ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

Posted by Vidyamaana on 2023-09-30 12:45:02 |

Share: | | | | |


ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಸುರಕ್ಷಾ ಆತ್ಮಹತ್ಯೆ

ಚಿಕ್ಕಮಗಳೂರು: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.



ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು.

ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 04:57:12 |

Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಎರಡನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

Posted by Vidyamaana on 2023-09-07 17:47:26 |

Share: | | | | |


ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

ಬೆಳ್ಳಾರೆ: ಕಳಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ರವರು ವಾದ ಮಂಡಿಸಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. 2022ರ ಜು. 19ರಂದು ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಮಸೂದ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಅಭಿಲಾಶ್, ಸುನಿಲ್ ಕೆ, ಸುಧೀರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ ಎಂ ಯನ್ನು ಪೊಲೀಸರು ಬಂಧಿಸಿದ್ದರು.

ಪುತ್ತಿಲರಿಗೆ ಯಾಕೆ ಬಿಜೆಪಿ ಟಿಕೆಟ್ ಕೊಡ್ಬೇಕು

Posted by Vidyamaana on 2023-04-27 06:16:08 |

Share: | | | | |


ಪುತ್ತಿಲರಿಗೆ ಯಾಕೆ ಬಿಜೆಪಿ ಟಿಕೆಟ್ ಕೊಡ್ಬೇಕು

ಪುತ್ತೂರು :ವಿಧಾನ ಸಭಾ ಕ್ಷೇತ್ರದಲ್ಲಿ ಇವತ್ತು ಅತ್ಯಂತ ಹೆಚ್ಚು ಚರ್ಚೆಯಲ್ಲಿರುವ ವಿಷಯವೇನೆಂದರೆ ಅರುಣ್ ಕುಮಾರ್ ಪುತ್ತಿಲ ರವರಿಗೆ ಬಿಜೆಪಿಯಿಂದ ಶಾಸಕ ಸ್ಥಾನಕ್ಕೆ ಸ್ಪರ್ಧೆ ಮಾಡಲು ಯಾಕೆ ಟಿಕೆಟ್ ನೀಡಿಲ್ಲ ಎಂಬುದು ಯುವ ಕಾರ್ಯಕರ್ತರಿಗೆ ತಿಳಿಯದೇ ಇರುವ ಸಂಗತಿಗಳು ಹಲವಾರು ಇವೆ. ಪುತ್ತೂರು ಬಿಜೆಪಿಯ ಕಛೇರಿಗೇ ಬಾರದೇ, ಬಿಜೆಪಿಯ ಮುಖಂಡರನ್ನು ಸಂಪರ್ಕಿಸದೇ ತನಗೆ ಶಾಸಕ ಸ್ಥಾನದ ಟಿಕೆಟ್ ನೀಡಬೇಕೆಂದು ಆಗ್ರಹಿಸುವುದು ಹಾಸ್ಯಾಸ್ಪದ ಎಂದು ಪತ್ರಿಕಾಗೋಷ್ಠಿಯಲ್ಲಿ ಡಾ.ಎಂ.ಕೆ. ಪ್ರಸಾದ್ ರವರು ಹೇಳಿದರು.

ಅರುಣ್ ಕುಮಾರ್ ಪುತ್ತಿಲ ರವರು ಈ ಹಿಂದೆ ಭಜರಂಗದಳದ ಜಿಲ್ಲಾ ಸಂಚಾಲಕರಾಗಿದ್ದರು. ಅವರ ನಡವಳಿಕೆಯಿಂದಾಗಿ ಅವರಾಗಿಯೇ ಪರಿವಾರ ಸಂಘಟನೆಯಿಂದ ಹೊರ ನಡೆದರು. ನಂತರ ಪ್ರಮೋದ್ ಮುತಾಲಿಕರೊಂದಿಗೆ ಕೈಜೋಡಿಸಿ ಶ್ರೀರಾಮಸೇನೆಯ ಸಂಚಾಲಕರಾದರು. ಯಾವಾಗ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವೃದ್ಧಿಯಾಯಿತೋ, ಪುತ್ತಿಲರು ಶ್ರೀರಾಮ ಸೇನೆಯಿಂದ ಹೊರ ಬಂದರು. ತನ್ನದೇ ಹಿಂದೂ ಸೇನೆ ರಚಿಸಿ ಅದನ್ನೂ ಸಹ ಅರ್ಧದಲ್ಲೇ ಕೈ ಬಿಟ್ಟರು.2013ರಲ್ಲಿ ಸಂಘ ಪರಿವಾರದ ಹಿರಿಯರು ಬಿಜೆಪಿಯಲ್ಲಿ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಹೇಳಿದಾಗ ತನಗೆ ಅಧ್ಯಕ್ಷ ಸ್ಥಾನವನ್ನೇ ಕೊಡಬೇಕೆಂದು ಹಠ ಹಿಡಿದ ಕಾರಣದಿಂದ, ಬಿಜೆಪಿಯಲ್ಲಿ ಕೆಲಸ ಮಾಡುವ ಅವಕಾಶವನ್ನು ತಾನಾಗಿಯೇ ಕೈ ಚೆಲ್ಲಿದರು. ಸಂಘದ ಹಿರಿಯರು ಬಿಜೆಪಿಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸೂಚಿಸಿದರೂ ಪಕ್ಷಕ್ಕೆ ಬರಲಿಲ್ಲ. ನಂತರ ಕೂಡಾ ಸಂಘ ಪರಿವಾರದ ಹಿರಿಯರು ಪುತ್ತಿಲರನ್ನು ಕಡೆಗಣಿಸದೇ, ಸಂಘಟನೆಯಲ್ಲಿ ಕೆಲಸ ಮಾಡುವ ಸಲುವಾಗಿ ನಮೋ ಬ್ರಿಗೇಡ್‌ನ ನೇತೃತ್ವವನ್ನು ನೀಡಿದರು.

2008ರ ವಿಧಾನ ಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿ ಶಕುಂತಳಾ ಶೆಟ್ಟಿಯವರೊಂದಿಗೆ ಕೆಲಸ ಮಾಡಿ, ಬಿಜೆಪಿಗೆ ವಿರುದ್ಧವಾಗಿ ನಡೆದರು. ನಂತರದ ಚುನಾವಣೆಗಳಾದ 2013, 2018ರ ಚುನಾವಣೆಗಳಲ್ಲಿಯೂ ಪುತ್ತಿಲರವರು ಪಕ್ಷದ ವಿರುದ್ಧ ಬಂಡಾಯವೆದ್ದು, ತಾನು ಮತ್ತು ತನ್ನ ಬಳಗ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿ ಬಿಜೆಪಿಗೆ ವಿರುದ್ಧವಾಗಿ ಕೆಲಸ ಮಾಡಿ ಬಿಜೆಪಿಯನ್ನು ಸೋಲಿಸಲು ಪ್ರಯತ್ನ ಮಾಡಿದ್ದಾರೆ. ಹಿಂದೆ ಅವರ ವಿರುದ್ಧ ಹಲವಾರು ಆಪಾದನೆಗಳು ಕೇಳಿ ಬಂದಿವೆ. ಶನಿ ಪೂಜೆಯ ಸಂದರ್ಭದಲ್ಲಿ ಪೊಲೀಸರು ಮೆರವಣಿಗೆಗೆ ಅನುಮತಿ ನಿರಾಕರಿಸಿದ ಸಮಯದಲ್ಲಿ, ಅನುಮತಿ ಇಲ್ಲದೇ ಮೆರವಣಿಗೆ ಮಾಡುವ ಪ್ರಯತ್ನ ಮಾಡಿ ಸಾಕಷ್ಟು ಕಾರ್ಯಕರ್ತರು ತೊಂದರೆಗೊಳಗಾಗಿರುವುದು ಎಲ್ಲರಿಗೂ ತಿಳಿದ ವಿಚಾರ.., ಕುಕ್ಕಿನಡ್ಕ ದೇವಸ್ಥಾನದ ಬ್ರಹ್ಮಕಲಶದ ಸಮಯದಲ್ಲಿ, ಸಂಪ್ಯ ಶ್ರೀ ವಿಷ್ಣುಮೂರ್ತಿ ಒತ್ತೆಕೋಲ ಮುಂತಾದ ಸಂದರ್ಭಗಳಲ್ಲಿ ಅವರ ವಿರುದ್ಧ ಹಣಕಾಸಿನ ವಿಚಾರವಾಗಿ ಆಪಾದನೆಗಳು ಕೇಳಿ ಬಂದಿರುತ್ತದೆ.

ಮುಂಡೂರು ಮೃತ್ಯುಂಜಯೇಶ್ವರ ದೇವಾಲಯದಲ್ಲಿನ ಕಾಣಿಕೆ ಡಬ್ಬಿಯ ವಿಚಾರವಾಗಿ ಅವರ ವಿರುದ್ಧ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣ ಈಗಲೂ ಇದೆ. ಧಾರ್ಮಿಕ ಕೇಂದ್ರವಾದ ದೇವಸ್ಥಾನದಲ್ಲಿಯೇ ಹಿಂದೂ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣವೂ ಅವರ ವಿರುದ್ದ ಇದೆ.

ಮೃತ್ಯುಂಜಯೇಶ್ವರ ದೇವಾಲಯದಲ್ಲಿ ನಾಗನ ಕಟ್ಟೆಯನ್ನು ಕಟ್ಟುವಾಗ ಆ ಕೆಲಸ ಆಗದಂತೆ ಅದರ ವಿರುದ್ಧ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು, ಅಭಿವೃದ್ಧಿ ಕಾರ್ಯಗಳಿಗೆ ತೊಡಕುಂಟು ಮಾಡಿದ್ದಾಗಿದೆ. ಈ ರೀತಿಯಲ್ಲಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಲವಾರು ಆಪಾದನೆಗಳು ಪುತ್ತಿಲರ ವಿರುದ್ದ ಇದೆ.

ಓರ್ವ ವ್ಯಕ್ತಿ ಶಾಸಕನಾಗಬೇಕಾದರೆ ಆತ ಶಾಂತ ಸ್ವಭಾವವನ್ನು ಹೊಂದಿರಬೇಕು. ಸಾರ್ವಜನಿಕರ ಕಷ್ಟ ಸುಖಗಳಲ್ಲಿ ಸ್ಪಂದಿಸಬೇಕು. ಪಕ್ಷದಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿರಬೇಕು. ಪುತ್ತೂರು ಬಿಜೆಪಿಯಲ್ಲಿ ಪರಿವಾರ ಸಂಘಟನೆಯ ಹಿರಿಯರು ಸೂಚಿಸಿದಾಗಲೂ ಯಾವುದೇ ಜವಾಬ್ದಾರಿ ಅಥವಾ ಹುದ್ದೆ ಸ್ವೀಕರಿಸಲು ನಿರಾಕರಿಸಿ, ತನ್ನದೇ ಆದ ಸಂಘಟನೆ ಮಾಡಿಕೊಂಡು, ಬಿಜೆಪಿಯ ವಿರುದ್ಧವೇ ಹೋರಾಟ ಮಾಡಿಕೊಂಡು, ಬಿಜೆಪಿಯ, ಸಂಘ ಪರಿವಾರದ ಹಿರಿಯರ ವಿರುದ್ಧ ಕೆಟ್ಟದಾಗಿ ಮಾತಾಡಿಕೊಂಡು, ಮುಖ್ಯವಾಹಿನಿಗೆ ಸೇರಿಕೊಳ್ಳದೇ, ತನಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ನೀಡಬೇಕೆಂದು.., ಕೇಳುವುದು ಎಷ್ಟು ಸರಿ ಎಂಬುದನ್ನು ನಾವೆಲ್ಲ ಅರ್ಥ್ಯೈಸಿಕೊಳ್ಳಬೇಕಾಗಿದೆ ಎಂದು ಖ್ಯಾತ ವೈದರಾದ ಡಾ. ಎಂ.ಕೆ. ಪ್ರಸಾದ್ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ ಬಳ್ಳಜ್ಜ, ರಾಜೇಶ್ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ಶಂಭು ಭಟ್ ಉಪಸ್ಥಿತರಿದ್ದರು.

77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

Posted by Vidyamaana on 2023-08-15 03:26:47 |

Share: | | | | |


77ನೇ ಸ್ವಾತಂತ್ರ್ಯೋತ್ಸವ : ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ

ಹೊಸದಿಲ್ಲಿ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಇಂದು (ಮಂಗಳವಾರ) ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.


77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಕೆಂಪು ಕೋಟೆ ಕಡೆ ಆಗಮಿಸಿದರು.


ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು. ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಐಎಎಫ್ ಹೆಲಿಕಾಪ್ಟರ್ ತ್ರಿವರ್ಣ ಧ್ವಜಕ್ಕೆ ಪುಷ್ಪವೃಷ್ಟಿ ಮಾಡಿತು.


ಹಿಂದಿನ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ದೇಶಾದ್ಯಂತ ವಿವಿಧ ವೃತ್ತಿಗೆ ಸೇರಿದ 1800 ಮಂದಿಯನ್ನು ತಮ್ಮ ಸಂಗಾತಿಯ ಜೊತೆಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ

Posted by Vidyamaana on 2023-09-26 13:02:56 |

Share: | | | | |


ಅಡ್ಕಸ್ಥಳ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ

ಕಾಸರಗೋಡು: ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಿಕಪ್‌ ಚಾಲಕ ಮೃತ ಪಟ್ಟ ಘಟನೆ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಅಡ್ಕಸ್ಥಳದ ಸಮೀಪ ಮಂಗಳವಾರ ನಡೆದಿದೆ.


ಮೃತ ಚಾಲಕನನ್ನು ಪೆರ್ಲ ಮಣಿಯಂಪಾರೆ ಪಜ್ಜನದ ಮುಸ್ತಫಾ ( 43) ಎಂದು ಗುರುತಿಸಲಾಗಿದೆ. ಬಸ್ ನ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲೆತ್ನಿಸಿದಾಗ ರಸ್ತೆ ಬದಿ ನಿಲ್ಲಿಸಿದ್ದ ಅಡಿಕೆ ಗಿಡ ಸಾಗಾಟದ ಪಿಕಪ್ ಗೆ ಬಸ್ಸು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಘಟನೆಯಲ್ಲಿ ತಲೆಗೆ ಗಂಭೀರ ಗಾಯಗೊಂಡ ಮುಸ್ತಫಾ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.


ಪಿಕಪ್ ವ್ಯಾನ್ ನಲ್ಲಿದ್ದ ಇನ್ನೋರ್ವ ಗಾಯಗೊಂಡಿದ್ದು, ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.



Leave a Comment: