ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

Posted by Vidyamaana on 2023-12-20 09:51:04 |

Share: | | | | |


ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಇಟ್ಟ ಬೇಡಿಕೆ ಏನು?: ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

ಬೆಂಗಳೂರು : ರಾಜ್ಯದಲ್ಲಿರುವ ಬರ ಸಮಸ್ಸೆಗೆ ಪರಿಹಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಪ್ರಧಾನಿಗೆ ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್‌.ಡಿ.ಆರ್‌.ಎಫ್. ನಿಂದ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ.


ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನುಪರಿಗಣಿಸುವಂತೆ ಮನವಿ ಮಾಡಿದ್ದೇನೆ. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದೇನೆ.

ಪುತ್ತೂರು : ವಿಶ್ವಕರ್ಮ ಮಹೋತ್ಸವ ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

Posted by Vidyamaana on 2023-09-17 18:44:13 |

Share: | | | | |


ಪುತ್ತೂರು : ವಿಶ್ವಕರ್ಮ ಮಹೋತ್ಸವ ವೈಭವದ ವಿಶ್ವಕರ್ಮ ವಾಹನ ಮೆರವಣಿಗೆ

ಪುತ್ತೂರು: ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ಮುಖ್ಯರಸ್ತೆಯಿಂದಾಗಿ ಸಾಗಿದ ವಿಶ್ವಕರ್ಮ ದೇವರ ಅಲಂಕೃತ ವಾಹನ ಮೆರವಣಿಗೆ ಬೊಳುವಾರು ವಿಶ್ವಕರ್ಮ ಸಭಾಭವನದವರೆಗೆ ಸಾಗಿತು.


ಇಂದು ಮಹತ್ವಾಕಾಂಕ್ಷಿ ವಿಶ್ವಕರ್ಮ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ; ಏನಿದು ಸ್ಕೀಮ್.? ಯಾರಿಗೆ ಲಾಭ.? ಡಿಟೈಲ್ಸ್ ಇಲ್ಲಿದೆ

https://vidyamaana.com/news/prime-Minister-modi-launched-ambitious-Vishwakarma-project-today

ಮೆರವಣಿಗೆಯಲ್ಲಿ ಚೆಂಡೆ, ಕುಣಿತ ಭಜನೆ, ವಿಶ್ವಕರ್ಮ ದೇವರ ಸ್ತಬ್ದಚಿತ್ರ ಗಮನ ಸೆಳೆಯಿತು. ಇದನ್ನನುಸರಿಸಿ ವಿಶ್ವಕರ್ಮ ಸಮುದಾಯದವರು ಮೆರವಣಿಗೆಯಲ್ಲಿ ಸಾಗಿಬಂದರು.ವಿಶ್ವಕರ್ಮ ಸಮಾಜದ ವಿವಿಧ ಸಂಘಟನೆಗಳಾದ ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ,


ವಿಶ್ವಕರ್ಮ ಯುವ ಸಮಾಜ, ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು, ಪುತ್ತೂರು ವಿಧಾನಸಭಾ ಕ್ಷೇತ್ರದ ಶ್ರೀ ಆನೆಗೊಂದಿ ಗುರು ಸೇವಾ ಪರಿಷತ್ತಿನ ಪುತ್ತೂರು ವಲಯ, ಪುತ್ತೂರು ವಿಶ್ವಕರ್ಮ ಯುವ ಮಿಲನ್, ಪಂಚಮುಖಿ ಗೆಳೆಯರ ಬಳಗ ಕೋರ್ಟ್‌ ರಸ್ತೆ ಪುತ್ತೂರು, ವಿಶ್ವಕರ್ಮ ಮಹಿಳಾ ಮಂಡಳಿ, ಬೀರಮಲೆ ವಿಶ್ವಕರ್ಮ ಸೇವಾ ಸಂಘ, ಬೀರಮಲೆ ಗಾಯತ್ರಿ ಮಹಿಳಾ ಮಂಡಳಿ, ಉಪ್ಪಿನಂಗಡಿ ವಿಶ್ವಕರ್ಮ ಸೇವಾ ಸಂಘ, ಬೊಳುವಾರು ಭಾವನಾ ಕಲಾ ಆರ್ಟ್ಸ್, ಬೀರಮಲೆ ವಿಶ್ವಕರ್ಮ ಯುವಕ ಸಂಘ, ಉಪ್ಪಿನಂಗಡಿ ಕಾಳಿಕಾಂಬಾ ಮಹಿಳಾ ಸಂಘ, ದ.ಕ. ಜಿಲ್ಲಾ ಕಬ್ಬಿಣ ಕೆಲಸಗಾರರ ಸಂಘ ಸಹಕರಿಸಿತು.

ಸೌದಿ ಅರೇಬಿಯಾ ಭೀಕರ ಬಸ್ ಅಪಘಾತ, ಕರ್ನಾಟಕದ ಐವರು ಮೃತ್ಯು

Posted by Vidyamaana on 2023-02-22 09:55:30 |

Share: | | | | |


ಸೌದಿ ಅರೇಬಿಯಾ ಭೀಕರ ಬಸ್ ಅಪಘಾತ, ಕರ್ನಾಟಕದ ಐವರು ಮೃತ್ಯು

ಬೆಂಗಳೂರು: ಸೌದಿ ಅರೇಬಿಯಾದ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್ ಸುಲ್ಲದ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ತಿಳಿದುಬಂದಿದೆ.ಇವರು ಸಾಲಿಹೀನ್ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಮೂಲಕ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಬಸ್ ಮಕ್ಕಾದಿಂದ 250 ಕಿ.ಮೀ.ದೂರದಲ್ಲಿ ಮುಂದೆ ಚಲಿಸುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

Posted by Vidyamaana on 2024-05-01 15:40:39 |

Share: | | | | |


ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿರುತ್ತಾರೆ. ಸದರಿ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಪೊಲೀಸರು ಚಪ್ಪ (ಸರ್ಪರಾಜ್) ಮತ್ತು ಅಬ್ದುಲ್ ಅಸ್ಪರ್ (ಅಸ್ಫಕ್ ) ಎಂಬುವರನ್ನು ಆರೋಪಿಗಳೆಂದು ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಲಯವು ಈ ಪ್ರಕರಣದಲ್ಲಿ ಅಭಿಯೋಜನ ಪರ ಸುಮಾರು 21

ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

Posted by Vidyamaana on 2024-03-06 15:11:50 |

Share: | | | | |


ಕಬಕ : ಓಜಾಲ ನಿವಾಸಿ ಉಸ್ಮಾನ್ ಹೃದಯಾಘಾತದಿಂದ ನಿಧನ

ಪುತ್ತೂರು :- ಬಂಟ್ವಾಳ ತಾಲೂಕಿನ ಕುಲ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯಾನಪೋಯ ಆಸ್ಪತ್ರೆಯಲ್ಲಿ ಮಾ 06 ರಂದು  ಹೃದಯಾಘಾತದಿಂದ ನಿಧನರಾದರು 

ಹಲವಾರು ವರ್ಷಗಳಿಂದ ಸೆಕೆಂಡೆಂಡ್ ವಾಹನ ವ್ಯಾಪಾರಸ್ಥರು,ಹಲವಾರು ವರ್ಷಗಳ ಹಿಂದೆ ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಂಟೋ ಲಿಂಕ್ಸ್ ಮಾಲಕ ರಾಗಿದ್ದರು,ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

Posted by Vidyamaana on 2023-04-26 03:18:31 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಇಂದಿನ ಪ್ರಚಾರ ಸಭೆಗಳು

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಗ್ರಾಮಾಂತರ ಭಾಗಗಳಲ್ಲಿ ಪ್ರಚಾರ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಅಶೋಕ್ ಕುಮಾರ್ ರೈ ಅವರ ಇಂದಿನ ಪ್ರಚಾರ ಸಭೆಗಳು ಹೀಗಿವೆ -

ಬೆಳಿಗ್ಗೆ 9.30ಕ್ಕೆ ಅರಿಯಡ್ಕ, 10.30ಕ್ಕೆ ಮಾಡ್ನೂರು, 11.30ಕ್ಕೆ ಕೊಳ್ತಿಗೆ, ಮಧ್ಯಾಹ್ನ 2.30ಕ್ಕೆ ನೆಟ್ಟಣಿಗೆ ಮುಡ್ನೂರು, 3.30ಕ್ಕೆ ಪಡುವನ್ನೂರು, 4.30ಕ್ಕೆ ಬಡಗನ್ನೂರು, ಸಂಜೆ 6ಕ್ಕೆ ಬೆಟ್ಟಂಪಾಡಿ, 7 ಗಂಟೆಗೆ ನಗರದಲ್ಲಿ ಪ್ರಚಾರ ಸಭೆಗಳು ನಡೆಯಲಿವೆ ಎಂದು ತಿಳಿದುಬಂದಿದೆ.



Leave a Comment: