ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಸುದ್ದಿಗಳು News

Posted by vidyamaana on 2024-07-24 19:54:18 |

Share: | | | | |


ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಲಾರಿ ಪತ್ತೆ, ಚಾಲಕ ಅರ್ಜುನನಿಗೆ ಮುಂದುವರೆದ ಶೋಧ ಕಾರ್ಯ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಇದೀಗ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಲಾರಿ ಚಾಲಕ ಅರ್ಜುನ ಇನ್ನೂ ಪತ್ತೆ ಆಗಿರದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಕಳೆದ 8 ದಿನಗಳಿಂದ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಎನ್ ಡಿ ಆರ್ ಎಫ್ ಎಚ್ ಡಿ ಆರ್ ಎಫ್ ತಂಡ ಸೇರಿದಂತೆ ಮಿಲ್ಟ್ರಿ ತಂಡ ಕೂಡ ಮಣ್ಣು ತೆರವು ಕಾರ್ಯಾಚರಣೆಗೆ ಆಗಮಿಸಿತ್ತು. ಈ ವೇಳೆ ನಿನ್ನೆಯವರೆಗೆ 8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ. ಟಿಂಬರ್ ಲಾರಿ ನದಿಯಲ್ಲಿ ಪತ್ತೆ ಆಗಿರುವ ಸ್ಥಿತಿಯಲ್ಲಿ ಇದೆ.ಕೇರಳ ಮೂಲದ ಲಾರಿ ನದಿಯಲ್ಲಿ ಇದೀಗ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ನಾಪತ್ತೆಯಾಗಿದ್ದರು. ಲಾರಿ ಪತ್ತೆಯಾದ ಸ್ಥಳಕ್ಕೆ ಡಿಸಿ ಲಕ್ಷ್ಮಿಪ್ರಿಯ ಭೇಟಿ ನೀಡಿದ್ದಾರೆ. ಕಾರವಾರದ ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣದ ಬಗ್ಗೆ ಇದೀಗ ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಪತ್ತೆಯಾಗಿದೆ

 Share: | | | | |


ಪ್ರದೀಪ್​ ಈಶ್ವರ್​​ ಬಿಗ್​ಬಾಸ್​ ಪ್ರವೇಶ ವಿಚಾರ - DCM ಡಿಕೆಶಿ ಹೇಳಿದ್ದೇನು ಗೊತ್ತಾ!?

Posted by Vidyamaana on 2023-10-11 08:58:36 |

Share: | | | | |


ಪ್ರದೀಪ್​ ಈಶ್ವರ್​​ ಬಿಗ್​ಬಾಸ್​ ಪ್ರವೇಶ ವಿಚಾರ - DCM ಡಿಕೆಶಿ ಹೇಳಿದ್ದೇನು ಗೊತ್ತಾ!?

ಬೆಂಗಳೂರು ;- ಪ್ರದೀಪ್​ ಈಶ್ವರ್​​ ಅವರು ಬಿಗ್​ಬಾಸ್​ ಮನೆಯೊಳಗೆ ಪ್ರವೇಶಿಸಿದರ ಬಗ್ಗೆ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ಮಾತನಾಡಿದ ಅವರು,ಬಿಗ್ ಬಾಸ್ ಕನ್ನಡಕ್ಕೆ ಪ್ರವೇಶಿಸುವುದು ಅವರ ವೈಯಕ್ತಿಕ ಆಯ್ಕೆಯಾಗಿದ್ದು, ಹಾಗೆ ಮಾಡುವುದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದರು.ಇನ್ನೂ ಬಿಗ್​ಬಾಸ್​ ಮನೆಗೆ ಅತಿಥಿಯಾಗಿ ಬಂದ ಶಾಸಕ ಪ್ರದೀಪ್​ ಈಶ್ವರ್​ಗೆ ರಿಯಾಲಿಟಿ ಶೋ ತಂಡ ಹಣವನ್ನು ಕೊಟ್ಟಿದೆ. ಬಿಗ್​ಬಾಸ್​ನಿಂದ ಸಿಕ್ಕ ಹಣವನ್ನು ಪ್ರದೀಪ್​ ಅನಾಥಾಶ್ರಮಕ್ಕೆ ನೀಡುವುದಾಗಿ ಹೇಳಿದರು. ಸದ್ಯ ಶಾಸಕ ಮನೆಯೊಳಗೆ ಹೋದ ನಂತರ ಮತ್ತು ಹೊರಬಂದ ನಂತರವೂ ಸಾಕಷ್ಟು ಟ್ರೋಲ್​ ಮತ್ತು ವಿವಾದಗಳಿಗೆ ಗುರಿಯಾಗಿದ್ದಾರೆ.

ರಾಜ್ಯ ಬಿಜೆಪಿ ಡೀಲ್ ಗಳೆಲ್ಲವೂ ಕೋಟಿ ಲೆಕ್ಕದಲ್ಲಿ ಕಾಂಗ್ರೆಸ್ ವಾಗ್ದಾಳಿ

Posted by Vidyamaana on 2023-09-13 18:03:09 |

Share: | | | | |


ರಾಜ್ಯ ಬಿಜೆಪಿ ಡೀಲ್ ಗಳೆಲ್ಲವೂ ಕೋಟಿ ಲೆಕ್ಕದಲ್ಲಿ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಹಿಂದೂ ಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರು ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡುವ ವಿವಿಚಾರದಲ್ಲಿ ವಂಚನೆ ಎಸಗಿರುವ ಪ್ರಕರಣದಲ್ಲಿ ಬಂಧನಕ್ಕೊಳಗಾದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳ ಸುರಿಮಳೆಗೈದಿದೆ.



ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ”ಬಿಜೆಪಿಯಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಸಿಎಂ ಹುದ್ದೆಗೆ 2,500 ಕೋಟಿ,ಮಂತ್ರಿಗಿರಿಗೆ 70 – 80 ಕೋಟಿ,MLA ಟಿಕೆಟ್ ಗೆ 7 ಕೋಟಿ!!. ಇದೆಲ್ಲವೂ ಬಿಜೆಪಿಯವರಿಂದಲೇ ಬಯಲಾದ ಸತ್ಯಗಳು.ಯತ್ನಾಳ್ ಆಣೆಗೂ ಇದನ್ನು ನಾವು ಹೇಳಿದ್ದಲ್ಲ!. ಈ ಮಾರಾಟದ ಆಟದಲ್ಲಿ “ವಿರೋಧ ಪಕ್ಷದ ನಾಯಕ”ನ ಹುದ್ದೆಗೆ ಇನ್ನೂ ಯಾರೊಬ್ಬರೂ ಬಿಡ್ ಸಲ್ಲಿಸಿಲ್ಲವೇ ?” ಎಂದು ವ್ಯಂಗ್ಯವಾಗಿ ಬಿಜೆಪಿಯನ್ನು ಪ್ರಶ್ನಿಸಿದೆ.


”ಬಿಜೆಪಿ ಪಕ್ಷದಲ್ಲಿ ಎಲ್ಲವನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಟಿಕೆಟ್ ವಂಚನೆಯ ಪ್ರಕರಣದಲ್ಲಿ ಬಿಜೆಪಿಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯೂ ಪ್ರಮುಖ ಆರೋಪಿ.ಈತನ ವಂಚನೆಯ ಬಗ್ಗೆ ಒಂದು ತಿಂಗಳ ಹಿಂದೆಯೇ ಪಕ್ಷಕ್ಕೆ ದೂರು ಬಂದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಏಕೆ ?”ಎಂದು ಪ್ರಶ್ನಿಸಿದೆ.


”ವಂಚಕರಿಗೆ, ಭ್ರಷ್ಟರಿಗೆ ಬಿಜೆಪಿ ತವರು ಮನೆಯಾಗಿದೆಯೇ? ಮಾಜಿ ಗೃಹಸಚಿವರು ಆರೋಪಿಯ ಪರ ವಕಾಲತ್ತು ವಹಿಸುತ್ತಿರುವುದರ ಹಿಂದೆ ಯಾವ ಸತ್ಯ ಅಡಗಿದೆ? ವಂಚನೆ ಆರೋಪಿಯೊಂದಿಗೆ ವೇದಿಕೆಯಲ್ಲಿ ಯಾವ ಘನಂದಾರಿ ಚರ್ಚೆ ಮಾಡಿದ್ದಿರಿ ಆರಗ ಜ್ಞಾನೇಂದ್ರ ಅವರೇ?ಕುಮಾರಕೃಪಾದಲ್ಲಿ ಡೀಲಿಂಗ್ ನಡೆಸಿದ ಸ್ಯಾಂಟ್ರೋ ರವಿ, ಚೈನ್ ಚೈತ್ರಾ ಜ್ಞಾನೇಂದ್ರರಿಗೆ ಪರಮಾಪ್ತರು.ವಂಚಕರಿಗೆ ಕುಮಾರಕೃಪಾ ಸಿಗಲು ಮಾಜಿ ಗೃಹ ಸಚಿವರ ಕೃಪೆ ಇತ್ತೇ? ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.

ಅಶೋಕ್ ರೈ ಭೇಟಿಯಾದ ಯು.ಟಿ.ಖಾದರ್

Posted by Vidyamaana on 2023-04-18 13:15:50 |

Share: | | | | |


ಅಶೋಕ್ ರೈ ಭೇಟಿಯಾದ ಯು.ಟಿ.ಖಾದರ್

ಪುತ್ತೂರು: ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಕಾಂಗ್ರೆಸ್ ಚುನಾವಣಾ ಕಚೇರಿಗೆ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್ ಮಂಗಳವಾರ ಭೇಟಿ ನೀಡಿದರು.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರೊಂದಿಗೆ ಮಾತುಕತೆ ನಡೆಸಿ, ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿ, ಶುಭಹಾರೈಸಿದರು.

ಈ ಸಂದರ್ಭ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಯುವ ಕಾಂಗ್ರೆಸ್ ನಗರಾಧ್ಯಕ್ಷ ಮೋನು ಬಪ್ಪಳಿಗೆ, ನಗರಸಭೆ ಸದಸ್ಯ ರಿಯಾಜ್ ಪರ್ಲಡ್ಕ, ಪ್ರಮುಖರಾದ ಮಹಮ್ಮದ್ ಆಲಿ, ನಿರಂಜನ್ ರೈ ಮಠಂತಬೆಟ್ಟು, ಜಯಪ್ರಕಾಶ್ ಬದಿನಾರು ಮೊದಲಾದವರು ಉಪಸ್ಥಿತರಿದ್ದರು.

ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

Posted by Vidyamaana on 2023-12-03 04:27:12 |

Share: | | | | |


ಹೆರಿಗೆ ಬಳಿಕ ಮಾನಸಿಕ ಖಿನ್ನತೆ ; ನಾಲ್ಕು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾವಿಗೆ ಶರಣಾದ ರುಕಿಯಾ

ಮಂಗಳೂರು: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ. 


ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು.‌ ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು. 


ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ‌

ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

Posted by Vidyamaana on 2023-12-25 13:07:55 |

Share: | | | | |


ಕೇರಳದ ಯುವ ಜೋಡಿಗೆ ಕಿರುಕುಳ: ಬಂಟ್ವಾಳ ಮೂಲದ ಸಂದೇಶ್ ಸಹಿತ ಮೂವರ ಬಂಧನ

ಮಂಗಳೂರು: ಕೇರಳ ಯುವ ಜೋಡಿಯನ್ನು ತಡೆದು ಅವರ ಧರ್ಮದ ಬಗ್ಗೆ ವಿಚಾರಿಸಿ ಮತೀಯ ಗೂಂಡಾಗಿರಿ ನಡೆಸಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.


ಹಂಪನಕಟ್ಟೆಯ ಮಳಿಗೆಯೊಂದರ ಬಳಿ ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ನಿಂತಿದ್ದ ಕೇರಳದ ಯುವಕ ಹಾಗೂ ಆತನ ಜೊತೆಗಿದ್ದ ಯುವತಿಯನ್ನು ಯುವಕರ ಗುಂಪೊಂದು ವಿಚಾರಿಸಿತ್ತು.ಕೇರಳದ ಯುವಕ ಮತ್ತು ಯುವತಿಯ ಧರ್ಮದ ಬಗ್ಗೆ ಪ್ರಶ್ನಿಸಿ, ಗುರುತಿನ ಚೀಟಿ ತೋರಿಸುವಂತೆ ಗುಂಪಿನಲ್ಲಿದ್ದ ಯುವಕನೊಬ್ಬ ಏರುಧ್ವನಿಯಲ್ಲಿ ಸೂಚಿಸಿದ ಹಾಗೂ ಅವರ ಸೊತ್ತುಗಳನ್ನು ಪರೀಶೀಲಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.


ಬಂಟ್ವಾಳ ನಿವಾಸಿ ಸಂದೇಶ (28), ಆತನ ಜೊತೆಗಿದ್ದ ಪ್ರಶಾಂತ್ (31) ಹಾಗೂ ರೋನಿತ್ (31) ಅವರನ್ನು ಬಂಧಿತರು. ಆರೋಪಿಗಳ ವಿರುದ್ಧ ಶಾಂತಿಭಂಗಕ್ಕೆ ಉದ್ದೇಶಪೂರ್ವಕ ಪ್ರಚೋದನೆ ಮತ್ತು ಅಕ್ರಮವಾಗಿ ನಿರ್ಬಂಧ ವಿಧಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಶಾಸಕರಾಗಿ ಪುತ್ತೂರಿಗೆ ಆಗಮಿಸುತ್ತಿರುವ ಅಶೋಕ್ ಕುಮಾರ್ ರೈ

Posted by Vidyamaana on 2023-05-13 13:01:20 |

Share: | | | | |


ಶಾಸಕರಾಗಿ ಪುತ್ತೂರಿಗೆ ಆಗಮಿಸುತ್ತಿರುವ ಅಶೋಕ್ ಕುಮಾರ್ ರೈ

ಪುತ್ತೂರು: ನೂತನ ಶಾಸಕರಾಗಿ ಆಯ್ಕೆಯಾದ ತಕ್ಷಣದಿಂದಲೇ ಅಶೋಕ್ ಕುಮಾರ್ ರೈ ಅವರು ಕಾರ್ಯಚಟುವಟಿಕೆಗಳಿಗೆ ಮುಂದಾಗಿದ್ದಾರೆ.

ಮಂಗಳೂರಿನಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರಿಂದ ಪ್ರಮಾಣಪತ್ರ ಸ್ವೀಕರಿಸಿ ಪುತ್ತೂರಿಗೆ ಹಿಂದಿರುಗುತ್ತಿರುವ ಅಶೋಕ್ ಕುಮಾರ್ ರೈ ಅವರು ಕಬಕದಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಲಿದ್ದಾರೆ.

ಬಳಿಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ಪುತ್ತೂರು ಕೇಂದ್ರ ಮಸೀದಿ ಮತ್ತು ಚರ್ಚ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನ ಸಲ್ಲಿಸಲಿದ್ದಾರೆ.

ಬಳಿಕ ಬೈಪಾಸ್ ರಸ್ತೆಯಲ್ಲಿರುವ ಪಕ್ಷದ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕಾರ ಮಾಡಲಿದ್ದಾರೆ.

Recent News


Leave a Comment: