ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ: SP ಕೆ.ರಾಮರಾಜನ್

Posted by Vidyamaana on 2024-05-11 07:03:21 |

Share: | | | | |


ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ: SP ಕೆ.ರಾಮರಾಜನ್

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆಂದು ತಿಳಿಸಿತ್ತು. ಆದರೆ ಈ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಶಾಸಕರ ಇಂದಿನ ಕಾರ್ಯಕ್ರಮ ಜು 24

Posted by Vidyamaana on 2023-07-24 06:33:25 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜು 24

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಸೋಮವಾರ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ, ಸಮಾಲೋಚನೆ ನಡೆಸಲಿದ್ದಾರೆ.

ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

Posted by Vidyamaana on 2024-03-17 07:53:06 |

Share: | | | | |


ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ

ಚಾಮರಾಜನಗರ, ಮಾ.17: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಗಡಿ ಭಾಗವಾದ ಗರಿಕೆಕಿಂಡಿ ಸಮೀಪ ಇಂದು ಮುಂಜಾನೆ ನಡೆದಿದೆ.ಚಾಮರಾಜನಗರದಿಂದ ತಮಿಳುನಾಡಿಗೆ ತೆರುಳುತ್ತಿದ್ದ ಲಾರಿಯೊಂದು ಕೆಟ್ಟು ರಸ್ತೆಯ ಪಕ್ಕದಲ್ಲಿ ನಿಂತಿತ್ತು.ವೇಳೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದಂತಹ ಲಾರಿಯೊಂದು ಢಿಕ್ಕಿ ಹೊಡೆದು ರಸ್ತೆಯ ಪಕ್ಕದ ಗೋಡೆಗೂ ಸಹ ಗುದ್ದಿದೆ. ಇದರ ಪರಿಣಾಮ ಲಾರಿಗಳೆರಡು ಜಖಂಗೊಂಡು ಚಾಲಕನಿಗೆ ಗಾಯಗಳಾಗಿವೆ. 


ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಅವಘಡ ಶನಿವಾರ ಮುಂಜಾನೆ 5 ಗಂಟೆಯಲ್ಲಿ ಸಂಭವಿಸಿದೆ ಹಾಗೂ ಕೆಲ ಕಾಲ ರಸ್ತೆ ಅಡಚಣೆ ಉಂಟಾಗಿತ್ತು ಎಂದು ತಿಳಿದುಬಂದಿದೆ.

ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

Posted by Vidyamaana on 2024-06-06 11:17:26 |

Share: | | | | |


ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು.

ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು. ಎಲ್ಲಾ ಶೋರೂಮ್‌ಗಳಲ್ಲಿ ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳನ್ನು ವಿತರಿಸಲಾಯಿತು.

ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

Posted by Vidyamaana on 2023-12-30 16:09:52 |

Share: | | | | |


ಜನವರಿ 22ರಂದು ದೀಪಾವಳಿ ಆಚರಿಸಿ : ದೇಶದ 140 ಕೋಟಿ ಭಾರತೀಯರಿಗೆ ಪ್ರಧಾನಿ ಮೋದಿ ಮನವಿ

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ಘಾಟನೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ಆಗಮಿಸಿದ್ದು, ನೂತನವಾಗಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಉದ್ಘಾಟಿಸಿದರು.ನಂತ್ರ ಅಯೋಧ್ಯೆಯಲ್ಲಿ ಮೆಗಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, 2024ರ ಜನವರಿ 22 ರಂದು ರಾಮ ಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆ ಕ್ಷಣಕ್ಕಾಗಿ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದೆ ಎಂದು ಹೇಳಿದರು. ಇನ್ನು ಜನವರಿ 22ರಂದು 140 ಕೋಟಿ ಭಾರತೀಯರು ದೀಪಗಳ ಹಬ್ಬವಾಗಿ ಆಚರಿಸಬೇಕು ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಪ್ರಧಾನಿ ನಗರದ ಮೂಲಕ ಮೆಗಾ ರೋಡ್ ಶೋ ನಡೆಸಿದ ನಂತರ ನವೀಕರಿಸಿದ ರೈಲ್ವೆ ನಿಲ್ದಾಣವನ್ನ ಉದ್ಘಾಟಿಸಿದ್ದರು.ಇಂದು ಇಡೀ ಜಗತ್ತು ಜನವರಿ 22ರ ಐತಿಹಾಸಿಕ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ ಅಯೋಧ್ಯೆಯ ಜನರಲ್ಲಿ ಈ ಉತ್ಸಾಹವು ತುಂಬಾ ಸಹಜವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇನ್ನು "ನಾನು ಭಾರತದ ಪ್ರತಿಯೊಂದು ಮಣ್ಣಿನ ಕಣ ಮತ್ತು ಜನರ ಆರಾಧಕ. ನನಗೂ ನಿಮ್ಮಷ್ಟೇ ಕುತೂಹಲವಿದೆ" ಎಂದರು.


ಪ್ರಧಾನಿ ಮೋದಿ ಅವರು 15 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನ ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಿದರು. ಇದಕ್ಕಾಗಿ ಅಯೋಧ್ಯೆಯ ಜನತೆಯನ್ನು ಪ್ರಧಾನಿ ಅಭಿನಂದಿಸಿದ್ದಾರೆ. ನಾವು ನಮ್ಮ ಪರಂಪರೆಯನ್ನು ಗುರುತಿಸಬೇಕು ಎಂದು ಪ್ರಧಾನಿ ಹೇಳಿದರು. ನಮ್ಮ ಪರಂಪರೆ ನಮಗೆ ಸ್ಫೂರ್ತಿ ನೀಡುತ್ತದೆ. ಇದೇ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಗುಡಾರದಲ್ಲಿ ಕುಳಿತಿದ್ದ ಕಾಲವಿತ್ತು ಮತ್ತು ಇಂದು ರಾಮ ಲಲ್ಲಾ ಮಾತ್ರವಲ್ಲ, ದೇಶದ ನಾಲ್ಕು ಕೋಟಿ ಬಡವರಿಗೂ ಶಾಶ್ವತ ಮನೆ ಸಿಕ್ಕಿದೆ ಎಂದು ಪ್ರಧಾನಿ ಹೇಳಿದರು.

MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ - ಸೂತ್ರಧಾರಿ ಚೈತ್ರಾ ಕುಂದಾಪುರ ಮೂವರು ಸಹಚರರ ಬಂಧನ

Posted by Vidyamaana on 2023-09-13 01:49:38 |

Share: | | | | |


MLA ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಏಳು ಕೋಟಿ ಸುಲಿಗೆ - ಸೂತ್ರಧಾರಿ ಚೈತ್ರಾ ಕುಂದಾಪುರ ಮೂವರು ಸಹಚರರ ಬಂಧನ

ಉಡುಪಿ : ಮುಂಬಯಿಯ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.


ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.


ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಇವರಿಗೆ ಚೈತ್ರಾ ಮತ್ತಾಕೆಯ ಸಹಚರರ ತಂಡ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿತ್ತು.ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ಚೈತ್ರಾಳ ತಂಡ ಮಹಾವಂಚನೆ ನಡೆಸಿತ್ತು.


ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಟಿಕೆಟ್ ಕೊಡಿಸುವುದಾಗಿ ನಾಲೈದು ಜನರ ತಂಡದಿಂದ ಬೃಹನ್ನಾಟಕ ನಡೆಸಿದ್ದಳು. ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದಳು. ಅಲ್ಲದೆ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್ ಬಳಿಕ ಹಂತ ಹಂತವಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಏಳು ಕೋಟಿ ರೂಪಾಯಿ ಸುಲಿಗೆ ಮಾಡಿತ್ತು.ಚೈತ್ರಾ ಅಲ್ಲದೇ ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬಾತನನ್ನೂ ಕೂಡ ವಶಕ್ಕೆ ಪಡೆದ ಪೊಲೀಸರು ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.


ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದ ಖದೀಮರು ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಎಸಗಿದ್ದರು. ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಮತ್ತು ಪ್ರಸಾದ್ ಈ ನಾಲ್ವರ ತಂಡ ಇದೀಗ ಪೋಲಿಸರ ಬಂಧನಕ್ಕೆ ಒಳಗಾಗಿದೆ.



Leave a Comment: