ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10

Share: | | | | |


ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.

ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.

ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.

ಕೊಲೆಗೆ ಕಾರಣವೇನು?


ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

 Share: | | | | |


ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

Posted by Vidyamaana on 2023-08-31 06:39:36 |

Share: | | | | |


ಮುಳಿಯ ಮಾನ್ಸೂನ್ ಧಮಾಕ ಇಂದೇ ಕೊನೆ

ಪುತ್ತೂರು: ಮುಂಗಾರಿನ ಸಿಂಚನದೊಂದಿಗೆ ಆರಂಭಗೊಂಡ ಮುಳಿಯ ಮಾನ್ಸೂನ್ ಧಮಾಕ ಇಂದು ಅಂದರೆ ಆಗಸ್ಟ್ 31ರಂದು ಕೊನೆಯಾಗಲಿದೆ.

ಮುಂಗಾರು ಮಳೆಯ ಸಂಭ್ರಮವನ್ನು ಇಮ್ಮಡಿಗೊಳಿಸಿ ಮುಳಿಯ ಜ್ಯುವೆಲ್ಸ್’ನೊಂದಿಗೆ ಎನ್ನುವ ಸಾಲಿನೊಂದಿಗೆ ಗ್ರಾಹಕರ ಮುಂದೆ ಬಂದ ಹಬ್ಬಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಪುತ್ತೂರು ಹಾಗೂ ಬೆಳ್ತಂಗಡಿಯ ಮುಳಿಯ ಶೋರೂಂಗೆ ಆಗಮಿಸಿದ ಗ್ರಾಹಕರು, ಮುಳಿಯ ಮಾನ್ಸೂನ್ ಧಮಾಕದ ವಿಶೇಷ ಆಫರ್’ಗಳಿಗೆ ಮನಸೋತ ನಿದರ್ಶನ ಇದೆ.

ಆಯ್ದ ಆಭರಣಗಳ ಮೇಲೆ ಕಾಸ್ಟ್ ಪ್ರೈಸ್ ಸೇಲ್, ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ 916 ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳುವ ಅವಕಾಶವಿದ್ದು ಪ್ರತಿ ಗ್ರಾಂ ಮೇಲೆ 100 ರೂ.ಗೂ ಅಧಿಕ ಮೊತ್ತವನ್ನು ಪಡೆಯಬಹುದು. ಇದಲ್ಲದೇ, ವಿಎ ಚಾರ್ಜಸ್ ಮೇಲೆ ಶೇ. 50ರವರೆಗೆ, ವಜ್ರದ ಮೌಲ್ಯದ ಮೇಲೆ ಶೇ, 10ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಶೇ. 5ರವರೆಗೆ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅಂದಹಾಗೇ, ಈ ಎಲ್ಲಾ ಆಫರ್’ಗಳು ಇಂದು ಸಂಜೆಯವರೆಗೆ ಮಾತ್ರ ಲಭ್ಯವಿದೆ.

ಪಾರ್ಕ್‌ನಲ್ಲಿ ಕಸಗುಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

Posted by Vidyamaana on 2023-10-01 16:10:15 |

Share: | | | | |


ಪಾರ್ಕ್‌ನಲ್ಲಿ ಕಸಗುಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನದ ಶ್ರಮದಾನಕ್ಕೆ ದೇಶದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಕ್ಕಳಿಂದ ಹಿಡಿದು ರಾಜಕೀಯ ನಾಯಕರವರೆಗೂ ಒಂದು ಗಂಟೆಯ ಶ್ರಮದಾನದಲ್ಲಿ ಪಾಲ್ಗೊಂಡರು.ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕುಸ್ತಿಪಟು ಅಂಕಿತ್‌ ಅವರೊಂದಿಗೆ ಪಾರ್ಕ್‌ನಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.ಈ ಬಗ್ಗೆ ಎಕ್ಸ್‌ನಲ್ಲಿ ಮೋದಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

Read more....

ವೀಡಿಯೋ+ಸುದ್ದಿ


ಇಂದು, ರಾಷ್ಟ್ರವು ಸ್ವಚ್ಛತೆಯತ್ತ ಗಮನಹರಿಸುತ್ತಿರುವಾಗ, ಅಂಕಿತ್ ಬೈಯನಪುರಿಯ ಮತ್ತು ನಾನು ಅದೇ ರೀತಿ ಮಾಡಿದೆವು! ಕೇವಲ ಶುಚಿತ್ವದ ಹೊರತಾಗಿ, ನಾವು ಫಿಟ್‌ನೆಸ್ ಮತ್ತು ಯೋಗಕ್ಷೇಮವನ್ನೂ ಸ್ವಚ್ಛತೆಯೊಂದಿಗೆ ಸೇರಿಸಿಕೊಂಡಿದ್ದೇವೆ. ಇದು ಸ್ವಚ್ಛ ಮತ್ತು ಸ್ವಸ್ತ್ ಭಾರತ್ ಎಂದು ಮೋದಿ ಬರೆದುಕೊಂಡಿದ್ದಾರೆಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಾರ, ಮೆಗಾ ಡ್ರೈವ್‌ನಡಿಯಲ್ಲಿ ದೇಶದಾದ್ಯಂತ 9.20 ಲಕ್ಷಕ್ಕೂ ಹೆಚ್ಚು ಸ್ಥಳಗಳನ್ನು ಆಯ್ದುಕೊಳ್ಳಲಾಗಿದೆ.


ಪೊರಕೆ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್‌ನಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ದೆಹಲಿಯ ಝಾಂಡೇವಾಲನ್ ಪ್ರದೇಶದಲ್ಲಿ ನಡೆದ ಅಭಿಯಾನದಲ್ಲಿ ಭಾಗವಹಿಸಿದ್ದರು.


ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್‌ನಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಬಿಜೆಪಿ ಸಂಸದ ದಿನೇಶ್ ಶರ್ಮಾ ಅವರು ಸ್ವಚ್ಛ ಅಭಿಯಾನದಲ್ಲಿ ಭಾಗವಹಿಸಿ, ಸ್ವಚ್ಛತೆ ದೇಶದ ಮುಖವಾಗಿದೆ ಎಂದು ಹೇಳಿದ್ದಾರೆ.


ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ದೆಹಲಿಯಲ್ಲಿ ಸ್ವಯಂಸೇವಕರಾಗಿ ಸ್ವಚ್ಛತಾ ಚಟುವಟಿಕೆಯನ್ನು ಕೈಗೊಂಡರು.


ಕ್ರಿಕೆಟ್‌ ಆಟಗಾರರಾದ ವಿರಾಟ್ ಕೊಹ್ಲಿ,ರೋಹಿತ್ ಶರ್ಮಾ ಅವರು ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್ಗಾಗಿ ಒಗ್ಗೂಡಿ ಅತಿದೊಡ್ಡ ಆಂದೋಲನಕ್ಕೆ ಸೇರಲು ಜನರಲ್ಲಿ ಮನವಿ ಮಾಡಿದ್ದಾರೆ.


ಇತ್ತೀಚಿನ ಮನ್ ಕಿ ಬಾತ್ ಸಂಚಿಕೆಯಲ್ಲಿ, ಮೋದಿ ಅವರು ಅಕ್ಟೋಬರ್ 1 ರಂದು ಎಲ್ಲಾ ನಾಗರಿಕರಿಂದ ಸ್ವಚ್ಛತಾಕ್ಕಾಗಿ ಒಂದು ಗಂಟೆಯ ಶ್ರಮದಾನ ಕೈಗೊಳ್ಳಿ ಎಂದು ಮನವಿ ಮಾಡಿದ್ದರು. ಅಲ್ಲದೆ ಇದು ಮಹಾತ್ಮ ಗಾಂಧಿಯವರ ಜನ್ಮದಿನದ ಹಿಂದಿನ ದಿನ ಸ್ವಚ್ಛಾಂಜಲಿ ಎಂದು ಹೇಳಿದ್ದರು

ವಿಕಲಚೇತನ ಯುವಕನ ಮನವಿಗೆ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಸ್ಪಂದನೆ

Posted by Vidyamaana on 2023-06-09 15:42:52 |

Share: | | | | |


ವಿಕಲಚೇತನ ಯುವಕನ ಮನವಿಗೆ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಸ್ಪಂದನೆ

ಪುತ್ತೂರು: ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಶಾಸಕರು ಜೂ. ೯ ರಂದು ಸಂಜೆ ಕಾರ್ಯಕರ್ತರ ಸಭೆಯನ್ನು ಕರೆದಿದ್ದರು. ಕಾರ್ಯಕರ್ತರ ಸಭೆಯಲ್ಲಿ ಸಭೆ ಆರಂಭವಾಗುತ್ತಿದ್ದಂತೆಯೇ ಅನೇಕ ಮಂದಿ ಫಲಾನುಭವಿಗಳು ಅರ್ಜಿಯೊಂದಿಗೆ ಶಾಸಕರ ಸುತ್ತ ನೆರೆದಿದ್ದರು. ನೂರಾರು ಸಮಸ್ಯೆಗಳನ್ನು ಹೊತ್ತ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ಹೇಳುತ್ತಿದ್ದರು. ಸುಮಾರು ೧೦ ಕ್ಕೂ ಮಿಕ್ಕಿ ಸಾರ್ವಜನಿಕರು ಅರ್ಜಿಯನ್ನು ಶಾಸಕರು ಸ್ವೀಕರಿಸಿ ಕೆಲವರಿಗೆ ಸ್ಥಳದಲ್ಲೇ ಸಮಸ್ಯೆಯನ್ನು ಪರಿಹರಿಸಿದರು. ಕಚೇರಿಯಲ್ಲಿ ಕುಳಿತುಕೊಂಡೇ ಸಾರ್ವಜನಿಕರ ಸಮಸ್ಯೆಯನ್ನು ಆಲಿಸುತ್ತಿದ್ದರು. ಈ ನಡುವೆ ವಿಕಲಚೇತನ ಬಾಲಕನೋರ್ವ ತನ್ನ ತಂದೆಯೊಂದಿಗೆ ತನ್ನ ಸಮಸ್ಯೆಯನ್ನು ಹೇಳಿಕೊಳ್ಳಲು ಶಾಸಕರ ಮುಂದೆ ಬಂದಾಗ ತನ್ನ ಮುಂದೆ ನಿಂತಿರುವ ಬಾಲಕ ವಿಕಲ ಚೇತನ ಎಂದು ಗೊತ್ತಾದಾಗ ಶಾಸಕರು ಎದ್ದು ನಿಂತು ಬಾಲಕನ ಅರ್ಜಿಯನ್ನು ಸ್ವೀಕರಿಸಿ ಆ ಬಾಲಕನಿಂದ ತನ್ನ ಸಮಸ್ಯೆಯನ್ನು ಆಲಿಸಿದರು. ತಕ್ಷಣವೇ ನಿಮ್ಮ ಸಮಸ್ಯೆಗೆ ಪರಿಹಾರ ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದರು. ಶಾಸಕರ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

Posted by Vidyamaana on 2024-04-15 14:22:31 |

Share: | | | | |


ಕುಡ್ಲದಲ್ಲಿ ಪ್ರಧಾನಿ ರೋಡ್ ಶೋ ಸಂದರ್ಭ Extra Show ಕೊಟ್ಟ ಯುವಕ

ಮಂಗಳೂರು : ಪ್ರಧಾನಿ ಮೋದಿ ರೋಡ್ ಶೋ ಮುಗಿದ ಬಳಿಕ ಯುವಕರ ತಂಡದ ಮಧ್ಯೆ ವಾಗ್ವಾದ ನಡೆದು, ಹೊಯ್ ಕೈ ಹಂತಕ್ಕೆ ತಲುಪಿದ ಘಟನೆ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.

ಇಂದು ಕರೆಂಟ್ ಇಲ್ಲ

Posted by Vidyamaana on 2024-02-29 04:44:20 |

Share: | | | | |


ಇಂದು ಕರೆಂಟ್ ಇಲ್ಲ

ಪುತ್ತೂರು: ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್‌ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಎಕ್ಸ್‌ಪ್ರೆಸ್, ಉಪ್ಪಿನಂಗಡಿ ವಾಟರ್‌ಸಪ್ಪೆ ಮತ್ತು ಕಾಂಚನ ಮತ್ತು 110/33/11 ಕೆವಿ ಕಲ್ಲೇರಿ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕಮ್ಮಾರ ಫೀಡರ್‌ನಲ್ಲಿ ಫೆ.29 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರ ಮತ್ತು 110/33/11ಕೆವಿ ಕಣ್ಣೀರಿ ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಉಪ್ಪಿನಂಗಡಿ, ಕ್ಯೂಲ, ನೆಕ್ಕಿಲಾಡಿ ಬಜತ್ತೂರು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇಂದು ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ನಿಮ್ಮದೇ ಕಾರ್ಯಕ್ರಮ ಎಂದು ಭಾವಿಸಿ ಎಲ್ಲರೂ ಭಾಗವಹಿಸಿ: ಅಶೋಕ್ ಕುಮಾರ್ ರೈ

Posted by Vidyamaana on 2023-11-13 08:49:21 |

Share: | | | | |


ಇಂದು ನಡೆಯುವ ವಸ್ತ್ರ ವಿತರಣಾ ಕಾರ್ಯಕ್ರಮವನ್ನು  ನಿಮ್ಮದೇ ಕಾರ್ಯಕ್ರಮ ಎಂದು ಭಾವಿಸಿ ಎಲ್ಲರೂ ಭಾಗವಹಿಸಿ: ಅಶೋಕ್ ಕುಮಾರ್ ರೈ

ಪುತ್ತೂರು : ಇಂದು (ನ.13) ಟ್ರಸ್ಟ್ ಮೂಲಕ ನಡೆಯುವ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮ ನಿಮ್ಮದೇ ಕಾರ್ಯಕ್ರಮವಾಗಿದ್ದು, ರಾಜಕೀಯ, ಧರ್ಮ, ಜಾತಿ ಬೇಧವಿಲ್ಲದೆ ಎಲ್ಲರೂ ಭಾಗವಹಿಸುವ ಮೂಲಕ ನಮಗೆ ಹರಸಬೇಕು ಎಂದು ಶಾಸಕರು, ರೈ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರೂ ಆಗಿರುವ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ನಾನು ಟ್ರಸ್ಟ್‌ನ ಅಧ್ಯಕ್ಷನಾಗಿ, ಶಾಸಕನಾಗಿ ನಿಮ್ಮನ್ನು ಆಹ್ವಾನಿಸುತ್ತಿದ್ದೇನೆ, ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಅವರು ಆಹ್ವಾನ ನೀಡಿದ್ದಾರೆ.

ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಟೋಕನ್ ವ್ಯವಸ್ಥೆ ಇಲ್ಲ: ಸುದೇಶ್ ಶೆಟ್ಟಿ 


ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ತಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ಟೋಕನ್ ವ್ಯವಸ್ಥೆ ಇರುವುದಿಲ್ಲ. ಕಾರ್ಯಕ್ರಮದಲ್ಲಿ‌ಭಾಗವಹಿಸಿ ವಸ್ತ್ರ ಪಡೆದುಕೊಳ್ಳಬಹುದಾಗಿದೆ. ಸುಮಾರು 15 ಕೌಂಟರುಗಳನ್ನು ಮಾಡಲಾಗಿದ್ದು ನೇರವಾಗಿ ಬಂದು ವಸ್ತ್ರವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ತಿಳಿಸಿದ್ದಾರೆ. ಟೋಕನ್ ಪಡೆದುಕೊಳ್ಳಬೇಕು ಎಂಬ ಯಾವುದೇ ನಿಮಯವನ್ನು ಮಾಡಿಲ್ಲ ಸಾರ್ವಜನಿಕರು ಹೆಚ್ಚಿನ‌ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.




Leave a Comment: