ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ : ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು!

Posted by Vidyamaana on 2023-03-29 05:05:44 |

Share: | | | | |


ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ : ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು!

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗವು ಇಂದು ದೆಹಲಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಸಿಎಂ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಇಂದು ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ.

ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ್ ಕುಮಾರ್ ರೈ

Posted by Vidyamaana on 2023-05-22 13:24:27 |

Share: | | | | |


ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ವಿಧಾನಸೌಧ ಶಾಸನ ರಚಿಸುವ ಪುಣ್ಯ ಸ್ಥಳ. ಅಂತಹ ವಿಧಾನಸೌಧಕ್ಕೆ ಶಾಸಕನಾಗಿ ಪ್ರವೇಶ ಮಾಡುವುದೇ ದೊಡ್ಡ ಸಂತೋಷದ ಭಾವನೆ. ಅದಕ್ಕೆ ಕಾರಣರು ನನ್ನ ಕ್ಷೇತ್ರದ ಜನರು. ಅವರಿಗೆ ಇದನ್ನು ಅರ್ಪಿಸಲು ಬಯಸುತ್ತೇನೆ.

ಇದು ಅಶೋಕ್ ಕುಮಾರ್ ರೈ ಅವರ ಫಸ್ಟ್ ರಿಯಾಕ್ಷನ್...

ಶಾಸಕನಾಗಿ ಸೋಮವಾರ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ವಿದ್ಯಮಾನಕ್ಕೆ ಫಸ್ಟ್ ರಿಯಾಕ್ಷನ್ ನೀಡಿದರು.

ಹೊಸ ಧಿರಿಸಿನಲ್ಲಿ ಮಿಂಚುತ್ತಿದ್ದ ಅಶೋಕ್ ಕುಮಾರ್ ರೈ ಅವರು, ವಿಧಾನಸೌಧ ಪ್ರವೇಶಿಸುತ್ತಿದ್ದಂತೆ ಮೆಟ್ಟಿಲುಗಳಿಗೆ ನಮಿಸಿ, ಮುಂದಡಿ ಇಟ್ಟರು.

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

Posted by Vidyamaana on 2023-07-30 23:17:54 |

Share: | | | | |


ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಗರದ ಪಡೀಲ್ ಅಳಪೆ ಪಡ್ಡು ಬಳಿ ನಡೆದಿದೆ.


ಅಳಪೆ ಪಡ್ಡುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.


ಇಂದು ಸಂಜೆ 5 ಗಂಟೆಯ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ ಕುಳಿತಿದ್ದರು.


ಹಳ್ಳದ ದಡದಲ್ಲಿ ಕುಳಿತಿದ್ದ ಸಂದರ್ಭ ವರುಣ್ ನೀರಿಗೆ ಬಿದ್ದಿದ್ದು, ಇದನ್ನು ನೋಡಿದ ವೀಕ್ಷಿತ್ ಕೂಡಲೇ ಹಳ್ಳಕ್ಕೆ ಅವರನ್ನು ರಕ್ಷಿಸಲು ಧುಮಿಕಿದರು. ಆದರೆ ಹಳ್ಳದಲ್ಲಿ ಹೂಳು ತುಂಬಿದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ತೀವ್ರ ಹುಡುಕಾಟದ ಬಳಿಕ ಮೃತದೇಹ ವನ್ನು ಹೊರತೆಗೆಯಲಾಗಿದೆ.

ಪುತ್ತೂರು : ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ

Posted by Vidyamaana on 2023-08-22 09:47:35 |

Share: | | | | |


ಪುತ್ತೂರು : ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ

ಪುತ್ತೂರು : ಕಳೆದ 25 ವರುಷಗಳಿಂದ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.


ಇತ್ತೀಚೆಗೆ ಅನಾರೋಗ್ಯ ಕಾರಣದಿಂದಾಗಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಚಿಕಿತ್ಸೆ ಫಲಿಸದೆ ಇಂದು ನಿಧನರಾದರು.


ಮೃತರು ತಂದೆ ಲೋಕಯ್ಯ ನಾಯ್ಕ್, ತಾಯಿ ಸೀತಾ ಲೋಕಯ್ಯ, ಪತ್ನಿ ರಮ್ಯ, ಪುತ್ರ ಶ್ರೇಯಸ್ ಹಾಗೂ ಸಹೋದರರಾದ ವಿಜಯ್, ದಿನೇಶ್ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕರೆಗೆ ತಳ್ಳಿದ ದುಷ್ಕರ್ಮಿಗಳು; ಕಾರಿನಲ್ಲಿದ್ದ ಬೆಳ್ತಂಗಡಿಯ ಆಟೋ ಚಾಲಕ ಸಾಹುಲ್ ಸಹಿತ ಮೂವರ ಸಾವು

Posted by Vidyamaana on 2024-03-22 17:14:46 |

Share: | | | | |


ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕರೆಗೆ ತಳ್ಳಿದ ದುಷ್ಕರ್ಮಿಗಳು; ಕಾರಿನಲ್ಲಿದ್ದ ಬೆಳ್ತಂಗಡಿಯ ಆಟೋ ಚಾಲಕ ಸಾಹುಲ್ ಸಹಿತ ಮೂವರ ಸಾವು

ಬೆಳ್ತಂಗಡಿ : ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯಲ್ಲಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್ ಎಂಬವರಿಗೆ ಸೇರಿದ KA43 ರಿಜಿಸ್ಟ್ರೇಷನ್ ನಂಬರಿನ ಎಸ್‌ ಪ್ರೆಸ್‌ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.

ಕಾರಿನಲ್ಲಿದ್ದವರು ಬೆಳ್ತಂಗಡಿ ನಿವಾಸಿಗಳು:

ಕಾರಿನಲ್ಲಿದ್ದವರನ್ನು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲ್ ಗ್ರಾಮದ ನಿವಾಸಿ ಇಮ್ಮಿಯಾಜ್(34) ಎಂದು ಗುರುತಿಸಲಾಗಿದೆ.


ಮೂವರು ಯಾವ ಕಾರಣಕ್ಕೆ ತುಮಕೂರು ಕಡೆಗೆ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನಜ್ಮಾ ನಜೀರ್‌ ಚಿಕ್ಕನೇರಳೆ ಕಾಂಗ್ರೆಸ್‌ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ!

Posted by Vidyamaana on 2024-03-31 20:24:30 |

Share: | | | | |


ನಜ್ಮಾ ನಜೀರ್‌ ಚಿಕ್ಕನೇರಳೆ ಕಾಂಗ್ರೆಸ್‌ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ!

ಬೆಂಗಳೂರು : ನಜ್ಮಾ ನಜೀರ್ ಚಿಕ್ಕನೇರಳೆ ಅವರು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದಾರೆ.ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್‌ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ.ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್‌ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕೈ ಅನ್ನು ಹಿಗ್ಗಾಮುಗ್ಗ ಜಾಡಿಸಿದ್ದು ಅತಿ ಹೆಚ್ಚು, ಈಗ ಅವರೇ ಕಾಂಗ್ರೆಸ್‌ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ.



Leave a Comment: