ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಸುದ್ದಿಗಳು News

Posted by vidyamaana on 2024-07-24 16:19:59 |

Share: | | | | |


ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಶಿವಮೊಗ್ಗ, ಜುಲೈ.24: ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ (Love) ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ (Murder) ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.


ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು.

ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.


ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ.ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

 Share: | | | | |


ಪೊಲೀಸ್ ಪರೀಕ್ಷೆ ಬರೆಯಲು ಹೋದ ಗಂಡ, ಬಾಯ್‌ಫ್ರೆಂಡನ್ನು ಬೆಡ್‌ರೂಮ್‌ಗೆ ಕರೆಸಿದ ಹೆಂಡ್ತಿ

Posted by Vidyamaana on 2024-08-27 14:53:16 |

Share: | | | | |


ಪೊಲೀಸ್ ಪರೀಕ್ಷೆ ಬರೆಯಲು ಹೋದ ಗಂಡ, ಬಾಯ್‌ಫ್ರೆಂಡನ್ನು ಬೆಡ್‌ರೂಮ್‌ಗೆ ಕರೆಸಿದ ಹೆಂಡ್ತಿ

ಅನೈತಿಕ ಸಂಬಂಧದ ಶಂಕೆಯಿಂದ ಪತಿರಾಯ ಪತ್ನಿಯನ್ನು ಕೊಂದ, ಹೆಂಡ್ತಿ ಗಂಡನನ್ನೇ ಕೊಚ್ಚಿ ಕೊಲೆ ಮಾಡಿದ ಘಟನೆಗಳು, ರಂಪರಾಮಾಯಣಗಳಾದ ಘಟನೆಗಳು ನಡೆದಿವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇಲ್ಲೊಬ್ಳು ಹೆಂಡ್ತಿ ಗಂಡ ಪೊಲೀಸ್‌ ಪರೀಕ್ಷೆ ಬರೆಯಲು ಹೋಗುತ್ತಿದ್ದಂತೆ ಸಿಕ್ಕಿದ್ದೇ ಚಾನ್ಸ್‌ ಎನ್ನುತ್ತಾ ತನ್ನ ಬೆಡ್‌ರೂಮ್‌ಗೆ ಬಾಯ್‌ಫ್ರೆಂಡನ್ನು ಕರೆಸಿಕೊಂಡಿದ್ದಾಳೆ. ರಾತ್ರಿ ಬೆಡ್‌ರೂಮಿನಿಂದ ಏನೋ ಸದ್ದು ಬರುತ್ತಿದೆ ಎಂದು ಮನೆಯವರು ನೋಡಲು ಹೋದಾಗ ಈ ಇಬ್ಬರ ಕಳ್ಳಾಟ ಬಯಲಾಗಿದೆ.

ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಜಿಲ್ಲೆಯಲ್ಲಿ ನಡೆದಿದ್ದು, ಪತಿ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆ ಬರೆಯಲು ಹೋದ ಸಂದರ್ಭದಲ್ಲಿ ಆತನ ಹೆಂಡ್ತಿ ತನ್ನ ಪ್ರಿಯಕರನನ್ನು ಮನೆಗೆ ಕರೆಸಿದ್ದಾಳೆ. ಆಕೆಯ ಕೋಣೆಯಲ್ಲಿ ಏನೋ ಸದ್ದು ಬರುತ್ತಿದೆ ಎಂದು ಮನೆಯವರು ನೋಡಲು ಹೋದಾಗ ಈ ಇಬ್ಬರ ಕಳ್ಳಾಟ ಬಯಲಾಗಿದೆ.


ಮೂರು ತಿಂಗಳ ಹಿಂದಷ್ಟೇ ಇವರಿಬ್ಬರಿಗೂ ಮದುವೆಯಾಗಿತ್ತು. ಆದ್ರೆ ಆಕೆಗೆ ಬೇರೊಬ್ಬ ಯುವಕ ಜೊತೆ ಪ್ರೇಮ ಸಂಬಂಧವಿತ್ತು. ಆಕೆ ಮದುವೆಯಾದ ಬಳಿಕವೂ ಗಂಡನ ಕಣ್ತಪ್ಪಿಸಿ ಪ್ರೇಮಿಯೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದಳು. ಆಗಸ್ಟ್‌ 23 ರಂದು ಪತಿ ಪೊಲೀಸ್‌ ಪರಿಕ್ಷೆ ಬರೆಯಲು ಹೋದ ಸಂದರ್ಭದಲ್ಲಿ, ಇದೇ ಚಾನ್ಸ್‌ ಎನ್ನುತ್ತಾ ಆಕೆ ಸುಮಾರು 12 ಗಂಟೆ ರಾತ್ರಿಯಲ್ಲಿ ತನ್ನ ಬಾಯ್‌ಫ್ರೆಂಡನ್ನು ಕರೆಸಿಕೊಂಡಿದ್ದಾಳೆ. ರೂಮಿನಿಂದ ಏನೋ ಸದ್ದು ಬರುತ್ತಿದೆಯಲ್ಲಾ ಎಂದು ಮನೆಯವರು ನೋಡಲು

ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

Posted by Vidyamaana on 2023-04-26 00:55:19 |

Share: | | | | |


ಡಾ.ಸುರೇಶ್ ಪುತ್ತೂರಾಯರಿಗೆ ಅರುಣ್ ಕುಮಾ‌ರ್ ಪುತ್ತಿಲ ಚುನಾವಣಾ ಕಚೇರಿಯಲ್ಲಿ ಅದ್ದೂರಿ ಸ್ವಾಗತ.

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ. ಅವರನ್ನು ಬೆಂಬಲಿಸುವಂತೆ ಹೇಳಿಕೆ ನೀಡಿದ್ದ. ಪುತ್ತೂರಿನ ಜನಪ್ರಿಯ ವೈದ್ಯ ಡಾ.ಸುರೇಶ್ ಪುತ್ತೂರಾಯರವರು ಏ.25ರಂದು ಸಂಜೆ ಅರುಣ್ ಕುಮಾರ್ ಪುತ್ತಿಲರವರ ಚುನಾವಣಾ ಕಚೇರಿಗೆ ಭೇಟಿ ನೀಡಿದಾಗ ಅವರನ್ನು ಹೂ ಹಾರ ಹಾಕಿ ಸ್ವಾಗತಿಸಲಾಯಿತು.

ಶ್ರೀ ಕೃಷ್ಣ ಉಪಾಧ್ಯಾಯ, ಪ್ರಸನ್ನ ಕುಮಾರ್ ಮಾರ್ತ, ಮನೀಷ್ ಕುಲಾಲ್, ಕೃಷ್ಣ ಪ್ರಸಾದ್ ಶೆಟ್ಟಿ, ಗೋಪಾಲ್ ಎಂ.ಯು., ರೂಪೇಶ್ ನ್ಯಾಕ್ ಮೊದಲಾದವರು ಡಾ.ಸುರೇಶ್ ಪುತ್ತೂರಾಯರವರನ್ನು ಹೂ ಹಾರ ಹಾಕಿ ಸ್ವಾಗತಿಸಿದರು.

ಮೋದಿ ಪದಗ್ರಹಣದ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಕೇಸ್ : ಪೊಲೀಸ್ ಕಮಿಷನರ್ ಅಗರ್ವಾಲ್ ಹೇಳಿದ್ದೇನು?

Posted by Vidyamaana on 2024-06-11 17:13:19 |

Share: | | | | |


ಮೋದಿ ಪದಗ್ರಹಣದ ವಿಜಯೋತ್ಸವ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಕೇಸ್ : ಪೊಲೀಸ್ ಕಮಿಷನರ್ ಅಗರ್ವಾಲ್ ಹೇಳಿದ್ದೇನು?

ಮಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನದಂದು ಮಂಗಳೂರಿನ ಬೋಳಿಯಾರು ನಲ್ಲಿ ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್  ಅನುಪಮ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ 20 ಜನರನ್ನು ವಶಕ್ಕೆ ಪಡೆದಿದ್ದವು. ಚಾಕು ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದರು.

ಗಾಜಾದಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಿ : ಸೌದಿ ದೊರೆ

Posted by Vidyamaana on 2023-10-21 09:54:38 |

Share: | | | | |


ಗಾಜಾದಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಿ : ಸೌದಿ ದೊರೆ

ರಿಯಾದ್‌: ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಸೌದಿ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಆಗ್ರಹಿಸಿದರು. ರಿಯಾದ್‌ನಲ್ಲಿ ನಡೆದ ಗಲ್ಫ್ ಮತ್ತು ಆಗ್ನೇಯ ಏಷ್ಯಾ ರಾಷ್ಟ್ರಗಳ ಸಮಾವೇಶದಲ್ಲಿ ಮಾತನಾಡಿದ ಅವರು, “ಗಾಜಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತೀವ್ರ ದುಃಖವಾಗಿದೆ. ಘರ್ಷಣೆಯಲ್ಲಿ ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಮಿಲಿಟರಿ ಕಾರ್ಯಾಚರಣೆಯನ್ನು ಇಸ್ರೇಲ್‌ ಕೂಡಲೇ ನಿಲ್ಲಿಸಬೇಕು. ಶಾಶ್ವತ ಶಾಂತಿ ಸಾಧಿಸುವ ನಿಟ್ಟಿನಲ್ಲಿ ಪ್ರತ್ಯೇಕ ಪ್ಯಾಲೆಸ್ತೀನ್‌ ರಾಷ್ಟ್ರ ಸ್ಥಾಪನೆಯಾಗಬೇಕು’ ಎಂದು ಒತ್ತಾಯಿಸಿದರು.


ಯಾವುದೇ ಸಂದರ್ಭದಲ್ಲಿ ಹಾಗೂ ಯಾವುದೇ ರೀತಿಯಲ್ಲೂ ನಾಗರಿಕರನ್ನು ಗುರಿಯಾಗಿ ನಡೆಸುವ ದಾಳಿಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಮೊಹಮ್ಮದ್‌ ಬಿನ್‌ ಸಲ್ಮಾನ್‌ ಪ್ರತಿಪಾದಿಸಿದರು.

ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

Posted by Vidyamaana on 2024-02-27 16:39:06 |

Share: | | | | |


ಮದುವೆಯಾಗಿ ಮೂರೇ ತಿಂಗಳಲ್ಲಿ ನಡೆಯಿತು ದುರಂತ

ನವದೆಹಲಿ: ಮದುವೆಯಾಗಿ ಮೂರೂ ತಿಂಗಳಿಗೆ ಪತಿ ಪತ್ನಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯ ಗಾಜಿಯಾಬಾದ್‌ನಲ್ಲಿ ಸಂಭವಿಸಿದೆ.


ಮದುವೆಯಾಗಿ ಮೂರೇ ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾಳೆ.


ಏನಿದು ಘಟನೆ:

ಗಾಜಿಯಾಬಾದ್ ನ ಅಭಿಷೇಕ್ ಅಹ್ಲುವಾಲಿಯಾ ಜೊತೆ ಅಂಜಲಿ ಕಳೆದ ವರ್ಷ ನವೆಂಬರ್ ನಲ್ಲಿ ಮದುವೆಯಾಗಿದ್ದರು ಇಬ್ಬರೂ ಜೊತೆಯಾಗಿ ತಿರುಗಾಟ ನಡೆಸಿದ್ದಾರೆ ಅದರಂತೆ ನಿನ್ನೆ (ಸೋಮವಾರ) ದೆಹಲಿಯಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ ಈ ವೇಳೆ ಇದ್ದಕಿದ್ದಂತೆ ಅಭಿಷೇಕ್ ಗೆ ಹೃದಯಾಘತವಾಗಿದೆ ಆ ಕೂಡಲೇ ಅಲ್ಲಿದ್ದ ಜನರು ಸೇರಿ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಗಾಬರಿಯಾದ ಪತ್ನಿ ಅಂಜಲಿ ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಗೆ ಪತಿಗೆ ಹೃದಯಾಘಾತವಾದ ವಿಚಾರವನ್ನು ತಿಳಿಸಿದ್ದಾಳೆ.

ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸಂಜೆ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರು ಅಭಿಷೇಕ್ ಮೃತದೇಹವನ್ನು ಗಾಜಿಯಾಬಾದ್ ನಲ್ಲಿರುವ ಫ್ಲಾಟ್ ಗೆ ತಂದಿದ್ದಾರೆ ಈ ವೇಳೆ ಮೃತ ಅಭಿಷೇಕ್ ಜೊತೆಗೆ ಇದ್ದ ಅಂಜಲಿ ಇದ್ದಕಿದ್ದಂತೆ ಎದ್ದು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾಳೆ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಇಂದು( ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

Posted by Vidyamaana on 2023-11-24 04:38:20 |

Share: | | | | |


ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ : ವಿದ್ಯಾರ್ಥಿಯ  ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನ.23 ರಂದು(ಇಂದು) ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ಸಾವನ್ನಪ್ಪಿದ್ದಾನೆ.


ಕಾಲೇಜಿನಲ್ಲಿ ಕಾರ್ಯಕ್ರಮ ಇದ್ದ ಕಾರಣ ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕ್ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬರುವಾಗ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡಿದ್ದ ಉಜಿರೆಯ ಎಸ್.ಡಿ.ಎಮ್ ಖಾಸಗಿ ಕಾಲೇಜಿನ ಮ್ಯಾಕಾನಿಕಲ್ ಕೋರ್ಸ್ ಡಿಪ್ಲೋಮಾ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ದಿಕ್ಷೀತ್(20) ಚಿಕಿತ್ಸೆ ಫಲಿಸದೆ ಸಂಜೆ ಮಂಗಳೂರು ಕೆ.ಎಮ್.ಸಿ ಅತ್ತಾವರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

Recent News


Leave a Comment: