ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಪುತ್ತೂರಿನ ಹಲವು ಗ್ರಾಮಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ? ಇಲ್ಲಿದೆ ವಿವರ

Posted by Vidyamaana on 2024-02-22 08:28:07 |

Share: | | | | |


ಪುತ್ತೂರಿನ ಹಲವು ಗ್ರಾಮಗಳಲ್ಲಿ  ಇಂದು  ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ? ಇಲ್ಲಿದೆ ವಿವರ

ಪುತ್ತೂರು: 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.22ರಂದು ಪೂರ್ವಾಹ್ನ 10ರಿಂದ ಸಾಯಂಕಾಲ 4ಗಂಟೆಯವರೆಗೆ 33ಕೆ.ವಿ ಪುತ್ತೂರು ಕಡಬ ಸುಬ್ರಹ್ಮಣ್ಯ, 33ಕೆವಿ ಪುತ್ತೂರು-ಕುಂಬ್ರ, 33ಕೆವಿ ಪುತ್ತೂರು-ಸುಳ್ಯ, ಹಾಗೂ 33ಕೆ.ವಿ ಪುತ್ತೂರು- ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.


ನಿರ್ವಹಣೆ ಮತ್ತು ಉಪ್ಪಿನಂಗಡಿ - ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಉಪ್ಪಿನಂಗಡಿ ಓಲ್ಡ್, ಕಾಂಚನ ಮತ್ತು ಉಪ್ಪಿನಂಗಡಿ ವಾಟರ್ ಸಪ್ಪೆ ಫೀಡರ್‌ನಲ್ಲಿ ಫೆ.22 ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು ಬಿಂದು ಮತ್ತು ಕ್ಯಾಂಪ್ಲೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಮತ್ತು 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ನಗರಸಭಾ ವ್ಯಾಪ್ತಿ, ಬಜತ್ತೂರು, ಹಿರೇಬಂಡಾಡಿ, ಉಪ್ಪಿನಂಗಡಿ, ಕೊಯಿಲ, ವಾಟರ್‌ಸ, ಬೆಳ್ಳಿಪ್ಪಾಡಿ ಮತ್ತು ರಾಮಕುಂಜ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕೆಲಸಕ್ಕೆಂದು ತೆರಳಿದ್ದ ಶ್ರೀದೇವಿ ನಾಪತ್ತೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Posted by Vidyamaana on 2023-06-11 12:59:53 |

Share: | | | | |


ಕೆಲಸಕ್ಕೆಂದು ತೆರಳಿದ್ದ ಶ್ರೀದೇವಿ ನಾಪತ್ತೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣರವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು.ಶ್ರೀದೇವಿ ರವರು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಿಟ್ಲ ವಲಯದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದು, ಜೂ.9 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಎಂಬಲ್ಲಿರುವ ಮನೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಿ ಬರುವುದಾಗಿ ವಿಟ್ಲಕ್ಕೆ ಹೋದವರು ಸಾಯಂಕಾಲವಾದರೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ವೇಳೆ ಶ್ರೀದೇವಿಯವರ ಮೊಬೈಲ್ ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಆಕೆಯ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತಾದರೂ ಆಕೆ ಪತ್ತೆಯಾಗಿಲ್ಲ ಎಂದು ಶ್ರೀದೇವಿ ರವರ ತಂದೆ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ‌ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

Posted by Vidyamaana on 2023-06-14 02:05:46 |

Share: | | | | |


ಬೆಳ್ತಂಗಡಿ : ಏಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012 ರಲ್ಲಿ ದಾಖಲಾಗಿದ್ದ ಗುರುವಾಯನಕೆರೆಯಲ್ಲಿ ಅಪಘಾತವಾಗಿ ಓರ್ವನ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ  ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ  ವಾರಂಟ್ಆರೋಪಿ ಸಯ್ಯದ್ ಅಬಸಾರ್ ಎಂಬವರ ಮಗ ಸಯ್ಯದ್ ಶಬೀರ್ (33) ಎಂಬಾತನನ್ನು ಜೂನ್ 12 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವ್ರಷಭ ಹಾಗು ಬಸವರಾಜ್ ರವರು  ಬೆಂಗಳೂರು  ಪೀಣ್ಯದಿಂದ ವಶಕ್ಕೆ ಪಡೆದು ಜೂನ್ 13 ರಂದು ಬೆಳ್ತಂಗಡಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ಷರತ್ತುಬದ್ದ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

Posted by Vidyamaana on 2023-03-21 09:33:25 |

Share: | | | | |


ಹಿಂದುತ್ವದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್: ನಟ ಚೇತನ್ ಅರೆಸ್ಟ್.14 ದಿನಗಳ ಕಾಲ ನ್ಯಾಯಾಂಗ ಬಂಧನ

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಹಿಂದುತ್ವದ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲಿಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

Posted by Vidyamaana on 2023-10-07 20:22:31 |

Share: | | | | |


ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಹಣದಲ್ಲಿ ಲಕ್ಷ ರೂಪಾಯಿ ಮಾತ್ರ ಎಗರಿಸಿದ ಕಳ್ಳರು

ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾಗಿರುವ ಬಗ್ಗೆ ಬಿಸಿರೋಡಿನಲ್ಲಿ ವರದಿಯಾಗಿದೆ.


    ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂಪಾಯಿ ಒಂದು ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.


   ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ ಹಣವನ್ನು ಬ್ಯಾಂಕಿನಿಂದ ಡ್ರಾ ಮಾಡಿ ಬಳಿಕ ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ಇರಿಸಲಾಗಿದ್ದ, ದ್ವಿಚಕ್ರವಾಹನದ ಸೀಟಿನಡಿ ಇರುವ ಬಾಕ್ಸ್ ನಲ್ಲಿ ಇರಿಸಿದ್ದರು.


ಬಳಿಕ ಬೇರೆಬೇರೆ ಕೆಲಸ ನಿಮಿತ್ತ ಅಲ್ಲಿಂದ ತೆರಳಿದ್ದರು.


ಮಧ್ಯಾಹ್ನ ಬಳಿಕ ಬಂದು ಸೀಟು ಲಾಕ್ ತೆರೆದಾಗ ಅದರೊಳಗೆ ಇರಿಸಲಾಗಿದ್ದ 1.40 ಲಕ್ಷದಲ್ಲಿ 40 ಸಾವಿರ ಮಾತ್ರ ಇದ್ದು ಉಳಿದ 1ಲಕ್ಷ ಹಣ ಕಳವಾಗಿದೆ ಎಂದು ತಿಳಿಸಿದ್ದಾರೆ.


ಬಂಟ್ವಾಳ ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

Posted by Vidyamaana on 2024-02-28 07:52:06 |

Share: | | | | |


ಪಿ.ಎಚ್.ಡಿ. ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ : ಉಳ್ಳಾಲ ಠಾಣೆಗೆ ಪುತ್ತಿಲ ಭೇಟಿ ; ಠಾಣಾಧಿಕಾರಿಗಳ ಜೊತೆ ಮಾತುಕತೆ

ಮಂಗಳೂರು : ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.ಗಾಂಜಾ ಪ್ರಕರಣದ ಆರೋಪಿ, ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಸ್ಪಷ್ಟವಾಗಿದೆ ಎನ್ನಲಾಗುತ್ತಿದೆ.ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಶಾರೂಕ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದರು.


ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ. ಆನಂತರ ಊರಿಗೆ ಬಂದು ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸುತ್ತಿದ್ದ ಎನ್ನಲಾಗಿದೆ.ಯಾವುದೇ ಉದ್ಯೋಗ ಇಲ್ಲದ ಶಾರೂಖ್ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನಲಾಗಿದೆ.


ಠಾಣಾಧಿಕಾರಿ ಜೊತೆ ಮಾತನಾಡಿದ ಪುತ್ತಿಲ, ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಈಗಾಗಲೇ ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯರನ್ನು ಸಿಲುಕಿಸಿ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಸಿಲುಕಿಸಿರುವುದು ಗೊತ್ತಿರುವಾಗ ಈ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.


ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರುಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಆಕೆ ಆಗಮಿಸಿದ ಕೂಡಲೇ ಸೂಕ್ತ ಹಾಸ್ಟೇಲ್ ವ್ಯವಸ್ಥೆಗೆ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಬೇಕೆಂದು ಪುತ್ತಿಲರ ಜೊತೆ ಠಾಣಾಧಿಕಾರಿ ಹೇಳಿದರು.


ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.



Leave a Comment: