ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಶವದ ಮೆರವಣಿಗೆಯಾಗಿ ಬದಲಾಯ್ತು ಮದುವೆ ಮೆರವಣಿಗೆ

Posted by Vidyamaana on 2024-03-08 16:58:37 |

Share: | | | | |


ಶವದ ಮೆರವಣಿಗೆಯಾಗಿ ಬದಲಾಯ್ತು ಮದುವೆ ಮೆರವಣಿಗೆ

ನವದೆಹಲಿ: ತಾನೇ ಮುಂದೆ ನಿಂತು ತನ್ನ ಮಗನಿಗೆ ಮದುವೆ ಮಾಡಿ ಸೊಸೆಯನ್ನು ಮನೆಯೊಳಗೆ ಕರೆಸಿಕೊಳ್ಳಬೇಕಿದ್ದ ತಂದೆಯೊಬ್ಬ ಮದುವೆಗೆ ಕೆಲವೇ ಗಂಟೆಗಳಿಗೂ ಮುನ್ನ ತನ್ನ ಮದುವೆಗೆ ಸಜ್ಜಾಗಿದ್ದ ಮಗನನ್ನೇ (Murder Case) ಚಾಕುವಿನಿಂದ 15 ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New delhi) ನಡೆದಿದೆ.ಮೃತ ಯುವಕನನ್ನು ಗೌರವ್ ಸಿಂಘಾಲ್ ಎಂದು ಗುರುತಿಸಲಾಗಿದೆ. ಈತ ದೆಹಲಿಯಲ್ಲಿ ಜಿಮ್ ನಡೆಸುತ್ತಿದ್ದ. ಆದರೆ ಈತನ ಮದುವೆಯ ಹಿಂದಿನ ದಿನ ರಾತ್ರಿ ತಂದೆಯೇ ತನ್ನ ಮಗನನ್ನು ಕೊಂದಿರುವ ಘಟನೆ ದೆಹಲಿಯ ಡಿಯೋಲಿ ಪ್ರದೇಶದಲ್ಲಿ ನಡೆದಿದ್ದು, ಘಟನೆಯ ನಂತರ ತಂದೆ ಪರಾರಿಯಾಗಿದ್ದಾನೆ. ಆದರೆ ಗುರುವಾರ ರಾತ್ರಿ ಜೈಪುರದಲ್ಲಿ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.


ದೆಹಲಿ ಪೊಲೀಸರ ಪ್ರಕಾರ, ಮಾರ್ಚ್ 7 ರ ಮಧ್ಯರಾತ್ರಿ 12:30 ರ ಸುಮಾರಿಗೆ ದೇವ್ಲಿ ಎಕ್ಸ್‌ಟೆನ್ಶನ್‌ನಲ್ಲಿರುವ ರಾಜು ಪಾರ್ಕ್‌ನಿಂದ ಕೊಲೆಯ ಬಗ್ಗೆ ಮಾಹಿತಿ ಬಂದಿದೆ. ಮಾಹಿತಿ ತಿಳಿದ ತಕ್ಷಣ ತಿಗ್ರಿ ಪೊಲೀಸ್ ಠಾಣೆ ಹಾಗೂ ಪಿಸಿಆರ್ ವ್ಯಾನ್ ಸ್ಥಳಕ್ಕೆ ಆಗಮಿಸಿದೆ. ಈ ವೇಳೆ ಗೌರವ್ ಸಿಂಘಾಲ್ ಎಂಬ 29 ವರ್ಷದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವುದು ಪೊಲೀಸರಿಗೆ ತಿಳಿದು ಬಂದಿದೆ. ಮನೆಯವರು ಆತನನ್ನು ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದಾದ ಬಳಿಕ ಪೊಲೀಸ್ ತಂಡ ಆಸ್ಪತ್ರೆಗೆ ತಲುಪಿದಾಗ ಗೌರವ್ ಆಸ್ಪತ್ರೆತಲುಪುವಷ್ಟರಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.


ಬಳಿಕ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಅಲ್ಲಲ್ಲಿ ರಕ್ತದ ಕಲೆ ಬಿದ್ದಿತ್ತು. ಗೌರವ್‌ನ ದೇಹವನ್ನು ಚಾಕುವಿನಿಂದ ಇರಿದ ನಂತರ ಎಳೆದುಕೊಂಡು ಹೋದಂತೆ ತೋರುತ್ತಿದೆ. ಗೌರವ್‌ನ ಶವವನ್ನು ತಕ್ಷಣ ತನ್ನ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವುದು ಹಂತಕನಿಗೆ ಇಷ್ಟವಿಲ್ಲದಿರುವುದೇ ಇದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.


ಗೌರವ್ ಸಿಂಘಾಲ್‌ಗೆ ಇತ್ತೀಚೆಗೆ ವಿವಾಹ ನಿಶ್ಚಯವಾಗಿತ್ತು. ಘಟನೆ ವೇಳೆ ಕುಟುಂಬಸ್ಥರು ಪಕ್ಕದ ಮನೆಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ನೃತ್ಯ ಮತ್ತು ಸಂಗೀತ ನಡೆಯುತ್ತಿತ್ತು. ಈ ವೇಳೆ ತಂದೆ ಮೂವರು ಸಹಚರರೊಂದಿಗೆ ಸೇರಿ ತನ್ನ ಮಗ ಗೌರವ್‌ನನ್ನು ಮನೆಯೊಳಗೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನೆ ಬಗ್ಗೆ ದಕ್ಷಿಣ ಜಿಲ್ಲೆಯ ಡಿಸಿಪಿ ಹೇಳಿದ್ದೇನು?


ಕೊಲೆ ಮಾಡಿದ ಬಳಿಕ ಗೌರವ್ ತಂದೆ ರಂಗಲಾಲ್ ಸಿಂಘಾಲ್ ಮನೆಯಿಂದ ಓಡಿ ಹೋಗಿದ್ದು, ಈ ವೇಳೆ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 15 ಲಕ್ಷ ರೂಪಾಯಿ ನಗದು ತೆಗೆದುಕೊಂಡಿದ್ದಾನೆ ಎಂದು ದಕ್ಷಿಣ ಜಿಲ್ಲೆಯ ಡಿಸಿಪಿ ಅಂಕಿತ್ ಚೌಹಾಣ್ ಹೇಳುತ್ತಾರೆ. ಪೊಲೀಸರು ಪ್ರತಿಯೊಂದು ಕೋನದಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಯಾವುದೋ ವಿಚಾರಕ್ಕೆ ಮಗ ಗೌರವ್ ಜೊತೆ ತಂದೆ ಜಗಳ ಮಾಡಿಕೊಂಡಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಈ ವೇಳೆ ಗೌರವ್ ತನ್ನ ತಂದೆ ರಂಗ್‌ಲಾಲ್‌ಗೆ ಕಪಾಳಮೋಕ್ಷ ಮಾಡಿದ್ದು, ನಂತರ ರಂಗಲಾಲ್ ತನ್ನ ಮೂವರು ಸಹಚರರೊಂದಿಗೆ ಸೇರಿ ಗೌರವ್‌ನನ್ನು ಕೊಂದು ನಗದು ಮತ್ತು ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿದ್ದಾನೆ.

ಈ ಘಟನೆಯಲ್ಲಿ ಮತ್ತೊಂದು ಕೋನ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌರವ್ ಸಿಂಘಾಲ್‌ಗೆ ಮನೆಯವರು ತೋರಿಸಿದ ಹುಡುಗಿಯನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಬೇರೆ ಹುಡುಗಿಯನ್ನು ಮದುವೆಯಾಗಲು ಬಯಸಿದ್ದ ಆತ ಮನೆಯವರ ಒತ್ತಡಕ್ಕೆ ಮಣಿದು ಮದುವೆಗೆ ಒಪ್ಪಿಗೆ ಸೂಚಿಸಿದ್ದ. ಈ ವಿಚಾರವಾಗಿ ತಂದೆ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.


ಇನ್ನು ರಂಗ್‌ಲಾಲ್ ಮೈಗ್ರೇನ್‌ನಿಂದ ಬಳಲುತ್ತಿದ್ದು, ಸಾಕಷ್ಟು ಔಷಧಗಳನ್ನೂ ಸೇವಿಸುತ್ತಿದ್ದ ಎಂಬ ಮಾಹಿತಿಯೂ ಪೊಲೀಸರಿಗೆ ಲಭಿಸಿದೆ.

ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್ ಮೃತ್ಯು

Posted by Vidyamaana on 2023-10-11 14:18:27 |

Share: | | | | |


ಮಂಗಳೂರು | ಬೈಕ್ ಅಪಘಾತ: ಸವಾರ ಕೋಟೆಕಾರ್ ನಿವಾಸಿ ಅಝ್ವೀನ್  ಮೃತ್ಯು

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.



ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್ ನಲ್ಲಿ ನಿವಾಸಿ ಅಝ್ವೀನ್ (21)ಎಂದು ಗುರುತಿಸಲಾಗಿದೆ.


ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ

ಗೃಹಲಕ್ಷ್ಮಿ ಯೋಜನೆಯ ಹಣ ಸಹಾಯ ಮಾಡಿತು: ಕಲಾ ವಿಭಾಗದ ಟಾಪರ್‌ ಹುಡುಗ

Posted by Vidyamaana on 2024-04-10 21:46:08 |

Share: | | | | |


ಗೃಹಲಕ್ಷ್ಮಿ ಯೋಜನೆಯ ಹಣ ಸಹಾಯ ಮಾಡಿತು: ಕಲಾ ವಿಭಾಗದ ಟಾಪರ್‌ ಹುಡುಗ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು,. ಈ ಬಾರಿ 84.87% ಬಾಲಕಿಯರು ಉತ್ತೀರ್ಣರಾಗಿದ್ದು, 76.98% ಬಾಲಕರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದ ಟಾಪರ್‌ ಆದ ವಿಜಯಪುರದ ವೇದಾಂತ್ ಜ್ಞಾನುಭನವಿ, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂದು ಹೇಳಿದ್ದಾರೆ.

ವಿಜಯಪುರದ ವೇದಾಂತ್ ಜ್ಞಾನುಭನವಿ ಮತ್ತು ಕವಿತಾ ಬಿ.ವಿ. 600ಕ್ಕೆ 596 ಅಂಕ ಪಡೆದಿದ್ದಾರೆ

ಹೊಸ ವರ್ಷದ ಪಾರ್ಟಿಗಾಗಿ 5 ಲಕ್ಷ ಕೊಟ್ಟವನನ್ನೇ ಕೊಲೆಗೈದು ಕಾಡು ಪ್ರಾಣಿಗೆ ತಿನ್ನಲೆಸೆದ ಕಿರಾತಕರು!

Posted by Vidyamaana on 2024-01-10 19:16:52 |

Share: | | | | |


ಹೊಸ ವರ್ಷದ ಪಾರ್ಟಿಗಾಗಿ 5 ಲಕ್ಷ ಕೊಟ್ಟವನನ್ನೇ ಕೊಲೆಗೈದು ಕಾಡು ಪ್ರಾಣಿಗೆ ತಿನ್ನಲೆಸೆದ ಕಿರಾತಕರು!

ಬೆಂಗಳೂರು (ಜ.10): ಹೊಸ ವರ್ಷದ ಪಾರ್ಟಿಗೆಂದು ವ್ಯಕ್ತಿಯೊಬ್ಬನನ್ನು ಕಿಡ್ನಾಪ್‌ ಮಾಡಿ 5 ಲಕ್ಷ ರೂ. ಹಣವನ್ನು ಪಡೆದ ಕಿರಾತಕರು, ನಂತರ ಹಣ ಕೊಟ್ಟವನನ್ನು ಬಿಟ್ಟು ಕಳಿಸದೇ ಕೊಲೆಗೈದು ಕಾಡು ಪ್ರಾಣಿಗಳಿಗೆ ಆಹಾರವಾಗಲೆಂದು ಎಸೆದು ಬಂದಿದ್ದಾರೆ.ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದುಡಿಯುವ ವರ್ಗ ಒಂದಿದ್ದರೆ, ದುಡಿದು ಸಂಪಾದನೆ ಮಾಡಿದ್ದವರನ್ನು ದರೋಡೆ ಮಾಡಿ ಮಜಾ ಮಾಡುವ ಇನ್ನೊಂದು ವರ್ಗವಿದೆ.ಹೀಗೆ, ನಾಲ್ವರು ಕಿರಾತಕರು ತಮ್ಮ ಹೊಸ ವರ್ಷದ ಪಾರ್ಟಿ ಹಾಗೂ ಶೋಕಿಗಾಗಿ ಅಮಾಯಕರಿಂದ ಹಣ ಪಡೆದಿದ್ದೂ ಅಲ್ಲದೇ, ಅವರನ್ನು ಅನ್ಯಾಯವಾಗಿ ಕೊಲೆಗೈದು ಅವರ ಮೃತ ದೇಹವೂ ಸಿಗದಂತೆ ಕಾಡು ಪ್ರಾಣಿಗಳಿಗೆ ಎಸೆದು ವಿಕೃತಿ ಮೆರೆದಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ಕಷ್ಟಪಟ್ಟು ದುಡಿದು ಮನೆ, ಹೆಂಡತಿ-ಮಕ್ಕಳ ಜೊತೆಗೆ ನೆಮ್ಮದಿಯಾಗಿದ್ದ ಕುಟುಂಬಗಳು ಬೀದಿಗೆ ಬರುತ್ತಿವೆ.


ಬೆಂಗಳೂರಿನ ಜ್ಞಾನಭಾರತೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಜಯ್ , ಆನಂದ್, ತಿಮ್ಮ ಮತ್ತು ಹನುಮಂತ ಎಂಬ ನಾಲ್ವರು ಹೊಸ ವರ್ಷದ ಪಾರ್ಟಿಗಾಗಿ ಯಾರನ್ನಾದರೂ ಕಿಡ್ನಾಪ್‌ ಮಾಡಬೇಕು ಎಂದು ಸ್ಕೆಚ್ ಹಾಕಿದ್ದರು. ಅದರಂತೆ ತಮಗೆ ಪರಿಚಿತವಿದ್ದ ಗುರುಸಿದ್ದಪ್ಪ ಎನ್ನುವವರನ್ನು ಡಿ.3ಒರಂದು ತಾವಿದ್ದ ಸ್ಥಳಕ್ಕೆ ಕರೆಸಿಕೊಂಡು ಕಿಡ್ನಾಪ್‌ ಮಾಡಿದ್ದಾರೆ. ನಂತರ, ಆತನ ಪತ್ನಿಗೆ ಕರೆ ಮಾಡಿಸಿ 5 ಲಕ್ಷ ರೂ. ತರಲು ಹೇಳಿದ್ದಾರೆ. ಹಣವನ್ನು ಪಡೆದ ನಂತರ ಆತನನ್ನು ಬಿಟ್ಟು ಕಳುಹಿಸದೇ ಕಾರಿನಲ್ಲಿ ಕೂಡಿಸಿಕೊಂಡು ಮದ್ಯ ಸೇವನೆ ಮಾಡುತ್ತಾ ಮಂಚಿನಬೆಲೆ ಡ್ಯಾಮ್‌ ಬಳಿಗೆ ಹೋಗಿದ್ದಾರೆ.ಮಂಚಿನಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡಿದ್ದ ಗ್ಯಾಂಗ್, ಡಿಸೆಂಬರ್ 30ರ ರಾತ್ರಿ ಪಾರ್ಟಿ ಮಾಡಿ ಗುರು ಸಿದ್ದಪ್ಪನನ್ನು ಬಿಟ್ಟು ಕಳಿಸುವುದಾಗಿ ಹೇಳಿದ್ದರು. ಆದ್ರೆ ಇವನನ್ನು ಬಿಟ್ರೆ ಪೊಲೀಸರಿಗೆ ಹೇಳುತ್ತಾನೆ ಎಂದು ಕೊಲೆ ಮಾಡಿದ್ದಾರೆ. ಗುರುಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಂತರ, ಮೃತ ದೇಹವನ್ನು ಕಾಡಿನಲ್ಲಿಯೇ ಬೀಸಾಡಿ, ಅಲ್ಲಿಂದ ಹೊಸ ವರ್ಷಕ್ಕಾಗಿ ಗೋವಾಕ್ಕೆ ತೆರಳಿ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಆದರೆ, ಇತ್ತ ಹುಬ್ಬಳ್ಳಿಯಿಂದ ಬಂದು ಜೀವನ ಕಟ್ಟಿಕೊಂಡು, ಬೆಂಗಳೂರಿನ ಕಿರಾತಕ ಹುಡುಗರಿಗೆ ಪಾರ್ಟಿಗಾಗಿ ಹಣವನ್ನು ಕೊಟ್ಟ ಗುರುಸಿದ್ದಪ್ಪ ಅನಾಥ ಹೆಣವಾಗಿ ಕಾಡಿನಲ್ಲಿ ಬಿದ್ದಿದ್ದನು.


ಈ ನಡುವೆ ಗುರುಸಿದ್ದಪ್ಪ ಪತ್ನಿ ತನ್ನ ಗಂಡ ಹಣ ಪಡೆದುಕೊಂಡು ಹೋದವರು ಮನೆಗೆ ವಾಪಸ್ಸು ಬಂದಿಲ್ಲಾ ಎಂದು ಮಿಸ್ಸಿಂಗ್ ಕೇಸ್ ನೀಡಿದ್ದರು. ಮಿಸ್ಸಿಂಗ್ ಕೇಸ್ ವಿಚಾರಣೆ ಮಾಡುವಾಗ ಕೊಲೆ ಆಗಿರುವುದು ಪತ್ತೆಯಾಗಿದೆ. ಸದ್ಯ ಮಂಚಿನ ಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮೃತ ದೇಹ ಪತ್ತೆ ಮಾಡಿದ್ದಾರೆ. ಸತತ ಎರಡು ದಿನ ಹುಡುಕಾಟದ ಬಳಿಕ ಮೃತ ದೇಹ ಪತ್ತೆಯಾಗಿದ್ದು, ಕಾಡು ಪ್ರಾಣಿಗಳು ಗುರುಸಿದ್ದಪ್ಪನ ದೇಹವನ್ನು ಏಳೆದುಕೊಂಡು ಹೋಗಿ ತಿಂದಿದ್ದಾವೆ. ಇನ್ನು ದೇಹದಲ್ಲಿ ತಲೆ ಬುರುಡೆ ಮತ್ತು ಬೆನ್ನೆಲುಬಿನ ಮೂಳೆಗಳು ಮಾತ್ರ ಲಭ್ಯವಾಗಿವೆ. ಗುರುಸಿದ್ದಪ್ಪನ ಅಳಿದುಳಿದ ಮೃತದೇಹದ ಭಾಗಗಳನ್ನು ಸಂಗ್ರಹಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗುದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುಸಿದ್ದಪ್ಪ ಮೃತ ದೇಹದ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ.

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು

Posted by Vidyamaana on 2023-12-26 16:47:48 |

Share: | | | | |


ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು, ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು

ಪುತ್ತೂರು: ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿಯಲ್ಲಿ ಆರ್ ಎಸ್‌ ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಮೂರು  ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಾಗಿವೆ.ವುಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ಸಂಘಟನೆಯಿಂದ ಪುತ್ತೂರು ನಗರ ಹಾಗೂ ಉಪ್ಪಿನಂಗಡಿ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆಯಲ್ಲಿ ವುಮೆನ್ ಇಂಡಿಯಾ ಮೂವ್ ಮೆಂಟ್

ಸಂಘಟನೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಝಾಹಿದಾ ಸಾಗರ್ ಮತ್ತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಕಾರ್ಯದರ್ಶಿ ಸೌಧ ಮಠ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ WIM ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಆಶಿಕಾ, ಅಝೀನಾ ಚಾರ್ಮಾಡಿ, ಸಾಹಿನಾ, ಆಯಿಷಾ, ಮರಿಯಮ್ಮ ದೂರು ನೀಡಿದ್ದಾರೆ.


ಮಂಡ್ಯ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ  ಉದ್ದೇಶಪೂರ್ವಕವಾಗಿ ಮಹಿಳೆಯರ ಅವಹೇಳನ ಮಾಡಿರುವ ಆರೋಪದಡಿಯಲ್ಲಿ ದೂರು ನೀಡಲಾಗಿದೆ.


ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಭಾನುವಾರ ನಡೆದಿದ್ದ ಹನುಮ ಸಂಕೀರ್ತನಾ ಯಾತ್ರೆಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾಡಿದ್ದ ಭಾಷಣ ವಿವಾದಕ್ಕೆಡೆಯಾಗಿತ್ತು.

ಕಣ್ಣೂರು - ಅಪಘಾತಕ್ಕೀಡಾದ ಸಿಎನ್ ಜಿ ಆಟೋ ರಿಕ್ಷಾಕ್ಕೆ ಬೆಂಕಿ - ಇಬ್ಬರ ಸಜೀವ ದಹನ

Posted by Vidyamaana on 2023-10-14 13:17:23 |

Share: | | | | |


ಕಣ್ಣೂರು - ಅಪಘಾತಕ್ಕೀಡಾದ ಸಿಎನ್ ಜಿ ಆಟೋ ರಿಕ್ಷಾಕ್ಕೆ ಬೆಂಕಿ - ಇಬ್ಬರ ಸಜೀವ ದಹನ

ಕಣ್ಣೂರು ಅಕ್ಟೋಬರ್ 14: ಸಿಎನ್ ಜಿ ಚಾಲಿತ ಆಟೋ ರಿಕ್ಷಾವೊಂದು ಅಪಘಾತಕ್ಕೀಡಾದ ಬಳಿಕ ಬೆಂಕಿ ಹೊತ್ತಿಕೊಂಡು ಆಟೋದಲ್ಲಿದ್ದ ಇಬ್ಬರು ಸಜೀವವಾಗಿ ದಹನವಾದ ಘಟನೆ ಕಣ್ಣೂರಿನ ಕತಿರೂರಿನಲ್ಲಿ ನಡೆದಿದೆ.ಅಪಘಾತದಲ್ಲಿ ಚಾಲಕ ಅಭಿಲಾಷ್ (37) ಮತ್ತು ಆತನ ಸ್ನೇಹಿತ ಸಜೀಶ್ (36) ಸುಟ್ಟು ಕರಕಲಾಗಿದ್ದಾರೆ.ಆಟೋರಿಕ್ಷಾ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಟೋ ಪಲ್ಟಿಯಾಗಿದ್ದು, ಈ ವೇಳೆ ಸಿಎನ್ ಜಿ ಸಿಲಿಂಡರ್‌ನಿಂದ ಬೆಂಕಿ ಹೊತ್ತಿಕೊಂಡಿದೆ.


ಬೆಂಕಿಯ ಕೆನ್ನಾಲಗೆಗೆ ಸ್ಥಳೀಯರಿಗೂ ಆಟೋ ರಿಕ್ಷಾದ ಹತ್ತಿರಕ್ಕೂ ಹೋಗಲು ಆಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಪೊಲೀಸರು ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಿಬ್ಬರ ಶವಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿದ್ದರಿಂದ ಅವರನ್ನು ಗುರುತಿಸಲು ಸಾಕಷ್ಟು ಸಮಯ ಹಿಡಿಯಿತು. ಪೊಲೀಸರು ಆಟೋದಲ್ಲಿದ್ದ ಲೈಸೆನ್ಸ್ ಪ್ಲೇಟ್ ಬಳಸಿ ಅದು ಅಭಿಲಾಷ್ ಅವರದ್ದೇ ಎಂದು ನಿರ್ಧರಿಸಿದ್ದಾರೆ. ಮತ್ತೊಂದೆಡೆ, ಸಜೀಶ್ ತನ್ನ ಸಹೋದರಿಯ ಮನೆಗೆ ಭೇಟಿ ನೀಡಲು ಆಗಾಗ್ಗೆ ಅಭಿಲಾಷ್ ಆಟೋದಲ್ಲಿ ಬಂದಿದ್ದ ಎಂದು ತಿಳಿದು ಬಂದಿದೆ.ದುರಂತವೆಂದರೆ, ಸಹೋದರಿಯ ಮನೆಯಿಂದ ಕೇವಲ ನೂರು ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಅಭಿಲಾಷ್ ಆರು ತಿಂಗಳ ಹಿಂದೆಯಷ್ಟೇ ಆಟೋ ಖರೀದಿಸಿದ್ದರು.



Leave a Comment: