ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಸುದ್ದಿಗಳು News

Posted by vidyamaana on 2024-06-28 19:01:49 |

Share: | | | | |


ಭೀಕರ ರಸ್ತೆ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13ಕ್ಕೆ ಏರಿಕೆ,ಇಬ್ಬರ ಸ್ಥಿತಿ ಗಂಭೀರ

ಹಾವೇರಿ : ಇಂದು ಬೆಳ್ಳಂಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಸಾವನಪ್ಪಿದು ಇದೀಗ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಹಾವೇರಿಯ ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು ಇಬ್ಬರು ಪುರುಷರು ಸೇರಿದಂತೆ 9 ಮಹಿಳೆಯರು ಸಾವನಪ್ಪಿದ್ದಾರೆ.

ಹೌದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಪಡೆದು ವಾಪಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13 ಜನ ಸಾವನ್ನಪಪ್ಪಿದ್ದಾರೆ ಎಂದು ಎಸ್ ಪಿ ಅಂಶಿ ಕುಮಾರ್ ಮಾಹಿತಿ ನೀಡಿದ್ದಾರೆ.ಮೃತರು ಶಿವಮೊಗ್ಗ ಜಿಲ್ಲೆಯ ಮೂಲದವರು ಎಂದು ತಿಳಿದು ಬಂದಿದೆ. ಪರಶುರಾಮ, ಭಾಗ್ಯ, ನಾಗೇಶ್, ವಿಶಾಲಾಕ್ಷಿ,ಅರ್ಪಿತ,ಸುಭದ್ರ, ಬಾಯಿ, ಪುಣ್ಯ, ಮಂಜುಳಾಬಾಯಿ, ಆದರ್ಶ, ಮಾನಸ, ಅಪರೂಪ, ಮಂಜುಳಾ ಮೃತಪಟ್ಟವರ ಎಂದು ಗುರುತಿಸಲಾಗಿದೆ.

ಟಿಟಿಯಲ್ಲಿ ಸುಮಾರು 16 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಇದೀಗ 13 ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 Share: | | | | |


ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

Posted by Vidyamaana on 2023-12-22 11:45:46 |

Share: | | | | |


ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ Addl Civil Judge & JMFC ಬೆಳ್ತಂಗಡಿ ನ್ಯಾಯಲಯದಲ್ಲಿ‌ ದಾಖಲಾದ ಸಿ.ಸಿ ನಂಬ್ರ 535/2016 ಮತ್ತು ಸಿ.ಸಿ ನಂಬ್ರ 871/2017 ರಲ್ಲಿ ಸುಮಾರು 6 ರಿಂದ 7 ವರ್ಷಗಳಿಂದ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯಾದ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ಪಂಜದ,ನೆಲ್ಲಿಕಟ್ಟೆ ನಿವಾಸಿ ದಿ.ಆದಂ ಮಗನಾದ ಶರೀಫ್ @ ಮಹಮ್ಮದ್  ಶರೀಫ್ (43) ಎಂಬಾತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನಿರ್ದೇಶನದಂತೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ಎಮ್ ನೇತೃತ್ವದ ಸಿಬ್ಬಂದಿ ಪ್ರವೀಣ್ ಎಂ ಮತ್ತು ಸಚಿನ್ ರವರು ಡಿ.21 ರಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಿಟ್ಲದ ಸಾರಡ್ಕ ಎಂಬಲ್ಲಿ ವಶಕ್ಕೆ ಪಡೆದುಕೊಂಡು ನಂತರ ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

Posted by Vidyamaana on 2024-02-09 07:27:56 |

Share: | | | | |


ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ - ನೊಂದು ಯುವಕ ಆತ್ಮಹತ್ಯೆ

ಬೆಂಗಳೂರು :ಪ್ರೀತಿಸಿದ ಯುವಕನೋರ್ವ ತಾನು ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ತಿಳಿದು ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಕುರಿತು ಮೃತನ ಕುಟುಂಬಸ್ಥರು ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


ಅನ್ಬರಾಸನ್‌ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದ್ಯಾ ಎಂಬಾಕೆಗೆ ಈ ಹಿಂದೆ ಮದುವೆಯಾಗಿದ್ದು, ವಿಚ್ಛೇದನ ಪಡೆದಿದ್ದು. ನಂತರ ಅನ್ಬರಾಸನ್‌ ಜೊತೆ ಪ್ರೀತಿಯಾಗಿತ್ತು. ಇಬ್ಬರೂ ಆರು ತಿಂಗಳಿನಿಂದ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದರು. ಇಬ್ಬರೂ ತಾವು ಪತಿ ಪತ್ನಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆಯಲ್ಲಿದ್ದರು.ವಿದ್ಯಾ ಐಟಿ ಕಂಪನಿ ಉದ್ಯೋಗಿ. ಅನ್ಬರಾಸನ್‌ ಪ್ಲಿಪ್‌ ಕಾರ್ಟ್‌ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ. ಆದರೆ ವಿದ್ಯಾ ಅನ್ಬರಾಸನ್‌ ಜೊತೆ ಪ್ರೀತಿಯಲ್ಲಿರುವಾಗಲೇ ಇನ್ನೋರ್ವನ ಸಹವಾಸಕ್ಕೆ ಬಿದ್ದಿದ್ದಾಳೆ. ಸಂತೋಷ್‌ ಎಂಬಾತನ ಜೊತೆ ವಿದ್ಯಾ ಅಕ್ರಮ ಸಂಬಂಧ ಹೊಂದಿದ್ದಳು. ಅನ್ಬರಾಸನ್‌ ತನ್ನ ಕಣ್ಣಾರೆ ಸಂತೋಷ್‌ ಮತ್ತು ವಿದ್ಯಾ ಜೊತೆಯಲ್ಲಿರುವುದನ್ನು ಕಂಡಿದ್ದ. ಇದರಿಂದ ನೊಂದ ಅನ್ಬರಾಸನ್‌ ವಿದ್ಯಾಗೆ ಬುದ್ಧಿವಾದ ಹೇಳಿದರೂ ಕ್ಯಾರೆ ಎನ್ನದ ವಿದ್ಯಾ ತನ್ನ ಚಾಳಿ ಮುಂದುವರಿಸಿದ್ದಾಳೆ. ಇದರಿಂದ ನೊಂದ ಅನ್ಬರಸನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.


ಅನ್ಬರಸನ್‌ ತಂದೆ ತಾಯಿ ಯುಡಿಆರ್‌ ಪ್ರಕರಣವನ್ನು ದಾಖಲು ಮಾಡಿದ್ದರು. ಆದರೆ ವಿದ್ಯಾ ಜೊತೆ ಮಾತನಾಡಿರುವ ಕಾಲ್‌ರೆಕಾರ್ಡ್‌ ಲಭ್ಯವಾಗಿದ್ದು, ಅದರ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ಪ್ರಕರಣ ದಾಖಲು ಮಾಡಿದ್ದು, ವಿದ್ಯಾ, ಸಂತೋಷ್‌ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ: ಗಾಯ

Posted by Vidyamaana on 2024-05-10 15:14:17 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ: ಗಾಯ

ಪುತ್ತೂರು: ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ರಿಕ್ಷಾವೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಆಟೋ ಚಾಲಕ, ಮಿತ್ತಪಡ್ಪು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ.

ಸ್ಪೇನ್ ಹುಡುಗನ ಕೈ ಹಿಡಿದ ಮಂಡ್ಯ ಯುವತಿ

Posted by Vidyamaana on 2024-04-30 07:14:53 |

Share: | | | | |


ಸ್ಪೇನ್ ಹುಡುಗನ ಕೈ ಹಿಡಿದ ಮಂಡ್ಯ ಯುವತಿ

ಪ್ರೀತಿಗೆ ಯಾವುದೇ ಜಾತಿ, ಗಡಿ, ಭಾಷೆಯ ಹಂಗಿಲ್ಲ, ಎಲ್ಲಿಯ ಮಂಡ್ಯ, ಎಲ್ಲಿಯ ಸ್ಪೇನ್. ಮಂಡ್ಯದ ಯುವತಿಯನ್ನು ಸ್ಪೇನ್‌ನ ಯುವಕನೊಬ್ಬ ಮದುವೆಯಾಗಿದ್ದಾನೆ. ಕೆ.ಆರ್.ಪೇಟೆ ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದಲ್ಲಿ ಜಾನ್‌ವೈಡಲ್ ಮತ್ತು ಬಿ.ಆರ್.ದೀಕ್ಷಿತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೆ.ಆರ್.ಪೇಟೆ ಪಟ್ಟಣದ ಶಮಂತ್ ಟೆಕ್ಸ್‌ಟೈಲ್ಸ್‌ ಮಾಲೀಕರಾದ ರವೀಂದ್ರನಾಥ್ ಅವರ ಪುತ್ರಿ ದೀಕ್ಷಿತಾ ಕೊಯಮತ್ತೂರಿನ ಈಶಾ ಫೌಂಡೇಶನ್‌ನಲ್ಲಿ ಯೋಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಸ್ಪೇನ್ ದೇಶದ ಬಾರ್ಸಿಲೋನ ನಗರದ ಯುವಕ ಜಾನ್‌ವೈಡಲ್ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಇಶಾ ಫೌಂಡೇಶನ್ ಮುಖ್ಯಸ್ಥರಾದ ಸದ್ಗುರು ಜಗ್ಗಿವಾಸುದೇವ್ ಅವರ ಮೂಲಕ ಎರಡೂ ಕುಟುಂಬಗಳ ಮನವೊಲಿಸಿದ ಪರಿಣಾಮವಾಗಿ ಸೋಮವಾರ ಕೆ.ಆರ್.ಪೇಟೆ ಪಟ್ಟಣದಲ್ಲಿ ಸಂಪ್ರದಾಯ ಬದ್ದವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ

ವರ ಜಾನ್‌ವೈಡಲ್ ತಂದೆತಾಯಿಗಳು, ಸಹೋದರ, ಸಹೋದರಿ ಸೇರಿದಂತೆ ವಧುವಿನ ತಂದೆ-ತಾಯಿಗಳು, ಬಂಧುಗಳು, ಹಾಗೂ ಸ್ನೇಹಿತರ ಸಮಕ್ಷಮದಲ್ಲಿ ವಿದೇಶಿ ವರನೊಂದಿಗೆ ಕನ್ನಡದ ಹುಡುಗಿ ಕೆ.ಆರ್.ಪೇಟೆಯ ಹುಡುಗಿ ಧೀಕ್ಷಿತಾ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಪುತ್ತೂರು : ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ

Posted by Vidyamaana on 2024-06-18 14:27:29 |

Share: | | | | |


ಪುತ್ತೂರು : ರೆಫ್ರಿಜರೇಟರ್ ಸ್ಪೋಟಗೊಂಡು ಅಗ್ನಿ ಅವಘಡ

ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.

ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

Posted by Vidyamaana on 2024-01-29 07:59:38 |

Share: | | | | |


ವೇಣೂರು ಪಟಾಕಿ ಘಟಕದಲ್ಲಿ ಸ್ಫೋಟ ಪ್ರಕರಣ ; ಕೇರಳದ ಇಬ್ಬರು, ಹಾಸನದ ಒಬ್ಬ ಸಾವು, ಆರು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ : ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ.  ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.


ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68),  ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ. ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು.‌ ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. 


ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.



Leave a Comment: