ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ; ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಸುದ್ದಿಗಳು News

Posted by vidyamaana on 2024-06-30 21:58:04 |

Share: | | | | |


ಕೆಮ್ಮಾರ | ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಅವಘಡ;  ಅಬ್ದುಲ್ ರಹಿಮಾನ್ ಅವರ ಹೊಸ ಮನೆ ಭಾಗಶಃ ಭಸ್ಮ

ಉಪ್ಪಿನಂಗಡಿ: ಕಡಬ ತಾಲ್ಲೂಕು ಕೊಯಿಲ ಗ್ರಾಮದ ಕೆಮ್ಮಾರ ಎಂಬಲ್ಲಿ ಭಾನುವಾರ ಮನೆಯೊಳಗೆ ಬೆಂಕಿ ಹೊತ್ತಿಕೊಂಡು ಮನೆಯ ಒಳ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮನೆ ಭಾಗಶಃ ಹಾನಿಗೊಂಡಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಮ್ಮಾರ ಶಾಲೆ ಬಳಿಯ ನಿವಾಸಿ ದಿ.ಇಬ್ರಾಹಿಂ ಎಂಬುವರ ಪುತ್ರ ಅಬ್ದುಲ್ ರಹಿಮಾನ್ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ.

ಮನೆಯ ಮಾಸ್ಟರ್ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯೊಳಗೆ ಆವರಿಸಿದೆ. ಮನೆಯೊಳಗೆ ಇದ್ದ ಕಪಾಟು, ಮಂಚ, ಕಿಟಕಿ, ಬಾಗಿಲು, ಫ್ರಿಜ್, ವಾಷಿಂಗ್ ಮೆಸಿಷಿನ್, ಬಟ್ಟೆಗಳು, ಗೃಹೋಪಯೋಗಿ ವಸ್ತುಗಳು, ಆಹಾರ ಸಾಮಗ್ರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಬೆಂಕಿಯ ತಾಪಕ್ಕೆ 2 ಕಡೆ ಗೋಡೆ ಬಿರುಕು ಬಿಟ್ಟಿದೆ. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಗ್ರಾನೈಟ್ ಮತ್ತು ಅಡುಗೆ ಕೋಣೆಯಲ್ಲಿ ನೆಲದ ಟೈಲ್ಸ್ ಸಿಡಿದಿದೆ. ಇದರಿಂದಾಗಿ ಸುಮಾರು ₹ 35 ಲಕ್ಷ ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಹಿಮಾನ್ ಅವರು ಕಂದಾಯ ಇಲಾಖೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ಮಾತ್ರ ಇದ್ದು, ಮನೆಯೊಳಗೆ ಹೊಗೆ ತುಂಬುವುದನ್ನು ಗಮನಿಸಿ ಮನೆಯಿಂದ ಹೊರ ಬಂದು ಬೊಬ್ಬೆ ಹಾಕಿ ಪಕ್ಕದ ಮನೆಯವರನ್ನು ಕರೆದಿದ್ದಾರೆ. ಪಕ್ಕದ ಮನೆಯವರು ಸ್ಥಳೀಯರಿಗೆ ಕರೆ ಮಾಡಿದ್ದಾರೆ. ಅಬ್ದುಲ್ ರಹಿಮಾನ್, ಪತ್ನಿ, ಮಕ್ಕಳು ಪತ್ನಿಯ ತವರು ಮನೆಗೆ ಹೋಗಿದ್ದರು. ವರ್ಷದ ಹಿಂದೆ ಮನೆ ನಿರ್ಮಿಸಲಾಗಿತ್ತು.

ಬೆಂಕಿ ಅವಘಡದ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತರಾದ ಸಲೀಕತ್, ಅಬೂಬಕ್ಕರ್, ರಿಯಾಝ್, ಜುನೈದ್ ಮನೆಯೊಳಗೆ ಪ್ರವೇಶಿಸಿ

ವಿದ್ಯುತ್ ಸಂಪರ್ಕ, ಗ್ಯಾಸ್ ಸಂಕರ್ಪ ಕಡಿತಗೊಳಿಸಿದರು. ಪುತ್ತೂರಿನಿಂದ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಘಟನಾ ಸ್ಥಳಕ್ಕೆ ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಸುಭಾಸ್, ಸದಸ್ಯ ನಝೀರ್ ಪೂರಿಂಗ, ಆತೂರು ಬದ್ರಿಯಾ ಮಸೀದಿ ಖತೀಬ್ ಜುನೈದ್ ಜಿಫ್ರಿ ತಂಙಳ್ ಭೇಟಿ ನೀಡಿದರು. ಕೊಯಿಲ ಗ್ರಾಮಕರಣಿಕ ಶೇಷಾದ್ರಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ನಾನು ಕೋಣೆಯೊಂದರಲ್ಲಿ ಕೆಲಸದಲ್ಲಿ ನಿರತಳಾಗಿದ್ದೆ. ತುಂತುರು ಮಳೆಯಾಗುತ್ತಿತ್ತು. ಭಾರಿ ಸಿಡಿಲಿನ ಶಬ್ದ ಕೇಳಿಸಿತ್ತು. ಸ್ವಲ್ಪ ಹೊತ್ತಿನ ಬಳಿಕ ಮನೆಯೊಳಗೆ ಹೊಗೆ ತುಂಬತೊಡಗಿತು. ಮನೆಯಿಂದ ಹೊರ ಬರುವುದಕ್ಕೂ ದಾರಿ ಕಾಣುತ್ತಿರಲಿಲ್ಲ ಎಂದು ಅಬ್ದುಲ್ ರಹಿಮಾನ್ ಅವರ ತಾಯಿ ಸಕೀನ ತಿಳಿಸಿದರು.

ಉಪ್ಪಿನಂಗಡಿ ಸಮೀಪದ ಕೆಮ್ಮಾರದಲ್ಲಿ ಮನೆ ಭಾಗಶಃ ಬೆಂಕಿಗೆ ಆಹುತಿಯಾಗಿದ್ದು ಕಂದಾಯ ಇಲಾಖೆ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು

 Share: | | | | |


ವಿಧ್ಯಾರ್ಥಿನಿ ವಿಧ್ಯಾಲಕ್ಷ್ಮೀ ನಾಪತ್ತೆ

Posted by Vidyamaana on 2024-05-18 07:25:22 |

Share: | | | | |


ವಿಧ್ಯಾರ್ಥಿನಿ ವಿಧ್ಯಾಲಕ್ಷ್ಮೀ ನಾಪತ್ತೆ

ಉಡುಪಿ, ಮೇ 17 : ಮನೆಯಿಂದ ಕಾಲೇಜಿಗೆ ಹೋಗುತ್ತೇನೆ ಎಂದು ಹೋಗಿದ್ದ ವಿಧ್ಯಾರ್ಥಿನಿ ನಾಪತ್ತೆಯಾದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ(20) ಎಂದು ಗುರುತಿಸಲಾಗಿದ್ದು, ಎಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

ಮಣಿಪುರದಲ್ಲಿ ನಾಚಿಕೆಗೇಡಿನ ಕೃತ್ಯ ಆರೋಪಿಗಳನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

Posted by Vidyamaana on 2023-07-20 06:14:25 |

Share: | | | | |


ಮಣಿಪುರದಲ್ಲಿ ನಾಚಿಕೆಗೇಡಿನ ಕೃತ್ಯ ಆರೋಪಿಗಳನ್ನು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ, "ಮಣಿಪುರದ ಘಟನೆ 140 ಕೋಟಿ ಭಾರತೀಯರನ್ನು ನಾಚಿಕೆಪಡುವಂತೆ ಮಾಡಿದೆ. ಆರೋಪಿಗಳನ್ನು ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ.ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ವೈರಲ್ ಆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದ ಹೆಣ್ಣುಮಕ್ಕಳೊಂದಿಗೆ ನಡೆದ ಘಟನೆಯನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ

ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Posted by Vidyamaana on 2023-07-27 16:32:20 |

Share: | | | | |


ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ..ಸುಳ್ಳುಗಳಿಗೆ ದಾಳವಾಗಬೇಡಿ; ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಆಡಳಿತಾತ್ಮಕ ಒತ್ತಡಗಳ ನಡುವೆಯೂ ನಾನು ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


ಗುರುವಾರ ಜು 27 ರಂದು ಅರಮನೆ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆವಹಿಸಿ ಮಾತನಡಿದ ಅವರು, ಸರಕಾರದಿಂದ ತುರ್ತಾಗಿ ಆಗಬೇಕಿರುವ ಕೆಲಸಗಳು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ಜತೆಗೆ, ಶಾಸಕರಲ್ಲಿ ಏನೇ ಅಸಮಾಧಾನಗಳಿದ್ದರೂ ನೇರವಾಗಿ ನನಗೆ ಹೇಳಿ, ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಎಂದು ಸಲಹೆ ನೀಡಿದರು.


ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪತ್ರವನ್ನು ತಮ್ಮದಲ್ಲ ಎಂದು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾಗಿದೆ. ವಿಪರ್ಯಾಸ ಅಂದರೆ ಸತ್ಯ ಏನು ಎಂದು ಗೊತ್ತಾಗುವುದರೊಳಗೆ ಅವರು ಸುಳ್ಳನ್ನು ವ್ಯಾಪಕವಾಗಿಹರಡಿದ್ದಾರೆ ಎಂದ ಅವರು, ಕರ್ನಾಟಕ ರಾಜ್ಯದ ಜನತೆ ಈ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ತೀರ್ಪು ಇಡೀ ದೇಶದ ರಾಜಕಾರಣಕ್ಕೆ ಗೇಮ್ ಚೇಂಜರ್ ಎನ್ನುವ ವಿಶ್ಲೇಷಣೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ವ್ಯಕ್ತವಾಗಿದೆ. ಹೀಗಾಗಿ ಸುಳ್ಳಿನ ಸರಮಾಲೆಗಳ ಮೂಲಕ ಅವರು ಐದು ಗ್ಯಾರಂಟಿಗಳ ಯಶಸ್ಸು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ. ಈ ಬಗ್ಗೆ ಪ್ರತಿಯೊಬ್ಬ ಶಾಸಕರೂ ಎಚ್ಚರದ ಸ್ಥಿತಿಯಲ್ಲಿದ್ದು ಅವರ ಸುಳ್ಳುಗಳಿಗೆ ನೀವೂ ದಾಳ ಆಗಬೇಡಿ ಎಂದು ಸಿದ್ದರಾಮಯ್ಯ ಎಚ್ಚರಿಸಿದರುಬಿಜೆಪಿ ಸುಳ್ಳಿನ ಕಾರ್ಖಾನೆ: ಬಿಜೆಪಿ ಪರಿವಾರ ಸುಳ್ಳಿನ ಕಾರ್ಖಾನೆ. ಮೊದಲು ಸುಳ್ಳನ್ನು ಸೃಷ್ಟಿಸುತ್ತಾರೆ. ಬಳಿಕ ಆ ಸುಳ್ಳನ್ನು ತಮ್ಮ ಸುಳ್ಳಿನ ಪರಿವಾರದ ಮೂಲಕ ಹರಡಿಸುತ್ತಾರೆ. ಕೊನೆಗೆ ಅದೇ ಸುಳ್ಳಿನ ಮೇಲೆ ಮಾಧ್ಯಮಗಳಲ್ಲಿ ಚರ್ಚೆ ಆಗುವಂತೆ ಮಾಡುತ್ತಾರೆ. ಈ ಬಗ್ಗೆ ಎಚ್ಚರದಿಂದಿರಿ ಎಂದ ಅವರು, ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳನ್ನು ಸೃಷ್ಟಿಸಿ, ಅದನ್ನು ಸತ್ಯ ಎನ್ನುವಂತೆ ಬಿಂಬಿಸುತ್ತಾರೆ. ಇದಕ್ಕಾಗಿ ಅವರು ವಿಪರೀತ ಖರ್ಚು ಮಾಡುತ್ತಾರೆ. ಇದನ್ನೆಲ್ಲಾ ನಾವು ಸರಿಯಾಗಿ ಅರ್ಥ ಮಾಡಿಕೊಂಡು ಜವಾಬ್ದಾರಿಯಿಂದ ವರ್ತಿಸಬೇಕೆಂದು ಅವರು ಹೇಳಿದರು.


ಹೊಸ ಸರಕಾರ ಬಂದ ಬಳಿಕ ನಮ್ಮಎದುರಿಗೆ ತಕ್ಷಣಕ್ಕೆ ರಾಜ್ಯದ ಆರ್ಥಿಕತೆಯನ್ನು ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿ ಇತ್ತು. ಜತೆಗೆ ಆಯವ್ಯಯ ರೂಪಿಸುವ ಹೊಣೆಗಾರಿಕೆಯೂ ಇತ್ತು. ಹಾಗೂ ಹೊಸ ಸರ್ಕಾರವಾದ್ದರಿಂದ ಜಂಟಿ ಅಧಿವೇಶನವನ್ನೂ ಕರೆಯಬೇಕಿತ್ತು. ಹೊಸ ಶಾಸಕರಿಗೂ ತಮ್ಮ ಅಭಿಪ್ರಾಯ, ನಿಲುವನ್ನು ವ್ಯಕ್ತಪಡಿಸಲು ಅವಕಾಶ ಆಗಬೇಕು ಎನ್ನುವ ಕಾರಣದಿಂದ ಮೂರು ವಾರ ಮೊದಲ ಅಧಿವೇಶನವನ್ನು ನಡೆಸಿದೆವು ಎಂದರು.

ದ.ಕ., ಉಡುಪಿ ಜಿಲ್ಲೆ: (ಮಾ.12) ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ

Posted by Vidyamaana on 2024-03-11 19:42:48 |

Share: | | | | |


ದ.ಕ., ಉಡುಪಿ ಜಿಲ್ಲೆ: (ಮಾ.12) ಮಂಗಳವಾರದಿಂದ ರಮಝಾನ್ ಉಪವಾಸ ಆರಂಭ

ಮಂಗಳೂರು: ಪವಿತ್ರ ರಮಝಾನ್‌ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್‌.ಎಂ. ರಶೀದ್‌ ಹಾಜಿ ತಿಳಿಸಿದ್ದಾರೆ.

*ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಬಳ್ ಅಲ್ ಬುಖಾರಿ ಪ್ರತ್ಯೇಕ ಹೇಳಿಕೆಯಲ್ಲಿ ಮಂಗಳವಾರದಿಂದ ಉಪವಾಸ ಆಚರಿಸಲು ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

Posted by Vidyamaana on 2023-07-27 03:25:10 |

Share: | | | | |


ಕಾನೂನಿನ ಕಣ್ಣಿಗೆ ಮಣ್ಣೆರಚಿ ರಿಕ್ಷಾ ಗಾಜಿಗೆ ಟಿಂಟ್

ಪುತ್ತೂರು: ರಿಕ್ಷಾ ಗಾಜಿಗೆ ಟಿಂಟ್ ಹಾಕಿ ಓಡಾಡುತ್ತಿರುವ ರಿಕ್ಷಾಗಳನ್ನು ನಿಲ್ಲಿಸಿ, ಅವುಗಳ ಟಿಂಟ್ ತೆಗೆಸುವ ಕಾರ್ಯಾಚರಣೆಗೆ ಪುತ್ತೂರು ಆರ್.ಟಿ.ಓ. ಅಧಿಕಾರಿಗಳು ಮುಂದಾಗುತ್ತಿದ್ದಾರೆ.

ರಿಕ್ಷಾದ ಮುಂಭಾಗದ ಗಾಜಿಗೆ ಟಿಂಟ್ ಹಾಕುವಂತಿಲ್ಲ ಎನ್ನುತ್ತದೆ ಕಾನೂನು. ಕಂಪೆನಿ ನಿರ್ಮಿಸಿಕೊಡುವ ರಿಕ್ಷಾವನ್ನು ಯಥಾವತ್ತಾಗಿ ಬಳಸಬೇಕು. ಗಾಜಿಗೆ ಟಿಂಟ್ ಹಾಕುವುದಕ್ಕಾಗಲಿ ಅಥವಾ ಗಾಜು ಮುಚ್ಚಿ ಹೋಗುವಂತೆ ಅಕ್ಷರಗಳನ್ನು ಬರೆಯುವುದಾಗಲಿ ಮಾಡುವಂತಿಲ್ಲ. ಹೀಗೆ ಮಾಡುವುದರಿಂದ ರಿಕ್ಷಾ ಚಾಲಕರಿಗೆ ಅಡ್ಡಿಯಾಗಿ, ಅಪಘಾತಕ್ಕೆ ಕಾರಣವಾಗುವ ಸಂದರ್ಭಗಳು ಇವೆ. ಇದಕ್ಕೆ ಹಲವು ನಿದರ್ಶನಗಳು ಇವೆ.

ಪುತ್ತೂರಿನಲ್ಲಿ ಓಡಾಡುವ ರಿಕ್ಷಾಗಳಲ್ಲಿ ಮುಂಭಾಗದ ಗಾಜಿನಲ್ಲಿ ಸ್ವಲ್ಪ ಭಾಗವನ್ನು ಮಾತ್ರ ಬಿಟ್ಟು, ಉಳಿದ ಭಾಗಗಳಿಗೆ ಪೂರ್ತಿಯಾಗಿ ಟಿಂಟ್ ಹಾಕಿರುವುದು ಇದೆ. ರಿಕ್ಷಾದ ಒಳಗಡೆ ತಂಪಿನ ವಾತಾವರಣ ಇರಲಿ ಎಂಬ ಕಾರಣಕ್ಕೆ, ಟಿಂಟ್ ಹಾಕಲಾಗುತ್ತದೆ. ಆದರೆ ಇದುವೇ ಅಪಘಾತಕ್ಕೆ ಕಾರಣವಾಗುವ ಸಂದರ್ಭ ಹೆಚ್ಚು. ಆದ್ದರಿಂದ ಆರ್.ಟಿ.ಓ. ಅಧಿಕಾರಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಈಗಾಗಲೇ ಹಲವು ರಿಕ್ಷಾಗಳ ಟಿಂಟ್ ಗಳನ್ನು ತೆಗೆಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಿಕ್ಷಾಗಳು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಅಥವಾ ಬರಹಗಳನ್ನು ತೆಗೆಯಬೇಕು ಎನ್ನುವುದು ಕಾರ್ಯಾಚರಣೆಯ ಉದ್ದೇಶ.


ಸುರಕ್ಷಿತ ಚಾಲನೆ ನಿಮ್ಮದಾಗಲಿ:

ರಿಕ್ಷಾದ ಗಾಜಿಗೆ ಟಿಂಟ್ ಹಾಕುವುದು ಅಪಾಯಕಾರಿ. ಟಿಂಟ್ ಹಾಕುವುದು ತಪ್ಪು ಕೂಡ. ಆದ್ದರಿಂದ ದೃಷ್ಟಿಗೆ ಅಡ್ಡವಾಗುವಷ್ಟು ಗಾಜಿಗೆ ಟಿಂಟ್ ಹಾಕಿರುವ ರಿಕ್ಷಾಗಳಿಗೆ ದಂಡ ವಿಧಿಸಲು ಅವಕಾಶವಿದೆ. ಆದ್ದರಿಂದ ರಿಕ್ಷಾ ಚಾಲಕರು ಸ್ವಯಂಪ್ರೇರಿತರಾಗಿ ಇಂತಹ ಟಿಂಟ್ ಗಳನ್ನು ತೆಗೆದು, ಸುರಕ್ಷಿತ ಚಾಲನೆ ನಡೆಸಬೇಕು.

ವಿಶ್ವನಾಥ ಅಜಿಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪುತ್ತೂರು

ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

Posted by Vidyamaana on 2023-04-13 06:15:49 |

Share: | | | | |


ಅಂಕೋಲಾ : ರಿಕ್ಷಾ ಢಿಕ್ಕಿಯಾಗಿ ಗರ್ಭಿಣಿ ಶೋಭಾ ಮೃತ್ಯು

ಅಂಕೋಲಾ : ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಬಡಿದು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಭಾವಿಕೇರಿಯಲ್ಲಿ ಸಂಭವಿಸಿದೆ. ಶೋಭಾ ಗೋಪಾಲ ನಾಯಕ (28) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ.


ಸುಮಾರು 3-4 ತಿಂಗಳ ಗರ್ಭಿಣಿಯಾಗಿದ್ದ ಈಕೆ ತನ್ನ ಮನೆ ಮುಂದಿನ ಟಾರ ರಸ್ತೆ ಪಕ್ಕದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ತನ್ನ ಗಂಡ ವೈಭವ ನಾಯಕ ಈತನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಜವರಾಯನಂತೆ ಬಂದ ರಿಕ್ಷಾ ಚಾಲಕ ಅತಿ ವೇಗ ಹಾಗೂ ನಿರ್ಲಕ್ಷದಿಂದ ತನ್ನ ವಾಹನವನ್ನು ಚಲಾಯಿಸಿ, ಮಹಿಳೆಗೆ ಜೋರಾಗಿ ಡಿಕ್ಕಿಪಡಿಸಿದ ಪರಿಣಾಮ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾಳೆ. ಪಟ್ಟಣದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ಚಾಲಕ ಗರ್ಭಿಣಿ ಮಹಿಳೆಗೆ ಅಪಘಾತಪಡಿಸಿ ತಾನು ಚಲಾಯಿಸುತ್ತಿದ್ದ ರಿಕ್ಷಾ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ..ಅಪಘಾತ ಪಡಿಸಿದ ರಿಕ್ಷಾಕ್ಕೆ ಆತನೇ ಮಾಲಕನೇ ಅಥವಾ ತನ್ನ ಸಂಬಂಧಿಗಳ ರಿಕ್ಷಾವನ್ನು ಈತ ಚಾಲನೆ ಮಾಡುತ್ತಿದ್ದನೇ ಎಂಬ ಅನುಮಾನದ ಮಾತುಗಳು ಕೇಳಿ ಬರುತ್ತಿದ್ದು ಈ ಕುರಿತು ಪೊಲೀಸ್ ತನಿಖೆ ಮುಂದುವರೆದಿದೆ



Leave a Comment: