೆ, ಬೆದರಿಕೆ, ಕಿರುಕುಳ ಆರೋಪ ಕೇಳಿಬಂದಿದ್ದು, ಹಾಗಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ನೇತೃತ್ವದಲ್ಲಿ ಡಿಜಿ&ಐಜಿಪಿ ಅಲೋಕ್ ಮೋಹನ್​ರನ್ನು ಬುಧವಾರ ಭೇಟಿ ಮಾಡಲಾಗಿದೆ.


ಶಾಸಕ ರವಿ ಸುಬ್ರಮಣ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಬಿಜೆಪಿ ಕಾನೂನು ಪ್ರಕೋಷ್ಠದ ಮುಖಂಡ ವಿವೇಕ್ ರೆಡ್ಡಿ ಉಪಸ್ಥಿತರಿದ್ದು, ನಿಯೋಗದ ಭೇಟಿ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಗೈರಾಗಿದ್ದಾರೆ.


ಕಾರ್ಯಕರ್ತರನ್ನು ಅನಗತ್ಯ ವಿಚಾರಣೆ ಮಾಡುವುದನ್ನು ನಿಲ್ಲಿಸಬೇಕು: ಎನ್. ರವಿಕುಮಾರ್


ನಗದರಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್​ ಮಾತನಾಡಿ, ಬಿಜೆಪಿ ಕಾರ್ಯಕರ್ತರಾಗಿರುವ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್​ಗಳ ಮನೆಗೆ ಹೋಗಿ ಎಫ್​ಐಆರ್ ಮಾಡದೇ ಎರಡು ದಿನಗಳ ಕಾಲ ಕೂರಿಸಿಕೊಂಡಿದ್ದಾರೆ. ಪೊಲೀಸ್ ದೌರ್ಜನ್ಯದ ಮೂಲಕ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ.


ಪೊಲೀಸ್ ಅಧಿಕಾರಿಗಳು ಕಾನೂನಾತ್ಮಕ ಕರ್ತವ್ಯ ಮಾಡಲಿ. ಕಾರ್ಯಕರ್ತರನ್ನು ಅನಗತ್ಯ ವಿಚಾರಣೆ ಮಾಡುವುದನ್ನು ಬಂದ್ ಮಾಡಬೇಕು. ಏನೇ ಇದ್ದರೂ ನೋಟೀಸು ಕೊಡಿ, ಪಕ್ಷ ಉತ್ತರ ಕೊಡುತ್ತದೆ. ಬಿಜೆಪಿ ಕಾರ್ಯಕರ್ತರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಪಯೋಗಿಸಬೇಕು ಎಂದು ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

Posted by Vidyamaana on 2024-06-29 07:41:05 |

Share: | | | | |


ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಮಂಗಳೂರು , ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರಗೊಂಡಿದ್ದ ವೇಳೆ ತಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂಬ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಎಂಎಲ್‌ಎ, ಎಂಎಲ್ ಸಿ ಆಗಬೇಕು ಎನ್ನುವ ಆಕಾಂಕ್ಷೆ ಪಕ್ಷದಲ್ಲಿ ದುಡಿಯ ಎಲ್ಲರಿಗೂ ಇರುತ್ತದೆ. ಅದಕ್ಕೆ ನಮ್ಮ ಹಣೆಯಲ್ಲೂ ಬರೆದಿರಬೇಕು. ಆದರೆ ನಮಗೆ ಆ ಸ್ಥಾನವನ್ನು ತಪ್ಪಿಸಲು ಈ ಹುದ್ದೆಯನ್ನು ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹಿಡಿದು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜಿ.ಪಂ.ನ ಸದಸ್ಯನಾಗಿ ಮೂರು ಬಾರಿ ಆಯ್ಕೆಯಾಗಿ, ಜಿ.ಪಂ.ನ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುವ ಅವಕಾಶವೂ ನನಗೆ ದೊರಕಿದೆ. ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಹೈಕಮಾಂಡ್ ಈ ಕಾರ್ಯವನ್ನು ಗುರುತಿಸಿ ಈಗ ಐದು ಜಿಲ್ಲೆಗಳನ್ನು ಒಳಗೊಂಡ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದು, ಇದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಿದ್ದೇನೆ. ಮುಂಬರುವ ಜಿ.ಪಂ. ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು

ಸುಳ್ಯ ನವ ವಿವಾಹಿತೆ ಕೀರ್ತಿಶ್ರೀ ನಾಪತ್ತೆ : ಪತಿಯಿಂದ ದೂರು

Posted by Vidyamaana on 2023-01-22 12:13:36 |

Share: | | | | |


ಸುಳ್ಯ ನವ ವಿವಾಹಿತೆ ಕೀರ್ತಿಶ್ರೀ ನಾಪತ್ತೆ : ಪತಿಯಿಂದ ದೂರು

ಸುಳ್ಯ ನವ ವಿವಾಹಿತೆ ಮಹಿಳೆಯೋರ್ವರು ನಾಪತ್ತೆಯಾಗಿದ್ದು, ಆಕೆಯನ್ನು ಹುಡುಕಿಕೊಡುವಂತೆ ಸುಳ್ಯ ಪೊಲೀಸ್ ಠಾಣೆಗೆ ಪತಿ ದೂರು ನೀಡಿದ್ದಾರೆ.ಮರ್ಕಂಜ ಗ್ರಾಮದ ರಾಜಶೇಖರ ಎಂಬವರ ಪತ್ನಿ ಕೀರ್ತಿ ಶ್ರೀ (26 ವರ್ಷ) ಜನವರಿ 21ರಂದು ಎಲಿಮಲೆ ಕ್ಲಿನಿಕ್‌ಗೆಂದು ಹೋದವರು ಮರಳಿ ಮನೆಗೆ ಬಾರದ ಕಾಣೆಯಾಗಿದ್ದಾರೆ. ಕಳೆದ ತಿಂಗಳು ಡಿ.26ರಂದು ವಿವಾಹ ನಡೆದಿತ್ತು. ಜನವರಿ 21ರಂದು ನನ್ನ ಆರೋಗ್ಯ ಸರಿ ಇಲ್ಲವೆಂದು ನನ್ನ ಪತ್ನಿ ನನ್ನ ಬಳಿ ಹೇಳಿದ್ದು ನಾನು ಆಕೆಯನ್ನು ಆಸ್ಪತ್ರೆಗೆ ಹೋಗಲೆಂದು ಮನೆಯಿಂದ ನನ್ನ ಜೀಪಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆಕೆಯನ್ನು ಕರೆದುಕೊಂಡು ಹೋಗಿದ್ದು, ಬಳಿಕ ಎಲಿಮಲೆಯ ಕ್ಲಿನಿಕ್‌ಗೆ ಹೋಗಲೆಂದು ಆಕೆಯನ್ನು ಬಸ್ಸಿನಲ್ಲಿ ಹತ್ತಿಸಿದ್ದು, 10.30 ಕ್ಕೆ ಅವಳ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಮೂಬೈಲ್ ಸ್ವಿಚ್ ಆಫ್ ಆಗಿತ್ತು.ಬಳಿಕ ನಾನು ಆಕೆಯ ತಾಯಿಯ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿಗೂ ಕೂಡ ಆಕೆ ಬಂದಿರುವುದಿಲ್ಲ ಎಂಬ ವಿಷಯವನ್ನು ಅವರ ತಾಯಿ ತಿಳಿಸಿರುತ್ತಾರೆ. ನಮಗೆ ತಿಳಿದಿರುವ ಎಲ್ಲಾ ಕಡೆಗಳಲ್ಲಿ ಆಕೆಯ ಸಂಬಂಧಿಕರ ಮನೆಗಳಲ್ಲಿಯೂ ಕೂಡ ವಿಚಾರಿಸಿದಾಗ ಯಾವುದೇ ಮಾಹಿತಿ ಲಭಿಸಿಲ್ಲ ಎಂದು ಪತಿ ರಾಜಶೇಖರ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರೆ.ಆಕೆ ಕಾಣೆಯಾಗಿದ್ದ ಸಂದರ್ಭ ಹಸಿರು ಬಣ್ಣದ ಚೂಡಿದಾರ ಧರಿಸಿದ್ದು ಸುಮಾರು 5 ಅಡಿ 3 ಇಂಚು ಎತ್ತರವಿದ್ದು ಕನ್ನಡ, ಅರೆ ಗನ್ನಡ, ಇಂಗ್ಲಿಷ್, ಹಿಂದಿ ಭಾಷೆಗಳಲ್ಲಿ ಮಾತನಾಡಬಲ್ಲವರಾಗಿದ್ದಾರೆ. ಇವರನ್ನು ಕಂಡುಬಂದಲ್ಲಿ ಸುಳ್ಯ, ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತ ಸುಳ್ಯ ಪೊಲೀಸರು ತಿಳಿಸಿದ್ದಾರೆ.

ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

Posted by Vidyamaana on 2024-02-23 15:57:28 |

Share: | | | | |


ದುಬೈನಲ್ಲಿ ರಸ್ತೆ ಅಪಘಾತ - ಕೋಟೆಕಾರು ಬೀರಿ ನಿವಾಸಿ ವಿದಿಶಾ ದುರ್ಮರಣ

ಉಳ್ಳಾಲ: ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.


ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರುಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

2019ರಲ್ಲಿ ದುಬೈಗೆ ತೆರಳಿ ಎಕ್ಸ್‌ಕ್ಯೂಜೆಟ್‍ನಲ್ಲಿ ಅಧಿಕಾರಿಯಾಗಿ ಕಳೆದ ಐದು ವರುಷಗಳಿಂದ ಕಾರ್ಯನಿರ್ವಹಿಸಿದ್ದರು. ಪ್ರತೀ ದಿನ ಕಂಪೆನಿಯ ಕ್ಯಾಬ್‍ನಲ್ಲಿ ಸಂಚರಿಸುತ್ತಿದ್ದ ವಿದಿಶಾ ಫೆ. 22 ರ ಗುರುವಾರ ತಡವಾಯಿತು ಎಂದು ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಅಪಘಾತದ ಪರಿಣಾಮ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತರಾಗಿದ್ದ ವಿದಿಶಾ ವಿದ್ಯಾರ್ಥಿ ದೆಸೆಯಲ್ಲೇ ರೋಟರ್ಯಾಕ್ಟ್  ಸೇರಿದಂತೆ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಹೊಸ ಕಾರು ಖರೀದಿಸಿದ್ದರು: ದುಬೈಯಲ್ಲಿ ವಾಹನ ಚಾಲನಾ ಲೈಸೆನ್ಸ್ ಪಡೆದ ಬಳಿಕ ಕಳೆದ ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ತಂದೆ-ತಾಯಿ ಮಗಳ ಮದುವೆಯ ಸಿದ್ಧತೆ ನಡೆಸುತ್ತಿರುವಾಗಲೇ ಈ ದುರಂತ ನಡೆದಿದೆ.



Leave a Comment: