ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

Posted by Vidyamaana on 2023-12-07 04:29:12 |

Share: | | | | |


ಬಾಸ್ಕೆಟ್ ಬಾಲ್ ಆಡುತ್ತಿದ್ದಾಗಲೇ ಕುಸಿದು ಬಿದ್ದು ಮೃತಪಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿ

ಬೆಂಗಳೂರು: ಆನೇಕಲ್ ತಾಲೂಕಿನ ಹೆಬ್ಬಗೋಡಿಯ


ಎಸ್‌ಎಫ್‌ಎಸ್‌ ಶಾಲೆಯ ವಿದ್ಯಾರ್ಥಿನಿ ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.


ಮೃತ ಬಾಲಕಿಯ ಹೆಸರು ಚಾರ್ವಿ (16). ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಿದ್ದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾಳೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

Posted by Vidyamaana on 2024-02-18 15:57:23 |

Share: | | | | |


ಯುಪಿ ಪೊಲೀಸ್ ಡಿಪಾರ್ಟ್ಮೆಂಟ್ ಸೇರ್ತಾರ ಪೆಟ್ ಕಿಂಗ್ ಸನ್ನಿ ಲಿಯೋನ್!?

ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ನಟಿ ಸನ್ನಿ ಲಿಯೋನ್ ಅವರ ಹೆಸರಿನೊಂದಿಗೆ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸನ್ನಿ ಲಿಯೋನ್ ಹೆಸರಿನ ಪ್ರವೇಶ ಪತ್ರ ಮತ್ತು ಆಕೆಯ ಎರಡು ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ಯುಪಿ ಪೊಲೀಸ್ ಕಾನ್ಸ್‌ಟೇಬಲ್(Police Constable) ನೇಮಕಾತಿ ಪರೀಕ್ಷೆಯಂದು ಪ್ರವೇಶಪತ್ರವೊಂದರಲ್ಲಿ ಸನ್ನಿ ಲಿಯೋನ್(Sunny Leone) ಚಿತ್ರ ಇರುವುದು ಕಂಡುಬಂದಿದೆ. ಈ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ. ಪರೀಕ್ಷೆಯ ಮೊದಲ ದಿನ, ಕನೌಜ್ ಜಿಲ್ಲೆಯಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಯ ಪ್ರವೇಶ ಪತ್ರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಅಡ್ಮಿಟ್ ಕಾರ್ಡ್ ಬಗ್ಗೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿರುವಾಗಲೇ ಈ ಅಡ್ಮಿಟ್ ಕಾರ್ಡ್ ಇಡೀ ದೇಶದಲ್ಲಿ ಚರ್ಚೆಗೆ ಗ್ರಾಸವಾಯಿತು. ಅಷ್ಟಕ್ಕೂ ಈ ಅಡ್ಮಿಟ್ ಕಾರ್ಡ್ ನಲ್ಲಿ ಏನಿತ್ತು ಇಲ್ಲಿದೆ ಮಾಹಿತಿ.


ಈ ಘಟನೆಯು ಕನೌಜ್ ಜಿಲ್ಲೆಯ ತಿರ್ವಾ ಪಟ್ಟಣ ಪ್ರದೇಶದಲ್ಲಿರುವ ಸೋನಶ್ರೀ ಬಾಲಕಿಯರ ಕಾಲೇಜಿನಲ್ಲಿ ನಡೆದಿದೆ, ಅಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿತ್ತು, ಅದೇ ಪರೀಕ್ಷಾ ಕೇಂದ್ರದಲ್ಲಿ, ಅಭ್ಯರ್ಥಿ ಅಂಕಿತ್‌ನ ಪ್ರವೇಶ ಪತ್ರದಲ್ಲಿ ಸಿನಿ ತಾರೆ ಸನ್ನಿ ಲಿಯೋನ್ ಚಿತ್ರವನ್ನು ಅಂಟಿಸಲಾಗಿತ್ತು. ಮಹೋಬಾ ಜಿಲ್ಲೆಯ ನಿವಾಸಿ, ಅಂಕಿತ್ ಚಿತ್ರದ ಜಾಗದಲ್ಲಿ ಈ ಫೋಟೊವಿತ್ತು. ಈ ಅಡ್ಮಿಟ್ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸುದ್ದಿ ರಾಜ್ಯಾದ್ಯಂತ ಹಬ್ಬಿತ್ತು.


ಅಡ್ಮಿಟ್ ಕಾರ್ಡ್‌ನಲ್ಲಿ ಬರೆದಿರುವ ನಂಬರ್‌ನಲ್ಲಿ ಫೋನ್‌ನಲ್ಲಿ ಮಾಹಿತಿ ತೆಗೆದುಕೊಂಡಾಗ, ವಿದ್ಯಾರ್ಥಿ ಅಂಕಿತ್ ಅವರು ಸಾರ್ವಜನಿಕ ಸೇವಾ ಕೇಂದ್ರದಿಂದ ಅರ್ಜಿಯನ್ನು ಭರ್ತಿ ಮಾಡಿರುವುದಾಗಿ ಹೇಳಿದರು. ಆದರೆ ಫೋಟೋವನ್ನು ಹೇಗೆ ಬದಲಾಯಿಸಲಾಗಿದೆ ಎಂಬುದು ತಿಳಿದಿಲ್ಲ.


ಈ ಫೋಟೋವನ್ನು ಬದಲಾಯಿಸಿದ್ದರಿಂದ, ಅವರು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ಪ್ರವೇಶ ಪತ್ರದಲ್ಲಿ ನಮೂದಿಸಿರುವ ವಿಳಾಸ ಮುಂಬೈ. ಆದರೆ ನೋಂದಣಿ ಸಮಯದಲ್ಲಿ ತವರು ಜಿಲ್ಲೆಯನ್ನು ಕನ್ನೌಜ್ ಎಂದು ಉಲ್ಲೇಖಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಪ್ರಕಾರ, ಈ ಪ್ರವೇಶ ಪತ್ರದಲ್ಲಿ ಯಾವುದೇ ಅಭ್ಯರ್ಥಿ ಪರೀಕ್ಷೆಗೆ ಹಾಜರಾಗಲಿಲ್ಲ.

ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

Posted by Vidyamaana on 2023-07-15 10:49:03 |

Share: | | | | |


ಇಷ್ಟು ದಿನ ಪಾಸಾಗ್ತಿತ್ತು ಇನ್ನು ಕಷ್ಟ - ವಿಧಾನಸೌಧದಲ್ಲಿ ನಕಲಿ ಪಾಸ್ ಗಳದ್ದೇ ಕಾರುಬಾರು

ಬೆಂಗಳೂರು: ಇತ್ತೀಚೆಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸಭೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಶಾಸಕರ ಕುರ್ಚಿಯಲ್ಲಿ ಕುಳಿತ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದು, ಕಳೆದ ನಾಲ್ಕೈದು ದಿನಗಳಲ್ಲಿ 250ಕ್ಕೂ ಹೆಚ್ಚು ನಕಲಿ ಪಾಸ್‌ ಗಳು ಪತ್ತೆಯಾಗಿವೆ. ಅಲ್ಲದೆ, ಶಾಸಕರು, ಸಚಿವರ ಹೆಸರಿನ ಪಾಸ್‌ಗಳನ್ನು ಕಲರ್‌ ಜೆರಾಕ್ಸ್‌ ಮಾಡಿಸಿ ಭದ್ರತಾ ಸಿಬ್ಬಂದಿಗೆ ಯಾಮಾರಿಸುತ್ತಿದ್ದ ಸಂಚು ಬಹಿರಂಗಗೊಂಡಿದೆ.ವಿಧಾನಸೌಧ ಪ್ರವೇಶಕ್ಕೆ ಶಾಸಕರು, ಸಚಿವರಿಗೆ ಗುರುತಿನ ಚೀಟಿ ನೀಡಲಾಗುತ್ತದೆ. ಅದೇ ರೀತಿ ಅವರ ಸಿಬ್ಬಂದಿ ಮತ್ತು ವಾಹನಗಳಿಗೂ ಅಧಿಕೃತ ಪಾಸ್‌ ನೀಡಲಾಗುತ್ತದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುವ ವಂಚಕರು, ಈ ಪಾಸ್‌ಗಳನ್ನು ದುರ್ಬಳಕೆ ಮಾಡಿಕೊಂಡು ಕಲರ್‌ ಜೆರಾಕ್ಸ್‌ ಮಾಡಿ ಒಳ ಪ್ರವೇಶಿಸುತ್ತಿರುವುದು ಪತ್ತೆಯಾಗಿದೆ. ಹೀಗೆ ಕಳೆದ 4-5 ದಿನಗಳಲ್ಲಿ ಸುಮಾರು 300 ಮಂದಿ ಈ ರೀತಿ ನಕಲಿ ಪಾಸ್‌ಗಳನ್ನು ಬಳಸಿಕೊಂಡು ವಿಧಾನಸೌಧ ಪ್ರವೇಶಿಸಿರುವುದು ಪತ್ತೆಯಾಗಿದೆ.ನಕಲಿ ಪಾಸ್‌ಗಳು ಮಾತ್ರವಲ್ಲ, ಅವಧಿ ಮೀರಿದ ಪಾಸ್‌ಗಳು ತಪಾಸಣೆ ವೇಳೆ ಸಿಕ್ಕಿವೆ. ಈ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಜನಪ್ರತಿನಿಧಿಗಳು ಮತ್ತು ಅವರ ಸಿಬ್ಬಂದಿಗೂ ಮಾಹಿತಿ ನೀಡಿ ನಕಲಿ ಪಾಸ್‌ಗಳ ಕಡಿವಾಣಕ್ಕೆ ಸಹಾಯ ನೀಡುವಂತೆ ಕೋರಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.


ಜುಲೈ 10ರಂದು ಬಜೆಟ್‌ ಮಂಡನೆ ವೇಳೆ ತಿಪ್ಪೇರುದ್ರಸ್ವಾಮಿ ಎಂಬಾತ ದೇವದುರ್ಗ ಶಾಸಕಿ ಕೆರೆಮ್ಮ ಸ್ಥಾನದಲ್ಲಿ ಕೆಲ ಹೊತ್ತು ಕುಳಿತುಕೊಂಡಿರುವುದು ಪತ್ತೆಯಾಗಿತ್ತು. ಹೀಗಾಗಿ ವಿಧಾನಸೌಧ ಭದ್ರತಾ ಉಸ್ತುವಾರಿ ವಹಿಸಿಕೊಂಡಿದ್ದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌ .ಡಿ.ಶರಣಪ್ಪ, ಎಲ್ಲ ಪ್ರವೇಶ ದ್ವಾರದಲ್ಲಿ ತಪಾಸಣೆ ಬಿಗಿಗೊಳಿಸಿದರು.



ಮತ್ತೂಂದೆಡೆ ಅದೇ ದಿನ ಜು. 10ರಂದು ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಉದ್ಯೋಗಿ ಬ್ಯಾಗಿನಲ್ಲಿ ಚಾಕು ಇರುವುದು ಪತ್ತೆಯಾಗಿದ್ದು, ಪೊಲೀಸ್‌ ವಿಚಾರಣೆ ವೇಳೆ ಕ್ರಿಮಿನಲ್‌ ಉದ್ದೇಶವಿಲ್ಲದಿರುವುದು ಕಂಡು ಬಂದಿದ್ದರಿಂದ ಮುಚ್ಚಳಿಕೆ ಪತ್ರ ಬರೆಸಿ ಪೊಲೀಸರು ಬಿಟ್ಟು ಕಳುಹಿಸಿದ್ದರು. ಹೀಗಾಗಿ ವಿಧಾನಸೌಧಕ್ಕೆ ಪ್ರವೇಶಿಸುವ ಎಲ್ಲಾ ಗೇಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.ಅಲ್ಲದೆ, ಬ್ಯಾಗ್‌ ಸೇರಿ ಇತರೆ ವಸ್ತುಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಬರುವ ಎಲ್ಲರನ್ನು ಲೋಹಪರಿಶೋಧಕ ಯಂತ್ರಗಳ ಪರೀಕ್ಷೆ ಒಳಪಡಿಸಬೇಕು. ಅಲ್ಲದೆ, ಬ್ಯಾಗ್‌ಗಳನ್ನು ಕಡ್ಡಾಯವಾಗಿ ಸ್ಕಾನಿಂಗ್‌ಗೆ ಒಳಪಡಿಸಬೇಕು. ಅಧಿಕೃತ ಗುರುತಿನ ಚೀಟಿ ಅಥವಾ ಪಾಸ್‌ ಇದ್ದರೆ ಮಾತ್ರ ಒಳಪ್ರವೇಶಿಸಲು ಬಿಡಬೇಕು ಎಂದು ಮಾರ್ಷಲ್‌ಗ‌ಳಿಗೂ ಖಡಕ್‌ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.


ಈ ಕುರಿತು ಮಾಹಿತಿ ನೀಡಿದ ಸಿಸಿಬಿ ಜಂಟಿ ಪೊಲೀಸ್‌ ಆಯುಕ್ತ ಡಾ ಎಸ್‌.ಡಿ.ಶರಣಪ್ಪ, ಮುಂದಿನ ದಿನಗಳಲ್ಲಿ ನಕಲಿ ಪಾಸ್‌ ಬಳಸಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು

ಏರೋನಿಕ್ಸ್ ಇಂಟರ್​ನೆಟ್​ಕಂಪನಿ ಎಂಡಿ ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ

Posted by Vidyamaana on 2023-07-11 13:35:57 |

Share: | | | | |


ಏರೋನಿಕ್ಸ್ ಇಂಟರ್​ನೆಟ್​ಕಂಪನಿ ಎಂಡಿ ಸಿಇಒ ಇಬ್ಬರನ್ನೂ ಹಾಡಹಗಲೇ ಬರ್ಬರವಾಗಿ ಕೊಂದ ಮಾಜಿ ಉದ್ಯೋಗಿ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಜೋಡಿ ಕೊಲೆಯಾಗಿದ್ದು, ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಅಮೃತಹಳ್ಳಿಯಲ್ಲಿ ಈ ಡಬಲ್ ಮರ್ಡರ್ ನಡೆದಿದೆ.ಏರೋನಿಕ್ಸ್ ಇಂಟರ್​ನೆಟ್​ ಕಂಪನಿಯ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಸಿಎಒ ವಿನು ಕುಮಾರ್ ಕೊಲೆಯಾದವರು. ಈ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಕೊಲೆಯಾದ ಸ್ಥಳ


ಏರೋನಿಕ್ಸ್​ ಕಂಪನಿಯಿಂದ ಹೊರ ಬಂದ ಫೆಲಿಕ್ಸ್ ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್​ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ. ಒಟ್ಟು ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಆರೋಪಿ ಫೆಲಿಕ್ಸ್ ಜೋಕರ್ ಫೆಲಿಕ್ಸ್ ಎಂದೂ ಕರೆಸಿಕೊಳ್ಳುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ.

ಕುವೈತ್‌ ರಾಜಕುಮಾರ ʻಎಮಿರ್ ಶೇಖ್ ನವಾಫ್ ನಿಧನ: ಉತ್ತರಾಧಿಕಾರಿಯಾಗಿ ಶೇಖ್ ಮೆಶಾಲ್ ಆಯ್ಕೆ

Posted by Vidyamaana on 2023-12-17 12:37:14 |

Share: | | | | |


ಕುವೈತ್‌ ರಾಜಕುಮಾರ ʻಎಮಿರ್ ಶೇಖ್ ನವಾಫ್ ನಿಧನ: ಉತ್ತರಾಧಿಕಾರಿಯಾಗಿ ಶೇಖ್ ಮೆಶಾಲ್ ಆಯ್ಕೆ

ಕುವೈತ್: ಕುವೈತ್‌ನ ಎಮಿರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರು 86 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು. ಈ ಹಿನ್ನೆಲೆ, ಅವರ ಮುಂದಿನ ಉತ್ತರಾಧಿಕಾರಿಯಾಗಿ ಕ್ರೌನ್ ಪ್ರಿನ್ಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಸಬಾಹ್ ಅವರನ್ನು ತನ್ನ ಹೊಸ ಎಮಿರ್(ರಾಜಕುಮಾರ) ಎಂದು ಹೆಸರಿಸಿದೆ.ಶೇಖ್ ಮೆಶಾಲ್ ಕುವೈತ್ ಎಮಿರ್ ಶೇಖ್ ನವಾಫ್ ಅವರ  ಸಹೋದರ.


ಎಮಿರ್ ಶೇಖ್ ನವಾಫ್ ಅವರ ಸಾವಿನ ಬಗ್ಗೆ ತಕ್ಷಣವೇ ಬಹಿರಂಗಪಡಿಸಿಲ್ಲ.


ಶೇಖ್ ಮೆಶಾಲ್ ಅವರನ್ನು ಕುವೈತ್‌ನ ಹೊಸ ಎಮಿರ್ ಎಂದು ಹೆಸರಿಸುವುದನ್ನು ಉಪಪ್ರಧಾನಿ ಮತ್ತು ಕ್ಯಾಬಿನೆಟ್ ವ್ಯವಹಾರಗಳ ರಾಜ್ಯ ಸಚಿವರ ಹೇಳಿಕೆಯಿಂದ ದೃಢಪಡಿಸಲಾಗಿದೆ.

ಬೆಳ್ತಂಗಡಿ : ಅನಾಥ ಶವ ಪತ್ತೆ; ಬ್ಯಾಗಿನಲ್ಲಿತ್ತು 6.65 ಲಕ್ಷ ರೂ. ನಗದು

Posted by Vidyamaana on 2023-05-15 04:22:54 |

Share: | | | | |


ಬೆಳ್ತಂಗಡಿ : ಅನಾಥ ಶವ ಪತ್ತೆ; ಬ್ಯಾಗಿನಲ್ಲಿತ್ತು  6.65 ಲಕ್ಷ ರೂ. ನಗದು

ಬೆಳ್ತಂಗಡಿ: ಉಜಿರೆ ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಮಡಿಕೇರಿ ಕುಶಾಲನಗರ ಮೂಲದ ತಮ್ಮಯ್ಯ (55) ಉಜಿರೆಯಲ್ಲಿ ಬಹಳ ಸಮಯದಿಂದ ವಾಸವಿದ್ದರು. ಅವರು ಬಸ್‌ ತಂಗುದಾಣ, ಅಂಗಡಿಗಳು ಮುಚ್ಚಿದಾಗ ಅವುಗಳ ಮುಂಭಾಗದಲ್ಲಿ, ಬಿಎಸ್ಸೆನ್ನೆಲ್‌ ಕಚೇರಿ ಪಕ್ಕದಲ್ಲಿ ವಸತಿ ಹೂಡಿ ದಿನ ಕಳೆಯುತ್ತಿದ್ದರು.ಆದರೆ ಅವರ ವಾರಸುದಾರರ ಕುರಿತು ಈ ಪರಿಸರದ ಯಾರಿಗೂ ಮಾಹಿತಿ ಇಲ್ಲ. ಶುಕ್ರವಾರ ಸಂಜೆ ಇವರ ಮೃತದೇಹ ದೂರವಾಣಿ ವಿನಿಮಯ ಕೇಂದ್ರದ ಬಳಿ ಪತ್ತೆಯಾಗಿದೆ. ಈ ಬಗ್ಗೆ ಉಜಿರೆ ಬೆಳಾಲು ಘಟಕದ ಶೌರ್ಯ ವಿಪತ್ತು ಸ್ವಯಂಸೇವಕರಾದ ರವೀಂದ್ರ, ಸುಧೀರ್‌ ಹಾಗೂ ರಾಘವೇಂದ್ರ ಇವರು ತತ್‌ಕ್ಷಣ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

6.65 ಲಕ್ಷ ರೂ. ಹಣ ಪತ್ತೆ

ಪೊಲೀಸರ ಸಮ್ಮುಖದಲ್ಲಿ ಕುಟುಂಬದವರ ಪತ್ತೆಗಾಗಿ ವ್ಯಕ್ತಿಯ ಮೃತದೇಹದ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿದಾಗ ಅದರಲ್ಲಿ ಸುಮಾರು 6.65 ಲಕ್ಷ ರೂ. ಹಣ ಪತ್ತೆಯಾಗಿದೆ. ಇದನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅವರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. ವ್ಯಕ್ತಿಯು ಕೂಲಿ ಕೆಲಸ ಮಾಡಿ ಸಂಗ್ರಹಿಸಲಾಗಿದ್ದ ಮೊತ್ತವಾಗಿರಬಹುದು ಎಂದು ಅಂದಾಜಿಸಲಾಗಿದೆ. ವಿಪತ್ತು ನಿರ್ವಹಣ ಯೋಜನಾಧಿಕಾರಿ ಜೈವಂತ ಪಟಗಾರ್‌ ಉಪಸ್ಥಿತರಿದ್ದು, ತಂಡದ ಸದಸ್ಯರಿಗೆ ನಿರ್ದೇಶನ ನೀಡಿದ್ದರು. ಮೃತ ವ್ಯಕ್ತಿಯ ವಾರಸುದಾರರಿದ್ದಲ್ಲಿ ಬೆಳ್ತಂಗಡಿ ಆರಕ್ಷಕ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ



Leave a Comment: