ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ

Posted by Vidyamaana on 2024-03-07 12:39:49 |

Share: | | | | |


ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ

ಬೆಳ್ತಂಗಡಿ :ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹಾವೀರ ಅರಿಗ, ಉಪಾಧ್ಯಕ್ಷರಾಗಿ ಸುದ್ದಿ ಉದಯ ಪತ್ರಿಕೆಯ ಆಡಳಿತ ನಿರ್ದೇಶಕ ತುಕಾರಾಮ್ ಬಿ. ಐದು ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಆನಂದ ಶೆಟ್ಟಿ, ಗೋಪಾಲ್ ರಾವ್, ಮಮತಾ ಶೆಟ್ಟಿ, ವೀಣಾ ವಿನೋದ್ ಕುಮಾರ್, ಕೃಷ್ಣಪ್ಪ ಗುಡಿಗಾರ್, ಸಚಿನ್ ಕುಮಾರ್ ನೊಜೋಡಿ, ಸಂತೋಷ್ ಕುಮಾರ್, ಶರತ್ ಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ಪ್ರಸಾದ್ ಬಿ ಆಯ್ಕೆಯಾಗಿದ್ದಾರೆ.

ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

Posted by Vidyamaana on 2024-01-18 07:28:03 |

Share: | | | | |


ಜಾಗದ ವಿವಾದ ಸಹಿತ ಅಯೋಧ್ಯಾ ಮಂತ್ರಾಕ್ಷತೆ ಕಾರಣಕ್ಕೇ ಹಲ್ಲೆ ನಡೆಸಲಾಗಿದೆ  ಹಲ್ಲೆಗೊಳಗಾದ ಸಂತೋಷ್ ಬಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಆರೋಪ

ಪುತ್ತೂರು: ಜಾಗದ ವಿವಾದ ಸಹಿತ ಅಯೋಧ್ಯೆಯ ಮಂತ್ರಾಕ್ಷತೆ ವಿತರಣಾ ಜವಾಬ್ದಾರಿ ನಮಗೆ ನೀಡಲಿಲ್ಲ ಎಂಬ ಕಾರಣಕ್ಕೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರಿಂದ ನಮಗೆ ಹಲ್ಲೆ ನಡೆದಿದೆ ಎಂದು ಸೋಮವಾರ ರಾತ್ರಿ ಹಲ್ಲೆಗೊಳಗಾದ ಮುಂಡೂರು ನಿವಾಸಿ ಸಂತೋಷ್ ಬಿ.ಕೆ. ಆರೋಪಿಸಿದ್ದಾರೆ.


ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಂಡೂರು ಪರಿಸರದಲ್ಲಿ ಅಕ್ಷತೆ ವಿತರಣೆ ಜವಾಬ್ದಾರಿಯನ್ನು ನನಗೆ ನೀಡಲಾಗಿದ್ದು, ಶುಕ್ರವಾರ ಮಂತ್ರಾಕ್ಷತೆ ವಿತರಿಸಿ ಉಳಿದ ಮಂತ್ರಾಕ್ಷತೆಯನ್ನು ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಇಟ್ಟಿದ್ದೇವು. ಅದೇ ರಾತ್ರಿ ಪುತ್ತಿಲ ಪರಿವಾರದವರು ನಮ್ಮಲ್ಲಿ ಕೇಳದೆ ಮಂತ್ರಾಕ್ಷತೆಯನ್ನು ದೇವಸ್ಥಾನದಿಂದ ತೆಗೆದುಕೊಂಡು ಹೋಗಿ ವಿತರಿಸಿದ್ದಾರೆ. ಇದೆಲ್ಲಾ ನಡೆದ ಬಳಿಕ ಸೋಮವಾರ ಕುಕ್ಕಿನಡ್ಕ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಕುರಿತು ಸಭೆ ನಡೆದಿದ್ದು, ಸಭೆ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಕಾಲುದಾರಿಯಲ್ಲಿ ಧನಂಜಯ, ಕೇಶವ ಹಾಗೂ ಜಗದೀಶ್ ಎಂಬವರು ಏಕಾಏಕಿ ಕಬ್ಬಿಣದ ರಾಡು ಹಾಗೂ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಬೊಬ್ಬೆ ಕೇಳಿ ನನ್ನ ತಾಯಿ ಸವಿತಾ ಅವರು ಸ್ಥಳಕ್ಕೆ ಬಂದಾಗ ಅವರನ್ನು ದೂಡಿ ಹಾಕಿದ್ದಾರೆ. ಪರಿಣಾಮ ಅವರಿಗೂ ಗಾಯವಾಗಿದೆ ಎಂದು ತಿಳಿಸಿದರು.




ಇದಲ್ಲದೆ ನಾಡಾಜೆ – ಬರೆಕೊಲಾಡಿ ರಸ್ತೆ ವಿವಾದವಿದ್ದು, ರಸ್ತೆಗಾಗಿ ನಮ್ಮ ವರ್ಗ ಜಾಗವನ್ನು ಬಳಸಿಕೊಂಡಿದ್ದರು. ಇದೇ ರಸ್ತೆಯನ್ನು ಮೂರು ವರ್ಷದ ಹಿಂದೆ ಬಂದ್ ಮಾಡಿದ್ದರು. ಬಳಿಕ ಜಾಗದ ವಿವಾದ ಮತ್ತೆ ಮತ್ತೆ ಮರುಕಳಿಸಿತ್ತು. ಈ ಘಟನೆಯಲ್ಲಿ ಸಂಪೂರ್ಣ ಪುತ್ತಿಲ ಪರಿವಾರದ ಕೈವಾಡವಿದೆ. ಈ ಕುರಿತು ಎಲ್ಲಿ ಬೇಕಾದರೂ ಬಂದು ನಾನು ಪ್ರಮಾಣ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?: ಸ್ಪಷ್ಟನೆ ನೀಡಿದ ಕೇಂದ್ರ ಸಚಿವೆ

Posted by Vidyamaana on 2023-10-23 11:39:49 |

Share: | | | | |


ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?: ಸ್ಪಷ್ಟನೆ ನೀಡಿದ ಕೇಂದ್ರ ಸಚಿವೆ

ಮೈಸೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.ಇನ್ನು ಬಗ್ಗೆ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೇ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೇ ಕೆಲಸ ಮಾಡುತ್ತಿದ್ದೇನೆ. ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ

ದಿ.ರಾಜೀವ್ ಗಾಂಧಿ 32 ನೇ ಪುಣ್ಯ ತಿಥಿ ಸೋನಿಯಾ,ರಾಹುಲ್,ಖರ್ಗೆ ಸೇರಿ ಗಣ್ಯರಿಂದ ಪುಷ್ಪನಮನ

Posted by Vidyamaana on 2023-05-21 05:19:54 |

Share: | | | | |


ದಿ.ರಾಜೀವ್ ಗಾಂಧಿ 32 ನೇ ಪುಣ್ಯ ತಿಥಿ ಸೋನಿಯಾ,ರಾಹುಲ್,ಖರ್ಗೆ ಸೇರಿ ಗಣ್ಯರಿಂದ ಪುಷ್ಪನಮನ

ನವದೆಹಲಿ: ಇಂದು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿ ಅಂಗವಾಗಿ ದೆಹಲಿಯ ವೀರಭೂಮಿಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶ್ರದ್ಧಾಂಜಲಿ ಸಲ್ಲಿಸಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪುಷ್ಪನಮನ ಸಲ್ಲಿಸಿದರು.ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ತಮ್ಮ ತಂದೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.


ಆಗಸ್ಟ್ 20, 1944 ರಂದು ಜನಿಸಿದ ರಾಜೀವ್ ಗಾಂಧಿ ಉತ್ತರ ಪ್ರದೇಶದ ಅಮೇಥಿ ಸಂಸದೀಯ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು. ಭಾರತ ರತ್ನ ಪುರಸ್ಕೃತರಾದ ರಾಜೀವ್ ಗಾಂಧಿ ಅವರು 1984 ರಿಂದ 1989 ರವರೆಗೆ ಭಾರತದ ಆರನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. 1984 ರಲ್ಲಿ ಅವರ ತಾಯಿ, ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಅವರು ಅಧಿಕಾರ ವಹಿಸಿಕೊಂಡರು.

ಮಂಗಳೂರು: ಜೂ.22-23 ರಂದು ಲುಲು ಸಮೂಹ ಸಂಸ್ಥೆಯಿಂದ ನೇಮಕಾತಿ ಸಂದರ್ಶನ.

Posted by Vidyamaana on 2023-06-21 14:34:12 |

Share: | | | | |


ಮಂಗಳೂರು: ಜೂ.22-23 ರಂದು ಲುಲು ಸಮೂಹ ಸಂಸ್ಥೆಯಿಂದ ನೇಮಕಾತಿ ಸಂದರ್ಶನ.

ಮಂಗಳೂರು: ಏಷ್ಯಾದ ಅತಿದೊಡ್ಡ ಹೈಪರ್ ಮಾರ್ಕೆಟ್ ಲುಲು ಸಮೂಹವು ಜೂನ್ 22 ಮತ್ತು 23 ರಂದು ತಮ್ಮ ಮೊದಲ ನೇಮಕಾತಿ ಸಂದರ್ಶನವನ್ನು ಮಂಗಳೂರಿನಲ್ಲಿ ಏರ್ಪಡಿಸಿದೆ.


ಮಂಗಳೂರಿನ ಫೆರ್ನಾಂಡಿಸ್ ಗ್ರೂಪ್ ಕಚೇರಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಸಂದರ್ಶನ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಫೆರ್ನಾಂಡಿಸ್ ಗ್ರೂಪ್ ಸಂಸ್ಥೆಯ ಪ್ರವರ್ತಕ ವಿಲ್ಸನ್ ಫೆರ್ನಾಂಡಿಸ್ ಮಾಹಿತಿ ನೀಡಿದರು.

ಯುಎಇ, ಕತರ್, ಬಹರೈನ್, ಮಸ್ಕತ್, ಸೌದಿ ಅರೇಬಿಯಾ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ದೇಶಗಳನ್ನು ಒಳಗೊಂಡಂತೆ ಏಷ್ಯಾದಾದ್ಯಂತ ವ್ಯಾಪಕವಾಗಿ ನಡೆಸುತ್ತಿರುವ ಲುಲು ಸಂಸ್ಥೆ, ಈ ಪ್ರಮುಖ ರಿಟೈಲ್ ಉದ್ಯಮದ ವಿವಿಧ ಹುದ್ದೆಗಳಿಗೆ ಯುವ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.


ಉದ್ಯೋಗವು ಮಾರಾಟ, ಕೌಂಟರ್ ಮಾರಾಟ ಮತ್ತು ಕ್ಯಾಷಿಯರ್ ಹುದ್ದೆಗಳನ್ನು ಒಳಗೊಂಡಿದೆ. ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ನೌಕರರಾಗಿ ಅನುಭವವಿರುವ ವೃತ್ತಿಪರರು ಮತ್ತು ಪೂರ್ವ ಅನುಭವವಿಲ್ಲದವರು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಗತ್ಯವಿರುವ ಕನಿಷ್ಟ ವಿದ್ಯಾರ್ಹತೆ ಪಿಯುಸಿ ಆಗಿದೆ. ಅರ್ಜಿದಾರರು 21 ರಿಂದ 28 ವರ್ಷಗಳ ನಡುವಿನ ವಯಸ್ಸಿನವರಾಗಿರಬೇಕು. ಇಂಗ್ಲಿಷ್‌ನಲ್ಲಿ ಸಂವಹನ ಮಾಡುವುದು ಅಭ್ಯರ್ಥಿಗಳಿಗೆ ಕಡ್ಡಾಯವಾಗಿದೆ.


ಹುದ್ದೆಗಳಿಗೆ ವೇತನ ಶ್ರೇಣಿಯು 1200 ಯುಎಇ ದಿರ್ಹಮ್‌ಗಳಿಂದ 1400 ದಿರ್ಹಮ್‌ ತನಕ ಮತ್ತು 200 ದಿರ್ಹಮ್‌ ಆಹಾರ ಭತ್ತೆ ದೊರೆಯಲಿದೆ. ವಸತಿ, ವೀಸಾ ಮತ್ತು ವಿಮಾನ ಟಿಕೆಟ್ ವ್ಯವಸ್ಥೆಗಳನ್ನು ಸಂಸ್ಥೆಯು ನೋಡಿಕೊಳ್ಳುತ್ತದೆ. ಸುಮಾರು 400 ಉದ್ಯೋಗ ಅವಕಾಶಗಳಿವೆ ಎಂದರು.

ಈ ಸಂದರ್ಭ ಸಂಸ್ಥೆ ನಿರ್ದೇಶಕಿ ಲೀನಾ ಫೆರ್ನಾಂಡಿಸ್, ಡೈರೆಕ್ಟರ್‌ ಅಪರೇಶನ್ಸ್ ಥೋಮಸ್ ಆಳ್ವ ಉಪಸ್ಥಿತರಿದ್ದರು.

ಸಂದರ್ಶನ ಕಚೇರಿ ವಿಳಾಸ: ಫೆರ್ನಾಂಡಿಸ್‌ ಗ್ರೂಪ್, ಮೆಟ್ರೋ ಪ್ಲಾಝಾ, 3ನೇ ಮಹಡಿ, ಆಕ್ಸಿಸ್ ಬ್ಯಾಂಕಿನ ಮೇಲಿನ ಮಹಡಿ, ಮೋರ್ ಸೂಪರ್ ಮಾರ್ಕೆಟ್ ಎದುರುಗಡೆ, ವೆಲೆನ್ಸಿಯಾ, ಮಂಗಳೂರು 575 002.

ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

Posted by Vidyamaana on 2023-09-08 12:11:36 |

Share: | | | | |


ಸೆ 10: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

ಪುತ್ತೂರು: ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆಯು ಸೆ. 10ರಂದು ಸಂಜೆ 5 ಗಂಟೆಗೆ ಪುತ್ತೂರು ಮನಿಷಾ ಹಾಲ್’ನಲ್ಲಿ ನಡೆಯಲಿದೆ.

ಇದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 43ನೇ ವಾರ್ಷಿಕ ಮಹಾಸಭೆಯಾಗಿದೆ ಎಂದು ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ, ಪ್ರಧಾನ ಕಾರ್ಯದರ್ಶಿ ಪಿ. ಉಲ್ಲಾಸ್ ಪೈ, ಕೋಶಾಧಿಕಾರಿ ರಾಜೇಶ್ ಆರ್. ಕಾಮತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Leave a Comment: