ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಸುದ್ದಿಗಳು News

Posted by vidyamaana on 2023-06-29 12:19:28 |

Share: | | | | |


ಮೃತಪಟ್ಟ ಗರ್ಭಿಣಿ ಮನೆಗೆ ಭೇಟಿ ನೀಡಿದ ಪುತ್ತಿಲ

ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.


ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,  ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು. 

ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು.  ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು. 

ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು. 

ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ  ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ  ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ  ಮುಸ್ಲಿಂ ಮಗುವೊಂದು ಮೃತಪಟ್ಟಿದೆ. 

ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.

 Share: | | | | |


ಚುನಾವಣೆ ಪ್ರಚಾರ ; ಚಿಲಿಂಬಿ ಸಾಯಿಮಂದಿರದ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ, ಗುಂಪು ಚದುರಿಸಿದ ಪೊಲೀಸರು

Posted by Vidyamaana on 2024-04-18 18:43:59 |

Share: | | | | |


ಚುನಾವಣೆ ಪ್ರಚಾರ ; ಚಿಲಿಂಬಿ ಸಾಯಿಮಂದಿರದ ಬಳಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ, ಗುಂಪು ಚದುರಿಸಿದ ಪೊಲೀಸರು

ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.

ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.

ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

Posted by Vidyamaana on 2023-07-21 23:20:36 |

Share: | | | | |


ಇಂದು (ಜು 22)ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಉಪನ್ಯಾಸ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪತ್ರಿಕಾ ಭವನದ ನೇತೃತ್ವದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಮತ್ತು ಉಪನ್ಯಾಸ ಕಾರ್ಯಕ್ರಮ ಜುಲೈ 22ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದಲ್ಲಿ ನಡೆಯಲಿದೆ.

ಸಮಾರಂಭವನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಪ್ರಿಯಾ ನಾಯ್ಕ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ, ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ.ಎಸ್. ರವಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಷಾಚಂದ್ರ ಮುಳಿಯ ಉಪಸ್ಥಿತರಿರುವರು.

ಇದೇ ಸಂದರ್ಭ ಹಿರಿಯ ಪತ್ರಿಕಾ ವಿತರಕ ಯು. ನಾಗರಾಜ್, ಬಳ್ಳಿ ನೆಕ್ಕಿಲಾಡಿಯ ಸಮಗ್ರ ಸಾವಯವ ಕೃಷಿಕ ಐರಿನ್ ಲೋಬೋ, ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ರೆಹನಾಝ್ ಅವರನ್ನು ಸನ್ಮಾನಿಸಲಾಗುವುದು.

ಬೆಂಗಳೂರು ಅನನ್ಯ ಎಂಟರ್ ಪ್ರೈಸಸ್ ನ ನಟೇಶ್ ಪೂಜಾರಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ, ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಕೆ.ವಿ. ಪ್ರಸಾದ್, ಬಿ.ಎಸ್.ಎಫ್. ನಿವೃತ್ತ ಕಮಾಂಡೆಂಟ್ ಚಂದಪ್ಪ ಮೂಲ್ಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

Posted by Vidyamaana on 2024-05-21 21:04:10 |

Share: | | | | |


ಕಾರಿನ ಮೇಲೆ ಮರ, ವಿದ್ಯುತ್‌ ತಂತಿ ಬಿದ್ದು ಜಖಂ..ಇಬ್ಬರಿಗೆ ಗಾಯ

ವಿಟ್ಲ : ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಇತರ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

Posted by Vidyamaana on 2023-05-24 14:01:39 |

Share: | | | | |


ಐ.ಎ.ಎಸ್ ಪರೀಕ್ಷೆ: ಯೂನಿವರ್ಸಲ್ ಕೋಚಿಂಗಿನ ವಿದ್ಯಾರ್ಥಿನಿಗೆ 2ನೇ ರ್ಯಾಂಕ್

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 10 ಮಂದಿ ಉತ್ತೀರ್ಣರಾಗಿದ್ದಾರೆ.

ಗರೀಮಾ ಲೋಹಿಯಾ 2ನೇ ಸ್ಥಾನ ಪಡೆದಿದ್ದರೆ, ವೈಷ್ಣವಿ ಪೌಲ್ 62ನೇ ಸ್ಥಾನ, ವಿಶ್ವಜೀತ್ ಸೌರ್ಯನ್ 126ನೇ ಸ್ಥಾನ, ಪಿ.ಶ್ರವಣ್ ಕುಮಾರ್ 222ನೇ ಸ್ಥಾನ, ಶಿವಾಂಗ್ ರಸ್ತೋಗಿ 307ನೇ ಸ್ಥಾನ, ಶುಭ್ರತೋಷ್ ಶರ್ಮ 358 ನೇ ಸ್ಥಾನ, ಸ್ವಸ್ಥಿಕಾ ಆರ್.ಪಿ. 456ನೇ ಸ್ಥಾನ, ಪ್ರಣಯ್ ಕುಮಾರ್ ಸಿಂಗ್ 602ನೇ ಸ್ಥಾನ, ಮನ್ ಪ್ರೀತ್ ಸಿಂಗ್ 616ನೇ ಸ್ಥಾನ ಹಾಗೂ ರಾಮ್ ದೇನಿ ಸಾಯಿನಾಥ್ 743ನೇ ಸ್ಥಾನ ಗಳಿಸಿದ್ದಾರೆ.

23 ವರ್ಷಗಳ ಹಿಂದೆ ಬೆಂಗಳೂರಿನ ವಿಜಯನಗರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ರಾರಂಭವಾದ ಯೂನಿವರ್ಸಲ್  ಕೋಚಿಂಗ್ ಸೆಂಟರ್ ನಲ್ಲಿ ವ್ಯಾಸಂಗ ಮಾಡಿದ ಸಾವಿರಾರು ಮಂದಿ ಈಗಾಗಲೇ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಈ ಬಾರಿಯೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಸ್ಥೆ ಇದೀಗ ಕೆಂಗೇರಿ ಸಮೀಪದ ರಾಮೋಹಳ್ಳಿಯಲ್ಲೂ ಇಂಟಿಗ್ರೇಟೆಡ್ ಪದವಿ ಶಿಕ್ಷಣ ನೀಡುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

Posted by Vidyamaana on 2024-06-24 11:44:41 |

Share: | | | | |


ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಭೇಟಿ

ಸುಬ್ರಮಣ್ಯ; ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು

ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

Posted by Vidyamaana on 2023-04-27 16:30:04 |

Share: | | | | |


ನಾಳೆ ‘ಸುಭದ್ರ’ದಲ್ಲಿ ‘ಸೀತಾ ಪರಿವಾರ’ – ಪುತ್ತಿಲ ಗೆಲುವಿಗೆ ಬಲ ತುಂಬಲಿರುವ ‘ನಾರಿ ಶಕ್ತಿ’!

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರ ಪರವಾಗಿ ಮಹಿಳಾ ಸಮಾವೇಶ ‘ಸೀತಾಪರಿವಾರ’ ಎ.28 ರಂದು ನಡೆಯಲಿದೆ.ಮಹಿಳಾ ಸಮಾವೇಶ ‘ಸೀತಾಪರಿವಾರ’ ಕಾರ್ಯಕ್ರಮವು ಎ.28 ಸಂಜೆ 4 ಗಂಟೆಗೆ ಮುಕ್ರಂಪಾಡಿಯ ಸುಭದ್ರ ಸಭಾಂಗಣದಲ್ಲಿ ನಡೆಯಲಿದೆ.ಹಿಂದುತ್ವದ ಅಡಿಯಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಅರುಣ್ ಕುಮಾರ್ ಪುತ್ತಿಲ ರವರು ಕಾರ್ಯಕರ್ತರ ಅಪೇಕ್ಷೆಯಂತೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಅವರ ಗೆಲುವು ರಾಜ್ಯದಲ್ಲಿ ಬಿಜೆಪಿಯ ಗೆಲವುವಾಗಲಿದೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಗೆಲುವು ಆಗಲಿದೆ. ಹಾಗಾಗಿ ಮಹಿಳಾ ಕಾರ್ಯಕರ್ತರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ನಾವೆಲ್ಲ ಒಗ್ಗಟ್ಟಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದು, ಮಹಿಳಾ ಕಾರ್ಯಕರ್ತರು ‘ಸೀತಾಪರಿವಾರ’ ಎಂಬ ಹೆಸರಿನಡಿಯಲ್ಲಿ ಸಮಾವೇಶ ನಡೆಸಲಿದ್ದಾರೆ.

ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೀತಾ ಪರಿವಾರ ಸಮಾವೇಶದ ಪ್ರಮುಖರಾಗಿರುವ ವಸಂತ ಲಕ್ಷ್ಮೀ ರವರು ಪತ್ರಿಕಾಗೋಷ್ಠಿ ತಿಳಿಸಿದರು.



Leave a Comment: