ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ನಿಧನ : ಭಾಗೀರಥಿ ರೈ

Posted by Vidyamaana on 2024-07-17 14:33:50 |

Share: | | | | |


ನಿಧನ : ಭಾಗೀರಥಿ ರೈ

ಬಡಗನ್ನೂರು : ಬಡಗನ್ನೂರು ಗ್ರಾಮದ ಕೆಳಗಿನ ಪೇರಾಲು ನಿವಾಸಿ ಕಿನ್ನಿಮಜಲುಗುತ್ತು ಭಾಗೀರಥಿ ರೈ (90) ಜು.17 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ರೈ ಎಜುಕೇಶನಲ್ ಟ್ರಸ್ಟ್‌ ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Posted by Vidyamaana on 2024-03-23 07:56:34 |

Share: | | | | |


ರೈ ಎಜುಕೇಶನಲ್ ಟ್ರಸ್ಟ್‌ ನಿಂದ  ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ. ೨೩ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್‌ನ ಕಾಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.

ಮಾ. ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕೋರ್ಸು ಕಲಿತರೆ ಏನು ಉದ್ಯೋಗ ಪಡೆದುಕೊಳ್ಳಬಹುದು, ಕೋರ್ಸುಗಳು ಎಲ್ಲೆಲ್ಲಿ ಸಿಗುತ್ತದೆ, ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವೃತ್ತಿಪರ ಕೋರ್ಸುಗಳು ಹೇಗೆ ಪರಿಣಾಮಕಾರಿ ಎಂಬ ವಿಚಾರದ ಬಗ್ಗೆ ಕಾರ್ಯಾಗಾರ ನಡೆಯಲಿದೆ.


ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ.ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಸಪಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಿ ವಿ ಸೂರ್ಯಾನಾರಾಯಣರವರು ಕಾರ್ಯಾಗಾರ ನಡೆಸಿಕೊಡಲಿದ್ದು, ಕಾರ್ಯಕ್ರಮದಲ್ಲಿ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟಿ ಇದರ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ, ಕ್ಯಾಡೊಕಾನ್ ವಿದ್ಯಾ ಸಂಸ್ಥೆ ಬೆಂಗಳೂರು ಇದರ ಶ್ರದ್ದಾ ಎಂ ರವರು ಭಾಗವಹಿಸಲಿದ್ದಾರೆ.

ಪುತ್ತೂರು: ಮೆಸ್ಕಾಂ ತುರ್ತು ಕಾಮಗಾರಿ ಇಂದು (ಅಕ್ಟೋಬರ್ 07) ವಿದ್ಯುತ್ ನಿಲುಗಡೆ

Posted by Vidyamaana on 2023-10-07 07:18:54 |

Share: | | | | |


ಪುತ್ತೂರು: ಮೆಸ್ಕಾಂ ತುರ್ತು ಕಾಮಗಾರಿ ಇಂದು (ಅಕ್ಟೋಬರ್ 07) ವಿದ್ಯುತ್ ನಿಲುಗಡೆ

ಪುತ್ತೂರು: 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು- ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ

ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?


ಅ.7ರಂದು ಶನಿವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 3:00 ಗಂಟೆಯವರೆಗೆ 33ಕೆ.ವಿ ಪುತ್ತೂರು- ಕಡಬ-ಸುಬ್ರಹ್ಮಣ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು- ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು ಮತ್ತು ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

Posted by Vidyamaana on 2023-11-20 18:51:17 |

Share: | | | | |


ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟ ಆಸ್ಟ್ರೇಲಿಯಾ ಆಟಗಾರ ಮಿಚೆಲ್​ ಮಾರ್ಷ್

ಅಹಮದಾಬಾದ್‌, ನ.20: ಆಸ್ಟ್ರೇಲಿಯ 6ನೇ ವಿಶ್ವಕಪ್​ ಗೆದ್ದು ಇತಿಹಾಸ ನಿರ್ಮಿಸಿದೆ. ಆದರೆ ಇದೀಗ ತಂಡದ ಆಟಗಾರ ಮಿಚೆಲ್​ ಮಾರ್ಷ್ ಅವರು ಟ್ರೋಫಿ ಗೆದ್ದ ಬಳಿಕ ತೋರಿದ ವರ್ತನೆಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿದೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕ್ರಿಕೆಟ್ ಪ್ರೇಮಿಗಳಿಂದ ಟೀಕೆಗೆ ಗುರಿಯಾಗಿದ್ದಾರೆ


ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದಿತು. ಆಸ್ಟ್ರೇಲಿಯಾ ತಂಡದ ಸಂಭ್ರಮದ ಹಲವು ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ನಡುವೆ ಮಿಚೆಲ್​ ಮಾರ್ಷ್ ಅವರು ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಫೋಟೊ ಎಲ್ಲಡೆ ವೈರಲ್​ ಆಗಿದೆ


ವೈರಲ್​ ಆದ ಈ ಫೋಟೋದಲ್ಲಿ ಮಿಚೆಲ್ ಮಾರ್ಷ್ ಅವರು ವಿಶ್ವಕಪ್ ಟ್ರೋಫಿಯ ಮೇಲೆ ತಮ್ಮ ಪಾದವಿಟ್ಟು ಕುಳಿತಿದ್ದಾರೆ. ಇದನ್ನು ಖಂಡಿಸಿರುವ ಕ್ರಿಕೆಟ್​ ಅಭಿಮಾನಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದು ವಿಶ್ವಕಪ್‌ಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದ್ದಾರೆ. ಫೈನಲ್​ ಪಂದ್ಯಕ್ಕೂ ಮುನ್ನ ಮಾರ್ಷ್​ ಅವರು ಆಸ್ಟ್ರೇಲಿಯಾ ತಂಡ 2 ವಿಕೆಟ್​ಗೆ 450 ರನ್​ ಬಾರಿಸುತ್ತದೆ, ಭಾರತ 65 ರನ್​ಗೆ ಆಲೌಟ್​ ಆಗುತ್ತದೆ ಎಂದು ದರ್ಪದ ಮಾತುಗಳನ್ನಾಡಿದ್ದರು. ಫೈನಲ್​ ಪಂದ್ಯದಲ್ಲಿ ಮಾರ್ಷ್ ಅವರು 15 ಎಸೆತ ಎದುರಿಸಿ ತಲಾ 1 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ 15ರನ್​ಗೆ ಔಟಾಗಿದ್ದರು.


ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಫೈನಲ್​ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟಿಂಗ್ ವೈಫಲ್ಯ ಎದುರಿಸಿದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆಸ್ಟ್ರೇಲಿಯಾ ತಂಡ 43 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಬಾರಿಸಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್​ 137 ರನ್​ ಬಾರಿಸಿ ಭಾರತದ ಗೆಲುವನ್ನು ಕಸಿದರು. ಆಸೀಸ್​ ಪಾಲಿಗೆ ಗೆಲುವಿನ ರೂವಾರಿ ಎನಿಸಿಕೊಂಡರು.


ತವರು ನೆಲದಲ್ಲಿ ನಡೆದ ವಿಶ್ವ ಕಪ್ ಆವೃತ್ತಿಯಲ್ಲಿ ಟ್ರೋಫಿ ಗೆದ್ದೇ ಗೆಲ್ಲುತ್ತೇವೆ ಎಂಬ ಟೀಮ್​ ಇಂಡಿಯಾದ ಹುಮ್ಮಸ್ಸು ಬತ್ತಿ ಹೋಯಿತು. ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನಡೆದ ಏಕ ದಿನ ವಿಶ್ವ ಕಪ್​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತಲೆ ಬಾಗಿದ ಟೀಮ್ ಇಂಡಿಯಾದ ಪ್ರಯತ್ನಗಳು ಭಗ್ನವಾಗಿದೆ. 2003ರ ವಿಶ್ವ ಕಪ್​ನ ಫೈನಲ್ ಫಲಿತಾಂಶವು ಮತ್ತೊಂದು ಬಾರಿ ಪುನರಾವರ್ತನೆಯಾಗಿದೆ. ಅಂದು ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧವೇ 125 ರನ್​ಗಳಿಂದ ಸೋಲು ಕಂಡಿತ್ತು.

ಕಡಬ: ಬೈಕ್ ಸ್ಕಿಡ್ -ಸವಾರ ಮಂಜು ಸ್ಥಳದಲ್ಲೇ ಮೃತ್ಯು

Posted by Vidyamaana on 2023-04-25 23:23:55 |

Share: | | | | |


ಕಡಬ:  ಬೈಕ್  ಸ್ಕಿಡ್ -ಸವಾರ ಮಂಜು ಸ್ಥಳದಲ್ಲೇ ಮೃತ್ಯು

ಕಡಬ : ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ - ಮಂಗಳವಾರ ರಾತ್ರಿ ನಡೆದಿದೆ.ಮೃತ ಸವಾರನನ್ನು ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

Posted by Vidyamaana on 2023-05-02 10:12:45 |

Share: | | | | |


ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

ಪುತ್ತೂರು: ಪಕ್ಷಕ್ಕೆ ತನಗೆ ಎಲ್ಲಾ ಹುದ್ದೆಗಳನ್ನು ನೀಡಿದೆ. ಪಕ್ಷಕ್ಕೆ ತಾನು ಬದ್ಧನಾಗಿರದೇ ಇದ್ದರೆ, ತಾನು ಪ್ರಾಣಿಯಂತೆ. ಆದ್ದರಿಂದ ಪಕ್ಷದಿಂದ ಹೊರಹೋದವರು ತನ್ನ ಮಿತ್ರನೂ ಅಲ್ಲ, ಪಾಲದಾರನೂ ಅಲ್ಲ ಎಂದು ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಪುತ್ತೂರಿನ ಬಿಜೆಪಿ‌‌ ಚುನಾವಣಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭ, ನಿಮ್ಮ ಆಪ್ತಮಿತ್ರ ಅಶೋಕ್ ರೈ ಅವರು ಕಾಂಗ್ರೆಸಿಗೆ ಸೇರಿದ್ದಾರೆ ಎಂದಾಗ, ತಾನು ಆಪ್ತಮಿತ್ರನಲ್ಲ. ಆಪ್ತಮಿತ್ರ ವಿಷ್ಣುವರ್ಧನ್ ಎಂದಾಗ ಎಲ್ಲರೂ ನಗೆಗಡಲಲ್ಲಿ ತೆಲಿದರು.

ನಾನು ಈಗ್ಲೂ ಹೇಳ್ತೇನೆ, ಬಿಜೆಪಿಯಲ್ಲಿ ಇರುವವರಿಗೆ ನಾನು ಆಪ್ತ ಮಿತ್ರ, ಪಕ್ಷದವರಿಗೆ ನಾನು ಪಾಲುದಾರ. ಪಕ್ಷ ಬಿಟ್ಟು ಹೋದವರಿಗೆ ನಾನು ಆಪ್ತ ಮಿತ್ರನೂ ಅಲ್ಲ, ಪಾಲುದಾರನೂ ಅಲ್ಲ. ಅಶೋಕ್ ರೈಗೆ ನಾನು ಸಹಕಾರ ಮಾಡಿದ್ದೇನೆ ಎನ್ನುವುದನ್ನು ರುಜುವಾತು ಪಡಿಸಿದರೆ, ನೀವು ಹೇಳಿದಂತೆ ನಾನು ಕೇಳ್ತೆನೆ ಎಂದು ಡಿ.ವಿ ಸದಾನಂದ ಗೌಡ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ, ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ‌.ಜಿ. ಜಗನ್ನಿವಾಸ್ ರಾವ್, ಗೋಪಾಲಕೃಷ್ಣ ಹೇರಳೆ ಮೊದಲಾದವರು ಉಪಸ್ಥಿತರಿದ್ದರು.

Recent News


Leave a Comment: