ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ತುಮಕೂರು : ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Posted by Vidyamaana on 2023-11-27 04:41:41 |

Share: | | | | |


ತುಮಕೂರು : ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ಸದಾಶಿವ ನಗರದಲ್ಲಿ ನಡೆದಿದೆ. ಸಾವಿಗೀಡಾದವರು ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ತಿಳಿದು ಬಂದಿದೆ.



ಸಾವಿಗೂ ಮುನ್ನ ಗರೀಬ್ ಸಾಬ್ ದೊಡ್ಡಮ್ಮನಿಗೆ ಡೆತ್ ನೋಟ್ ಬರೆದಿದ್ದಾರೆ‌. ದೊಡ್ಡಮ್ಮನಿಗೆ ನಮಸ್ಕಾರಗಳು. ನಮಗೆ ಸಾಲ ಹೆಚ್ಚಾಗಿದೆ. ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ.ಹೀಗಾಗಿ ಸಂಸಾರ ಮಾಡೋದು ಕಷ್ಟವಾಗಿದೆ.ಊಟ ಮಾಡೋಕು ಕಷ್ಟ ಆಗಿದೆ. ಊರಲ್ಲಿದ್ದಾಗ ಹೆಂಡತಿ ಅಣ್ಣ ಸಾದಿಕ್, ಹೆಂಡತಿಯ ತಂಗಿ ಯಾಸಿನ್ ನಮ್ಮ ಮೇಲೆ ವಿಷ ಕಾರಿದ್ದರು. ಅದಕ್ಕೆ ನಾವು ಇಲ್ಲಿಗೆ ಬಂದಿದ್ದೇವೆ. ಇಲ್ಲಿ ಸಾಲ ಕಟ್ಟೋದು ಹೆಚ್ಚಾಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೀವಿ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ.


ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸು ಕೊಡಿ.ಮನೆ ವಸ್ತುಗಳನ್ನ ನೀವು ತಗೋಳಿ.ಹದಿನೈದು ಸಾವಿರ ಹಣವನ್ನ ಜರಿನಾ ಆಂಟಿಗೆ ಕೊಡಿ. ನಮ್ಮ ಬೈಕ್ ನ ನಮ್ಮ ಹಿರಿಯಣ್ಣ ಅಜಾಜ್ ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ನೀವು ಬೇಕಾದ ವಸ್ತುಗಳನ್ನ ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ. ಆದ್ರೆ ಇದರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನ ಪೊಲೀಸರಿಗೆ ತೋರಿಸಿ ಎಂದು ಬರೆಯಲಾಗಿದೆ.


ಮತ್ತರ್ ಮಾಮನಿಗೆ ಕೊನೆಯ ನಮಸ್ಕಾರಗಳು. ನಮಗೆ ಊಟಕ್ಕೆ ಅಕ್ಕಿ ಕೊಟ್ಟಿದ್ದೀರಾ, ಅದಕ್ಕೆ ನಿಮಗೆ ಮೆಳೇಕೋಟೆಯಲ್ಲಿರೋ ಅಂಗಡಿಯಲ್ಲಿರೋ ಸಾಮಾನುಗಳು ಮತ್ತೆ ಅದರಲ್ಲಿ ಐದು ಸಾವಿರ ಇಟ್ಟಿದ್ದೀವಿ. ಒಂದು ತಿಂಗಳು ಬಾಡಿಗೆ 2000 ರೂ. ಕೊಡಬೇಕು. ಸದಾಶಿವನಗರದ ಮೂರನೇ ಬಿ ಮುಖ್ಯರಸ್ತೆಯಲ್ಲಿರುವ ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ.

ನಮಗೆ ಯಾರಾದರೂ ಸಹಾಯ ಮಾಡಿದರೆ ಅವರಿಗೆ ಇಲ್ಲಸಲ್ಲದನ್ನ ಹೇಳ್ತಿದರು. ನಾವು ಅವರು ಹೇಳಿದಂತೆ ಕೇಳಬೇಕಿತ್ತು. ಇಲ್ಲವಾದರೆ ಅವರು ನಮ್ಮ ಜತೆ ಜಗಳ ಮಾಡುತಿದ್ದರು.ಶಬಾನಾ ನಮಗೆ ಏಳು ತಿಂಗಳ ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ನಮ್ಮ ಮೇಲೆ ವಿಷ ಕಾರುತ್ತಿದ್ದಾಳೆ. ನಮ್ಮ ಸಾವಿಗೆ ಐದು ಜನರೇ ಕಾರಣ. ನಮ್ಮ ಮನೆಯ ಕೆಳಗಿನ ಖಲಂದರ್, ಅವನ ಮಗಳು ಸಾನಿಯಾ,ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ, ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ ಎಂದು ಬರೆಯಲಾಗಿದೆ.ನಮ್ಮ ಸಾವಿಗೆ ಗೃಹ ಮಂತ್ರಿ ಸರ್ ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ.ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ. ನಮ್ಮ ದೇಹವನ್ನ ಪೋಸ್ಟ್ ಮಾರ್ಟಮ್ ಮಾಡಬೇಕು. ಇನ್ನೂ ವಿಷಯ ಫೋನ್ ನಲ್ಲಿದೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ಬರೆಯಲಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

Posted by Vidyamaana on 2024-01-22 21:36:16 |

Share: | | | | |


ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಪುತ್ತೂರು /ಸುಳ್ಯ :ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ "ರಾಜ್ಯ ಯುವ ಸಾಂಘಿಕ" ಪ್ರಶಸ್ತಿಯು ಲಭಿಸಿದೆ.

ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಕುಮಾರಿ ಭಾಗೀರತಿ ಮುರುಳ್ಯ ರವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರಿಗೆ ಪ್ರಧಾನ ಮಾಡಿದರು. ಹತ್ತು ಹಲವಾರು ಪ್ರಶಸ್ತಿಗಳೊಂದಿಗೆ ಕಳೆದ 2023ರ ಸಾಲಿನ "ರಾಜ್ಯ ಶಿಕ್ಷಣ ಸೇವಾ ರತ್ನ", "ಮಂದಾರ", ಪ್ರಶಸ್ತಿಗಳೊಂದಿಗೆ ರಾಜ್ಯಮಟ್ಟದ "ರಾಜ್ಯ ಯುವ  ಸಾಂಘಿಕ" ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯು ಮುಡಿಗೇರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ 5 ವರ್ಷದಿಂದ 40 ವರ್ಷದ ವರೆಗಿನವರಿಗೆ ಉದ್ಯೋಗ ಕೌಶಲ್ಯತೆ,  ಶಿಕ್ಷಣ ಮೌಲ್ಯ, ವಿವಿಧ ನೇಮಕಾತಿಗಳಿಗೆ ತರಬೇತಿ,  ಖಾಸಗಿ ಉದ್ಯೋಗಗಳ ನೇರ ಸಂದರ್ಶನಗಳನ್ನು ಒಂದೇ ಸೂರಿನಡಿಯಲ್ಲಿ ಕೊಡುವ ಏಕೈಕ ಸಂಸ್ಥೆ ಎಂಬ ಗರಿಮೆ ವಿದ್ಯಾಮಾತಾ ಅಕಾಡೆಮಿಗೆ ಇದೆ. "ಅತ್ಯಂತ ಕಷ್ಟಪಟ್ಟು ಬೆಳೆಸಿದ ಸಂಸ್ಥೆಯನ್ನು ಸಾಮಾಜಿಕವಾಗಿ ಗುರುತಿಸುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ" ಎಂದು ಭಾಗ್ಯೇಶ್ ರೈ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.

ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

Posted by Vidyamaana on 2024-02-28 04:26:48 |

Share: | | | | |


ಕಾಪು : ಕಾಲೇಜು ವಿದ್ಯಾರ್ಥಿನಿ ಶೈನಾಜ್ ನಾಪತ್ತೆ

ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್‌. ನಗರ ನಿವಾಸಿ ಶೈನಾಜ್‌ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್‌ ಫೆ.25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.

ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್‌ ಜಹಾನ್‌ ಕಾಪು ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್‌ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

Posted by Vidyamaana on 2024-05-27 21:31:18 |

Share: | | | | |


ಪರಿಷತ್‌ ಚುನಾವಣೆ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಸಭೆ

ಮಂಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಭೆ ಸೋಮವಾರ ನಗರದ ಡೊಂಗರಕೇರಿಯ ಕೆನರಾ ಶಾಲೆಯ ಸುಧೀಂದ್ರ ಸಭಾಂಗಣದಲ್ಲಿ ನಡೆಯಿತು.

ಸಭೆಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಭೋಜೇಗೌಡ ಓರ್ವ ನುರಿತ ರಾಜಕಾರಣಿ. ಅವರ ಮಾತುಗಳು ಕೇಳಿದ್ರೆ ಅವರು ಬಾಲ್ಯದಲ್ಲಿ ಸ್ವಯಂ ಸೇವಕ ಆಗಿರಬೇಕು ಅನಿಸುತ್ತದೆ. ಡಾ.ಧನಂಜಯ ಸರ್ಜಿ ಹೊಟ್ಟೆ ಪಾಡಿಗಾಗಿ ರಾಜಕಾರಣಕ್ಕೆ ಬಂದವರಲ್ಲ. ಅವರು ಮಾಡಿರುವ ಸೇವೆಯ ಕಾರಣಕ್ಕೆ ಜನರು ಅವರನ್ನು ಗುರುತಿಸಿದ್ದಾರೆ ಎಂದರು.

ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ

Posted by Vidyamaana on 2023-10-17 10:10:52 |

Share: | | | | |


ಪುತ್ತೂರು : ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ   ನಿಧನ

ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾದರು.



ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾ ರವರಿಗೆ ಇಂದು ಮುಂಜಾನೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದರು ಎಂದು ವರದಿಯಾಗಿದೆ.


ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Posted by Vidyamaana on 2023-07-24 09:25:11 |

Share: | | | | |


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಬಿರುಗಾಳಿ, ಗುಡುಗು ಸಹಿತ ನಾಳೆ ಮಳೆಯ ಪ್ರಮಾಣ ಇನ್ನೂ ಹೆಚ್ಚಾಗಲಿರುವ ಕಾರಣ ಹವಾಮಾನ ಇಲಾಖೆ ಬೆಂಗಳೂರು, ರೆಡ್ ಅಲರ್ಟ್ ಘೋಷಿಸಿದೆಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 25 ರಂದು, 204.5 ಮಿ.ಮೀ ಗಿಂತಲೂ ಹೆಚ್ಚು ಅತೀ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಈ ಮೂರೂ ಜಿಲ್ಲೆಗಳಿಗೂ ಬುಧವಾರ ಹಾಗೂ ಗುರುವಾರವೂ ಭಾರೀ ಮಳೆ ಮುಂದುವರಿಯಲಿರುವ ಕಾರಣ ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ 28 ಹಾಗೂ 29 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಒಳನಾಡಿಗೂ ಆರೆಂಜ್ ಅಲರ್ಟ್ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಂಗಳವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 26, 27, 28 ರಂದು ಎಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ . ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಮಾತ್ರ ಎಲ್ಲೋ ಅಲರ್ಟ್ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಳೆ ಪ್ರಮಾಣ 64 ಮಿ.ಮೀ ನಿಂದ 115 ಮಿಮೀ ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 25, 26, 27 ರ ವರೆಗೂ ಉತ್ತಮ ಮಳೆಯಾಗಲಿದ್ದು, ನಂತರ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.



Leave a Comment: