ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಸುದ್ದಿಗಳು News

Posted by vidyamaana on 2024-06-29 14:22:27 |

Share: | | | | |


ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾತ: ಐರಾವತ- ರಾಜಹಂಸ ಮುಖಾಮುಖಿ ಡಿಕ್ಕಿ; ಹಳ್ಳಕ್ಕೆ ಬಿದ್ದ ಟೆಂಪೋ

ಪುತ್ತೂರು: ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ ನಡೆದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗೂಡ್ಸ್ ಹೊತ್ತ ಟೆಂಪೋ, ಐರಾವತ ಬಸ್, ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ಸನ್ನು ಗೂಡ್ಸ್ ಹೊತ್ತ ಟೆಂಪೋ ಓಬರ್ ಟೇಕ್ ಮಾಡುವ ಭರದಲ್ಲಿ ದುರ್ಘಟನೆ ಸಂಭವಿಸಿತು. ಓವರ್ ಟೇಕ್ ಮಾಡುವ ಸಂದರ್ಭ ಎದುರಿನಿಂದ ರಾಜಹಂಸ ಬಸ್ ಬರುತ್ತಿದ್ದು, ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಾಜಹಂಸಕ್ಕೆ ಡಿಕ್ಕಿ‌ ಹೊಡೆದು, ಹಳ್ಳಕ್ಕೆ ಬಿತ್ತು.

ಇನ್ನೊಂದೆಡೆ ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾದವು.

ಸ್ಥಳದಲ್ಲಿ ಟ್ರಾಫಿಕ್ ದಟ್ಟಣೆಯಾಗಿದ್ದು, ಎರಡು ಕಡೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

 Share: | | | | |


ಪುತ್ತೂರು ತಾಲೂಕು ಯುವ ಬಂಟರ ಸಂಘದಿಂದ ಬಂಟರ ಭವನದಲ್ಲಿ ಯುವ ವಿಕಾಸ

Posted by Vidyamaana on 2024-06-03 07:14:00 |

Share: | | | | |


ಪುತ್ತೂರು ತಾಲೂಕು ಯುವ ಬಂಟರ ಸಂಘದಿಂದ  ಬಂಟರ ಭವನದಲ್ಲಿ ಯುವ ವಿಕಾಸ

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಜೂ.೨ ರಂದು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಒಂದು ದಿನದ ನಾಯಕತ್ವ, ವ್ಯಕ್ತಿತ್ವ ವಿಕಸನ ಮತ್ತು ಪರಿಣಾಮಕಾರಿ ಸಂವಹನ ವಿಚಾರ ಸಂಕೀರ್ಣ ಯುವ ವಿಕಾಸ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸಹಕಾರತ್ನ ಸವಣೂರು ಕೆ.ಸೀತಾರಾಮ ರೈಯವರು ದೀಪ ಬೆಳಗಿಸಿ, ಉದ್ಘಾಟನೆಗೈದು ಮಾತನಾಡಿ  ಯುವ ಸಮುದಾಯ ಸಮಾಜದ ಶಕ್ತಿಯಾಗಿದ್ದು, ಬಂಟ ಸಮಾಜದ ಯುವ ಪೀಳಿಗೆಯ ಅಭಿವೃದ್ಧಿಗೆ ಇಂಥ ಕಾರ್‍ಯಕ್ರಮ ಸಹಕಾರಿ ಎಂದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು,


ಮುಂಡೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ಜಾತ್ರೋತ್ಸವದ ಸಂಭ್ರಮ

Posted by Vidyamaana on 2024-02-29 11:09:09 |

Share: | | | | |


ಮುಂಡೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ಜಾತ್ರೋತ್ಸವದ ಸಂಭ್ರಮ

ಪುತ್ತೂರು: ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ದ್ವಿತೀಯ ವರ್ಷದ ಜಾತ್ರೋತ್ಸವ, ದೈವಗಳ ನೇಮೋತ್ಸವ, ನವೀಕೃತ ರಂಗಮಂಟಪದ ಉದ್ಘಾಟನೆ ಮಾ. 1 ಹಾಗೂ 2ರಂದು ನಡೆಯಲಿದೆ ಎಂದು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಾರ್ಚ್ 1ರಂದು ಸಂಜೆ 3.30ಕ್ಕೆ ಹಸಿರು ಹೊರೆಕಾಣಿಕೆ, ಬಳಿಕ ಶ್ರೀ ಸತ್ಯನಾರಾಯಣ ಪೂಜೆ, ರಂಗಪೂಜೆ, ನವೀಕೃತ ರಂಗಮಂಟಪದ ಉದ್ಘಾಟನೆ ನಡೆಯಲಿದೆ. ಬಳಿಕ ಧಾರ್ಮಿಕ ಸಭೆ, ಸಂಗೀತ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8.45ರಿಂದ ಬೊಳ್ಳಿಮಲೆತ ಶಿವಶಕ್ತಿಲು ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಮಾರ್ಚ್ 2ರಂದು ಬೆಳಿಗ್ಗೆ 8ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ 7ರಿಂದ ಮಹಾಪೂಜೆ, ದೇವರ ಬಲಿ ಹೊರಟು ಶ್ರೀ ಭೂತಬಲಿ ಮಹೋತ್ಸವ, ವಸಂತಕಟ್ಟೆ ಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ದೈವಗಳಿಗೆ ನೇಮೋತ್ಸವ ಜರಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಕುದ್ಕಾಡಿ ಶೀನಪ್ಪ ರೈ ಕೊಡೆಂಕಿರಿ, ನಿಕಟಪೂರ್ವ ಅಧ್ಯಕ್ಷ  ಅರುಣ್ ಕುಮಾರ್ ಆಳ್ವ ಬೋಳೋಡಿ, ಭಾಸ್ಕರ್ ರೈ ಕೆದಂಬಾಡಿಗುತ್ತು, ವಿಶ್ವನಾಥ ರೈ ಕುಕ್ಕುಂಜೋಡು ಉಪಸ್ಥಿತರಿದ್ದರು.

ಶಾಸಕರ ಇಂದಿನ ಕಾರ್ಯಕ್ರಮ ಜು 30

Posted by Vidyamaana on 2023-07-29 23:18:55 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 30

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಜುಲೈ 30 ರಂದು

💥 ಬೆಳಿಗ್ಗೆ 9 ಗಂಟೆಗಡ ಅಜ್ಜಿನಡ್ಕದಲ್ಲಿ ರಕ್ತದಾನ‌ ಶಿಬಿರ

💥10 ಗಂಟೆಗೆ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಟೈಲರ್ಸ್ ಅಸೋಸಿಯೇಶನ್ ಮಹಾಸಭೆ,ಪ್ರತಿಭಾ ಪುರಸ್ಕಾರ

💥12 ಕ್ಕೆ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ ಆರ್ಯಾಪು ಮೇಲ್ಮಜಲು ನಲ್ಲಿ ಕೆಸರುಗದ್ದೆ ಕ್ರೀಡಾ ಕೂಟ ಕಾರ್ಯಕ್ರಮ

💥2 ಗಂಟೆಗೆ ಕೋಡಿಂಬಾಡಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸನ್ಮಾನ ಕಾರ್ಯಕ್ರಮ

💥ಸಂಜೆ ಸಾಜದಲ್ಲಿ ಕೆಸರುಡೊಂಜಿ ದಿನ

💥ಸಂಜೆ 6 ಕ್ಕೆ ಪಾಣಾಜೆ ರಣಮಂಗಳ ದೇವಸ್ಥಾನದಲ್ಲಿ ಕಾರ್ತಿಕ ಪೂಜೆಯ ಕಾರ್ಯಕ್ರಮ ದಲ್ಲಿಭಾಗವಹಿಸಲಿದ್ದಾರೆ

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

Posted by Vidyamaana on 2023-02-23 11:49:48 |

Share: | | | | |


ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

ಮಂಗಳೂರು:ಫೆ 23  ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಇಂದು ಪುತ್ತೂರಿಗೆ ಅಣ್ಣಾಮಲೈ

Posted by Vidyamaana on 2023-04-29 02:42:29 |

Share: | | | | |


ಇಂದು ಪುತ್ತೂರಿಗೆ  ಅಣ್ಣಾಮಲೈ

ಪುತ್ತೂರು:ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಏ.29ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಗಂಟೆ 11.30ಕ್ಕೆ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಮಧ್ಯಾಹ್ನ ಗಂಟೆ 3ಕ್ಕೆ ಕಾವು ಜನಮಂಗಲದಲ್ಲಿ ಕಾರ್ಯಕರ್ತರೊಂದಿಗೆ ಸ೦ವಾದ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 6ಕ್ಕೆ ವಿಟ್ಲದಲ್ಲಿ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ತಿಳಿಸಿದೆ.

ಸುಳ್ಯ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಉಪ್ಪಿನಂಗಡಿ ಮೂಲದ ನಿತಿನ್ ಸೆರೆ

Posted by Vidyamaana on 2024-03-15 10:06:00 |

Share: | | | | |


ಸುಳ್ಯ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಉಪ್ಪಿನಂಗಡಿ ಮೂಲದ ನಿತಿನ್ ಸೆರೆ

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಡೆಕೋಲಿನಲ್ಲಿ ಬುಧವಾರ ರಾತ್ರಿ ನಡೆದಿದೆ.ಮೂಲತಃ ಉಪ್ಪಿನಂಗಡಿಯ ನಿತಿನ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.


ಸುಳ್ಯ-ಮಂಡೆಕೋಲು ಖಾಸಗಿ ಬಸ್‍ನಲ್ಲಿ ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದ ನಿತಿನ್ ಬುಧವಾರ ತಡರಾತ್ರಿ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದರು ಎಂದು ತಿಳಿದುಬಂದಿದೆ.ಆರೋಪಿ ನಿತಿನ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Leave a Comment: