ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

Posted by Vidyamaana on 2024-03-05 17:45:47 |

Share: | | | | |


ಪುತ್ತೂರು : ಎಸಿ ಕಚೇರಿಗೆ ಶಾಸಕರಿಂದ ದಿಢೀರ್ ಭೇಟಿ

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು.

ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು, ಕೇಸ್ ವರ್ಕರ್ ಪೂವಪ್ಪ ಅವರನ್ನು ತರಾಟೆಗೆತ್ತಿಕೊಂಡರು.

ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ನಾನೇನು ನನ್ನ ಮನೆ ಕೆಲಸಕ್ಕೆ ಕರೆ ಮಾಡಿರುವುದಲ್ಲ. ಸ್ವಲ್ಪ ಜವಾಬ್ದಾರಿಯಿಂದ ವರ್ತಿಸಿ ಎಂದ ಶಾಸಕರು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರಕ್ಕೆ ಸಂಬಂಧಿಸಿ ಫೈಲ್ ಪುಟಪ್ ಮಾಡದೆ ಸತಾಯಿಸುತ್ತಿರುವುದರ ಬಗ್ಗೆ ವಿಚಾರಿಸಿದರು.

ಶನಿವಾರದೊಳಗೆ ಫೈಲ್ ಪುಟಪ್ ಆಗಬೇಕು. ಇಲ್ಲದಿದ್ದರೆ ಶನಿವಾರ ಸಂಜೆ ಕಚೇರಿಗೆ ಆಗಮಿಸುವುದಾಗಿ ಎಚ್ಚರಿಕೆ ನೀಡಿದರು.

ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದು ಕೆಎಸ್ ಈಶ್ವರಪ್ಪಗೆ ಕೈ ಮುಗಿದು ಮನವಿ ಮಾಡಿದ ಬಿ.ವೈ ವಿಜಯೇಂದ್ರ

Posted by Vidyamaana on 2024-04-07 14:17:36 |

Share: | | | | |


ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ ಎಂದು ಕೆಎಸ್ ಈಶ್ವರಪ್ಪಗೆ ಕೈ ಮುಗಿದು ಮನವಿ ಮಾಡಿದ ಬಿ.ವೈ ವಿಜಯೇಂದ್ರ

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕೆಂದು ಕೆ.ಎಸ್ ಈಶ್ವರಪ್ಪ(KS Eshwarappa) ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ.ನರೇಂದ್ರ ಮೋದಿಯರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಶಯ, ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ಮೊದಲು ಒಂದೆರಡು ದಿನಗಳ ಹಿಂದೆ ಮಾತನಾಡುವಾಗ ಕೇಂದ್ರ ವರಿಷ್ಠರು ಕೆಎಸ್​ ಈಶ್ವರಪ್ಪ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಿದ್ದರು.

ಅಯೋಧ್ಯೆಯಲ್ಲಿ ದಿವ್ಯ - ಭವ್ಯ ರಾಮ ಮಂದಿರ ಲೋಕಾರ್ಪಣೆಗೆ ಡೇಟ್ ಫಿಕ್ಸ್

Posted by Vidyamaana on 2023-09-09 16:24:19 |

Share: | | | | |


ಅಯೋಧ್ಯೆಯಲ್ಲಿ ದಿವ್ಯ - ಭವ್ಯ ರಾಮ ಮಂದಿರ ಲೋಕಾರ್ಪಣೆಗೆ ಡೇಟ್ ಫಿಕ್ಸ್

ನವದೆಹಲಿ : ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ, ರಾಮ್ ಲಲ್ಲಾ ಅವರನ್ನ ಜನವರಿ 22, 2024ರಂದು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ ಅವರು ದೇವಾಲಯವನ್ನು ಉದ್ಘಾಟಿಸಲಿದ್ದಾರೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣಪ್ರತಿಷ್ಠಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಮ್ಯಾರಥಾನ್ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಾಣ ಪ್ರತಿಷ್ಠಾ ಮಹೋತ್ಸವ ನಿರ್ವಹಣಾ ಸಮಿತಿಯ ಉಸ್ತುವಾರಿಯನ್ನ ಆರ್‌ಎಸ್‌ಎಸ್ ನಾಯಕ ಭಯ್ಯಾಜಿ ಜೋಶಿ ವಹಿಸಿಕೊಳ್ಳಲಿದ್ದಾರೆ.


ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಯೋಗಿ ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನ ಪರಿಶೀಲಿಸಿದ್ದರು.ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿಯಲ್ಲಿ ದೇವಾಲಯದ ನಿರ್ಮಾಣವು ವೇಗವಾಗಿ ನಡೆಯುತ್ತಿದೆ. ದೇವಾಲಯದ ಮೊದಲ ಮಹಡಿ ಬಹುತೇಕ ಸಿದ್ಧವಾಗಿದೆ. ದೇವಾಲಯದ ಉದ್ಘಾಟನೆಯ ನಂತರ, ದೇವಾಲಯವನ್ನ ಎಲ್ಲಾ ಭಕ್ತರಿಗೆ ಶಾಶ್ವತವಾಗಿ ತೆರೆಯಲಾಗುತ್ತದೆ. ದೇವಾಲಯದಲ್ಲಿ 42 ಬಾಗಿಲುಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ದೇವಾಲಯದ ಗರ್ಭಗುಡಿಯಲ್ಲಿ ಸಣ್ಣ ಚಿನ್ನದ ಬಾಗಿಲನ್ನ ಸಹ ಸ್ಥಾಪಿಸಲಾಗುವುದು. ದೇವಾಲಯದ ಬಾಗಿಲುಗಳ ಮೇಲೆ ನವಿಲುಗಳು, ಪಾತ್ರೆಗಳು, ಚಕ್ರಗಳು ಮತ್ತು ಹೂವುಗಳನ್ನ ಕೆತ್ತಲಾಗುವುದು. ಗರ್ಭಗುಡಿಯಲ್ಲಿ ಭಗವಾನ್ ರಾಮನ ಎರಡು ಮಗುವಿನಂತಹ ವಿಗ್ರಹಗಳು ಇರುತ್ತವೆ. ಈ ವಿಗ್ರಹಗಳಲ್ಲಿ ಒಂದು ಚಲನಶೀಲವಾಗಿರುತ್ತದೆ ಮತ್ತು ಇನ್ನೊಂದು ಸ್ಥಿರವಾಗಿರುತ್ತದೆ. ಗರ್ಭಗುಡಿಯ ಗೋಡೆಗಳ ಮೇಲೆ ಬಿಳಿ ಅಮೃತಶಿಲೆಯನ್ನ ಇರಿಸಲಾಗುತ್ತದೆ.

ಬಂಟ್ವಾಳ:ಸರಕಾರಿ ಆಸ್ಪತ್ರೆ ಪಕ್ಕವೇ ರೋಗ ಉತ್ಪಾದನಾ ಘಟಕ

Posted by Vidyamaana on 2023-03-23 07:40:43 |

Share: | | | | |


ಬಂಟ್ವಾಳ:ಸರಕಾರಿ ಆಸ್ಪತ್ರೆ ಪಕ್ಕವೇ ರೋಗ ಉತ್ಪಾದನಾ ಘಟಕ

ಬಂಟ್ವಾಳ: ಆಸ್ಪತ್ರೆಗಳಿರುವುದು ಜನರ ಆರೋಗ್ಯ ಕಾಪಾಡಲು. ಆದರೆ ಇಂತಹ ಆಸ್ಪತ್ರೆಗಳ ಪಕ್ಕವೇ ಸೊಳ್ಳೆ ಉತ್ಪಾದನಾ ತಾಣ ಇದ್ದರೆ? ಅಲ್ಲೇ ರೋಗ ಬರಿಸಿ, ನೇರವಾಗಿ ಆಸ್ಪತ್ರೆ ದಾರಿ ತೋರಿಸುವುದೇ?

ಇದು ಬಂಟ್ವಾಳ ಸರಕಾರಿ ಆಸ್ಪತ್ರೆಯ ಕಥೆ. ತಾಲೂಕು ಆಸ್ಪತ್ರೆ ಬಹಳ ಸುವ್ಯವಸ್ಥಿತವಾಗಿ ಕೆಲಸ ನಿರ್ವಹಿಸುತ್ತಿದೆ. ಆದರೆ ಆಸ್ಪತ್ರೆಯ ಪಕ್ಕದಲ್ಲಿ ಸೊಳ್ಳೆ ಉತ್ಪತ್ತಿ ಮಾಡಿ, ರೋಗ ಪಸರಿಸುವ ಚರಂಡಿಯೊಂದಿದೆ. ಇದು ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಕಡಿಮೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತೆಗೆದುಕೊಂಡಂತಿದೆ.


ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ಮುಂಭಾಗ ಮುಖ್ಯರಸ್ತೆ ಹಾದು ಹೋಗುತ್ತದೆ. ಈ ಮುಖ್ಯರಸ್ತೆಯ ಇನ್ನೊಂದು ಮಗ್ಗುಲಲ್ಲಿ ಈ ಚರಂಡಿ ಇದೆ. ಪೇಟೆ ಬೆಳೆದಂತೆ ಚರಂಡಿಗಳು ದುಸ್ಥಿತಿಯನ್ನು ತಲುಪುವುದು ಸಾಮಾನ್ಯ. ಆದರೆ ಆಸ್ಪತ್ರೆ ಪಕ್ಕದಲ್ಲೇ ಹೀಗಿದ್ದರೆ…?


ರೋಗವನ್ನು ಶಮನ ಮಾಡಬೇಕಾದ ಮಹತ್ತರ ಜವಾಬ್ದಾರಿಯನ್ನು ಆಸ್ಪತ್ರೆಗಳು ನಿರ್ವಹಿಸುತ್ತವೆ. ಅದೇ ಆಸ್ಪತ್ರೆಗಳಿಗೆ ಬಂದವರು ರೋಗವನ್ನು ಹೊತ್ತು ಕೊಂಡೊಯ್ದರೆ! ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗದೇ? ಆಸ್ಪತ್ರೆ ಸುವ್ಯವಸ್ಥಿತವಾಗಿ ಇರಬೇಕು ಎಂದು ಬಯಸುವುದು ಎಷ್ಟು ಸರಿಯೋ, ಅದೇ ರೀತಿ ಆಸ್ಪತ್ರೆಯ ಸುತ್ತಮುತ್ತಲ ಪರಿಸರವನ್ನು ಜಾಗೃತೆಯಿಂದ ಕಾಪಾಡಬೇಕಾದ ಜವಾಬ್ದಾರಿ ಸ್ಥಳೀಯಾಡಳಿತಕ್ಕಿದೆಯಲ್ಲವೇ?

ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ

Posted by Vidyamaana on 2023-05-18 10:43:00 |

Share: | | | | |


ಪುತ್ತೂರು : ಪೊಲೀಸ್ ದೌರ್ಜನ್ಯದಿಂದ ಹಲ್ಲೆಗೊಳಗಾದ ಯುವಕರ ಆರೋಗ್ಯ ವಿಚಾರಿಸಿದ ಆಶಾ ತಿಮ್ಮಪ್ಪ ಗೌಡ

ಪುತ್ತೂರು : ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾದ ಯುವಕರ ಆರೋಗ್ಯವನ್ನು ಪುತ್ತೂರು ವಿಧಾನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಗೌಡ ರವರು ವಿಚಾರಿಸಿದರು.ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ ಗೌಡ ರವರು ಯುವಕರ ಆರೋಗ್ಯ ವಿಚಾರಿಸಿದರು.ಈ ವೇಳೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಜೆಯ ಮೋಜು ತಂದ ಆಪತ್ತು ಆಟವಾಡಲೆಂದು ತೆರಳಿದ್ದ ಬಾಲಕ ದುರ್ಮರಣ

Posted by Vidyamaana on 2024-01-15 20:15:09 |

Share: | | | | |


ರಜೆಯ ಮೋಜು ತಂದ ಆಪತ್ತು ಆಟವಾಡಲೆಂದು ತೆರಳಿದ್ದ ಬಾಲಕ ದುರ್ಮರಣ

ಬೆಳ್ತಂಗಡಿ : ರಜೆ ಇದ್ದ ಕಾರಣ ಪಕ್ಕದ ಮನೆಗೆ ಹೋದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಏಳು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಪಣಕಜೆಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಮೊಹಮ್ಮದ್ ಹನೀಫ್ ಎಂಬವರ ಎರಡನೇ ಪುತ್ರ ಎರಡನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅನಾನ್(7) ಎಂಬಾತ ಜ.15 ರಂದು ಸಂಜೆ ಮನೆಯ ಪಕ್ಕದ ಮಕ್ಕಳ ಜೊತೆ ಆಟ ಆಡಲು ಹೋಗಿದ್ದ. ಪಕ್ಕದ ಮನೆಯ ಬಾವಿ ಕಟ್ಟೆ ಇಲ್ಲದ ಬಾವಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮನೆಯವರು ತಕ್ಷಣ ಮಗುವನ್ನು ಬಾವಿಯಿಂದ ತೆಗೆದು ಬಾಬಾ ಆಂಬುಲೆನ್ಸ್‌ ಮೂಲಕ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ಮುಂದಾದಾಗ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಸ್ಥಳ ಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಆಸ್ಪತ್ರೆಗೆ ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ನೀಡಿ ಮನೆಯವರಿಗೆ ಸ್ವಂತಾನ ಹೇಳಿದ್ದಾರೆ.



Leave a Comment: