ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಸುದ್ದಿಗಳು News

Posted by vidyamaana on 2024-06-29 07:41:05 |

Share: | | | | |


ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಮಂಗಳೂರು , ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರಗೊಂಡಿದ್ದ ವೇಳೆ ತಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂಬ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಎಂಎಲ್‌ಎ, ಎಂಎಲ್ ಸಿ ಆಗಬೇಕು ಎನ್ನುವ ಆಕಾಂಕ್ಷೆ ಪಕ್ಷದಲ್ಲಿ ದುಡಿಯ ಎಲ್ಲರಿಗೂ ಇರುತ್ತದೆ. ಅದಕ್ಕೆ ನಮ್ಮ ಹಣೆಯಲ್ಲೂ ಬರೆದಿರಬೇಕು. ಆದರೆ ನಮಗೆ ಆ ಸ್ಥಾನವನ್ನು ತಪ್ಪಿಸಲು ಈ ಹುದ್ದೆಯನ್ನು ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹಿಡಿದು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜಿ.ಪಂ.ನ ಸದಸ್ಯನಾಗಿ ಮೂರು ಬಾರಿ ಆಯ್ಕೆಯಾಗಿ, ಜಿ.ಪಂ.ನ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುವ ಅವಕಾಶವೂ ನನಗೆ ದೊರಕಿದೆ. ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಹೈಕಮಾಂಡ್ ಈ ಕಾರ್ಯವನ್ನು ಗುರುತಿಸಿ ಈಗ ಐದು ಜಿಲ್ಲೆಗಳನ್ನು ಒಳಗೊಂಡ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದು, ಇದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಿದ್ದೇನೆ. ಮುಂಬರುವ ಜಿ.ಪಂ. ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು

ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.


ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕ ಸ್ಥಾನ ನೀಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದ ಎಂ.ಎಸ್.ಮುಹಮ್ಮದ್, ಹಲವು ಸಮಸ್ಯೆ, ಸವಾಲುಗಳ ಮೂಲಕ, ಹಲವು ರೀತಿಯ ಅವಮಾನಗಳನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಪಕ್ಷವನ್ನು ಮುನ್ನೆಡೆಸುವ ಸಮರ್ಥ ನಾಯಕ. ಪಾರ್ಲಿಮೆಂಟ್ನಿಂದ ಅಮಾನತು ಮಾಡಿ, ಸರಕಾರಿ ಬಂಗಲೆಯಿಂದ ಹೊರ ಹಾಕಿ ಕೌನ್ ಹೇ ರಾಹುಲ್ ಎಂದು ಅವರನ್ನು ಪ್ರಧಾನಿ ಅವಮಾನಿಸಿದ್ದರು. ಆ ಎಲ್ಲಾ ಅವಮಾನ ಸಹಿಸಿಕೊಂಡು ಇದೀಗ ಛಾಯಾ ಪ್ರಧಾನಿಯಾಗಿ ಕ್ಯಾಬಿನೆಟ್ ಸ್ಥಾನಮಾನವನ್ನು ರಾಹುಲ್ ಪಡೆದಿದ್ದು, ಅವರ ಜತೆ ನಾವಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನೀರಜ್ ಪಾಲ್, ನಝೀರ್ ಬಜಾಲ್, ಸುಭಾಶ್ ಶೆಟ್ಟಿ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.

 Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

Posted by Vidyamaana on 2024-03-07 09:09:19 |

Share: | | | | |


ಕರ್ನಾಟಕದಲ್ಲಿ ಆ್ಯಸಿಡ್ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್‌

ಗಳೂರು(ಮಾ.07): ರಾಜ್ಯದಲ್ಲಿ  ಮಾರಾಟ ಆ್ಯಸಿಡ್ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ.

ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ  ಆ್ಯಸಿಡ್  ದಾಳಿ ಮಾಡಿದ್ದ.ಈ ಹಿನ್ನೆಲೆಯಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಲಹೆಗಳನ್ನು ಆಲಿಸಿ ಮಾತನಾಡಿದ ಪರಮೇಶ್ವರ್‌, ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ. ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ ಸಮಸ್ಯೆಯನ್ನು ಹೇಳಿಕೊಳ್ಳಬಹುದು ಎಂದರು.ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ ಸಂಸ್ಥೆಯ ಮನೋವೈದ್ಯಶಾಸ್ತ್ರ ಪ್ರಾಧ್ಯಾಪಕಿ ಡಾ.ಪ್ರಭಾ ಎಸ್‌.ಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

Posted by Vidyamaana on 2023-12-30 16:09:52 |

Share: | | | | |


ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ಘಾಟನೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ಆಗಮಿಸಿದ್ದು, ನೂತನವಾಗಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದರು.ನಂತ್ರ ಅಯೋಧ್ಯೆಯಲ್ಲಿ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 2024ರ ಜನವರಿ 22 ರಂದು ರಾಮ ಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಕ್ಷಣಕ್ಕಾಗಿ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದೆ ಎಂದು ಹೇಳಿದರು. ಇನ್ನು ಜನವರಿ 22ರಂದು 140 ಕೋಟಿ ಭಾರತೀಯರು ದೀಪಗಳ ಹಬ್ಬವಾಗಿ ಆಚರಿಸಬೇಕು ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪ್ರಧಾನಿ ನಗರದ ಮೂಲಕ ಮೆಗಾ ರೋಡ್ ಶೋ ನಡೆಸಿದ ನಂತರ ನವೀಕರಿಸಿದ ರೈಲ್ವೆ ನಿಲ್ದಾಣವನ್ನ ಉದ್ಘಾಟಿಸಿದ್ದರು.ಇಂದು ಇಡೀ ಜಗತ್ತು ಜನವರಿ 22ರ ಐತಿಹಾಸಿಕ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ ಅಯೋಧ್ಯೆಯ ಜನರಲ್ಲಿ ಈ ಉತ್ಸಾಹವು ತುಂಬಾ ಸಹಜವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು "ನಾನು ಭಾರತದ ಪ್ರತಿಯೊಂದು ಮಣ್ಣಿನ ಕಣ ಮತ್ತು ಜನರ ಆರಾಧಕ. ನನಗೂ ನಿಮ್ಮಷ್ಟೇ ಕುತೂಹಲವಿದೆ" ಎಂದರು.


ಪ್ರಧಾನಿ ಮೋದಿ ಅವರು 15 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಅಯೋಧ್ಯೆಯ ಜನತೆಯನ್ನು ಪ್ರಧಾನಿ ಅಭಿನಂದಿಸಿದ್ದಾರೆ. ನಾವು ನಮ್ಮ ಪರಂಪರೆಯನ್ನು ಗುರುತಿಸಬೇಕು ಎಂದು ಪ್ರಧಾನಿ ಹೇಳಿದರು. ನಮ್ಮ ಪರಂಪರೆ ನಮಗೆ ಸ್ಫೂರ್ತಿ ನೀಡುತ್ತದೆ. ಇದೇ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಗುಡಾರದಲ್ಲಿ ಕುಳಿತಿದ್ದ ಕಾಲವಿತ್ತು ಮತ್ತು ಇಂದು ರಾಮ ಲಲ್ಲಾ ಮಾತ್ರವಲ್ಲ, ದೇಶದ ನಾಲ್ಕು ಕೋಟಿ ಬಡವರಿಗೂ ಶಾಶ್ವತ ಮನೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

Posted by Vidyamaana on 2023-06-02 00:38:28 |

Share: | | | | |


ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ  ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Posted by Vidyamaana on 2024-06-22 11:31:59 |

Share: | | | | |


ಪೋಷಕರೇ ಗಮನಿಸಿ : ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಬೇಟಿ ಬಚಾವೋ-ಬೇಟಿ ಪಡಾವೋ ಅಭಿಯಾನದ ಅಡಿಯಲ್ಲಿ ಭಾರತ ಸರ್ಕಾರದ ಸಣ್ಣ ಠೇವಣಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ ಯೋಜನೆ) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಪ್ರಾರಂಭಿಸಿದರು. ಸುಕನ್ಯಾ ಸಮೃದ್ಧಿ ಯೋಜನೆ (ಎಸ್‌ಎಸ್ವೈ) ಅನ್ನು ದೇಶದಲ್ಲಿ ಹೆಣ್ಣು ಮಗುವಿನ ಭವಿಷ್ಯವನ್ನು ಭದ್ರಪಡಿಸಲು ವಿನ್ಯಾಸಗೊಳಿಸಲಾದ ಕಾರ್ಯತಂತ್ರದ ಹೂಡಿಕೆ ಯೋಜನೆಯಾಗಿ ಪರಿಚಯಿಸಲಾಯಿತು.

ಸುಕನ್ಯಾ ಸಮೃದ್ಧಿ ಯೋಜನೆ ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಜನನದಿಂದ 10 ವರ್ಷದವರೆಗೆ ಖಾತೆಯನ್ನು ತೆರೆಯಲು ಅನುವು ಮಾಡಿಕೊಡುತ್ತದೆ, ಖಾತೆಯು 21 ವರ್ಷಗಳ ನಂತರ ಪರಿಪಕ್ವಗೊಳ್ಳುತ್ತದೆ. ಮುಕ್ತಾಯದ ನಂತರ, ಮಗಳ ಶಿಕ್ಷಣ ಅಥವಾ ಮದುವೆಯ ವೆಚ್ಚಗಳನ್ನು ಬೆಂಬಲಿಸಲು ಸಂಪೂರ್ಣ ಮೊತ್ತವನ್ನು ಹಿಂಪಡೆಯಬಹುದು.

ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

Posted by Vidyamaana on 2023-11-05 04:30:43 |

Share: | | | | |


ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ.



ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ (43) ಎಂಬ ದುರ್ದೈವಿ ಛಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

Posted by Vidyamaana on 2024-04-09 17:32:02 |

Share: | | | | |


ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. 


ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.



Leave a Comment: