ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಬಿಜೆಪಿ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ಪದಾಧಿಕಾರಿಗಳ ನೇಮಕ : ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

Posted by Vidyamaana on 2024-02-28 12:22:37 |

Share: | | | | |


ಬಿಜೆಪಿ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ಪದಾಧಿಕಾರಿಗಳ ನೇಮಕ : ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಮಹಿಳಾ ಮೋರ್ಚಾ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ.


ಅಧ್ಯಕ್ಷರಾಗಿ ಡಾ. ಮಂಜುಳಾ ಎ ರಾವ್, ಕಾರ್ಯದರ್ಶಿಯಾಗಿ ಪುತ್ತೂರಿನ ಯಶಸ್ವಿನಿ ಶಾಸ್ತ್ರಿ ಹಾಗೂ ಇತರ ವಿಭಾಗಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.


ಜಿಲ್ಲಾ ಮಹಿಳಾ ಮೋರ್ಚಾ ಸಮಿತಿ ವಿವರ..:

ತಟ್ಟಿಯಂಗಡಿಯಲ್ಲಿ ಪೈನಾಪಲ್ ಸವಿದ ಸಭಾಪತಿ ಯು ಟಿ ಖಾದರ್

Posted by Vidyamaana on 2023-12-22 12:52:06 |

Share: | | | | |


ತಟ್ಟಿಯಂಗಡಿಯಲ್ಲಿ ಪೈನಾಪಲ್ ಸವಿದ ಸಭಾಪತಿ ಯು ಟಿ ಖಾದರ್

ಪುತ್ತೂರು: ಮಾಣಿ - ಮೈಸೂರು ರಾ. ಹೆದ್ದಾರಿ ಯ ಕೊಯಿಲತ್ತಡ್ಕದಲ್ಲಿರುವ ತಟ್ಟಿಯಂಗಡಿಯಲ್ಲಿ ಪೈನಾಪಲ್ ತಿನ್ನುವ ಮೂಲಕ ಸಭಾಪತಿ ಯು ಟಿ ಖಾದರ್ ಸಿಂಪ್ಲಿಸಿಟಿ ಮೆರೆದಿದ್ದಾರೆ. ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಗೆ ಭೇಟಿ ನೀಢೀ ವಾಪಸ್ಸಾಗುವ ವೇಳೆ ಕೊಯಿಲತ್ತಡ್ಕದ ಅದ್ದು ಎಂಬವರ ಅಂಗಡಿಗೆ ತೆರಳಿದ ಅವರು ಪೈನಾಪಲ್, ಮಾವುತಿಂದು ತೆರಳಿದ್ದಾರೆ. ಖಾದರ್ ಅವರು ಬಂದ ಸುದ್ದಿ ತಿಳಿದು ಸ್ಥಳಿಯರು ಜಮಾಯಿಸಿದರು.

ಕಡಬ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

Posted by Vidyamaana on 2024-03-30 19:42:56 |

Share: | | | | |


ಕಡಬ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್

ಕಡಬ: ಅಡಿಕೆ ಆಮದಿನ ವಿರುದ್ಧ ಸಂಸತ್ತಿನಲ್ಲಿ ಧ್ವನಿ ಎತ್ತುವ ಕೆಲಸ ಆಗಬೇಕು. ಅಡಿಕೆಗೆ ಎದುರಾಗಿರುವ ರೋಗಬಾಧೆಗಳ ನಿವಾರಣೆಗೆ ಸಂಶೋಧನಾ ಕೇಂದ್ರ ತೆರೆಯುವ ಅಗತ್ಯವಿದೆ. ಇದರ ಜೊತೆಗೆ ಕೃಷಿ ಹಾಗೂ ಕೃಷಿ ಮಾರುಕಟ್ಟೆಗೆ ಪೂರಕವಾದ ವಾತಾವರಣ ಕಲ್ಪಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಶ್ರಮ ಪಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿ ಖಂಡಿತವಾಗಿಯೂ ಕಾಂಗ್ರೆಸ್ ಜಯ ಸಾಧಿಸಲಿದೆ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ಹಿಂದೂ ದರ್ಮದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡವನು ನಾನು. ಜೊತೆಗೆ ಹಿಂದೂ ಧರ್ಮದ ಆಚಾರ ವಿಚಾರಗಳನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ಆದರೆ ಎಲ್ಲಿಯೂ ಕೂಡ ಅಪಪ್ರಚಾರ, ಅಪನಂಬಿಕೆ ಬರುವ ಕೆಲಸ ಮಾಡಿಲ್ಲ. ಆದ್ದರಿಂದ ನಾವು ಯಾರನ್ನು ದ್ವೇಷಿಸುವ, ವಿರೋಧಿಸುವ ಕೆಲಸ ಮಾಡುವುದು ಬೇಡ. ಕಾಂಗ್ರೆಸ್ ಸರಕಾರದ ಅಭಿವೃದ್ಧಿಯನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ತೆರಳಿ ಮತ ಕೇಳಿ ಎಂದರು.


ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

Posted by Vidyamaana on 2024-02-10 09:59:13 |

Share: | | | | |


ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆಯಾದ ಭಾರತ ತಂಡದ ಆಟಗಾರರಿಗೆ ಸನ್ಮಾನ

ಬಂಟ್ವಾಳ : ಕಲ್ಲಡ್ಕ ಮ್ಯೂಸಿಯಂ ವತಿಯಿಂದ ಜಪಾನಿನಲ್ಲಿ ನಡೆಯಲಿರುವ 17 ರ ವಯೋಮಾನದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಕ್ರೀಡಾ ಪಟುಗಳಿಗೆ ಸನ್ಮಾನ ಕಾರ್ಯಕ್ರಮ ಕಲ್ಲಡ್ಕ ಮ್ಯೂಸಿಯಂ ಆವರಣದಲ್ಲಿ ನಡೆಯಿತು.


       2023-24 ನೇ ಸಾಲಿನಲ್ಲಿ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ  ನಡೆದ ಹ್ಯಾಂಡ್ ಬಾಲ್ ಸ್ಪರ್ಧೆಗಳಲ್ಲಿ ವಿಜೇತರಾಗಿ ಇದೀಗ ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಬಂಟ್ವಾಳ ತಾಲೂಕಿನ ಅಮ್ಟೂರು ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಮೊಹಮ್ಮದ್ ಅಝೀಂ ಬಿ., ಮೊಹಮ್ಮದ್ ಮಸ್ಕೂರ್, ಸೃಜನ್, ಲಕ್ಷತ್ ಎಚ್, ಮೊಹಮ್ಮದ್ ಫಾಝ್ ಹಾಗೂ ಇವರಿಗೆ ತರಭೇತು ನೀಡಿದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.


    ಸನ್ಮಾನ ಸಮಾರಂಭದಲ್ಲಿ ಮುಖ್ಯ ಭಾಷಣಗೈದ ಬಿ.ಮೂಡ ಸರಕಾರಿ ಪ.ಪೂ.ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಮಾತನಾಡಿ ಯಾವುದೇ ಸಾಧನೆ ಮಾಡಿದ ಸಾಧಕನಿಗೆ ತನ್ನ ಊರಿನಲ್ಲಿ ಸಿಗುವ ಸನ್ಮಾನ ಆತನಿಗೆ ದೊರಕುವ ಬಹು ದೊಡ್ಡ ಪಾರಿತೋಷಕವಾಗಿದೆ, ಪ್ರತಿಯೊಂದು ಮಕ್ಕಳಲ್ಲೂ ಹುದುಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಹಾಗೂ ಶಿಕ್ಷಕರಿಂದ ಆಗಬೇಕಾಗಿದೆ ಎಂದರು.


    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ರುಕ್ಮಯ್ಯ ಪೂಜಾರಿ ಮಾತನಾಡಿ ಹ್ಯಾಂಡ್ ಬಾಲ್ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ  ವಿದ್ಯಾರ್ಥಿಗಳು ಮತ್ತು ವಿಶೇಷ ವಸ್ತು ಸಂಗ್ರಹದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮೂರಿನ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಕಲ್ಲಡ್ಕ ಮ್ಯೂಸಿಯಂ ನ ಸಂಸ್ಥಾಪಕ ಹಾಜಿ ಮುಹಮ್ಮದ್ ಯಾಸಿರ್ ಅವರ ಸಾಧನೆಯ ಬಗ್ಗೆ ಕೊಂಡಾಡಿದರು.


     ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಮುದರ್ರಿಸ್ ಉಸ್ಮಾನ್ ದಾರಿಮಿ, ಕರಿಂಗಾನ ಚರ್ಚ್ ನ ಧರ್ಮಗುರು ರೆ.ಫಾ. ಕಿರಣ್ ಮ್ಯಾಕ್ಸಿಂ ಪಿಂಟೋ, ಬೋಳಂಗಡಿ ಹವ್ವಾ ಜುಮಾ ಮಸೀದಿ ಖತೀಬ್ ಯಹ್ಯಾ ತಂಙಳ್,  ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಮಾತನಾಡಿ ಶುಭ ಹಾರೈಸಿದರು.


     ಕಲ್ಲಡ್ಕ ಕೆ.ಟಿ.ಹೋಟೇಲ್ ಮಾಲಕ ರಾಜೇಂದ್ರ ಹೊಳ್ಳ,  ಗೋಳ್ತಮಜಲು ಗ್ರಾಮ ಪಂಚಾಯತ್ ಸದಸ್ಯ ಯೂಸುಫ್ ಹೈದರ್, ಹಜಾಜ್ ಸಮೂಹ ಸಂಸ್ಥೆಯ ಇಮ್ತಿಯಾಝ್ ಗೋಳ್ತಮಜಲು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಝಕರಿಯಾ ಕಲ್ಲಡ್ಕ, ಕಲ್ಲಡ್ಕದ ತ್ರಿವರ್ಣ ಸಂಗಮ ಹಾಗೂ ಝಮಾನ್ ಬಾಯ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.


      ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಶೆಟ್ಟಿ ಹ್ಯಾಂಡ್ ಬಾಲ್ ಕ್ರೀಡೆ ಹಾಗೂ ಕ್ರೀಡಾಪಟುಗಳ ಸಾಧನೆಯ ಬಗ್ಗೆ ವಿವರಿಸಿದರು. ಕಲ್ಲಡ್ಕ ಮ್ಯೂಸಿಯಂ ಸಂಸ್ಥಾಪಕ   ಯಾಸಿರ್ ಕಲ್ಲಡ್ಕ ಸ್ವಾಗತಿಸಿ, ವಂದಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

ಮಂಜೇಶ್ವರ ಆ್ಯಂಬುಲೆನ್ಸ್ - ಕಾರು ಮಧ್ಯೆ ಭೀಕರ ಅಪಘಾತ: ಮೂವರು ಮೃತ್ಯು

Posted by Vidyamaana on 2024-05-07 14:37:00 |

Share: | | | | |


ಮಂಜೇಶ್ವರ  ಆ್ಯಂಬುಲೆನ್ಸ್ - ಕಾರು ಮಧ್ಯೆ ಭೀಕರ ಅಪಘಾತ: ಮೂವರು ಮೃತ್ಯು

ಕಾಸರಗೋಡು, ಮೇ 7: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್‌ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ.

ಮಂಗಳೂರು ಕದ್ರಿ ಪಾರ್ಕಿನಲ್ಲಿ ನೈತಿಕ ಗೂಂಡಾಗಿರಿ ಮೂವರ ಅರೆಸ್ಟ್

Posted by Vidyamaana on 2024-01-20 07:27:01 |

Share: | | | | |


ಮಂಗಳೂರು ಕದ್ರಿ ಪಾರ್ಕಿನಲ್ಲಿ ನೈತಿಕ ಗೂಂಡಾಗಿರಿ  ಮೂವರ ಅರೆಸ್ಟ್

ಮಂಗಳೂರು; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.


ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.


ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ.



Leave a Comment: