ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಅಯೋಧ್ಯೆಯಲ್ಲಿ ದಿವ್ಯ - ಭವ್ಯ ರಾಮ ಮಂದಿರ ಲೋಕಾರ್ಪಣೆಗೆ ಡೇಟ್ ಫಿಕ್ಸ್

Posted by Vidyamaana on 2023-09-09 16:24:19 |

Share: | | | | |


ಅಯೋಧ್ಯೆಯಲ್ಲಿ ದಿವ್ಯ - ಭವ್ಯ ರಾಮ ಮಂದಿರ ಲೋಕಾರ್ಪಣೆಗೆ ಡೇಟ್ ಫಿಕ್ಸ್

ನವದೆಹಲಿ : ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಮ್ ಲಲ್ಲಾ ಅವರನ್ನ ಜನವರಿ 22, 2024ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣಪ್ರತಿಷ್ಠಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮ್ಯಾರಥಾನ್ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಾಣ ಪ್ರತಿಷ್ಠಾ ಮಹೋತ್ಸವ ನಿರ್ವಹಣಾ ಸಮಿತಿಯ ಉಸ್ತುವಾರಿಯನ್ನ ಆರ್‌ಎಸ್‌ಎಸ್ ನಾಯಕ ಭಯ್ಯಾಜಿ ಜೋಶಿ ವಹಿಸಿಕೊಳ್ಳಲಿದ್ದಾರೆ.


ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಯೋಗಿ ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನ ಪರಿಶೀಲಿಸಿದ್ದರು.ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿಯಲ್ಲಿ ದೇವಾಲಯದ ನಿರ್ಮಾಣವು ವೇಗವಾಗಿ ನಡೆಯುತ್ತಿದೆ. ದೇವಾಲಯದ ಮೊದಲ ಮಹಡಿ ಬಹುತೇಕ ಸಿದ್ಧವಾಗಿದೆ. ದೇವಾಲಯದ ಉದ್ಘಾಟನೆಯ ನಂತರ, ದೇವಾಲಯವನ್ನ ಎಲ್ಲಾ ಭಕ್ತರಿಗೆ ಶಾಶ್ವತವಾಗಿ ತೆರೆಯಲಾಗುತ್ತದೆ. ದೇವಾಲಯದಲ್ಲಿ 42 ಬಾಗಿಲುಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ದೇವಾಲಯದ ಗರ್ಭಗುಡಿಯಲ್ಲಿ ಸಣ್ಣ ಚಿನ್ನದ ಬಾಗಿಲನ್ನ ಸಹ ಸ್ಥಾಪಿಸಲಾಗುವುದು. ದೇವಾಲಯದ ಬಾಗಿಲುಗಳ ಮೇಲೆ ನವಿಲುಗಳು, ಪಾತ್ರೆಗಳು, ಚಕ್ರಗಳು ಮತ್ತು ಹೂವುಗಳನ್ನ ಕೆತ್ತಲಾಗುವುದು. ಗರ್ಭಗುಡಿಯಲ್ಲಿ ಭಗವಾನ್ ರಾಮನ ಎರಡು ಮಗುವಿನಂತಹ ವಿಗ್ರಹಗಳು ಇರುತ್ತವೆ. ಈ ವಿಗ್ರಹಗಳಲ್ಲಿ ಒಂದು ಚಲನಶೀಲವಾಗಿರುತ್ತದೆ ಮತ್ತು ಇನ್ನೊಂದು ಸ್ಥಿರವಾಗಿರುತ್ತದೆ. ಗರ್ಭಗುಡಿಯ ಗೋಡೆಗಳ ಮೇಲೆ ಬಿಳಿ ಅಮೃತಶಿಲೆಯನ್ನ ಇರಿಸಲಾಗುತ್ತದೆ.

ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

Posted by Vidyamaana on 2023-07-10 01:52:26 |

Share: | | | | |


ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

ಮೈಸೂರು: ಕೌಟುಂಬಿಕ ಕಲಹದಿಂದ ಬೇರ್ಪಟ್ಟು ವರ್ಷಾನುಗಟ್ಟಲೆ ಒಬ್ಬರಿಗೊಬ್ಬರು ಮುಖವನ್ನೇ ನೋಡದವರು ಅದಾಲತ್‌ನಲ್ಲಿ ಮುಖಾಮುಖಿಯಾಗಿ ಜೀವನದಲ್ಲಿ ಒಟ್ಟಿಗೆ ಸಾಗುವ ಮನಸ್ಸು ಮಾಡಿದರು…!

ವಿಚ್ಛೇದನ ಕೋರಿದ್ದ ದಂಪತಿಗಳು ನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪರಸ್ಪರ ಸಿಹಿ ತಿನ್ನಿಸಿ ಮತ್ತೆ ಜತೆಯಾದರು.

ಮಗುವಿಗೆ ಸ್ನಾನ ಮಾಡಿಸದಿರುವ ಕಾರಣಕ್ಕೆ ಉಂಟಾದ ಮನಸ್ತಾಪ ದೊಡ್ಡದಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣ ಸುಖಾಂತ್ಯ ಕಂಡಿತು. ಹೀಗೆ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಜಗಳ, ಮನಸ್ತಾಪಗಳನ್ನೇ ದೊಡ್ಡದು ಮಾಡಿಕೊಂಡು ಸಂಸಾರ ಬಂಧನದಿಂದ ದೂರವಾಗಲು ಮುಂದಾಗಿದ್ದ 33 ಜೋಡಿ ಮುನಿಸು ಮರೆತು ಒಂದಾದರು.

ಮಗುವಿಗೆ ಏಕೆ ಸ್ನಾನ ಮಾಡಿಸಿಲ್ಲ ಎಂದು ಗಂಡ ಪತ್ನಿಯನ್ನು ಕೇಳಿದ್ದೇ ತಪ್ಪಾಯ್ತು. ಇಷ್ಟಕ್ಕೇ ಹೆಂಡತಿ ಮುನಿಸಿಕೊಂಡು ವಿಚ್ಛೇದನಕ್ಕೆ ನೋಟಿಸ್ ಕಳುಹಿಸಿದ್ದಳು. ಇದರಿಂದ ಆರು ತಿಂಗಳು ದೂರವಾಗಿದ್ದ ದಂಪತಿ ಮಗುವಿನ ಭವಿಷ್ಯದ ದೃಷ್ಟಿಯಿಂದ ಮತ್ತೆ ಒಂದಾದರು. ಮತ್ತೊಂದು ಪ್ರಕರಣದಲ್ಲಿ ಇಬ್ಬರೂ ಇಂಜಿನಿಯರ್‌ಗಳಾಗಿರುವ ಜೋಡಿ ಕೆಲಸದ ಕಾರಣಕ್ಕೆ ದೂರವಾಗಲು ಬಯಸಿದ್ದರು. ಒಬ್ಬರು ಮೈಸೂರಿನಲ್ಲಿ, ಇನ್ನೊಬ್ಬರು ಬೆಂಗಳೂರಿನಲ್ಲಿ. ಮೈಸೂರು ಬಿಟ್ಟು ಹೋಗಲು ಪತ್ನಿಗೆ ಇಷ್ಟವಿಲ್ಲ, ಬೆಂಗಳೂರಿನಿಂದ ಬರಲು ಪತಿಗೆ ಆಗುತ್ತಿರಲಿಲ್ಲ. ಹೀಗಾಗಿ ವಿಷಯ ಮುನಿಸಿನವರೆಗೂ ಹೋಗಿ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿತ್ತು.ಜವಾಬ್ದಾರಿ ಅರಿತು ಸಂಸಾರ ನಡೆಸಿ:

ಅದಾಲತ್‌ನಲ್ಲಿ ಒಂದಾದ ಜೋಡಿಗಳಿಗೆ ಶುಭ ಹಾರೈಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಅದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಅವರು, ಗಂಡ-ಹೆಂಡತಿ ತಿಳಿವಳಿಕೆಯಿಂದ, ಜವಾಬ್ದಾರಿ ಅರಿತು ಸಮಾಜಮುಖಿಯಾಗಿ ಸಂಸಾರ ನಡೆಸಬೇಕು. ಜಗಳ, ಕೋಪ, ಮನಸ್ತಾಪಕ್ಕೆ ಜಾಗ ನೀಡದೆ ಹೊಂದಾಣಿಕೆಯಿಂದ ನಡೆದರೆ ಸಂತಸದಿಂದ ಜೀವನ ನಡೆಸಬಹುದು ಎಂದು ಹೇಳಿದರು.

ಸಣ್ಣಪುಟ್ಟ ಕಾರಣಕ್ಕೆ ಗಂಡ-ಹೆಂಡತಿ ದೂರವಾಗಿ ಸಂಸಾರ ಒಡೆದು ಚೂರಾಗಿತ್ತು. ಕುಳಿತು ಮಾತನಾಡಿದರೆ ಸಾಕಷ್ಟು ಸಮಸ್ಯೆಗಳು ಬಗೆಹರಿಲಿವೆ. ಆದರೆ ಕೋಪದಲ್ಲಿ ತಾಳ್ಮೆ ಕಳೆದಕೊಂಡು ವರ್ತಿಸಿದರೆ ಯಾವುದೂ ಸರಿಯಾಗುವುದಿಲ್ಲ. ಇಂದು ಅವರನ್ನು ಒಟ್ಟುಗೂಡಿಸಿದ್ದು, ಗಂಡ-ಹೆಂಡತಿ ಜವಾಬ್ದಾರಿ ಅರಿತು ಸಂಸಾರ ನಡೆಸಬೇಕು. ಒಂದು ಕುಟುಂಬ ಉಳಿಸುವ ಒಳ್ಳೆಯ ಕಾರ್ಯವನ್ನು ನ್ಯಾಯಾಧೀಶರು, ವಕೀಲರು ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.

ಈ ಬಾರಿಯ ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿ ಮೊದಲ ಸ್ಥಾನ ಪಡೆಯಬೇಕೆಂಬ ಉದ್ದೇಶದಿಂದ ಹೆಚ್ಚು ಚಟುವಟಿಕೆಯಿಂದ ತೊಡಗಿಸಿಕೊಳ್ಳಲಾಗಿತ್ತು. ಅದಾಲತ್‌ನಲ್ಲಿ 87 ಕೌಟುಂಬಿಕ ಪ್ರಕರಣಗಳು ಬಗೆಹರಿದಿದ್ದು, 33 ಜೋಡಿ ವಿಚ್ಛೇದನದ ನಿರ್ಧಾರ ಬದಲಿಸಿ ಒಂದಾಗಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಪ್ರಿ-ಲಿಟಿಗೇಷನ್ ಪ್ರಕರಣಗಳನ್ನೂ ಹೆಚ್ಚು ಬಗೆಹರಿಸಲಾಗುವುದು ಎಂದರು.

ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ವೇಲಾ ಡಿ. ಖೊಡೆ, ನ್ಯಾಯಾಧೀಶರಾದ ರುಡಾಲ್ಫ್ ಪಿರೇರಾ, ಗಿರೀಶ್ ಭಟ್, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಎಸ್.ಉಮೇಶ್ ಇದ್ದರು.

ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

Posted by Vidyamaana on 2023-09-30 22:09:16 |

Share: | | | | |


ರಾಜಧರ್ಮ ಪಾಲಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು; ಅಧಿಕಾರದಲ್ಲಿರುವವರು ನ್ಯಾಯ ಪಾಲಿಸಬೇಕು, ರಾಜಧರ್ಮ ಪಾಲಿಸಬೇಕಾಗಿರುವುದು ಕರ್ತವ್ಯವೂ ಆಗಿದೆ ಆದರೆ ಕೆಲವರು ಆ ಕರ್ತವ್ಯವನ್ನು ಮರೆತು ಅಧಿಕಾರ ಅನುಭವಿಸಿದವರೂ ಇದ್ದಾರೆ . ಆದರೆ ಪುತ್ತೂರು ಶಾಸಕರು ಈ ವಿಚಾರದಲ್ಲಿ ತಮ್ಮ ಕರ್ತವ್ಯವನ್ನು ಮರೆತಿಲ್ಲ. ತನ್ನ ಸಹೋದರಿ ನಳಿನಿ ಶೆಟ್ಟಿ ಶನಿವಾರದಂದು ಶಾಸಕರನ್ನು ಭೇಟಿಯಾಗಲು ಶಾಸಕರ ಕಚೇರಿಗೆ ಬಂದಿದ್ದರು. ಶಾಸಕರನ್ನು ಭೇಟಿಯಾಗಲು ಬಂದಿರುವ ಸಾರ್ವಜನಿಕರ ಸಂಖ್ಯೆಯೂ ಅಪಾರವಾಗಿತ್ತು. ತನ್ನ ಸಹೋದರಿ ತನಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರ ಶಾಸಕರಿಗೆ ಗೊತ್ತಿತ್ತು. ಆದರೆ ಶಾಸಕರು ತನ್ನ ಸಹೋದರಿಯನ್ನು ಕರೆಯಲಿಲ್ಲ.‌ಸರತಿ ಸಾಲಿನಲ್ಲೇ ಬಂದ ನಳಿನಿ ಶೆಟ್ಟಿಯವರು ಅರ್ಜಿ ಸಲ್ಲಿಸಿ ಅಲ್ಲಿಂದ ತೆರಳಿದರು.‌ಶಾಸಕರ ಈ ನ್ಯಾಯದ ನಡೆ ಅಲ್ಲಿದ್ದವರಿಗೆ ಶಾಸಕರ ಬಗ್ಗೆ ಗೌರವ ಹೆಚ್ಚಾಗುವಂತೆ ಮಾಡಿತು

ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

Posted by Vidyamaana on 2023-05-01 10:40:09 |

Share: | | | | |


ಬುಳೇರಿಕಟ್ಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಬೆಲೆ ಏರಿಕೆಯ ಮೂಲಕ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರಕಾರ . ಈ ಪಕ್ಷದ ಕಾರ್ಯಕರ್ತರು ,ಮುಖಂಡರು ಬಡವರ ಮನೆಗೆ ಯಾವ ಮುಖ ಹೊತ್ತು ವೋಟು ಬಡವರ ಮನೆಗೆ ವೋಟು ಕೇಳಲು ಹೋಗುತ್ತಾರೆ ಎಂದು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಂ ಕೆ ಬಿ ಹೇಳಿದರು.

ಬುಳೇರಿಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ದೇಶದಲ್ಲಿ‌ಅಚ್ಚೇದಿನ್ ಕೊಡುವುದಾಗಿ ಹೇಳಿದವರು ಬಡವರ ಅನ್ನಕ್ಕೂ ಕಲ್ಲು ಹಾಕುವ ಕೆಲಸವನ್ನು ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ,ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಇವೆಲ್ಲವೂ ಜನರನ್ನು ಕಂಗೆಡಿಸಿದೆ. ಬೆಲೆ ಏರಿಕೆಯಿಂದ ನಾಳೆ ಏನಾಗುತ್ತದೋ ಎಂಬ ಭಯ ಜನರಲ್ಲಿ ನಿತ್ಯವೂ ಇದೆ ಎಂದು ಹೇಳಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಎಲ್ಲಾ‌ಸಮಸ್ಯೆಗಳಿಗೆ ಪರಿಹಾರವಾಗಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಜನ ಸ್ನೇಹಿ ಪ್ರಣಾಳಿಕೆಯನ್ನು ಜಾರಿ‌ಮಾಡಿದೆ. ಪುತ್ತೂರಿನಲ್ಲಿ ಅಶೋಕ್ ರೈ ಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ‌ಮುಂದೆ ಬರುವ ಕಾಂಗ್ರೆಸ್ ಸರಕಾರಕ್ಕೆ ಬಲ‌ಕೊಡುವ ಕೆಲಸವನ್ನು ಮಾಡಬೇಕು. ಪ್ರತೀ ಬೂತ್ ನಲ್ಲೂ ಟಾರ್ಗೆಟ್ ವೋಟು ಎಂಬ ಆಲೋಚನೆಯನ್ನು ಇಟ್ಟುಕೊಂಡು ಹೆಚ್ಚಿನ‌ಮತಗಳು ಈ ಭಾಗದಿಂದ ಕಾಂಗ್ರೆಸ್ ಗೆ ಬೀಳುವಂತೆ  ನಾವು ಕಾರ್ಯಪೃವೃತ್ತರಾಗಬೇಕು ಎಂದು‌ಹೇಳಿದರು.

ಸೈಲೆಂಟ್ ವೋಟು ಕಾಂಗ್ರೆಸ್ ಪಾಲಾಗುವಂತೆ ಪ್ರತೀಯೊಬ್ಬ ಕಾರ್ಯಕರ್ತರು ಒಟ್ಟುಗೂಡಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಅಕ್ರನಸಕ್ರಮದಲ್ಲಿ ಪುತ್ತೂರಿನ ಶಾಸಕರು ಭೃಷ್ಟಾಚಾರ ಮಾಡಿದ್ದು ಅದು ಅವರ ದೊಡ್ಡ ಸಾಧನೆಯಾಗಿದೆ. ಯಾರು ಲಕ್ಷಾಂತರ ರೂ ಕೊಟ್ಟಿದ್ದಾರೋ ಅವರಿಗೆಲ್ಲಾ ಅಕ್ರಮ ಸಕ್ರಮ ಮಾಡಿಕೊಡಲಾಗಿದೆ. ನಾನು ಶಾಸಕನಾದರೆ ರಾಜಧರ್ಮ ಪಾಲನೆ ಮಾಡಲಿದ್ದೇನೆ. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ಪಕ್ಷಕ್ಕೆ ಬಲ ಕೊಡುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದರು. ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು‌ ಮಾಡಿತೋರಿಸುತ್ತೇನೆ ಎಂದು ಹೇಳಿದರು. ಅಭಿವೃದ್ದಿಯಾಗಬೇಕಾದರೆ ಶಾಂತಿ,ಸೌಹಾರ್ಧತೆ ಮುಖ್ಯ. ಪುತ್ತೂರಿನಲ್ಲಿ ಎಲ್ಲಾ ಧರ್ಮದ ಜನರೂ ಒಂದೇ ತಾಯಿ‌ಮಕ್ಕಳಂತೆ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಳ್ವ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

Posted by Vidyamaana on 2023-02-08 10:38:03 |

Share: | | | | |


ಪುತ್ತೂರು: 5ನೇ ಬೃಹತ್ ಕೃಷಿಯಂತ್ರ ಮೇಳ-2023 ಹಿನ್ನೆಲೆ : ವಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಕ್ಯಾಂಪ್ಕೋ ಸಿಬ್ಬಂದಿಗಳಿಂದ ಜಾಥಾ

ಪುತ್ತೂರು: ತನ್ನ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಸಂಭ್ರಮಕ್ಕೆ ಚಾಲನೆ ನೀಡಲು ಕೇಂದ್ರ ಗೃಹ ಖಾತೆಯ ಸಚಿವರು ಹಾಗೂ ಸಹಕಾರಿ ಸಚಿವರೂ ಆದ ಅಮಿತ್ ಶಾ ಅವರು ಪುತ್ತೂರಿಗೆ ಆಗಮಿಸುತ್ತಾರೆ. ಅಲ್ಲದೆ ಪ್ರತಿಷ್ಟಿತ ಕ್ಯಾಂಪ್ಕೋ ಸಂಸ್ಥೆ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ), ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಪುತ್ತೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 10 ಶುಕ್ರವಾರದಿಂದ 12 ಆದಿತ್ಯವಾರದವರೆಗೆ 3 ದಿನಗಳ ಕಾಲ ನಡೆಯಲಿರುವ 5ನೇ ಬೃಹತ್ ಕೃಷಿಯಂತ್ರ ಮೇಳ-2023 ಮತ್ತು ಕನಸಿನ ಮನೆ ಪ್ರದರ್ಶನವೂ ನಡೆಯಲಿದೆ.ಇವೆರಡೂ ಕಾರ್ಯಕ್ರಮಗಳ ಬಗ್ಗೆ ರೈತಾಪಿ ವರ್ಗಕ್ಕೆ ಮತ್ತು ಜನತೆಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಕ್ಯಾಂಪ್ಕೋ ಸಿಬ್ಬಂದಿಗಳು ಮತ್ತು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಂದ ಜಾಥಾ ಕಾರ್ಯಕ್ರಮವು ನಡೆಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯ ಮುಂದೆ ಜಾಥಾಕ್ಕೆ ಚಾಲನೆ ನೀಡಿದರು.ದರ್ಬೆ ವೃತ್ತದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸೇರಿಕೊಂಡು ಜಾಥಾವನ್ನು ಮುನ್ನಡೆಸಿದರು. ಜಾಥಾವು ದರ್ಭೆಯಿಂದ ಮುಖ್ಯ ರಸ್ತೆಯಲ್ಲಿ ಸಾಗಿ ಬಸ್ಸುನಿಲ್ದಾಣ, ವೆಂಕಟ್ರಮಣ ದೇವಳ, ಅಂಚೆಕಛೇರಿಯ ಮುಂಬದಿಯಿಂದ ಶ್ರೀಧರ ಭಟ್ ಅವರ ಅಂಗಡಿಯ ಮುಂದಾಗಿ ಕಿಲ್ಲೆ ಮೈದಾನದಲ್ಲಿ ಸಮಾಪನಗೊಂಡಿತು.ಯಂತ್ರಮೇಳ ಮತ್ತು ಸುವರ್ಣ ಮಹೋತ್ಸವಾಚರಣೆಯ ಕರಪತ್ರಗಳನ್ನು ಹಂಚಲಾಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ವ್ಯವಸ್ಥಾಪಕ ನಿರ್ದೇಶಕ ಎಚ್.ಎಮ್.ಕೃಷ್ಣ ಕುಮಾರ್, ನಿರ್ದೇಶಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ, ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ಯಂತ್ರಮೇಳದ ಸಂಯೋಜಕ ರವಿಕೃಷ್ಣ.ಡಿ.ಕಲ್ಲಾಜೆ, ನಿರ್ದೇಶಕರಾದ ಸಂತೋಶ್ ಕುತ್ತಮೊಟ್ಟೆ, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ

Posted by Vidyamaana on 2023-08-29 02:07:54 |

Share: | | | | |


ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ

ಪುತ್ತೂರು: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆಯು ಇನ್ನರ್‌ವೀಲ್‌ ಕ್ಲಬ್‌ನ ಸಹಯೋಗದಲ್ಲಿ ನಡೆಯಿತು.


ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್ (ಪ್ರಥಮ), ಮೃನಾಲ್ (ದ್ವಿತೀಯ), ವಿಭಾಶ್ರೀ (ತೃತೀಯ) ಹಾಗೂ ಸೀನಿಯರ್ ವಿಭಾಗದಲ್ಲಿ ಮಾಳವಿಕ (ಪ್ರಥಮ), ವಿನೋದ್ ಜಾಲ್ಸೂರ್ (ದ್ವಿತೀಯ) ಹಾಗೂ ಪವಿತ್ರ ಆರ್ (ತೃತೀಯ) ಬಹುಮಾನಗಳನ್ನು ಪಡೆದರು.


ಪ್ರಥಮ ಬಹುಮಾನ ಪಡೆದವರಿಗೆ ಗಾನ ಕೋಗಿಲೆ, ಚಿನ್ನದ ನಾಣ್ಯ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ಪ್ರಶಸ್ತಿ ಹಾಗೂ ಬೆಳ್ಳಿಯ ನಾಣ್ಯ ಮತ್ತು ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಬೆಳ್ಳಿಯ ನಾಣ್ಯ ನೀಡಿ ಗೌರವಿಸಲಾಯಿತು. ಗಣೇಶ್ ಮಂಗಳೂರು, ಮಿಥುನ್ ರಾಜ್ ಕಬಕ ಹಾಗೂ ವಿದ್ಯಾಶ್ರೀ ಕಲ್ಲಡ್ಕ ತೀರ್ಪುಗಾರರಾಗಿದ್ದರು.


ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡ ಗಾನರಥ ಗಾಯನ ಸ್ಪರ್ಧೆಯು ಕಲ್ಲಡ್ಕ, ವಿಟ್ಲ, ಈಶ್ವರಮಂಗಲ, ಕಬಕ, ಉಪ್ಪಿನಂಗಡಿ, ನೆಲ್ಯಾಡಿ, ಬೆಳ್ಳಾರೆ, ಸುಬ್ರಹ್ಮಣ್ಯ ಹಾಗೂ ಪುತ್ತೂರು ಸಹಿತ 9 ಕಡೆಗಳಲ್ಲಿ ಯಶಸ್ವಿಯಾಗಿ ನಡೆದು ಬಂದು ಒಟ್ಟು 400ಕ್ಕಿಂತಲೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉದಯಕುಮಾರ್ ಲಾಯಿಲ ಅವರ ನೇತೃತ್ವದಲ್ಲಿ ಗಾನರಥ ಸಂಯೋಜನೆಗೊಂಡಿತು.


ಪುತ್ತೂರಿನ ಜೈನಭವನದಲ್ಲಿ ಶನಿವಾರ (ಆ.26) ನಡೆದ ಗ್ರ್ಯಾಂಡ್ ಫಿನಾಲೆಯನ್ನು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹಾಗೂ ಇನ್ನರ್‌ವೀಲ್ ಕ್ಲಬ್‌ ಅಧ್ಯಕ್ಷೆ ಅಶ್ವಿನಿಕೃಷ್ಣ ದೀಪ ಬೆಳಗಿ ಉದ್ಘಾಟಿಸಿದರು.


ಕಾರ್ಯಕ್ರಮ ಸಂಯೋಜಕರಾದ ಆನಂದ ಕುಲಾಲ್, ರಮೇಶ್ ಕುಲಾಲ್, ಮುಳಿಯ ಜ್ಯುವೆಲ್ಸ್‌ನ ಶಾಖಾ ಪ್ರಬಂಧಕ ನಾಮದೇವ್ ಮಲ್ಯ, ಸ್ಟೋರ್ ಮ್ಯಾನೇಜರ್ ಪ್ರವೀಣ್ ಮತ್ತು ಸಂಜೀವ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನೃತ್ಯೋಪಾಸನಾ ಕಲಾ ಕೇಂದ್ರದ ನಿರ್ದೇಶಕಿ ಶಾಲಿನಿ ಆತ್ಮಭೂಷಣ್ ಮಾತನಾಡಿ, ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮುಳಿಯ ಜ್ಯುವೆಲ್ಸ್‌ ಗ್ರಾಮೀಣ ಪ್ರತಿಭೆಗಳನ್ನು ಹುಡುಕಿ ಅವರಿಗೆ ವೇದಿಕೆ ಒದಗಿಸುವ ಮಹತ್ತರವಾದ ಕಾರ್ಯ ಮಾಡಿರುವುದು ಶ್ಲಾಘನೀಯ. ಇದರಿಂದಾಗಿ ದೂರದ ಬೆಂಗಳೂರು, ಮಂಗಳೂರುಗಳಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳನ್ನು ಪುತ್ತೂರಿನಲ್ಲಿಯೂ ಕಾಣುವಂತಾಗಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಮುಳಿಯ ಜ್ಯುವೆಲ್ಸ್‌ನ ಮುಖ್ಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡುವ ಮುಳಿಯ ಗಾನರಥ ಸೀಸನ್-1 ಮುಕ್ತಾಯಗೊಂಡಿದೆ. ಇನ್ನು ಸೀಸನ್ -2 ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪ್ರಾರಂಭಗೊಂಡು ಡಿಸೆಂಬರ್ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಗಾನ ಮತ್ತು ನೃತ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಭೆಗಳು ಬೆಳೆಯಲು ಪರಿಶ್ರಮ ಮುಖ್ಯ ಎಂದರು.


ತೀರ್ಪುಗಾರರಾದ ವಿದ್ಯಾಶ್ರೀ ಕಲ್ಲಡ್ಕ ಮಾತನಾಡಿ, ಸ್ಥಳೀಯ ಪ್ರತಿಭೆಗಳಿಗೆ ಸ್ಥಳೀಯವಾಗಿ ವೇದಿಕೆ ಒದಗಿಸುತ್ತಿರುವ ಉತ್ತಮ ಕಾರ್ಯ ಮಾಡಿರುವ ಮುಳಿಯ ಜ್ಯುವೆಲ್ಸ್‌ಗೆ ಅಭಿನಂದನೆ ಸಲ್ಲಿಸಿದರು. ಗಣೇಶ್ ಮಂಗಳೂರು ಮಾತನಾಡಿ, ಸ್ಥಳೀಯ ಪ್ರತಿಭೆಗಳಿಗೆ ಮುಳಿಯ ಜ್ಯವೆಲ್ಸ್‌ ಚಿನ್ನದಂತಹ ವೇದಿಕೆ ಒದಗಿಸಿದೆ. ಇಲ್ಲಿನ ಪ್ರತಿಭೆಗಳು ಸಾಣೆ ಹಿಡಿದ ವಜ್ರದಂತೆ ಹೊಳೆಯಲಿ ಎಂದರು.


ಮುಳಿಯ ಜ್ಯುವೆಲ್ಸ್‌ನ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ ಮಾತನಾಡಿ, ಕಲೆ, ಸಾಹಿತ್ಯ, ರಾಗ, ತಾಳವನ್ನು ಗಮನದಲ್ಲಿಟ್ಟುಕೊಂಡು ಹಾಡಿದಾಗ ಶ್ರೋತೃಗಳಿಗೆ ರೋಮಾಂಚನ ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಕಲೆಯನ್ನು ಬೆಳೆಸಲು ಪ್ರೋತ್ಸಾಹಿಸಬೇಕು ಎಂದರು.


ನಾಯಕ್ ಕಿಚನ್ಸ್ ಯೂಟ್ಯೂಬ್ ಬ್ಲಾಗರ್ ಆಶಾ ನಾಯಕ್ ಅತಿಥಿಯಾಗಿ ಭಾಗವಹಿಸಿದ್ದರು. ತೀರ್ಪುಗಾರರಾದ ಮಿಥುನ್ ರಾಜ್, ಮುಳಿಯ ಜ್ಯುವೆಲ್ಸ್‌ನ ಪ್ರವೀಣ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮುಳಿಯ ಜ್ಯುವೆಲ್ಸ್‌ನ ಶೋರೂಂ ಮ್ಯಾನೇಜರ್ ನಾಮದೇವ ಮಲ್ಯ ಸ್ವಾಗತಿಸಿದರು. ಸಹಪ್ರಬಂಧಕ ಯತೀಶ್, ಮೋಹಿನಿ, ನಯನಾ, ಹರಿಣಾಕ್ಷಿ ಅತಿಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ವಂದಿಸಿದರು. ನಿರೂಪಕಿ ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ನಾಟ್ಯರಂಜಿನಿ ಕಲಾವಿದರಿಂದ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ನಡೆದವು.



Leave a Comment: