ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ಆಮಿಷಕ್ಕೆ

Posted by Vidyamaana on 2023-10-13 04:46:47 |

Share: | | | | |


ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ಆಮಿಷಕ್ಕೆ

ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ. 


ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ. 


ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ

Posted by Vidyamaana on 2023-05-01 11:59:02 |

Share: | | | | |


ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ

ಬೆಂಗಳೂರು: ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು:

1. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವರ್ಷಕ್ಕೆ ಮೂರು ಅಡುಗೆ ಅನಿಲ ವಿತರಣೆ (ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಯಂದು ಉಚಿತ ಸಿಲಿಂಡರ್ ವಿತರಣೆ)

2. ಗುಣಮಟ್ಟದ ಆಹಾರ ಒದಗಿಸುವುದಕ್ಕಾಗಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ.

3. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಾಗುವುದು.

4. ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ವಿತರಣೆ. ಅಲ್ಲದೆ ಪ್ರತಿ ತಿಂಗಳು ಸಿರಿಧಾನ್ಯಗಳ ಪಡಿತರ ಕಿಟ್ ಅನ್ನು ಪೋಷಣೆ ಯೋಜನೆಯ ಮೂಲಕ ವಿತರಣೆ.

5. ಒನಕೆ ಓಬವ್ವ ಸಾಮಾಜಿಕ ನ್ಯಾಯನಿಧಿ ಯೋಜನೆ ಪ್ರಾರಂಭಿಸಿ, ಇದರಲ್ಲಿ ಎಸ್ ಸಿ, ಎಸ್ಟಿ ಸಮುದಾಯದ ಮಹಿಳೆಯರಿಗೆ ಐದು ವರ್ಷದ ಭವಿಷ್ಯ ನಿಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 10,000 ರೂ.ವರೆಗೆ ಠೇವಣಿ ನೀಡಲಾಗುವುದು.

6. ವಸತಿರಹಿತ ಜನರಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳ ಹಂಚಿಕೆ.

7. ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯ್ದೆ 1972ಕ್ಕೆ ತಿದ್ದುಪಡಿ ತರಲಾಗುವುದು ಎಂದು ಭರವಸೆ ನೀಡಲಾಗಿದೆ. ಅಲ್ಲದೆ, ಇದರ ಕುಂದು ಕೊರತೆಗಳ ಪರಿಹಾರಕ್ಕೆ ಆನ್ಲೈನ್ ವ್ಯವಸ್ಥೆ ಅನುಷ್ಠಾನಕ್ಕೆ ತರಲಾಗುವುದು ಎಂದು ಘೋಷಣೆ.

8. ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು.

9. ಸಮನ್ವಯ ಯೋಜನೆಯಡಿ ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆ ನಿರ್ಮಾಣದ ಭರವಸೆ.

10. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಕ್ರಮ. ಸಿಲಿಕಾನ್ ಸಿಟಿಯನ್ನು ಡಿಜಿಟಲ್ ಇನನೋವೇಶನ್ ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ.

11. ಐಎಎಸ್, ಕೆಎಎಸ್ ಮುಂತಾದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹ.

12. ‘ಮಿಷನ್ ಸ್ವಾಸ್ಥ್ಯ ಕರ್ನಾಟಕ’ ಯೋಜನೆ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಗಳ ಸುಧಾರಣೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪನೆ. ಹಾಗೆಯೇ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಸೌಕರ್ಯ ಕಲ್ಪಿಸಲಾಗುವುದು ಎಂದು ಘೋಷಣೆ.

13. ರಾಜ್ಯವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವಾಗಿ ರೂಪಿಸಲಾಗುವುದು. ಬೆಂಗಳೂರಿನ ಹೊರವಲಯದಲ್ಲಿ ‘ಇಬಿ ಸಿಟಿ’ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ.

14. ರಾಜ್ಯದ ಎಲ್ಲಾ ಗ್ರಾ.ಪಂ.ಗಳಲ್ಲಿ ಕಿರು ಶೀತಲೀಕರಣ ಸೌಲಭ್ಯ ಸ್ಥಾಪನೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡಲಾಗುವುದು ಎಂದು ಘೋಷಣೆ.

15. ರಾಜ್ಯದ ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಹಾಗೂ ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್ ಅಭಿವೃದ್ಧಿಗೆ 91,500 ಕೋಟಿ ವಿನಿಯೋಗಕ್ಕೆ ಕ್ರಮ.

16. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಘೋಷಿಸಲಾಗಿದೆ.

17. ಐಎಎಸ್, ಕೆಎಎಸ್, ಬ್ಯಾಂಕಿಂಗ್ ಸರ್ಕಾರಿ ಉದ್ಯೋಗಾಂಕಾಂಕ್ಷಿಗಳಿಗೆ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹ ನೀಡುವ ಮೂಲಕ ವೃತ್ತಿ ಬೆಂಬಲ ಒದಗಿಸಲಾಗುವುದು.

18. ಕನ್ನಡ ಚಿತ್ರೋದ್ಯಮಕ್ಕೆ ಉದ್ಯಮ ಸ್ಥಾನಮಾನ, ಅಂತರರಾಷ್ಟ್ರೀಯ ಮಟ್ಟದ ಪುನೀತ್ ರಾಜ್ ಕುಮಾರ್ ಫಿಲ್ಮ್ ಸಿಟಿ ಸ್ಥಾಪನೆ.

ಮೇ 6 ಕ್ಕೆ ಪುತ್ತೂರಿಗೆ ಯೋಗಿ ಆದಿತ್ಯನಾಥ್

Posted by Vidyamaana on 2023-04-25 03:40:15 |

Share: | | | | |


ಮೇ 6 ಕ್ಕೆ ಪುತ್ತೂರಿಗೆ ಯೋಗಿ ಆದಿತ್ಯನಾಥ್

ಪುತ್ತೂರು: ಚುನಾವಣಾ ಕಣ ರಂಗು ಪಡೆಯುತ್ತಿದ್ದಂತೆ ಸ್ಟಾರ್ ಪ್ರಚಾರಕರ ದಂಡು ಪುತ್ತೂರಿಗೆ ಆಗಮಿಸುತ್ತಿದೆ.

ಮೇ 6ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಪಕ್ಕಾ ಆಗಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಮತ ಯಾಚಿಸಲಿರುವ ಯೋಗಿ, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಲಿದ್ದಾರೆ.

ರಾಜ್ಯ, ರಾಷ್ಟ್ರದ ರಾಜಕಾರಣ ಪುತ್ತೂರಿನೆಡೆಗೆ ಮುಖ ಮಾಡಿದ್ದು, ಕಣ ರಣಾಂಗಣವಾಗಿದೆ. ವಿಪಕ್ಷ, ಪಕ್ಷೇತರ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗುತ್ತಿರುವ ನಡುವೆ ಬಿಜೆಪಿಯೂ ಸ್ಟಾರ್ ಪ್ರಚಾರಕರನ್ನು ಕರೆಸಿಕೊಳ್ಳುತ್ತಿದೆ.

ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 04:57:12 |

Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಎರಡನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

Posted by Vidyamaana on 2023-04-14 04:15:49 |

Share: | | | | |


ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್ ಗೆ ರಾಜೀನಾಮೆ.

ಪುತ್ತೂರು: ಕಾಂಗ್ರೆಸ್ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆಯಾಗಿದ್ದ ದಿವ್ಯಪ್ರಭಾ ಚಿಲ್ತಡ್ಕ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಗೆ ಏ‌ ೧೪ರಂದು  ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್ ಮುಖಂಡೆಯಾಗಿ ಸಮಾಜಮುಖಿಯಾಗಿ ಗುರುತಿಸಿಕೊಂಡಿದ್ದ ದಿವ್ಯಪ್ರಭಾ ಅವರು ಕಾಂಗ್ರೆಸಿನ ಪ್ರಬಲ ಟಿಕೇಟ್ ಆಕಾಂಕ್ಷಿಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಟಿಕೇಟ್ ಕೈತಪ್ಪುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಕಾಂಗ್ರೆಸಿಗೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಎಂಎಲ್ಎ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್ ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

Posted by Vidyamaana on 2023-04-27 07:50:07 |

Share: | | | | |


ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನೆ

ಪುತ್ತೂರು : ಬೈಪಾಸ್ ರಸ್ತೆಯಲ್ಲಿರುವ ಆಶ್ಮಿ ಕಂಫರ್ಟ್ ನಲ್ಲಿ ಬಿಜೆಪಿ ಚುನಾವಣಾ ಕಚೇರಿ ಗುರುವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು.

ಗಣಹೋಮ ನೆರವೇರಿಸುವ ಮೂಲಕ ಕಚೇರಿ ಉದ್ಘಾಟನೆಗೊಂಡು ಚುನಾವಣೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಬೆಳಿಗ್ಗೆ ಕರ್ನಾಟಕದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲೇ  ಕಚೇರಿ ಉದ್ಘಾಟನೆಗೊಂಡಿತು. ಗಣಹೋಮ ನೆರವೇರಿದ ಬಳಿಕ ಬಿಜೆಪಿ ಮುಂಖಡರು, ಕಾರ್ಯಕರ್ತರು ಎಲ್ ಇಡಿ ಪರದೆ ಮೂಲಕ ನರೇಂದ್ರ ಮೋದಿಯರ ಭಾಷಣಕ್ಕೆ ಕಿವಿಯಾದರು.



Leave a Comment: