ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

Posted by Vidyamaana on 2023-11-09 07:41:16 |

Share: | | | | |


ಮಡಿಕೇರಿ : ಹನಿಟ್ರ್ಯಾಪ್ ಗೆ ಸಿಲುಕಿದ ನಿವೃತ್ತ ಯೋಧನಿಂದ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ..!

ಮಡಿಕೇರಿ : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಹನಿಟ್ರ್ಯಾಪ್‌ ನಲ್ಲಿ ಸಿಲುಕಿ ಯುವತಿಯ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.ಈತನನ್ನು ಪ್ರೀತಿಯ ನಾಟಕವಾಡಿ ಬಲೆಗೆ ಕೆಡವಿ ಹನಿಟ್ರ್ಯಾಪ್‌ ಮಾಡಿದ ಯುವತಿಯನ್ನು ಜೀವಿತಾ ಎಂದು ಗುರುತಿಸಲಾಗಿದೆ.ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್ (38) ನಾಪತ್ತೆಯಾದ ನಿವೃತ್ತ ಯೋಧ.ಜೀವಿತಾ ಎಂಬ ಮಹಿಳೆ ವಿರುದ್ಧ ಸಂದೇಶ್​ ಆರೋಪ ಮಾಡಿದ್ದಾರೆ. ಮದುವೆಯಾಗಿದ್ದ ಯೋಧನನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಜೀವಿತಾ ಆತನೊಂದಿಗೆ ಸುತ್ತಾಟ ಮಾಡಿ ಫೋಟೋ ಹಾಗೂ ವೀಡಿಯೊ ಇಟ್ಟುಕೊಂಡು ತನ್ನ ಸ್ನೇಹಿತರೊಂದಿಗೆ ಸೇರಿ ಬ್ಲ್ಯಾಕ್‌ಮೇಲ್‌ ಮಾಡಿ ಲಕ್ಷಾಂತರ ರೂ. ಕಿತ್ತುಕೊಂಡಿದ್ದಾಳೆ. ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಯೋಧನಿಗೆ ಏಕಾಏಕಿ 50 ಲಕ್ಷ ರೂ.


ಗೆ ಬೇಡಿಕೆ ಇಟ್ಟಿದ್ದಳು. ಇದರಿಂದ ಕಂಗಾಲಾದ ಯೋಧ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸತೀಶ್ ಎಂಬ ಪೊಲೀಸ್​ ಹೆಸರನ್ನೂ ಯೋಧ ಸಂದೇಶ್ ಬರೆದಿದ್ದಾರೆ. ಪೊಲೀಸ್ ಮಾನಸಿಕ‌ ಕಿರುಕುಳ ಆರೋಪ ಮಾಡಿದ್ದಾರೆ.ಮಡಿಕೇರಿ ನಗರದ ಪಂಪಿನ ಕೆರೆ ಬಳಿ ಸಂದೇಶ್​ಗೆ ಸೇರಿದ ವಸ್ತು ಪತ್ತೆಯಾಗಿವೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರಿಂದ ಶೋಧ ಕಾರ್ಯ ಆರಂಭಿಸಲಾಗಿದೆ.ಯೋಧನ ಪತ್ನಿ ನೀಡಿದ ದೂರಿನ ಪ್ರಕಾರ ಪೊಲೀಸರು ಕೇಸ್‌ ದಾಖಲಿಸಿಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್-ಸಿ ಹುದ್ದೆಗೆ ಮರುನೇಮಕ - ಸಿಎಂ ಸಿದ್ಧರಾಮಯ್ಯ ಘೋಷಣೆ

Posted by Vidyamaana on 2023-05-27 15:51:17 |

Share: | | | | |


ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್-ಸಿ ಹುದ್ದೆಗೆ ಮರುನೇಮಕ - ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು ಗ್ರೂಪ್ ಸಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.ಈ ಕುರಿತಂತೆ ಇಂದು ಟ್ವಿಟ್ ಮಾಡಿರುವಂತ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ.ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.

ಉದ್ಯಮಿ ಪರ್ಲಡ್ಕ ಮೊಹಮ್ಮದ್ ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Posted by Vidyamaana on 2023-05-28 01:51:41 |

Share: | | | | |


ಉದ್ಯಮಿ ಪರ್ಲಡ್ಕ  ಮೊಹಮ್ಮದ್  ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು:ಪರ್ಲಡ್ಕ ನಿವಾಸಿಯಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದ ಮೊಹಮ್ಮದ್ ಹಾರೀಸ್ (43ವ)ರವರು ಮೇ 27ರಂದು ರಾತ್ರಿ ಸೌದಿ ಅರೇಬಿಯಾ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.


ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ದರ್ಬೆ ನಿವಾಸಿಯಾಗಿದ್ದ ದಿ.ಮೊಹಮ್ಮದ್ ಹಟ್ಟಾ ಅವರ ಸಹೋದರ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಪರ್ಲಡ್ಕದ ಪಿ. ಅಬ್ದುಲ್ಲಾ ಹಾಜಿ ದರ್ಬೆ ಎಂಬವರ ಪುತ್ರ ಮೊಹಮ್ಮದ್ ಹಾರೀಸ್ ಅವರು ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಪತ್ನಿ ಮಕ್ಕಳು ಸಮೇತರಾಗಿ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ವಾಸ್ತವ್ಯ ಹೊಂದಿದ್ದರು. ಮೇ 27ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ನಿಧನರಾದರು.ಮೃತರು ತಂದೆ , ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

Posted by Vidyamaana on 2023-09-27 04:40:42 |

Share: | | | | |


ಉಪ್ಪಿನಂಗಡಿಯ ಮೇಸ್ತ್ರಿಗೆ ಒಲಿದ ಅದೃಷ್ಟ, ಕೇರಳ ಲಾಟರಿಯಲ್ಲಿ ಬಂತು 50 ಲಕ್ಷ ಬಹುಮಾನ

ಉಪ್ಪಿನಂಗಡಿಯ ಮೇಸ್ತ್ರಿಗೆ  ಅದೃಷ್ಟವೊಂದು ಒಲಿದು ಬಂದಿದೆ. ಕೇರಳ ರಾಜ್ಯ ಲಾಟರಿಯಲ್ಲಿ ಉಪ್ಪಿನಂಗಡಿಯ ಇಳಂತಿಲ ನಿವಾಸಿ ಚಂದ್ರಯ್ಯ ಅವರು 50 ಲಕ್ಷ ರೂ.ಬಹುಮಾನ ಗೆದ್ದಿದ್ದಾರೆ.


ಮೇಸ್ತ್ರಿ ಆಗಿರುವ ಚಂದ್ರಯ್ಯ ಕಾನತ್ತೂರು ದೇವಸ್ಥಾನಕ್ಕೆ ಹೋಗಿದ್ದ ವೇಳೆ ಕಾಸರಗೋಡಿನಲ್ಲಿರುವ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯಲ್ಲಿ 500 ಬೆಲೆಯ ಸೆ.20 ರಂದು ಡ್ರಾ ಇದ್ದ ಓಣಂ ಬಂಪರ್ ಲಾಟರಿ ಟಿಕೇಟ್ ಖರೀದಿಸಿದ್ದರು. ಇವರು ಖರೀದಿಸಿದ ಟಿಕೆಟ್‌ಗೆ ಬಂಪರ್ ಬಹುಮಾನವಾಗಿ 50ಲಕ್ಷ ರೂ. ಬಂದಿದೆ.

ಈ ಹಿಂದೆ ಇದೇ ಬೊಲ್ಪು ಲಕ್ಕಿ ಲಾಟರಿ ಏಜೆನ್ಸಿಯ ಮೂಲಕ

ಟಿಕೆಟ್ ಖರೀದಿಸಿದ ಉಪ್ಪಿನಂಗಡಿ ಕೆಂಪಿಮಜಲು ಎಂಬಲ್ಲಿನ

ಆನಂದ ಟೈಲರ್ (72) ಎಂಬವರಿಗೆ 80 ಲಕ್ಷ

ರೂ.ಬಹುಮಾನ ಬಂದಿತ್ತು. ಇದೀಗ ಎರಡನೇ ಬಾರಿಗೆ

ಉಪ್ಪಿನಂಗಡಿಗೆ ಅದೃಷ್ಟ ಲಕ್ಷ್ಮೀ ಒಲಿದಿದ್ದು ಅಚ್ಚರಿ

ಮೂಡಿಸಿದೆ.

ಪಾರ್ಶ್ವವಾಯು ಹೃದಯಾಘಾತದಿಂದ ಪಾರು ಮಾಡಲು ದುಬಾರಿ ಚುಚ್ಚುಮದ್ದು ಉಚಿತ: ದಿನೇಶ್‌ ಗುಂಡೂರಾವ್‌

Posted by Vidyamaana on 2023-10-24 12:30:03 |

Share: | | | | |


ಪಾರ್ಶ್ವವಾಯು ಹೃದಯಾಘಾತದಿಂದ ಪಾರು ಮಾಡಲು ದುಬಾರಿ ಚುಚ್ಚುಮದ್ದು ಉಚಿತ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಪಾರ್ಶ್ವವಾಯು, ಹೃದಯಾಘಾತದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಚುಚ್ಚುಮದ್ದು ಉಚಿತವಾಗಿ ಒದಗಿಸಲು ರಾಜ್ಯ ಸರಕಾರ ಮುಂದಾಗಿದೆ.ಈ ಕುರಿತು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟರ್‌ ನಲ್ಲಿ ಮಾಹಿತಿ ಹಂಚಿಕೆಕೊಂಡಿದ್ದಾರೆ. ಪಾರ್ಶ್ವವಾಯುವಿನಿಂದ ಅಂಗಾಂಗ ವೈಫಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹೃದಯಾಘಾತಕ್ಕೆ ಒಳಗಾದವರಿಗೆ 90 ನಿಮಿಷದೊಳಗೆ ಅಗತ್ಯ ಚಿಕಿತ್ಸೆ ಸಿಗದಿದ್ದರೆ ಮೃತಪಡುವ ಸಂಭವ ಇರುತ್ತದೆ.


ಆದ್ದರಿಂದ ಪಾರ್ಶ್ವ ವಾಯು ಮತ್ತು ಹೃದಯಾಘಾತಕ್ಕೆ ಒಳಗಾದವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ಅಗತ್ಯವಿರುವ ದುಬಾರಿ ಬೆಲೆಯ ಚುಚ್ಚುಮದ್ದುಗಳನ್ನು ಸ್ಟೆಮಿ ಯೋಜನೆಯಡಿ ಉಚಿತವಾಗಿ ಒದಗಿಸಲು ಕ್ರಮವಹಿಸಲಾಗಿದೆʼʼ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.


ಪಾರ್ಶ್ವವಾಯುವಿನಿಂದ ಅಂಗಾಂಗ ವೈಫಲ್ಯ ಹಾಗೂ ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಅದೇ ರೀತಿ, ಹೃದಯಾಘಾತಕ್ಕೆ ಒಳಗಾದವರಿಗೆ 90 ನಿಮಿಷದೊಳಗೆ ಅಗತ್ಯ ಚಿಕಿತ್ಸೆ ಸಿಗದಿದ್ದರೆ ಮೃತಪಡುವ ಸಂಭವ ಇರುತ್ತದೆ

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

Posted by Vidyamaana on 2023-07-30 04:28:23 |

Share: | | | | |


ಬೆಳ್ತಂಗಡಿ  : ಸರಕಾರಿ ಬಸ್ ನಲ್ಲಿ ಯುವತಿಗೆ ಕಿರುಕುಳ

ಬೆಳ್ತಂಗಡಿ : ಸರಕಾರಿ ಬಸ್ ನಲ್ಲಿ ಸಂಪಾದಿಸುತ್ತಿದ್ದಾಗ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಉಜಿರೆಯಲ್ಲಿ ನಡೆದಿದೆ.


ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚಾರಿಸುತ್ತಿದ್ದ ಸರಕಾರಿ ಬಸ್ ನಲ್ಲಿ ಜುಲೈ 29 ರಂದು ಮಧ್ಯಾಹ್ನ 2:15 ರ ಸುಮಾರಿಗೆ‌ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ ನಿವಾಸಿ 19 ವರ್ಷದ ಯುವತಿ ತನ್ನ ಬ್ಯಾಗ್ ಹಿಡಿದುಕೊಂಡು ನಿದ್ರೆ ಮಾಡಿಕೊಂಡು ಸಂಚಾರಿಸುತ್ತಿದ್ದಾಗ ಬಸ್ ಮಡಂತ್ಯಾರ್ ತಲುಪಿದಾಗ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು  ಕಬೀರ್(35) ಎಂಬಾತ ಹಿಂಬದಿಯಲ್ಲಿ ಕುಳಿತಿದ್ದವd ಯುವತಿ ಇದ್ದ ಸೀಟಿಗೆ ಬಂದು ಕಿರುಕುಳ ನೀಡಿದ್ದು ಇದನ್ನು ವಿರೋಧಿಸಿದರೂ ಮತ್ತೆ ಮತ್ತೆ ತನ್ನ ಕೃತ್ಯ ಮುಂದುವರಿಸಿದ್ದು ಈ ವೇಳೆ ನೊಂದ ಯುವತಿ ತನ್ನ ತಂದೆಗೆ ಹಾಗೂ ಉಜಿರೆಯ ಗೆಳೆಯನಿಗೆ ಮಾಹಿತಿ ನೀಡಿದ್ದು ಬಸ್ ಉಜಿರೆ ತಲುಪುತ್ತಿದ್ದಂತೆ ಆರೋಪಿ ಕಬೀರ್ ನನ್ನು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಪೊಲೀಸರಿಗೆ ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ನೊಂದ ಯುವತಿ ನೀಡಿದ ದೂರಿನ ಮೇರೆಗೆ ಕಾಮುಕ ಕಬೀರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



Leave a Comment: