ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿ

ಸುದ್ದಿಗಳು News

Posted by vidyamaana on 2023-08-18 08:29:00 |

Share: | | | | |


ಬಂಟ್ವಾಳ : ವಗ್ಗ ಬಳಿ ಅಂಬುಲೆನ್ಸ್  ನಿಯಂತ್ರಣ ತಪ್ಪಿ ಪಲ್ಟಿ

ಬೆಳ್ತಂಗಡಿ: ರೋಗಿಯೊಬ್ಬರನ್ನು  ಕೊಂಡುಹೋಗುತ್ತಿರುವ ವೇಳೆ ಟುಫಾನ್ ಅಂಬುಲೆನ್ಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವಗ್ಗ ಬಳಿ ಆಗಸ್ಟ್ 18 ರಂದು ನಡೆದಿದೆ.



ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ಬಂಟ್ವಾಳದ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮಡಂತ್ಯಾರ್ ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ  ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

Posted by Vidyamaana on 2023-10-24 20:27:34 |

Share: | | | | |


ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

ಬೀಜಿಂಗ್: ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ಅವರನ್ನು ಚೀನಾ ಸರ್ಕಾರ ತೆಗೆದುಹಾಕಿದೆ. ಇದಕ್ಕೆ ಯಾವುದೇ ವಿವರಣೆಯನ್ನು ನೀಡಲಾಗಿಲ್ಲ. ಚೀನಾ ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದ್ದು, ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಸಚಿವರನ್ನು ಸರಕಾರ ವಜಾ ಮಾಡಿದೆ ಎಂದಿದೆ.


ಯಾವುದೇ ವಿವರಣೆಯನ್ನು ನೀಡದೆ ಜುಲೈನಲ್ಲಿ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಬಳಿಕ  ಅದೇ ರೀತಿಯ ಕ್ರಮ ಎದುರಿಸಿದ ಎರಡನೇ ವ್ಯಕ್ತಿ ಲಿ ಅವರಾಗಿದ್ದಾರೆ.


ಮಾರ್ಚ್‌ನಲ್ಲಿ ಕ್ಯಾಬಿನೆಟ್ ಪುನರ್ರಚನೆಯ ಸಮಯದಲ್ಲಿ ರಕ್ಷಣಾ ಸಚಿವ ಆದ ಲಿ  ಆಗಸ್ಟ್ 29 ರಂದು ಭಾಷಣವೊಂದನ್ನು ಮಾಡಿದ ನಂತರ ಜನರ ಜೊತೆ ಕಾಣಿಸಿಕೊಂಡಿರಲಿಲ್ಲ. ಆವರು ಕಾಣೆಯಾಗಿರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಎಲ್ಲಿದ್ದಾರೆ ಏನ್‌ ಮಾಡ್ತಿದಾರೆ ಅಂತ ತಿಳುದು ಬಂದಿರಲಿಲ್ಲ.ಅಧ್ಯಕ್ಷ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಾಯಕ ಕ್ಸಿ ಜಿನ್‌ಪಿಂಗ್ ಅವರ ಅಧಿಕಾರ ಮುಂದುವರಿಯುವ ಬಗ್ಗೆ ಪ್ರಶ್ನೆಗಳನ್ನು ಲಿ ಎತ್ತಿದ್ದರು. ಅಪಾರ ದೇಶ ನಿಷ್ಠೆ ತೋರುತ್ತಿದ್ದ ಆವರು ಸಾರ್ವಜನಿಕ ಮತ್ತು ಖಾಸಗಿ ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದೆ ದನಿ ಎತ್ತುತ್ತಿದ್ದರು.


ಇದು ಜಿನ್‌ಪಿಂಗ್ ಅವರಿಗೆ ಮುಜುಗರ ತರುತ್ತಿತ್ತು. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟ ಹಾಕಬೇಕು, ಹದಗೆಡುತ್ತಿರುವ ಆರ್ಥಿಕತೆಯ ನಡುವೆ ಅಮೆರಿಕಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಮಾತು ಕೇಳುವವರನ್ನು ಆ ಸ್ಥಾನಕ್ಕೆ ತರಬೇಕೆಂಬುದು ಅಧ್ಯಕ್ಷ ಜಿನ್‌ಪಿಂಗ್ ಯೋಚಿಸುತ್ತಿದ್ದರು ಎನ್ನಲಾಗಿದೆ.

ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆ

Posted by Vidyamaana on 2023-10-29 15:09:40 |

Share: | | | | |


ಪುತ್ತೂರು ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆ

ಪುತ್ತೂರು: ಪರಿಶಿಷ್ಡ ಪಂಗಡದ ಕುಟುಂಬಗಳ ಅಭಿವೃದ್ದಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಮಾಹಿತಿ ಕೊರತೆಯ ಕಾರಣಕ್ಕೆ ಹಲವರು ಸೌಲಭ್ಯ ವಂಚಿತರಾಗುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬ್ಲಾಕ್ ಎಸ್ ಟಿ ಘಟಕದ ಮಾಸಿಕ ಸಭೆಯಲ್ಲಿ ಮಾತನಾಡಿದರು.

ದಲಿತ ಕುಟುಂಬಗಳನ್ನು ಮೇಲಕ್ಕೆತ್ತಲು ಕಾಂಗ್ರೆಸ್ ಸರಕಾರ ಸ್ವಾತಂತ್ರ್ಯ ನಂತರ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರುವ ಕೆಲಸವನ್ನು ಮಾಡಿದೆ. ಪ್ರತೀಯೊಂದು ಕುಟುಂಬವೂ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕು. ಮಾಹಿತಿ ಕೊರತೆ ಇದ್ದವರು ಶಾಸಕರ ಕಚೇರಿಯನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಸಭೆಯಲ್ಲಿ‌ಮಾತನಾಡಿದ ಎಸ್ ಟಿ ಘಟಕದ ಬ್ಲಾಕ್ ಅಧ್ಯಕ್ಷ‌ ಮಹಾಲಿಂಗ ನಾಯ್ಕರವರು ಮಾತನಾಡಿ ಎಸ್ ಟಿ ಕುಟುಂಬದ ಮತ್ತು ಕನ್ವಶರ್ನ್ ಸಮಸ್ಯೆಯ ಬಗ್ಗೆ ಸಭೆಯಲಿ ವಿವರಿಸಿದರು. ಬ್ಲಾಕ್ ಉಪಾಧ್ಯಕ್ಷರಾದ ಮೌರಿಶ್ ಮಸ್ಕರೇನಸ್ ರವರು ವಾಲ್ಮೀಕಿ ಜಯಂತಿ ಬಗ್ಗೆ ಮಾತನಾಡಿದರು.


.ಕಾರ್ಯಕ್ತಮದಲ್ಲಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಮಲರಾಮಚಂದ್ರ, ಪಾಣಾಜೆ ಗ್ರಾಪಂ ಸದಸ್ಯೆ ವಿಮಲಾ, ಎಸ್ ಟಿ ಘಟಕದ ಉಪಾಧ್ಯಕ್ಷ ಸದಾನಂದ ನಾಯ್ಕ, ರಾಮನಾಯ್ಕ, ಯು ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಪಾಣಾಜೆ, ಗ್ರಾಪಂ ಸದಸ್ಯ ಮಹಾಲಿಂಗ ನಾಯ್ಕ, ಸುಬ್ರಾಯ ನಾಯ್ಕ ನಿಡ್ಪಳ್ಳಿ,ಐತಪ್ಪ ನಾಯ್ಕ ನಿಡ್ಪಳ್ಳಿ, ನಾಗೇಶ್ ನಾಯ್ಕ ನಿಡ್ಪಳ್ಳಿ, ಸೀತಾರಾಮ ನಾಯ್ಕ, ಗೋಪಾಲ ನಾಯ್ಕ ಪಡುಮಲೆ, ಮೋಹಿನಿ ನರಿಮೊಗರು, ಕರುಣಾಕರ ಪಾಂಗಲಾಯಿ, ಗೋವಿಂದ ನಾಯ್ಕ ಮೊಟ್ಟೆತ್ತಡ್ಕ,  ಸವಿತಾ ದೇವಸ್ಯ,ಚಂದ್ರಾವತಿ ಒಳಮೊಗ್ರು,ಮಾದವ ನಾಯ್ಕ ಬೊಳಿಂಜ, ,ಶಶಿಕಲಾ ಬೊಳಿಂಜ, 

ಗಿರಿಧರ್ ಗೌಡ, ಯೋಗೀಶ್ ಸಾಮಾನಿ, ರಾಘವ ಖಂಡಿಗ ಮತ್ತಿತರರು ಉಪಸ್ಥಿತರಿದ್ದರು. 

ಸಂತೋಷ್ ಭಂಡಾರಿ ಚಿಲ್ಮೆತ್ತಾರು ಸ್ವಾಗತಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು

ಮಂಗಳೂರು; ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ರಕ್ಷಿಸಿದ ಪ್ರಕರಣ

Posted by Vidyamaana on 2023-06-23 03:05:00 |

Share: | | | | |


ಮಂಗಳೂರು; ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ರಕ್ಷಿಸಿದ ಪ್ರಕರಣ

ಮಂಗಳೂರು: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ಬಳಿ ಬಸ್ ಗೆ ಅಡ್ಡ ಬಂದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯಪ್ರಜ್ಞೆಯಿಂದ ರಕ್ಷಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಸ್ತೆ ದಾಟಿದ ಮಹಿಳೆ ಹಾಗೂ ಬಸ್ ಚಾಲಕ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ.ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಸರಗೋಡು ಜಿಲ್ಲೆಯ ವರ್ಕಾಡಿಯ ಐಸಮ್ಮ (63) ಎಂಬವರು ರಸ್ತೆ ದಾಟುವಾಗ ನಿರ್ಲಕ್ಷ್ಯ ವಹಿಸಿರುವುದರ ವಿರುದ್ಧ ಸಂಚಾರ ನಿಯಂತ್ರಣ ನಿಯಮ ಸೆ.13 ಮತ್ತು ಸೆ.92ಜಿ ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಂದು ಸಂಚಾರ ದಕ್ಷಿಣ ಠಾಣೆಯ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.


ಮಂಗಳೂರಿನಿಂದ ಮುಡಿಪುಗೆ ತೆರಳುತ್ತಿದ್ದ ಗೋಪಾಲಕೃಷ್ಣ ಎಂಬ ಹೆಸರಿನ ಖಾಸಗಿ ಬಸ್ ತೌಡುಗೋಳಿ ಕ್ರಾಸ್ ಬಳಿ ಸಂಚರಿಸುತ್ತಿದ್ದಾಗ ವರ್ಕಾಡಿಯ ಐಸಮ್ಮ ರಸ್ತೆ ದಾಟುವಾಗ ನಿರ್ಲಕ್ಷಿಸಿದ್ದರು ಮತ್ತು ಸಂಚಾರ ನಿಯಮವನ್ನು ಪಾಲಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೊಲೀಸರು ಘಟನೆ ನಡೆದ ಎರಡು ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ ಈ ಮಹಿಳೆಯು ನ್ಯಾಯಾಲಯದ ಮೂಲಕ ದಂಡ ಪಾವತಿಸಬೇಕಾಗಿದೆ.ಮಹಿಳೆಯು ಬಸ್ಸನ್ನು ಗಮನಿಸದೆ ರಸ್ತೆ ದಾಟಿದ್ದು, ತಕ್ಷಣ ಬಸ್ ಚಾಲಕ ಬಸ್ಸನ್ನು ಎಡಕ್ಕೆ ಸರಿಸಿದ್ದಾರೆ. ಇದರಿಂದ ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ಈ ಘಟನೆಯ ದೃಶ್ಯವು ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಮಹಿಳೆಗೆ ಬಸ್ ಢಿಕ್ಕಿ ಹೊಡೆಯುವುದನ್ನು ಬಸ್ ಚಾಲಕ ತಪ್ಪಿಸಿದ್ದರೂ, ಕರ್ಕಶ ಹಾರ್ನ್‌ನೊಂದಿಗೆ ಕಿರಿದಾದ ರಸ್ತೆಯಲ್ಲಿ ಅತಿವೇಗ, ಅಜಾಗರೂಕತೆಯ ಬಸ್ ಚಾಲನೆಯ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸಿದ್ದರು. ಅಲ್ಲದೆ ಕರ್ಕಶ ಹಾರ್ನ್ ಕಿತ್ತು ಹಾಕಿದ್ದರು. ಇದೀಗ ಘಟನೆ ನಡೆದ ಎರಡು ದಿನದ ಬಳಿಕ ರಸ್ತೆ ದಾಟುವಾಗ ನಿರ್ಲಕ್ಷ್ಯ ವಹಿಸಿದ ಮಹಿಳೆಯ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವಿಡಿಯೋ ವೈರಲ್

Posted by Vidyamaana on 2024-03-18 16:34:09 |

Share: | | | | |


ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವಿಡಿಯೋ ವೈರಲ್

ನವದೆಹಲಿ : ಸುಪ್ರೀಂಕೋರ್ಟ್ನಲ್ಲಿ ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ವಕೀಲ ಮ್ಯಾಥ್ಯೂಸ್ ನೆಡುಂಪರಾ ನಡುವೆ ವಾಗ್ವಾದ ನಡೆಯಿತು. ಅವರ ಬಿಸಿಯಾದ ವಾಗ್ವಾದದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಚಾರಣೆಯ ಸಮಯದಲ್ಲಿ, ವಕೀಲ ಮ್ಯಾಥ್ಯೂಸ್ ನೆಡುಂಪರಾ ಅವರು ಚುನಾವಣಾ ಬಾಂಡ್ ಪ್ರಕರಣದ ಸಂಪೂರ್ಣ ತೀರ್ಪನ್ನ ನಾಗರಿಕರ ಬೆನ್ನ ಹಿಂದೆ ನೀಡಲಾಗಿದೆ ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ.ಚಂದ್ರಚೂಡ್, ನನ್ನ ಮೇಲೆ ಕೂಗಾಡಬೇಡಿ ಎಂದು ಹೇಳಿದರು.

ನನ್ನ ಮೇಲೆ ಕೂಗಾಡ್ಬೇಡಿ : ಚುನಾವಣಾ ಬಾಂಡ್ ವಿಚಾರಣೆ ವೇಳೆ ವಕೀಲರ ಮೇಲೆ ಸಿಜೆಐ ಗರಂ ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

"ನನ್ನ ಮೇಲೆ ಕೂಗಾಡಬೇಡಿ. ನೀವು ಅರ್ಜಿಯನ್ನ ಸಲ್ಲಿಸಲು ಬಯಸಿದರೆ, ಸಲ್ಲಿಸಿ. ನಾವು ನಿಮ್ಮ ಮಾತನ್ನು ಕೇಳುವುದಿಲ್ಲ" ಎಂದು ಸಿಜೆಐ ಡಿ.ವೈ ಚಂದ್ರಚೂಡ್ ಹೇಳಿದರು. ಆದ್ರೆ, ಅದರ ನಂತ್ರವೂ ವಕೀಲರು ತಮ್ಮ ಮಾತು ಮುಂದುವರೆಸಿದ್ದು, ಆಗ ನ್ಯಾಯಾಮೂರ್ತಿಗಳು ನಿಮಗೆ ನ್ಯಾಯಾಂಗ ನಿಂದನೆ ನೋಟಿಸ್ ಬೇಕೇ.? ಎಂದು ಗರಂ ಆದರು. ಸಧ್ಯ ಈ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

Posted by Vidyamaana on 2023-07-21 23:20:36 |

Share: | | | | |


ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.

ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.

ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

Posted by Vidyamaana on 2023-10-27 16:43:17 |

Share: | | | | |


ಮುಖ್ಯಮಂತ್ರಿ  ಸಿದ್ದರಾಮಯ್ಯ ಬಗ್ಗೆ ಅವಹೇಳನ ಪೋಸ್ಟ್ , ಬೆಳ್ತಂಗಡಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲು

ಮಂಗಳೂರು, ಅ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


"ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ" ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 


ಇತ್ತೀಚೆಗೆ ಅರಣ್ಯ ಅಧಿಕಾರಿಗಳನ್ನು ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ಮತ್ತೊಂದು ಎಫ್ಐಆರ್ ಆಗಿದೆ.‌



Leave a Comment: