ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಸುದ್ದಿಗಳು News

Posted by vidyamaana on 2024-07-24 18:06:21 | Last Updated by Vidyamaana on 2024-07-24 18:06:21

Share: | | | | |


ಶಿರೂರಿನ ಭೂಕುಸಿತದಲ್ಲಿ ಕಾಣೆಯಾದ ಲಾರಿ ನೀರಿನ ಅಡಿಯಲ್ಲಿ ಪತ್ತೆ; ಮಾಹಿತಿ ನೀಡಿದ ಸಚಿವ

ಕಾರವಾರ: ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೋಝಿಕ್ಕೋಡ್ ಮೂಲದ ಅರ್ಜುನ್ ಅವರ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ. ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದನ್ನು ಖಚಿತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ.

ನದಿಯ ಕೆಳಭಾಗದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು ಅದಕ್ಕಾಗಿ ಶೋಧ ನಡೆಯುತ್ತಿದೆ.

ಶಿರೂರಿನಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ಒಂಬತ್ತನೇ ದಿನದಂದು, ಲಾರಿಯ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಪಡೆಯಲಾಗಿದೆ. ಇಂದು ಬೆಳಗ್ಗೆ ಬೂಮ್ ಲೆಂಗ್ತ್ ಕ್ರೇನ್ ಬಂದಿದ್ದು, ತಪಾಸಣೆ ಪುನರಾರಂಭವಾಗಿದೆ. ಈ ಯಂತ್ರವು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ.

ಈ ಕುರಿತು ಕೃಷ್ಣ ಬೈರೇಗೌಡ Xನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ X ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ.ಜುಲೈ 16 ರಂದು ಬೆಳಿಗ್ಗೆ ಕೋಝಿಕ್ಕೋಡ್‌ನ ಕಂಡ್ಯಕ್ಕಲ್ ಮೂಲದ ಅರ್ಜುನ್ (30) ಕರ್ನಾಟಕ-ಗೋವಾ ಗಡಿಯಲ್ಲಿ ಹಾದು ಹೋಗುವ ಪನ್ವೇಲ್-ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಭೂಕುಸಿತದಲ್ಲಿ ಟೀ ಅಂಗಡಿ ಮಾಲೀಕ ಸೇರಿದಂತೆ 10 ಜನರು ಸಾವನ್ನಪ್ಪಿದ ಸ್ಥಳದಲ್ಲಿ ಲಾರಿಯ ಜಿಪಿಎಸ್ ಸ್ಥಳವನ್ನು ಕೊನೆಯದಾಗಿ ಪತ್ತೆ ಹಚ್ಚಲಾಯಿತು.

 Share: | | | | |


ಪಾಕಿಸ್ತಾನ ವಿರುದ್ಧ ಮಹಿಳಾ ಭಾರತ ತಂಡಕ್ಕೆ ಭರ್ಜರ ಜಯ

Posted by Vidyamaana on 2023-02-13 05:13:49 |

Share: | | | | |


ಪಾಕಿಸ್ತಾನ ವಿರುದ್ಧ ಮಹಿಳಾ ಭಾರತ ತಂಡಕ್ಕೆ  ಭರ್ಜರ ಜಯ

ಕೇಪ್‌ಟೌನ್‌: ಜೆಮಿಮಾ ರಾಡ್ರಿಗಸ್‌ ಮತ್ತು ರಿಚಾ ಘೋಷ್‌ ಅತ್ಯುತ್ತಮ ಆಟದಿಂದ ಭಾರತ ತಂಡ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 3 ವಿಕೆಟ್‌ ನಷ್ಟಕ್ಕೆ 147 ರನ್‌ ಗಳಿಸಿತು. ಭಾರತ ಇನ್ನೂ 6 ಎಸೆತ ಬಾಕಿ ಇರುವಂತೆಯೇ 3 ವಿಕೆಟ್‌ ನಷ್ಟಕ್ಕೆ 151 ರನ್‌ ಹೊಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು. ವಿಶ್ವಕಪ್‌ ಇತಿಹಾಸದಲ್ಲಿ ಎರಡನೇ ಅತಿ ದೊಡ್ಡ ಚೇಸಿಂಗ್‌ ಇದಾಗಿದ್ದು,  ಟೂರ್ನಿಯಲ್ಲಿ ಭಾರತದ ಅತಿ ದೊಡ್ಡ ಚೇಸಿಂಗ್‌ ಇದಾಗಿದೆ.ಕೊನೆಯ ನಾಲ್ಕು ಓವರ್‌ನಲ್ಲಿ ಟೀಂ ಇಂಡಿಯಾ ಗೆಲುವಿಗೆ 41 ರನ್‌ ಅಗತ್ಯವಿತ್ತು. 17ನೇ ಓವರ್‌ನಲ್ಲಿ 13 ರನ್‌ ಬಂದರೆ 18ನೇ ಓವರ್‌ನಲ್ಲಿ ರಿಚಾ ಘೋಷ್‌ ಹ್ಯಾಟ್ರಿಕ್‌ ಫೋರ್‌ ಹೊಡೆದ ಪರಿಣಾಮ 14 ರನ್‌ ಬಂದಿತ್ತು. 19ನೇ ಓವರ್‌ನಲ್ಲಿ ರಾಡ್ರಿಗಸ್‌ 3 ಬೌಂಡರಿ ಹೊಡೆದ ಪರಿಣಾಮ ಪಂದ್ಯವನ್ನು ಭಾರತ ಗೆದ್ದುಕೊಂಡಿತು.

ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

Posted by Vidyamaana on 2023-05-10 17:27:33 |

Share: | | | | |


ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮೀಷನ್ ತಿಳಿಸಿದ್ದಾರೆ

ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ - ಉಸಿರುಗಟ್ಟಿ ಶಾರಿಕ್ ಮೃತ್ಯು

Posted by Vidyamaana on 2024-07-29 11:44:02 |

Share: | | | | |


ಮೂಡುಬಿದಿರೆ: ಗೀಸರ್ ನಿಂದ ವಿಷಾನಿಲ ಸೋರಿಕೆ - ಉಸಿರುಗಟ್ಟಿ ಶಾರಿಕ್ ಮೃತ್ಯು

ಮೂಡುಬಿದಿರೆ, ಜು.29: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತುಕೈಗಾರಿಕಾ ಸಂಘದಿಂದ ಶಾಸಕರಿಗೆ ಮನವಿ

Posted by Vidyamaana on 2023-09-04 15:15:25 |

Share: | | | | |


ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತುಕೈಗಾರಿಕಾ ಸಂಘದಿಂದ ಶಾಸಕರಿಗೆ ಮನವಿ

ಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಗದ ವತಿಯಿಂದ ಪುತ್ತೂರು ಶಾಸಕರಿಗೆ ಮನವಿ ಸಲ್ಲಿಸಲಾಯಿತು.ಪ್ರಮುಖವಾಗಿ ಜಿಎಸ್‌ಟಿ ನೋಂದಾಯಿತ ವರ್ತಕರಿಗೆ ಮತ್ತು ಸಣ್ಣ ಉದ್ದಿಮೆದಾರರಿಗೆ ಆರೋಗ್ಯ ವಿಮೆ ೫ ಲಕ್ಷದವರೆಗೆ ಕುಟುಂಬ ಸದಸ್ಯರಿಗೂ ದೊರೆಯುವಂತೆ ಸರಕರದ ಗಮನಸೆಳೆಯುವುದು, ಪ್ಲಾಸ್ಟಿಕ್ ಏಕಬಳಕೆ ಚೀಲಗಳ ನಿಷೇಧ ಸಲುವಾಗಿ ವರ್ತಕರಿಗೆ ಪಾರದರ್ಶಕವಾದ ಕಾನೂನಿನ ತೊಡಕಿನಿಂದಾಗಿ ವರ್ತಕರಿಗೆ ದಂಡ ವಿನಾಯಿತಿ, ಪುತ್ತೂರು ನಗರದ ಮುಖ್ಯ ರಸ್ತೆಗಳಲ್ಲಿ ಸರಕು ಸಮಾಗ್ರಿ ಇಳಿಸಲು ಜನದಟ್ಟನೆ ಸಮಯ ಬಿಟ್ಟು ಉಳಿದ ಸಮಯದಲ್ಲಿ ಅವಕಾಶ ನೀಡುವುದು, ಪೇಟೆಯ ವ್ಯವಹಾರಗಳಿಗೆ ಸಾರ್ವಜನಿಕರಿಗೆ ನೆರವಾಗುವ ರೀತಿಯಲ್ಲಿ ಎಂ ಟಿ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ , ಸರಕಾರಿ ಮತ್ತು ಖಾಸಗಿ ಬಸ್ಸುಗಳನ್ನು ಮುಖ್ಯ ರಸ್ತೆಯಲ್ಲೇ ಓಡಾಟಕ್ಕೆ ಅವಕಾಶ ಕಲ್ಪಿಸುವುದು, ವಿದ್ಯುತ್ ಕಡಿತದ ಸಂದರ್ಭದಲ್ಲಿ ಕೈಗಾರಿಕಾ ಉದ್ದಿಮೆಗಳಿಗೆ ತೊಂದರೆಯಾಗುತ್ತಿದ್ದು ನಿಯಮಿತ ಸಮಯದಲ್ಲಿ ದುರಸ್ಥಿ ಮಾಡುವ ಕುರಿತು ಮನವಿಯಲ್ಲಿ ಉಲ್ಲೇಖಿಸಲಾಗಿದೆ.


ನೆಲ್ಲಿಕಟ್ಟೆ ಸರಕರಿ ಶಾಲೆಯನ್ನು ಮೇಲ್ದರ್ಜೆಗೇರಿಸಿ

ನೆಲ್ಲಿಕಟ್ಟೆ ಸರಕಾರಿ ಹಿ ಪ್ರಾ ಶಾಲೆಯನ್ನು ಮೇಲ್ದಜೆಗೇರಿಸಬೇಕು, ೧೫೦ ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯಲ್ಲಿ ಕೊಠಡಿಗಳ ಕೊರತೆ ಮತ್ತು ಶಿಕ್ಷಕರ ಕೊರತೆಯೂ ಇದ್ದು , ಶಾಲೆಗೆ ತೆರಳಲು ಸುಕ್ತವಾದ ರಸ್ತೆಯ ವ್ಯವಸ್ಥೆಯನ್ನು ಮಾಡುವಂತೆಯೂ ಶಾಸಕರಲ್ಲಿ ಮನವಿ ಮಾಡಿದರು.  


ಶಾಸಕರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಸಂಗದ ವತಿಯಿಂದ ಶಾಸಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಗದ ಅಧ್ಯಕ್ಷರಾದ ಜಾನ್ ಕುಟನ್ಹಾ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಉಪಾಧ್ಯಕ್ಷರುಗಳಾ ವಾಮನ ಪೈ, ಸೂರ್ಯನಾಥ ಆಳ್ವ, ಕಾರ್ಯದರ್ಶಿ ಮಹಮ್ಮದ್ ನೌಶಾದ್, ಶ್ರೀಕಾಂತ್ ಕೊಳತ್ತಾಯ,ಕೋಶಾಧಿಕಾರಿ ರಾಜೇಶ್ ಕಾಮತ್ ಸುದಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಭಾಸ್ಕರ ಬಾರ್ಯ, ಸದಾನಂದ ನಾಯ್ಕ್ ಬೊಳುವಾರು, ಎಂ ಯು ಗೋಪಾಲಕೃಷ್ಣ, ಲಾರೆನ್ಸ್ ಗೋನ್ಸಾಲಿಸ್,  ಉಪಸ್ಥಿತರಿದ್ದರು.

ಬೆಳ್ತಂಗಡಿ ರಿಕ್ಷಾ ಢಿಕ್ಕಿ: ಮೂರು ವರ್ಷದ ಮಗು ಕೌಶಿಕ್ ಮೃತ್ಯು

Posted by Vidyamaana on 2024-03-17 07:54:31 |

Share: | | | | |


ಬೆಳ್ತಂಗಡಿ ರಿಕ್ಷಾ ಢಿಕ್ಕಿ: ಮೂರು ವರ್ಷದ ಮಗು ಕೌಶಿಕ್ ಮೃತ್ಯು

ಬೆಳ್ತಂಗಡಿ: ಸೋಣಂದೂರು ಪಣಕಜೆಯಲ್ಲಿ ರಿಕ್ಷಾ ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.ಕೌಶಿಕ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.


ಮುಂಡಾಡಿಯಲ್ಲಿ ಚಂದ್ರಶೇಖ‌ರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಮನೆಯವರು ನೋಡದೆ ಓಡಿ ರಸ್ತೆಗೆ ಬಂದಿದೆ ಎನ್ನಲಾಗುತ್ತಿದ್ದು, ಈ ಸಂದರ್ಭ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಯಾವುದೇ ಪ್ರಯೋಜನವಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ

Posted by Vidyamaana on 2023-06-01 15:49:27 |

Share: | | | | |


ಪುತ್ತೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆ

ಪುತ್ತೂರು: ಮುಖ್ಯ ರಸ್ತೆಯ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಅಂಗಡಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ದೇವರಾಜ ಅರಸ್ ಬಡವಾಣೆಯ ಸಮೀರ್ (ಕಪ್ಪ), ಹಾಸನ ಶಂಕರಿಪುರಂ ನ ಚಂದ್ರಶೇಖರ್ (ಚಂದು) ಬಂಧಿತರು.ಪುತ್ತೂರು ಬಸ್‌ ನಿಲ್ದಾಣದ ಬಳಿಯ ಮಾಯಿದೆ ದೇವುಸ್‌ ಚರ್ಚ್‌ ಎದುರುಗಡೆ ‘ಪ್ರಕಾಶ್ ಫೂಟ್‌ವೇರ್’ ಎಂಬ ಹೆಸರಿನ ಚಪ್ಪಲಿ ಅಂಗಡಿಯಿಂದ 2022 ಸೆ.16 ರಂದು ಸುಮಾರು 15 ಲಕ್ಷ ರೂ. ಯನ್ನು ಕಳವುಗೈದು ಆರೋಪಿಗಳು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕಾಶ್ ಫೂಟ್‌ವೇರ್ ಮಳಿಗೆಯ ಮಾಲಕ ಸಮೀರ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನು ಹತ್ತಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Recent News


Leave a Comment: