ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

Posted by Vidyamaana on 2023-08-30 23:08:16 |

Share: | | | | |


ಬಂಟ್ವಾಳ: ಮಲಗಿದ್ದಲ್ಲೇ ಮೃತಪಟ್ಟ 23 ವರ್ಷದ ಮಿತ್ರ ಶೆಟ್ಟಿ

ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.

ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ.

ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಬಳಿಕ ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆ ಯಲ್ಲಿ ಮರಣೋತ್ತರ ಪರೀಕ್ಷೆ ಗಾಗಿ ಕೊಂಡೋಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಸಾವಿನ ಸ್ಪಷ್ಟವಾದ ಕಾರಣ ಸಿಗಬಹುದು.ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಕ್ರಿಯಾಶೀಲೆ ಯುವತಿ ಓಂಕಾರ ಫ್ರೆಂಡ್ಸ್ (ರಿ) ಮದ್ವ ಇದರ ಮಹಿಳಾ ಘಟಕದ ಸದಸ್ಯೆಯಾಗಿರುವ ಮಿತ್ರ ಶೆಟ್ಟಿ ಬಿಸಿರೋಡಿನ ವಕೀಲರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅತ್ಯಂತ ಕ್ರಿಯಾಶೀಲ ಯುವತಿಯಾಗಿದ್ದು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದಳು

ಯಾರಿಗೂ ಮಣಿಯಬೇಡಿ: ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಕ್ಕೆ ಸಾಧ್ಯವಿಲ್ಲ : ಬಿಜೆಪಿ ಹೈಕಮಾಂಡ್‌ ಖಡಕ್‌ ಸೂಚನೆ

Posted by Vidyamaana on 2023-04-16 03:51:45 |

Share: | | | | |


ಯಾರಿಗೂ ಮಣಿಯಬೇಡಿ: ನಿರ್ಧಾರವನ್ನು ಯಾವುದೇ ಕಾರಣಕ್ಕೂ  ಬದಲಾಯಿಸುವುದಕ್ಕೆ ಸಾಧ್ಯವಿಲ್ಲ : ಬಿಜೆಪಿ ಹೈಕಮಾಂಡ್‌ ಖಡಕ್‌ ಸೂಚನೆ

ಬೆಂಗಳೂರು : ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಸೃಷ್ಟಿಯಾಗಿರುವ ಬಂಡಾಯವನ್ನು ಸಾಧ್ಯವಾದಷ್ಟು ಶಮನ ಮಾಡಿ. ಆದರೆ ಯಾರ ಹಠಕ್ಕೂ ಮಣಿಯಬೇಡಿ ಎಂದು ಬಿಜೆಪಿ ಹೈಕಮಾಂಡ್‌ ರಾಜ್ಯ ನಾಯಕರಿಗೆ ಖಡಕ್‌ ಸೂಚನೆ ನೀಡಿದೆ.ಟಿಕೆಟ್‌ ವಂಚಿತರ ಪಕ್ಷ ತ್ಯಾಗ ಹಾಗೂ ಬಹಿರಂಗ ಮಾತುಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಹೈಕಮಾಂಡ್‌ ಭಿನ್ನಮತ ಶಮನಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರನ್ನು ನಿಯೋಜಿಸಿದೆ. ಅದರ ಜತೆಗೆ ಸಚಿವ ಪ್ರಹ್ಲಾದ್‌ ಜೋಷಿ, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಮಾತುಕತೆ ನಡೆಸುವಂತೆ ಸೂಚಿಸಿದೆ. ಆದರೆ ಹೈಕಮಾಂಡ್‌ ನಿರ್ಧಾರವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಬೆದರಿಕೆಗೆ ಮಣಿಯಬೇಡಿ. ಪರಿಣಾಮವನ್ನು ಎದುರಿಸುವ ಶಕ್ತಿ ಪಕ್ಷಕ್ಕೆ ಇದೆ ಎಂದು ಸಂದೇಶ ರವಾನಿಸಿದ್ದಾರೆ.

ಪಕ್ಷದಲ್ಲಿ ಬಂಡಾಯ ಹೆಚ್ಚುತ್ತಿದ್ದರೂ ಸಿಎಂ ಬೊಮ್ಮಾಯಿ ಟೆಂಪಲ್‌ರನ್‌ನಲ್ಲಿ ಬ್ಯುಸಿಯಾಗಿದ್ದು, ವರಿಷ್ಠರ ಕೋಪಕ್ಕೂ ಕಾರಣವಾಗಿದೆ. ಕಠಿಣ ಸಂದರ್ಭದಲ್ಲಿ ಜವಾಬ್ದಾರಿ ಹೊರುವುದಕ್ಕೆ ಹಿಂದೇಟು ಹಾಕಿದ ಬಗ್ಗೆ ಕೆಲ ರಾಜ್ಯ ನಾಯಕರು ಸಹಪ್ರಭಾರಿ ಮನ್ಸೂಖ್‌ ಮಾಂಡವೀಯ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸುವಂತೆ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅವರು ಶೆಟ್ಟರ್‌ ಜತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅದೇ ರೀತಿ ವಿಧಾನಸಭಾ ಟಿಕೆಟ್‌ ನೀಡುವಂತೆ ಸಂಸದ ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದಾರೆ. ಕಳೆದ ಬಾರಿ ಅವರು ತಮ್ಮ ಪುತ್ರನಿಗೆ ಇದೇ ರೀತಿ ಹಠ ಮಾಡಿ ಟಿಕೆಟ್‌ ಪಡೆದಿದ್ದರು. ತಮಗೆ ಈ ಬಾರಿ ಅವಕಾಶ ನೀಡದೇ ಇದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಅವರ ಬೆದರಿಕೆಗೆ ಸೊಪ್ಪು ಹಾಕದಂತೆ ವರಿಷ್ಠರು ಸೂಚನೆ ನೀಡಿದ್ದಾರೆ.

ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

Posted by Vidyamaana on 2024-05-04 20:42:20 |

Share: | | | | |


ಪುತ್ತೂರು :ಎಪಿಎಂಸಿ ಸಹಾಯಕ ಕಾರ್ಯದರ್ಶಿ ರಾಮಚಂದ್ರ ಸೇವೆಯಿಂದ ಅಮಾನತು

ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.ವರ್ಗಾವಣೆ ವಿರುದ್ಧ ಕೆಎಟಿಯಿಂದ ತಡೆಯಾಜ್ಞೆ ತಂದು ಗುರುವಾರ ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಮಚಂದ್ರ ಅವರಿಗೆ ಮಧ್ಯಾಹ್ನ ವೇಳೆ ಅಮಾನತು ಆದೇಶ ನೀಡಲಾಗಿದೆ.

ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

Posted by Vidyamaana on 2023-06-06 05:24:39 |

Share: | | | | |


ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ಪೋಲಿಸ್ ಅಧೀಕ್ಷರರ ಕಛೇರಿಯನ್ನು ಪ್ರಾರಂಭಿಸುವ ಬಗ್ಗೆ ಸರಕಾರದ ಹಂತದಲ್ಲಿ ಈಗಾಗಲೇ ಅನುಮೋದನೆಯಾಗಿದ್ದು ,ಕಂದಾಯ ಇಲಾಖೆಯಿಂದಲೂ ಸ್ಥಳ ಕಾಯ್ದಿರಿಸಲಾಗಿದೆ ,ಅನುದಾನವೂ ಅನುಮೋದನೆಯಾಗಿರುತ್ತದೆ . ಸರಕಾರವು ಈ ವಿಚಾರವನ್ನು ಪರಿಗಣಿಸಿ ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವಂತೆ ಶಾಸಕರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಪುತ್ತೂರಿಗೆ ಉಪವಿಭಾಗಕ್ಕೆ ಎಸ್ ಪಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹಲವು ವರ್ಷಗಳಿಂದ ಸರಕಾರದ ಮೂಲಕ ಒತ್ತಡ ತರಲಾಗುತ್ತದೆ. ಆದರೆ ಪೂರ್ಣ ಪ್ರಮಾಣದಲ್ಲಿ ಇದರ ಕಾರ್ಯ ನಡೆದಿರುವುದಿಲ್ಲ. ಮಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶ ವ್ಯಾಪ್ತಿ‌ಮಂಗಳೂರು ಕಮಿಷನರ್ ಸುಪರ್ದಿಗೆ ಒಳಪಡುವ ಕಾರಣ  ಎಸ್ ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದಕ್ಕೆ ಇಲಾಖಾ ಮಟ್ಟದಲ್ಲಿ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಿದೆ. ಶಾಸಕ ಅಶೋಕ್ ರೈ ಮುಂದಾಳುತ್ವದಲ್ಲಿ ಈ ಬಾರಿ ಎಸ್ ಪಿ ಕಚೇರಿ ಪುತ್ತೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದ್ದು ಈಗಾಗಲೇ ರಾಜ್ಯ ಗೃಹ ಸಚಿವ ಪರಮೇಶ್ವರ್ ಜೊತೆ ಮಾತುಕತೆಯನ್ನು ನಡೆಸಿದ್ದಾರೆ. ಈ ಮೂಲಕ ಪುತ್ತೂರು ಉಪ ವಿಭಾಗ ವ್ಯಾಪ್ತಿಯ ಬಹು ವರ್ಷದ ಕನಸು ಈ ಬಾರಿ ನನಸಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

Posted by Vidyamaana on 2024-01-04 09:56:17 |

Share: | | | | |


ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ.ಪ್ರತಿವರ್ಷದಂತೆ ಈ ವರ್ಷವೂ ಅಯ್ಯಪ್ಪ ಮಾಲಾಧಾರಿಗಳು ಕೆಂಡಸೇವೆ ಮಾಡುತ್ತಿದ್ದರು.ಅಯ್ಯಪ್ಪ ಮಾಲಾಧಾರಿಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಕೆಂಡದ ಮೇಲೆ ಕುಪ್ಪಳಿಸುತ್ತಾ ಸಾಗಿದ್ದರು. ಈ ವೇಳೆ ಓರ್ವ ಮಾಲಾಧಾರಿ ಆಯತಪ್ಪಿ ನಿಗಿ ನಿಗಿ ಕೆಂಡದ ಮೇಲೆ ಬಿದ್ದಿದ್ದಾನೆ.


ನೆರೆದಿದ್ದ ಜನರು ತಕ್ಷಣ ಆತನ ರಕ್ಷಣೆಗೆ ಧಾವಿಸಿದ್ದಾರೆ. ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮೋತ್ತೇಜಕ ಮಾತ್ರೆ ತಿಂದ ಭೂಪ ಹೆಂಡತಿಯ ಪ್ರಾಣವನ್ನೇ ಕಿತ್ತುಕೊಂಡ!

Posted by Vidyamaana on 2024-02-13 20:43:06 |

Share: | | | | |


ಕಾಮೋತ್ತೇಜಕ ಮಾತ್ರೆ ತಿಂದ ಭೂಪ ಹೆಂಡತಿಯ ಪ್ರಾಣವನ್ನೇ ಕಿತ್ತುಕೊಂಡ!

ಲಕ್ನೋ: ಮದುವೆಯಾಗಿ ಏಳೇ ದಿನದಲ್ಲಿ ನವವಧುವೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿರುವುದು ವರದಿಯಾಗಿದೆ.


ಘಟನೆ ಹಿನ್ನೆಲೆ: ಫೆ.3 ರಂದು(ಶುಕ್ರವಾರ) ಯುವತಿಯ ವಿವಾಹ ಉರೈ ಮೂಲದ ವ್ಯಕ್ತಿಯೊಂದಿಗೆ ಆಗಿತ್ತು. ಯುವತಿಯ ಪೋಷಕರು ಅದಾಗಲೇ ಮೃತಪಟ್ಟಿದ್ದು, ಸಹೋದರ ಮುಂದೆ ನಿಂತು ಅದ್ಧೂರಿಯಾಗಿ ವಿವಾಹ ಮಾಡಿಸಿಕೊಟ್ಟಿದ್ದರು. ಫೆ.4 ರಂದು (ಶನಿವಾರ) ಯುವತಿ ಎಲ್ಲಾ ಶಾಸ್ತ್ರದ ಬಳಿಕ ಗಂಡನ ಮನೆಗೆ ಬಂದಿದ್ದಳು.

ಮದುವೆಯ ಮೊದಲ ರಾತ್ರಿ ಪತಿ ಕಾಮೋತ್ತೇಜಕ ಮಾತ್ರೆಗಳನ್ನು(ವರ್ಧನೆ ಮಾತ್ರೆ) ಸೇವಿಸಿ ಪತ್ನಿ ಜೊತೆ ರಾಕ್ಷಸನಂತೆ ಸಂಭೋಗವನ್ನು ನಡೆಸಿದ್ದಾನೆ. ಪರಿಣಾಮ ಪತ್ನಿಯ ಖಾಸಗಿ ಅಂಗಕ್ಕೆ ತೀವ್ರವಾದ ಗಾಯಗಳಾಗಿವೆ.

ಪತ್ನಿ ಕಾನ್ಪುರದಲ್ಲಿ ಮದುವೆ ಸಮಾರಂಭವೊಂದಕ್ಕೆ ತೆರಳಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಲೈಂಗಿಕ ಉತ್ತೇಜನ ಮಾತ್ರೆಯನ್ನು ಸೇವಿಸಿ ಸಂಭೋಗ ನಡೆಸಿದ ಪರಿಣಾಮ ಮಹಿಳೆಯ ಖಾಸಗಿ ಅಂಗದಲ್ಲಿ ತೀವ್ರತರದ ಗಾಯಗಳಾಗಿದ್ದು, ಇದರಿಂದ ಸೋಂಕು ತಗುಲಿದೆ. ಫೆ.10 ರಂದು ಮಹಿಳೆ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.ಮಹಿಳೆಯ ಸ್ಥಿತಿ ಹದಗೆಟ್ಟ ನಂತರ ಮಹಿಳೆಯನ್ನು ಸ್ತ್ರೀರೋಗತಜ್ಞರ ಬಳಿಗೆ ಕರೆದೊಯ್ಯಲಾಗಿದ್ದು,ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗುವಷ್ಟು ದೌರ್ಜನ್ಯಕ್ಕೆ ಒಳಗಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.


ಪತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳೆಯ ಸಹೋದರ ಪೊಲೀಸರಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಆರೋಪಿ ಪತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಪತಿ ಹಾಗೂ ಆತನ ಮನೆಯವರು ಊರು ಬಿಟ್ಟು ಹೋಗಿದ್ದಾರೆ ಎಂದು ವರದಿ ತಿಳಿಸಿದೆ



Leave a Comment: