ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾಗಿ ವಿ ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಆಯ್ಕೆ

Posted by Vidyamaana on 2023-09-15 12:03:17 |

Share: | | | | |


ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾಗಿ ವಿ ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಆಯ್ಕೆ

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು.


ಜಯಕರ್ನಾಟಕ ಜನಪರ ವೇದಿಕೆಯ


ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸಂಚಾಲಕರಾಗಿ ರಾಮದಾಸ್ ಶೆಟ್ಟಿ ವಿಟ್ಲರವರನ್ನು ಎರಡನೇ ಬಾರಿಗೆ ಪುನರಾಯ್ಕೆ ಮಾಡಲಾಗಿದೆ. ರಾಜ್ಯದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್‌ ಜೆ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ತಿಕ್ ರೈರವರನ್ನು ಆಯ್ಕೆ ಮಾಡಲಾಯಿತು. ಈ ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ಪ್ರವೀಣ್ ಶೆಟ್ಟಿ ತಿಂಗಳಾಡಿ ಇವರನ್ನು ರಾಜ್ಯ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಲಾಗಿದೆ. ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಆರ್ ಚಂದ್ರಪ್ಪನವರು ಉಪಸ್ಥಿತರಿದ್ದರು.


ಮೂರು ವರ್ಷಗಳ ಹಿಂದೆ ಹೊರನಾಡು ತಾಯಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಪ್ರಾರಂಭಿಸಲಾದ ಜಯಕರ್ನಾಟಕ ಜನಪರ ವೇದಿಕೆ ರಾಜ್ಯಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳೊಂದಿಗೆ ಹೋರಾಟ ಮತ್ತು ನಮ್ಮ ನಡೆ ಪ್ರಕೃತಿಯ ಕಡೆ ಎಂಬ ಶೀರ್ಷಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಾ


ಇದೀಗ ಎರಡನೇ ಭಾರಿಗೆ ರಾಜ್ಯ ಸಂಚಾಲಕರಾಗಿ ಆಯ್ಕೆಯಾಗಿರುವ ರಾಮ್ ದಾಸ್ ಶೆಟ್ಟಿ ವಿಟ್ಲ ರವರು ವಿಟ್ಲದ ವಿಟಿವಿ ಮುಖ್ಯಸ್ಥರಾಗಿದ್ದು, ಕರ್ನಾಟಕ ಜರ್ನಲಿಸ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾರ್ತಿಕ್ ರೈ ಸವಣೂರು ಸಮೀಪದ ಪೆರುವಾಜೆ ಗ್ರಾಮದ ಕನ್ನೆಜಾಲು ನಿವಾಸಿಯಾಗಿದ್ದು ಸುಳ್ಯದಲ್ಲಿ ಪ್ರಗ್ಯಾನ್ ಸ್ಟೀಲ್‌ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದಾರೆ.


ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರವೀಣ್ ಶೆಟ್ಟಿ ತಿಂಗಳಾಡಿ ಈ ಹಿಂದೆ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಕೆದಂಬಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾಗಿರುವ ಇವರು ಪ್ರಸ್ತುತ ಸದಸ್ಯರಾಗಿದ್ದಾರೆ.ಪುತ್ತಿಲ ಪರಿವಾರದ ತಾಲೂಕು ಉಪಾಧ್ಯಕ್ಷರಾಗಿಯೂ ಇವರು ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಬಿಜೆಪಿಯೊಂದಿಗೆ ವಿಲೀನವಾದ ಪುತ್ತಿಲ ಪರಿವಾರ

Posted by Vidyamaana on 2024-03-14 22:02:45 |

Share: | | | | |


ಬಿಜೆಪಿಯೊಂದಿಗೆ  ವಿಲೀನವಾದ ಪುತ್ತಿಲ ಪರಿವಾರ

ಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ.


ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.


ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ಪುತ್ತಿಲ ಪರಿವಾರದ ವಿರೋಧ ಶಮನವಾದಂತಾಗಿದೆ. ಇದರ ಬೆನ್ನಲ್ಲೇ ಅಂದರೆ ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪುತ್ತೂರು ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಅವರು ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆದು, ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಯಿತು.



ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

Posted by Vidyamaana on 2023-10-15 08:24:18 |

Share: | | | | |


ಪುತ್ತೂರ್ದ ಪಿಲಿ ಯ ಊದು ಪೂಜೆ ಡೇಟ್ ಇಲ್ಲಿದೆ ನೋಡಿ!

ಪುತ್ತೂರು: ಪಿಲಿ ರಾಧಣ್ಣ ಮತ್ತು ಬಳಗದ ಪುತ್ತೂರ್ದ ಪಿಲಿ ಇದರ ಊದು ಪೂಜೆ ಕಾರ್ಯಕ್ರಮ ಅ. 23ರಂದು ಸಂಜೆ 7:30ಕ್ಕೆ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಪಿಲಿ ರಾಧಣ್ಣ ಮತ್ತು ಬಳಗದ 47ನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮವು ಅ. 24 ರಂದು ಬೆಳಗ್ಗೆ 10 ಗಂಟೆಯಿಂದ ಹಲವು ಕಡೆಗಳಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸುಮಾರು 47 ವರುಷಗಳಿಂದ ಹುಲಿ ವೇಷ ಹಾಕಿ ಜನರನ್ನು ಮನರಂಜಿಸುತ್ತಿರುವ ಪಿಲಿ ರಾಧಣ್ಣ ಮತ್ತು ಬಳಗವು ಪುತ್ತೂರು ಮಾತ್ರವಲ್ಲದೇ ಜಿಲ್ಲೆಯ ಇನ್ನೂ ಹಲವು ಕಡೆಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ.

ರಾಜಕೀಯ ಪಕ್ಷಗಳ ಅನಧಿಕೃತ ಔತಣಕೂಟಗಳ ಮೇಲೆ ನಿಗಾ-ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಆದೇಶ.

Posted by Vidyamaana on 2023-03-15 09:05:15 |

Share: | | | | |


ರಾಜಕೀಯ ಪಕ್ಷಗಳ ಅನಧಿಕೃತ ಔತಣಕೂಟಗಳ ಮೇಲೆ ನಿಗಾ-ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಆದೇಶ.

ಪುತ್ತೂರು:ಅನುಮತಿ ರಹಿತವಾಗಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್‌ಗಳ ತೆರವು, ಇಲಾಖಾ ಅನುಮತಿ ಪಡೆಯದೆ ರಾಜಕೀಯ ಪಕ್ಷಗಳು, ಮುಖಂಡರು ಯಾವುದೇ ಸಾರ್ವಜನಿಕ ಔತಣಕೂಟಗಳನ್ನು ನಡೆಸದಂತೆ ನಿಗಾ ಇರಿಸುವುದು ಸೇರಿದಂತೆ, ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ದ.ಕ.ಜಿಲ್ಲಾಧಿಕಾರಿಯವರು ಕೆಲವೊಂದು ಸೂಚನೆಗಳನ್ನು ನೀಡಿ ಸುತ್ತೋಲೆ ಹೊರಡಿಸಿದ್ದು ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಾಗಿ ಪಾಲಿಸಿ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023 ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ.ಚುನಾವಣೆ ಘೋಷಣೆ ಪೂರ್ವದಲ್ಲಿ ಜಿಲ್ಲಾಡಳಿತವು ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಬೇಕಾಗಿರುತ್ತದೆ.ಜಿಲ್ಲೆಯಾದ್ಯಂತ ಅನೇಕ ಸಾರ್ವಜನಿಕ ಸಭೆ-ಸಮಾರಂಭಗಳು, ಹಬ್ಬ- ಹರಿದಿನಗಳು, ಸಾರ್ವಜನಿಕ ಔತಣಕೂಟಗಳು ಇತ್ಯಾದಿ ಕಾರ್ಯಕ್ರಮಗಳನ್ನು ಅನೇಕ ಸಂಘ-ಸಂಸ್ಥೆಗಳು, ರಾಜಕೀಯ ಸಂಘಟನೆಗಳು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿಯನ್ನು ಪಡೆಯದೆ ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ.ಅಲ್ಲದೇ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಇಲ್ಲದೇ ಅನೇಕ ಬ್ಯಾನರ್-ಬಂಟಿಂಗ್ಸ್‌ಗಳು, ಪ್ಲೆಕ್ಸ್‌ಗಳನ್ನು ನಿಯಮ ಬಾಹಿರವಾಗಿ ಹಾಕಿರುವುದು ಕಂಡುಬರುತ್ತವೆ.ಇದು ಕರ್ನಾಟಕ ತೆರೆದ ಸ್ಥಳಗಳು (ವಿರೂಪಗೊಳಿಸುವಿಕೆ ತಡೆಗಟ್ಟುವ)ಕಾಯ್ದೆ 1981ರ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ.ಈ ಕಾಯ್ದೆಯು ಎಲ್ಲಾ ಸಂಧರ್ಭದಲ್ಲಿಯೂ ಜಾರಿಯಲ್ಲಿದ್ದಾಗಿಯೂ ಸಹಿತ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಸರಿಯಾದ ಕ್ರಮವನ್ನು ಕೈಗೊಳ್ಳದೆ ಇರುವುದು ಜಿಲ್ಲಾಡಳಿತದ ಮೇಲೆ ಗಂಭೀರವಾದಪರಿಣಾಮವನ್ನು ಬೀರುತ್ತದೆ.ಅನುಮತಿ ಇಲ್ಲದೆ ಸಾರ್ವಜನಿಕ ಔತಣಕೂಟಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ಹಾಗೂ ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರವಾದ ಪರಿಣಾಮ ಬೀರುವ ಸಾಧ್ಯತೆಯಿರುವುರಿಂದ ಈ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ಆದೇಶಿಸಿದ್ದಾರೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರಿಗೆ ಗಡಿಪಾರು ನೋಟಿಸ್ ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್

Posted by Vidyamaana on 2023-07-21 09:08:14 |

Share: | | | | |


ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣ; ಮೂವರಿಗೆ ಗಡಿಪಾರು ನೋಟಿಸ್   ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್

ಮಂಗಳೂರು: ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಕುಲದೀಪ್ ಜೈನ್ ಹೇಳಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವವರನ್ನು ಗುರುತಿಸಿದ್ದೇವೆ. ನೈತಿಕ ಪೊಲೀಸ್ ಗಿರಿಗೆ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ನೀಡಲಾಗಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟೀಸ್ ಜಾರಿ ಮಾಡಿದ್ದೇವೆ. ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದು ತಿಳಿಸಿದರು

ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

Posted by Vidyamaana on 2023-06-17 08:05:29 |

Share: | | | | |


ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

ಬೆಳಗಾವಿ: ಕಾರು ಮತ್ತು ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತದಲ್ಲಿಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ  ಗಂಭೀರ ಗಾಯಗಳಾಗಿವೆ. ಮೃತರಿಬ್ಬರೂ ಸ್ವಾಮೀಜಿಗಳ ಸೇವಕರಾಗಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿಗಳ ಕಾರು, ಕಂಟೇನರ್‌ ಮತ್ತು ಇತರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಸಹಾಯಕರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗಳೊಂದಿಗೆ ಪ್ರಾಣ ಕಳೆದುಕೊಂಡರು.

ಕೂಡಲೇ ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕರೆದೊಯ್ಯುವ ಕೆಲಸವನ್ನು ತ್ವರಿತಗೊಳಿಸಿದರು.

ಸ್ವಾಮೀಜಿಯವರ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ಸೇವಕರ ಹೆಸರು ಇನ್ನೂ ತಿಳಿದುಬಂದಿಲ್ಲ.

ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುತ್ತಿದ್ದರು

ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಆಯೋಜನೆಗೊಂಡಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ.



Leave a Comment: