ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Posted by Vidyamaana on 2024-05-05 16:14:09 |

Share: | | | | |


ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮೇ. 6ರಂದು ನಡೆಯಲಿರುವ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. 5ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು.‌ ಮೇ. 5ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆ ನಡೆಯಿತು. ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ, ನಿಕಟಪೂರ್ವ ಆಡಳಿತ ಮೊಕ್ತೇಸರ ಯು‌.ಜಿ.ರಾಧ, ಕೋಡಿಂಬಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಸಹಿತ ಹಲವರು ಭಾಗವಹಿಸಿದ್ದರು.‌ 

ವಿಟ್ಲ :ಅನಾರೋಗ್ಯದಿಂದ ಅಡ್ಯನಡ್ಕ ನಿವಾಸಿ ಅಶ್ರಫ್ ನಿಧನ

Posted by Vidyamaana on 2024-02-21 16:32:03 |

Share: | | | | |


ವಿಟ್ಲ :ಅನಾರೋಗ್ಯದಿಂದ ಅಡ್ಯನಡ್ಕ ನಿವಾಸಿ ಅಶ್ರಫ್ ನಿಧನ

ವಿಟ್ಲ: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ  ಪುತ್ರ ಅಶ್ರಫ್(38) ಮೃತಪಟ್ಟವರು. ಇವರು ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನದ ಹಿಂದೆ  ಸ್ವದೇಶಕ್ಕೆ ಬಂದಿದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ ಅಗಲಿದ್ದಾರೆ .

ಉಪ್ಪಿನಂಗಡಿ : ಪತ್ನಿಗೆ ಕಿರುಕುಳ ವಂಚನೆ ಪ್ರಕರಣ

Posted by Vidyamaana on 2023-09-27 12:54:39 |

Share: | | | | |


ಉಪ್ಪಿನಂಗಡಿ : ಪತ್ನಿಗೆ ಕಿರುಕುಳ ವಂಚನೆ ಪ್ರಕರಣ

ಉಪ್ಪಿನಂಗಡಿ : ಪತ್ನಿಗೆ ವಂಚಿಸಿ ಇನ್ನೊಂದು ಮದುವೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮಹಮ್ಮದ್ ಜಲೀಲ್ ಬಂಧಿತ ಆರೋಪಿ.ಜಲೀಲ್ ಮೊದಲ ಪತ್ನಿಯ ತಂದೆ 2020 ರಲ್ಲಿ ಈ ಬಗ್ಗೆ ಠಾಣೆಗೆ ದೂರು ನೀಡಿದ್ದರು.


ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 128 ಸಿ.ಆರ್.ಪಿ.ಸಿ ರಂತೆ ಪ್ರಕರಣ ದಾಖಲಾಗಿತ್ತು.


ಜಲೀಲ್ ಪತ್ನಿ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


2019 ರಲ್ಲಿ ಜಲೀಲ್ ಮದುವೆಯಾಗಿದ್ದು, ಮದುವೆ ಆದ ನಂತರದಲ್ಲಿ ಜಲೀಲ್ ವಿದೇಶಕ್ಕೆ ಹೋಗಿದ್ದು, ಜಲೀಲ್ ಸಹೋದರರು  ಆತನ ಪತ್ನಿ ವಾಸ ಇರುವ ಮನೆಯಲ್ಲಿಯೇ ವಾಸವಿದ್ದು, ಜಲೀಲ್ ಪತ್ನಿಗೆ ಕಿರುಕುಳ ನೀಡಲು ಆರಂಭಿಸಿದ್ದು, ಫೋನ್ ಕರೆಯಲ್ಲಿ  ಕುಟುಂಬಕ್ಕೆ ಮತ್ತು ಜಲೀಲ್ ಪತ್ನಿಗೆ ಅವಾಚ್ಯ ಶಬ್ದಗಳಿಂದ

ಬೈಯುವುದು ಅಲ್ಲದೆ ನೀನು ಮನೆಯಿಂದ ಹೊರಗೆ ಹೋಗು ನಾನು ನಿನಗೆ ತಲಾಖ್ ನೀಡಿರುತ್ತೇನೆ. ನೀನು ನಿನ್ನ ತವರು ಮನೆಗೆ ಹೋಗದಿದ್ದರೆ ನನ್ನ ತಮ್ಮಂದಿರಿಂದ ನಿನ್ನ ಕೊಲೆ ಮಾಡಿಸುತ್ತೇನೆ ಎಂದು ಬೆದರಿಕೆ ಹಾಕಿರುತ್ತಾನೆ.


 ಬೈದಿರುವುದಲ್ಲದೆ  ನಿಂದಿಸುವುದು, ಆಕೆಗೆ ಆಹಾರ ನೀರು ನೀಡದೆ ಸತಾಯಿಸುವುದು, ಜೀವ ಬೆದರಿಕೆ ಹಾಕಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ.


 ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದವನ್ನು ಪಿಎಸ್ಐ  ರವರ ಮಾರ್ಗದರ್ಶನದಲ್ಲಿ ಹೆಚ್ ಸಿ ಗಜೇಂದ್ರ, ಪಿಸಿ ಅಭಿಜಿತ್ ರವರು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಲಯಕ್ಕೆ ಹಾಜರುಪಡಿಸಿದರು.

ಮೂಡಬಿದಿರೆ : ಕಾಲೇಜು ಸಿಬ್ಬಂದಿ ಹನುಮಂತಪ್ಪ ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣು

Posted by Vidyamaana on 2023-10-10 15:33:54 |

Share: | | | | |


ಮೂಡಬಿದಿರೆ : ಕಾಲೇಜು ಸಿಬ್ಬಂದಿ ಹನುಮಂತಪ್ಪ ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣು

ಮೂಡಬಿದಿರೆ : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೊಬ್ಬ ಹಾಸ್ಟೇಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. 


ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


ಮೂಡಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆ ದರೋಡೆ

Posted by Vidyamaana on 2024-02-08 11:26:13 |

Share: | | | | |


ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆ ದರೋಡೆ

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಫೆ 8ರಂದು ನಡೆದಿದೆ.

ಗ್ಯಾಸ್ ಕಟ್ಟರ್ ಮೂಲಕ ಬ್ಯಾಂಕ್ ಶಾಖಾ ಕಟ್ಟಡದ ಹಿಂಬದಿಯ ಕಿಟಕಿ ತುಂಡರಿಸಿ  ದರೋಡೆಕೋರರು

 ಒಳನುಗ್ಗಿದ್ದಾರೆನ್ನಲಾಗಿದೆ.ಗ್ಯಾಸ್ ಕಟ್ಟರ್ ಮೂಲಕ ಸೇಫ್ ಲಾಕರ್ ನಲ್ಲಿದ್ದ  ಅಪಾರ ಪ್ರಮಾಣದ ಸೊತ್ತು ದರೋಡೆಕೋರರ ಪಾಲುಗಿದೆ ಎಂದು ತಿಳಿದು ಬಂದಿದೆ


ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಸ್ಥಳಕ್ಕೆ ವಿಟ್ಲ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳ ಆಗಮಿಸಿ ತನಿಖೆ ಕೈಗೊಂಡಿದ್ದಾರೆ


ಲೋಕಸಭೆ ಗೆ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನ ಮುಂದೂಡಿಕೆ

Posted by Vidyamaana on 2023-12-13 13:38:44 |

Share: | | | | |


ಲೋಕಸಭೆ ಗೆ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನ ಮುಂದೂಡಿಕೆ

ನವದೆಹಲಿ: ನೂತನ ಸಂಸತ್ತು ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದ್ದು ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿ ನುಗ್ಗಿರುವ ಘಟನೆ ನಡೆದಿದೆ.ಅಪರಿಚಿತ ಸಂದರ್ಶಕರೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಗ್ಯಾಲರಿಯಿಂದ ಕೊಠಡಿಗೆ ಹಾರಿದ ಕಾರಣ ಲೋಕಸಭೆಯಲ್ಲಿ ಗೊಂದಲ ಉಂಟಾಯಿತು.

💥ವಿಡಿಯೋ ನೋಡಲು ಕ್ಲಿಕ್ ಮಾಡಿ ಲೋಕಸಭೆ ಗೆ ನುಗ್ಗಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಸದನ ಮುಂದೂಡಿಕೆ


ಭದ್ರತಾ ಪ್ರೋಟೋಕಾಲ್ಗಳನ್ನು ತ್ವರಿತವಾಗಿ ಸಕ್ರಿಯಗೊಳಿಸಿದ್ದರಿಂದ ಹಠಾತ್ ಒಳನುಸುಳುವಿಕೆಯು ಸದನವನ್ನು ಮುಂದೂಡಲಾಗಿದೆ ಅಂತ ತಿಳಿದು ಬಂದಿದೆ



Leave a Comment: