ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜೂ 10

Posted by Vidyamaana on 2023-06-10 01:58:17 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಜೂ 10

ಪುತ್ತೂರು: ನೂತನ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಅವರಿಗೆ ಪುತ್ತೂರು ಸುದಾನ ಶಾಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. 

ಬೆಳಿಗ್ಗೆ 10 ಗಂಟೆಗೆ ವಿಟ್ಲ ವಿಠಲ ಪ.ಪೂ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಮತ್ತು ಕಂಪ್ಯೂಟರ್ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಉಪ್ಪಿನಂಗಡಿ ಎಚ್.ಎಂ. ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ  ಮೂರು ಗಂಟೆಗೆ ಪುತ್ತೂರು ಸುದಾನ ಶಾಲೆಯಲ್ಲಿ ಶಾಸಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸಂಜೆ 4 ಗಂಟೆಗೆ ಅಕ್ಷಯ ಕಾಲೇಜಿನ‌ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

Posted by Vidyamaana on 2023-06-09 09:37:41 |

Share: | | | | |


ಇಂದು ಸಂಜೆ (ಜೂ. 9) ಮಹಿಳಾ ಕಾರ್ಯಕರ್ತರೊಂದಿಗೆ ಶಾಸಕರ ಸಭೆ

ಪುತ್ತೂರು: ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣಕ್ಕೆ ಸಂಬಂಧಿಸಿದಂತೆ  ಮಹಿಳಾ ಕಾರ್ಯಕರ್ತರ ಜೊತೆ ಶಾಸಕ ಅಶೋಕ್ ರೈ ಅವರು ಜೂನ್ 9ರಂದು ಸಂಜೆ 5 ಗಂಟೆಗೆ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ಬೆಳ್ತಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ

Posted by Vidyamaana on 2023-06-14 10:03:17 |

Share: | | | | |


ಬೆಳ್ತಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ರಂಜಿತ್ ಮದ್ದಡ್ಕ(30) ಮತ್ತು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ಉಮೇಶ್ ಕುಲಾಲ್(35) ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಜೂನ್ 13 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು. ಇಬ್ಬರು ಆರೋಪಿಗಳನ್ನು ಮಂಗಳೂರು ಸಬ್ ಜೈಲಿಗೆ ಕಳುಹಿಸಲಾಗಿದೆ.ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ)ರವರು ನೀಡಿದ ದೂರಿನಂತೆ ಬೆಳ್ತಂಗಡಿ ಮಂಡಲ ಬಿಜೆಪಿ

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ರಂಜಿತ್ ಮದಡ್ಕ ಮತ್ತಿತರರ ವಿರುದ್ಧ ಮೇ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚನೆ

Posted by Vidyamaana on 2023-11-05 08:44:53 |

Share: | | | | |


ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚನೆ

ಉಡುಪಿ: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. 


ಕೊಲ್ಲೂರು ನಿವಾಸಿ ಸುಧೀರ್‌ ಕುಮಾರ್‌ ಎಂಬಾತ ವಂಚನೆ ಎಸಗಿದ ವ್ಯಕ್ತಿ. ಬೆಂಗಳೂರಿನ ದಿಲ್ನಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್‌ ಅವರಿಗೆ ಪರಿಚಯವಿದ್ದ ಸುಧೀರ್‌ ಕುಮಾರ್‌ ಎಂಬಾತ ಪರಿಚಯ ಆಗಿದ್ದ. ತಾನು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ನಂಬಿಸಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಹಣ ಹಾಕುವಂತೆ ಕೇಳಿಕೊಂಡಿದ್ದ.


ಅಲ್ಲದೆ, ದಿಲ್ನಾ ಅವರ ತಾಯಿಗೆ ಸಂಬಂಧಿಸಿದ ಜಾಗದ ಖಾತೆ ಬದಲಾವಣೆ ಮಾಡಿಸುವುದಾಗಿ ಹೇಳಿ ದಿಲ್ನಾ ಮತ್ತು ಅವರ ಅಣ್ಣ ದಿಲೀಶ್‌ ಅವರಿಂದ ಒಟ್ಟು 30,73,600 ರೂ.ಗಳನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಖಾತೆ ಬದಲಾವಣೆಗಾಗಿ ತಾಯಿಯ ಸಹಿ ಹಾಕಿಕೊಡುವಂತೆ ಕೇಳಿದ್ದರಿಂದ ಸಂಶಯಗೊಂಡು ದೇವಸ್ಥಾನಕ್ಕೆ ಬಂದು ವಿಚಾರಿಸಿದಾಗ ಸುಧೀರ್‌ ಎನ್ನುವ ವ್ಯಕ್ತಿ ಆಡಳಿತ ಮಂಡಳಿಯ ಸದಸ್ಯನಲ್ಲವೆಂಬುದು ತಿಳಿದುಬಂದಿತ್ತು. ಇದರಿಂದ ದಿಲ್ನಾ ಅವರು ಸುಧೀರ್‌ ಕುಮಾರ್‌ ವಿರುದ್ಧ ಹಣ ವಂಚನೆ ಮಾಡಿರುವ ಕುರಿತು ಕೊಲ್ಲೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

Posted by Vidyamaana on 2024-06-25 21:18:36 |

Share: | | | | |


ಸಿದ್ದರಾಮಯ್ಯ ಭೇಟಿ ಮಾಡಿದ ರೇಣುಕಾಸ್ವಾಮಿ ತಂದೆ-ತಾಯಿ; ಇಟ್ಟ ಬೇಡಿಕೆ ಏನು?

ಬೆಂಗಳೂರು , ಜೂನ್‌ 25: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರವಾಗಿ ಕೊಲೆಯಾಗಿದ್ದು, ಈ ಪ್ರಕರಣ ಕುರಿತು ಪವಿತ್ರ ಗೌಡ, ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಜೈಲುವಶವಾಗಿದ್ದಾರೆ. ಆದರೆ ಕುಟುಂಬದ ಆಧಾರವಾಗಿದ್ದ ರೇಣುಕಾಸ್ವಾಮಿಯನ್ನು ಕಳೆದುಕೊಂಡ ತಂದೆ ತಾಯಿ ಇಂದು (ಮಂಗಳವಾರ) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ.

ರೇಣುಕಾಸ್ವಾಮಿ ಅವರ ತಂದೆ , ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಪುತ್ರನಿ ಸಾವಿನ ಕುರಿತು ತಂದಿ ತಾಯಿ ಇಬ್ಬರು ಕಣ್ಣೀರು ಹಾಕಿದ್ದಾರೆ. ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು, ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು ಆದರೆ ಬರ್ಬರವಾಗಿ ಕೊಂದುಬಿಡುವುದು ಯಾವ ನ್ಯಾಯ ಎಂದು ಅವಲತ್ತುಕೊಂಡಿದ್ದಾರೆ.

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2024-01-20 08:41:58 |

Share: | | | | |


ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ ವಿಚಾರ ನೆನಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ ಈ ವರ್ಷ ತೀವ್ರ ಬರ ಪರಿಸ್ಥಿತಿ ಇದ್ದು, ರೈತರಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.ಆದಷ್ಟು ಬೇಗನೆ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ವೇದಿಕೆ ಕಾರ್ಯಕ್ರಮದ ವೇಳೆ ಸಿಎಂ ಮನವಿ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ ಅವರು, ಮನವಿ ನೀಡಿರುವುದು ನನ್ನ ಗಮನದಲ್ಲಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.



Leave a Comment: